ಭಾಲ್ಕಿ | ಧರಣಿ ಸ್ಥಳಕ್ಕೆ ಸಚಿವ ಖಂಡ್ರೆ ಭೇಟಿ, ಸತ್ಯಾಗ್ರಹ ಹಿಂಪಡೆದ ರೈತರು

Date:

ಕರ್ನಾಟಕ ರಾಜ್ಯ ರೈತ ಸಂಘ ಸೇರಿದಂತೆ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಳೆದ ಏಳು ದಿನಗಳಿಂದ ನಡೆಯುತ್ತಿದ್ದ ಧರಣಿ ಸತ್ಯಾಗ್ರಹ ಸ್ಥಳಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಸೋಮವಾರ ಭೇಟಿ ನೀಡಿದರು.

- Advertisement -

ಭಾಲ್ಕಿ ನಗರದ ಮಹಾತ್ಮ ಗಾಂಧಿ ವೃತ್ತದಲ್ಲಿ ನಡೆಯುತ್ತಿದ್ದ ಧರಣಿ ಸ್ಥಳಕ್ಕೆ ಭೇಟಿ ನೀಡಿ ರೈತರ ಸಮಸ್ಯೆ ಆಲಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಪ್ರಚಾರ, ರಾಹುಲ್ ವ್ಯಕ್ತಿತ್ವ ಮತ್ತು ರೆಜಿಮ್ ಚೇಂಜ್

ಮೋದಿ ಅನುಭವಿ ನಟನಂತೆ, ಪ್ರದರ್ಶಕನಂತೆ ಕಾಣುತ್ತಾರೆ. ರಾಹುಲ್ ಗಾಂಧಿ ಪಾತ್ರದ ಒಳಹೊಕ್ಕು ನಟಿಸುವ ಕಲಾವಿದನಂತೆ ಕಾಣುತ್ತಾರೆ. ಈ ನಿಟ್ಟಿನಲ್ಲಿ ರಾಹುಲ್ ರಾಜಕೀಯ ನಡೆಗಳು ಮೋದಿಯವರ ರಾಜಕೀಯ ನಡೆಗಳೊಂದಿಗೆ ವಿಶ್ಲೇಷಣೆಗೊಳಗಾಗುತ್ತಿವೆ. ಕಳೆದ 12 ವರ್ಷಗಳ...

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

ಬಳಿಕ ಈಶ್ವರ ಖಂಡ್ರೆ ಮಾತನಾಡಿ, “ಜಿಲ್ಲೆಯ ಉಳಿದ ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ರೈತರು ಧರಣಿ ನಡೆಸುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿದೆ. ರಾಜ್ಯ ಸರ್ಕಾರ ಸದಾ ರೈತರ ಪರವಾಗಿದ್ದು, ರೈತರ ಸಮಸ್ಯೆಗಳಿಗೆ ಸ್ಪಂದಿಸಲು ಬದ್ಧವಾಗಿದೆ” ಎಂದು ಹೇಳಿದರು.

ಬರಪೀಡಿತ ತಾಲೂಕು ಘೋಷಣೆಯಲ್ಲಿ ಕೇಂದ್ರ ಸರ್ಕಾರದ ವೈಜ್ಞಾನಿಕ ಮಾನದಂಡಗಳು ಪ್ರಮುಖವಾಗಿವೆ. ಮುಂಗಾರು ಅವಧಿಯಲ್ಲಿ ಶೇ.60ರಷ್ಟು ಮಳೆ ಕೊರತೆಯಾಗುವುದರ ಜೊತೆಗೆ ಸತತ ಮೂರು ವಾರ ಮಳೆ ಬಾರದಿದ್ದರೆ ಕೇಂದ್ರ ಸರ್ಕಾರದ ನಿಯಮಾನುಸಾರ ಬರಪೀಡಿತ ತಾಲೂಕು ಎಂದು ಘೋಷಿಸುವ ಪ್ರಕ್ರಿಯೆ ನಡೆಯುತ್ತದೆ ಎಂದು ತಿಳಿಸಿದರು.

