ಬೀದರ್ | ಕಾಡುಹಂದಿ ದಾಳಿಯಿಂದ ಮೃತಪಟ್ಟ ರೈತ ಕುಟುಂಬಕ್ಕೆ ₹20 ಲಕ್ಷ ಪರಿಹಾರ

Date:

ಭಾಲ್ಕಿ ತಾಲೂಕಿನ ಆನಂದವಾಡಿ ಗ್ರಾಮದಲ್ಲಿ ಇತ್ತೀಚೆಗೆ ಕಾಡುಹಂದಿ ದಾಳಿಯಿಂದ ತೀವ್ರವಾಗಿ ಗಾಯಗೊಂಡು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ರೈತ ಚನ್ನಬಸಪ್ಪ ಭೂರೇ ಅವರ ನಿವಾಸಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಅವರು ನಿವಾಸಕ್ಕೆ ಭೇಟಿ ನೀಡಿ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು.

- Advertisement -

ಈ ಸಂದರ್ಭದಲ್ಲಿ ಸರ್ಕಾರದ ವತಿಯಿಂದ ಕುಟುಂಬಕ್ಕೆ ₹20 ಲಕ್ಷ ಪರಿಹಾರದ ಚೆಕ್‌ ಅನ್ನು ಹಸ್ತಾಂತರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಾವೇರಿ | ಡಿಜಿಟಲ್ ಜನನ ಪ್ರಮಾಣ ಪತ್ರ ಗೊಂದಲ:...

ಹಳೆ ಮಾದರಿಯ ಕೈಬರಹ ಜನನ ಪ್ರಮಾನ ಪತ್ರದ ವಿಧಾನವನ್ನು ಬಿಟ್ಟು, ಡಿಜಿಟಲ್ ಜನನ ಪ್ರಮಾಣ ಪತ್ರ ನಿಯಮ ಜಾರಿಗೊಳಿಸಿದ್ದರಿಂದ ಹಲವು ಸಮಸ್ಯೆಗಳು ಎದುರಾಗಿದ್ದು, ಹದಿನಾರು ವರ್ಷಕ್ಕಿಂತ ಕೆಳಗಿನ ಮಕ್ಕಳಿಗೆ ಆಧಾರ್ ಕಾರ್ಡ್ ತಿದ್ದುಪಡಿ...

ವಲಸೆ ಹಳ್ಳಿಗರಿಗೆ ಮಾತ್ರವೇ? ಉದ್ಯೋಗಕ್ಕಾಗಿ ನಗರ ಸೇರುವ ಯುವಜನರೂ...

ಭಾರತವು ವಿಶ್ವದಲ್ಲೇ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ದೇಶ. ಹೆಚ್ಚುತ್ತಿರುವ ಜನಸಂಖ್ಯೆಯೊಂದಿಗೆ ಆಹಾರ, ಶಿಕ್ಷಣ, ಆರೋಗ್ಯ, ವಸತಿ ಮತ್ತು ಉದ್ಯೋಗದ ಬೇಡಿಕೆಯೂ ಹೆಚ್ಚುತ್ತಿದೆ. ದೇಶದ ಅಭಿವೃದ್ಧಿಗೆ ಮಾನವ ಸಂಪನ್ಮೂಲವೇ ದೊಡ್ಡ ಶಕ್ತಿಯಾಗಿದ್ದರೂ, ಆ...

ತಿಪಟೂರು | ಕೊಬ್ಬರಿ ವ್ಯಾಪಾರದಲ್ಲಿ ಅಂಡರ್ ಬಿಲ್ಲಿಂಗ್ ಆಟ;...

ತಿಪಟೂರು ಕೊಬ್ಬರಿ ವ್ಯಾಪಾರದಲ್ಲಿ ಅಂಡರ್ ಬಿಲ್ಲಿಂಗ್ ಆಟ ಜೋರಿದೆ. ಟೆಂಡರ್ ದರ ಒಂದಾದರೆ, ಸುತ್ತಮುತ್ತಲಿನ ಮಾರುಕಟ್ಟೆಗಳಲ್ಲಿ ನೇರ ಖರೀದಿ (URD) ಮತ್ತು ರವಾನೆ ಕೊಬ್ಬರಿ ