ಭಾಲ್ಕಿ | ಬಸವಣ್ಣನವರ ಅವಹೇಳನ : ರವಿ ಹಂಜ್, ವಿಶ್ವೇಶ್ವರ ಭಟ್ ಪ್ರತಿಕೃತಿ ದಹಿಸಿ ಆಕ್ರೋಶ

Date:

ಕರ್ನಾಟಕ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ಕುರಿತು ಆಕ್ಷೇಪಾರ್ಹ ಬರಹ ಹಾಗೂ ಹೇಳಿಕೆಗಳ ಮೂಲಕ ಕೋಟ್ಯಂತರ ಬಸವಾಭಿಮಾನಿಗಳ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ ಎನ್ನಲಾದ ಲೇಖಕ ರವಿ ಹಂಜ್ ಮತ್ತು ಪತ್ರಕರ್ತ ವಿಶ್ವೇಶ್ವರ ಭಟ್ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಬೇಕು ಎಂದು ವಿವಿಧ ಬಸವಪರ ಸಂಘಟನೆಗಳ ಮುಖಂಡರು ಒತ್ತಾಯಿಸಿದರು.

- Advertisement -

ಭಾಲ್ಕಿಯ ಚನ್ನಬಸವಾಶ್ರಮದ ಆವರಣದಿಂದ ಮಂಗಳವಾರ ಪ್ರತಿಭಟನಾ ಮೆರವಣಿಗೆ ಆರಂಭಿಸಿದ ವಿವಿಧ ಬಸವಪರ ಸಂಘಟನೆಗಳ ಮುಖಂಡರು ಬಸವೇಶ್ವರ ವೃತ್ತ, ಮಹಾತ್ಮ ಗಾಂಧಿ ವೃತ್ತ ಹಾಗೂ ಅಂಬೇಡ್ಕರ್ ವೃತ್ತದ ಮೂಲಕ ತಹಸೀಲ್ದಾರ್ ಕಚೇರಿಗೆ ತೆರಳಿ, ತಹಸೀಲ್ದಾರ್ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಧಿಕೃತ ಕೆಲಸಕ್ಕೆ WHATSAPP ವೆಬ್ ಅಪಾಯಕಾರಿ ಏಕೆ? ಗೃಹ...

ಕಚೇರಿ, ಸಾರ್ವಜನಿಕ ಅಥವಾ ಹಲವರು ಹಂಚಿಕೊಂಡು ಬಳಸುವ ಕಂಪ್ಯೂಟರ್‌ಗಳಲ್ಲಿ WHATSAPP ವೆಬ್ ಬಳಸುವವರಿಗೆ ಕೇಂದ್ರ ಗೃಹ ಸಚಿವಾಲಯ ಮಹತ್ವದ ಭದ್ರತಾ ಎಚ್ಚರಿಕೆ ನೀಡಿದೆ. ಸಚಿವಾಲಯದ ಅಧೀನದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರದ...

ಆನೆ ಓಡಿಸಲು ಜೇನುನೊಣ ಸಾಕು! ಏನಿದು ತಂತ್ರ?

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ಕೃಷಿಕರು ಆನೆ ಹಾವಳಿ ತಡೆಗೆ ಸರಳ ಮತ್ತು ವಿನೂತನ ಪ್ರಯೋಗಕ್ಕೆ ಮುಂದಾಗಿದ್ದಾರೆ. ಆನೆ ಬರುವ ದಾರಿಯಲ್ಲಿ ಜೇನು ಪೆಟ್ಟಿಗೆಗಳನ್ನಿಟ್ಟು ಗಜಪಡೆಯನ್ನು ಹಿಮ್ಮೆಟ್ಟಿಸುವ ಮಾರ್ಗವಿದು. ಆನೆಗಳ ಸೊಂಡಿಲಿನ ಒಳಭಾಗ...

ವೈದ್ಯರಿಲ್ಲ, ಔಷಧವೂ ಇಲ್ಲ! ದಶಕ ಕಳೆದರೂ ಚೇತರಿಸದ ಗಜೇಂದ್ರಗಡ...

ಗಜೇಂದ್ರಗಡ ತಾಲೂಕು ಘೋಷಣೆಯಾಗಿ ದಶಕ ಕಳೆದರೂ ಇಂದಿಗೂ ಸಮುದಾಯ ಆರೋಗ್ಯ ಕೇಂದ್ರವನ್ನು ಮೇಲ್ದರ್ಜೆಗೆ ಏರಿಸಿಲ್ಲ. ವೈದ್ಯರ ಕೊರತೆ, ಅಗತ್ಯ ಔಷಧಿಗಳ ಕೊರತೆ, ಸಿಬ್ಬಂದಿಗಳ ಕೊರತೆ ಇರುವುದರಿಂದ, ಇಲ್ಲಿಗೆ ಬರುವ ರೋಗಿಗಳಿಗೆ ಸರಿಯಾದ ಚಿಕತ್ಸೆ,...

ಈ ವೇಳೆ ಪ್ರತಿಭಟನಾಕಾರರು ಬಸವೇಶ್ವರ ವೃತ್ತ ಹಾಗೂ ಮಹಾತ್ಮ ಗಾಂಧಿ ವೃತ್ತದಲ್ಲಿ ರವಿ ಹಂಜ್ ಮತ್ತು ವಿಶ್ವೇಶ್ವರ ಭಟ್ ಅವರ ಪ್ರತಿಕೃತಿಗಳನ್ನು ದಹಿಸಿ ಆಕ್ರೋಶ ವ್ಯಕ್ತಪಡಿಸಿದರು.

“ವಿಶ್ವಕ್ಕೆ ಸಮಾನತೆಯ ಸಂದೇಶ ಸಾರಿದ ಬಸವಣ್ಣನವರು ಸಕಲ ಜೀವಿಗಳ ಒಳಿತನ್ನು ಬಯಸಿದ ಮಹಾನ್ ಮಾನವತಾವಾದಿ. ಇಂತಹ ಮಹನೀಯರನ್ನು ರಾಜ್ಯ ಸರ್ಕಾರ ಸಾಂಸ್ಕೃತಿಕ ನಾಯಕ ಎಂದು ಘೋಷಿಸಿದೆ. ಆದರೆ, ಕೆಲವರು ತಮ್ಮ ಸ್ವಾರ್ಥ ಹಾಗೂ ದುರುದ್ದೇಶದಿಂದ ಬಸವಣ್ಣನವರ ಕುರಿತು ಆಕ್ಷೇಪಾರ್ಹ ಬರಹ ಮತ್ತು ಹೇಳಿಕೆಗಳನ್ನು ನೀಡುವ ಮೂಲಕ ಬಸವಾಭಿಮಾನಿಗಳ ಭಾವನೆಗಳಿಗೆ ನೋವುಂಟು ಮಾಡುತ್ತಿದ್ದಾರೆ” ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

WhatsApp Image 2026 11 23 at 7.41.16 PM 1

ಈಚೆಗೆ ಲೇಖಕ ರವಿ ಹಂಜ್ ಅವರು ಬಸವಣ್ಣನವರ ಕುರಿತು ನೀಡಿರುವ ಹೇಳಿಕೆಗಳು ಹಾಗೂ ಪ್ರಕಟಿಸಿರುವ ಬರಹಗಳು ಸಮಾಜದ ಸ್ವಾಸ್ಥ್ಯಕ್ಕೆ ಧಕ್ಕೆ ತರುವಂತಿವೆ. ಇಂತಹ ಬರಹಗಳಿಗೆ ಕಡಿವಾಣ ಹಾಕಬೇಕು. ಈ ವಿಚಾರದಲ್ಲಿ ಪತ್ರಕರ್ತ ವಿಶ್ವೇಶ್ವರ ಭಟ್ ಸೇರಿದಂತೆ ಸಂಬಂಧಪಟ್ಟವರ ಪಾತ್ರದ ಬಗ್ಗೆಯೂ ನಿಷ್ಪಕ್ಷಪಾತ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿಗಳಿಗೆ ಸಲ್ಲಿಸಿದ ಮನವಿ ಪತ್ರದಲ್ಲಿ ಒತ್ತಾಯಿಸಿದರು.

ಇದನ್ನೂ ಓದಿ : ಬೀದರ್‌ | ಭೀಕರ ಅಪಘಾತ: ಬೈಕ್‌ಗೆ ಎರ್ಟಿಗಾ ಡಿಕ್ಕಿ, ಮೂವರ ಸಾವು

WhatsApp Image 2026 11 13 at 8.18.17 PM 13

ತಾಲೂಕು ಜಾಗತಿಕ ಲಿಂಗಾಯತ ಮಹಾಸಭಾದ ಅಧ್ಯಕ್ಷ ಬಸವರಾಜ ಮರೆ, ಕಾರ್ಯದರ್ಶಿ ಕಿರಣ ಖಂಡ್ರೆ, ರಾಷ್ಟ್ರೀಯ ಬಸವದಳದ ಅಧ್ಯಕ್ಷ ಶ್ರೀಕಾಂತ ಭೋರಾಳೆ, ಜಿಲ್ಲಾ ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಶಂಭುಲಿಂಗ ಕಾಮಣ್ಣ, ತಾಲೂಕು ವೀರಶೈವ ಲಿಂಗಾಯತ ಸಂಘದ ಅಧ್ಯಕ್ಷ ಮಲ್ಲಿಕಾರ್ಜುನ ಹಲ್ಮಂಡಗೆ, ತಾಲೂಕು ವಚನ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಗುಂಡಪ್ಪ ಸಂಗಮಕರ, ಹಿರಿಯ ಸಾಹಿತಿ ಸೋಮನಾಥ ನುಚ್ಚಾ, ಸೋಮನಾಥಪ್ಪ ಅಷ್ಟೂರೆ, ಕಸಾಪ ಅಧ್ಯಕ್ಷ ನಾಗಭೂಷಣ ಮಾಮಡಿ, ಬಸವ ಭಾಗ್ಯ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಸಂತೋಷ ಬಿ.ಜಿ. ಪಾಟೀಲ್, ತಾಲೂಕು ಕನ್ನಡಪರ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಸಂಗಮೇಶ ಗುಮ್ಮೆ, ಜೈರಾಜ ಕೊಳ್ಳಾ, ಶರಣಪ್ಪ ಬಿರಾದಾರ, ಗಣಪತಿ ಬಾವುಗೆ, ಸಂತೋಷ ಸುಂದಾಳ, ಕಾಶಿನಾಥ ಚಲುವಾ, ಸಂದೀಪ ಮೂಲಗೆ ಸೇರಿದಂತೆ ವಿವಿಧ ಸಂಘಟನೆಗಳ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ |ಮದ್ಯ–ಮಾದಕ ವ್ಯಸನದ ವಿರುದ್ಧ ಜನಜಾಗೃತಿ ಅಭಿಯಾನಕ್ಕೆ ಗುರುಮಹಾಂತ ಶ್ರೀಗಳ ಸಾರಥ್ಯ

ವ್ಯಸನಮುಕ್ತ ಸಮಾಜ ನಿರ್ಮಾಣ ಹಾಗೂ ಮದ್ಯ ಮತ್ತು ಮಾದಕ ವಸ್ತುಗಳ ದುಷ್ಪರಿಣಾಮಗಳ...

ಬಾಗಲಕೋಟೆ | ಒಂದೇ ದಿನದಲ್ಲಿ ₹8.17 ಕೋಟಿ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ

ಕುಡಚಿ ವಿಧಾನಸಭಾ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಆದ್ಯತೆ ನೀಡಿರುವ ಕಾಂಗ್ರೆಸ್ ಶಾಸಕ...

ದೀಪತೂಣ್  ವಿವಾದ: ತಮಿಳುನಾಡು ಬಿಜೆಪಿ ಅಧ್ಯಕ್ಷ ನೈನಾರ್ ನಾಗೇಂದ್ರನ್, ಎಲ್. ಮುರುಗನ್ ಪೊಲೀಸ್ ವಶಕ್ಕೆ!

ಕಾರ್ತಿಕ ದೀಪೋತ್ಸವದ ಅಂಗವಾಗಿ ಮದುರೈನ ತಿರುಪ್ಪರಂಕುಂದ್ರಂ ಬೆಟ್ಟದ ಮೇಲಿರುವ ಕಲ್ಲಿನ ಸ್ತಂಭದ...

ಬಿಜ್ಜಳನ ಆಸ್ಥಾನದಲ್ಲಿದ್ದ ಕೊಂಡಿ ಮಂಚಣ್ಣ ಯಾರು? ಆತ ‘ಬಸವ’ ವಿರೋಧಿ ಆಗಿದ್ದು ಯಾಕೆ?

ಬಸವಣ್ಣನವರ ವಿರೋಧಿಯಾಗಿ ಇತಿಹಾಸದಲ್ಲಿ ಗುರುತಿಸಿಕೊಂಡಿರುವ ‘ಕೊಂಡಿ ಮಂಚಣ್ಣ’ ಈಗ ಮತ್ತೆ ಕರ್ನಾಟಕದ...