ಜಿಲ್ಲೆಯ 4 ತಾಲೂಕುಗಳಲ್ಲಿ ಮಳೆಯ ಕೊರತೆಯ ತೀವ್ರತೆ ಹೆಚ್ಚಿರುವ ಹಿನ್ನೆಲೆಯಲ್ಲಿ ಅವುಗಳನ್ನು ಈಗಾಗಲೇ ಬರಪೀಡಿತ ಪಟ್ಟಿಗೆ ಸೇರಿಸಲಾಗಿದೆ. ಭಾಲ್ಕಿ, ಹುಲಸೂರ, ಔರಾದ ಹಾಗೂ ಕಮಲನಗರ ತಾಲೂಕುಗಳು ಪಟ್ಟಿಯಿಂದ ಹೊರಗುಳಿದಿದ್ದರೂ, ನಿಯಮಗಳನ್ನು ಪರಿಷ್ಕರಿಸಿ ಎರಡನೇ ಹಂತದ ಬರಪೀಡಿತ ಪಟ್ಟಿಗೆ ಈ ತಾಲೂಕುಗಳನ್ನು ಸೇರ್ಪಡೆಗೊಳಿಸುವಂತೆ ರಾಜ್ಯ ಸರ್ಕಾರದಿಂದ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದರು.

ಕೇಂದ್ರ ಮಟ್ಟದಲ್ಲಿ ನಿರಂತರ ಪ್ರಯತ್ನ ನಡೆಸಿದ ಪರಿಣಾಮ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿ ಬೀದರ್ ಜಿಲ್ಲೆಗೆ ದಾಖಲೆಯ ₹264 ಕೋಟಿ ಪರಿಹಾರ ಬಿಡುಗಡೆಯಾಗಿ ರೈತರ ಖಾತೆಗಳಿಗೆ ಜಮೆಯಾಗಿದೆ. ಕಳೆದ ವರ್ಷ ಪ್ರವಾಹ ಉಂಟಾದ ಸಂದರ್ಭದಲ್ಲಿಯೂ ₹260 ಕೋಟಿ ಬಿಡುಗಡೆ ಮಾಡಿ ರೈತರ ನೆರವಿಗೆ ಧಾವಿಸಲಾಗಿದೆ. ಸರ್ಕಾರ ಯಾವಾಗಲೂ ರೈತರ ಪರವಾಗಿದ್ದು, ರೈತರು ಸರ್ಕಾರದ ನಿಯಮಗಳನ್ನು ಅರ್ಥಮಾಡಿಕೊಂಡು ಸಹಕಾರ ನೀಡಬೇಕು ಎಂದು ಹೇಳಿದರು.

ಜಿಲ್ಲಾ ರೈತ ಸಂಘದ ಅಧ್ಯಕ್ಷ ಮಲ್ಲಿಕಾರ್ಜುನ ಸ್ವಾಮಿ ಮಾತನಾಡಿ, “ಜಿಲ್ಲೆಯಲ್ಲಿ ಮಳೆಯ ಕೊರತೆ ತೀವ್ರವಾಗಿದ್ದು, ಬೀದರ್ ಜಿಲ್ಲೆಯನ್ನು ಸಂಪೂರ್ಣ ಬರಪೀಡಿತ ಪ್ರದೇಶವೆಂದು ಘೋಷಿಸಬೇಕು. ರೈತರ ಸಂಪೂರ್ಣ ಸಾಲಮನ್ನಾ ಮಾಡಬೇಕು ಹಾಗೂ ಪ್ರತಿ ಟನ್ ಕಬ್ಬಿಗೆ ₹5,000 ನಿಗದಿ ಮಾಡಬೇಕು” ಎಂದು ಒತ್ತಾಯಿಸಿದರು.

ಧರಣಿ ಹಿಂಪಡೆದ ರೈತರು

ಕಳೆದ ಏಳು ದಿನಗಳಿಂದ ಅಹೋರಾತ್ರಿ ನಡೆಸುತ್ತಿದ್ದ ಧರಣಿ ಸತ್ಯಾಗ್ರಹವನ್ನು ರೈತರು ಹಿಂಪಡೆದಿದ್ದಾರೆ.

ಮಲ್ಲಿಕಾರ್ಜುನ ಸ್ವಾಮಿ ಮಾತನಾಡಿ, “ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಅವರು ಧರಣಿ ಸ್ಥಳಕ್ಕೆ ಭೇಟಿ ನೀಡಿ ರೈತರ ಮನವಿ ಸ್ವೀಕರಿಸುವುದರ ಜೊತೆಗೆ ವಿವಿಧ ಬೇಡಿಕೆಗಳ ಕುರಿತು ಕೇಂದ್ರ ಸರ್ಕಾರದ ಗಮನಕ್ಕೆ ತರುವುದಾಗಿ ಭರವಸೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಧರಣಿ ಸತ್ಯಾಗ್ರಹ ಹಿಂಪಡೆಯಲಾಗಿದೆ ಎಂದ ಅವರು, ಧರಣಿ ಸತ್ಯಾಗ್ರಹಕ್ಕೆ ಸಹಕಾರ ನೀಡಿದ ರೈತರು, ವಿವಿಧ ಪಕ್ಷಗಳ ಮುಖಂಡರು ಹಾಗೂ ಸಂಘ–ಸಂಸ್ಥೆಗಳ ಮುಖಂಡರಿಗೆ ಅವರು ಧನ್ಯವಾದ ಸಲ್ಲಿಸಿದರು.

ಇದನ್ನೂ ಓದಿ : ವಚನ ಕಲ್ಯಾಣ | ಕೊಲ್ಲದಿರ್ಪುದೆ ಧರ್ಮ

ಈ ಸಂದರ್ಭದಲ್ಲಿ ರೈತ ಸಂಘದ ಪ್ರಮುಖರಾದ ನಾಗಶೆಟೆಪ್ಪ ಲಂಜವಾಡೆ, ಮಲ್ಲಿಕಾರ್ಜುನ ಬಿರಾದಾರ, ಅಶೋಕ ಕಾರಬಾರಿ, ಕಾಶಿಮಲಿ ಜಲಸಂಗಿ, ಕಿರಣ ಖಂಡ್ರೆ, ಕೆ.ಡಿ. ಗಣೇಶ, ಜೈರಾಜ ಕೊಳ್ಳಾ, ಸೂರಜ ಮಜಗೆ, ಕಿಶನರಾವ ಪಾಟೀಲ್ ಕಳಸದಾಳ, ಭೀಮಾಶಂಕರ ಪಾಟೀಲ್ ಉಚ್ಛಾ, ಗೌರವ ನೆಲವಾಡೆ, ವಿಠಲರಾವ ಮೇತ್ರೆ, ವೀರಾರೆಡ್ಡಿ ಪಾಟೀಲ್, ಶಾಂತಮ್ಮ ಮೂಲಗೆ, ಪ್ರಭಾವತಿ ಚನ್ಮಲ್ ಸೇರಿದಂತೆ ಹ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸ್ಟಿಂಗ್ ಪ್ರಕರಣ: ಸ್ವಪಕ್ಷೀಯರು ಭಾಗಿ – ಸಚಿವ ಯತೀಂದ್ರ; ಪಾರದರ್ಶಕ ತನಿಖೆಗೆ ಸಿದ್ದರಾಮಯ್ಯ ಆಗ್ರಹ

ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ...

ಕತ್ತಲಲ್ಲಿ ಗುರುಗ್ರಾಮ್: ವಿದ್ಯುತ್‌ ಬಿಕ್ಕಟ್ಟಿನಿಂದ 1,800 ಕೈಗಾರಿಕೆಗಳ ಕೆಲಸ ಸ್ಥಗಿತ, ನೀರಿಗಾಗಿ ಜನರ ಪರದಾಟ

ಹರಿಯಾಣ ವಿದ್ಯುತ್ ಇಲಾಖೆಯ ನೌಕರರು ನಡೆಸುತ್ತಿರುವ ಮೂರು ದಿನಗಳ ಮುಷ್ಕರದಿಂದ ‌ಗುರುಗ್ರಾಮ್...

ದೆಹಲಿಯಲ್ಲಿ ಭುಗಿಲೆದ್ದ ಆಕ್ರೋಶ: ಚುನಾವಣಾ ಆಯೋಗದ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಪ್ರತಿಭಟನಾಕಾರರು

ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ವಿರೋಧಿಸಿ ಹಾಗೂ ಉದ್ದೇಶಪೂರ್ವಕವಾಗಿ...

ಚೀನಾ ವಿಚಾರದಲ್ಲಿ ಮೋದಿ ಮೌನ; ಕೇಂದ್ರದ ವಿರುದ್ಧ ಜೈರಾಮ್ ರಮೇಶ್ ತೀವ್ರ ವಾಗ್ದಾಳಿ

ಅರುಣಾಚಲ ಪ್ರದೇಶದ ಗಡಿಯಲ್ಲಿ ಚೀನಾ ಸೇನೆಯೊಂದಿಗೆ ಮುಖಾಮುಖಿ ಸಂಘರ್ಷ ಮುಂದುವರಿದಿದೆ ಎಂದು...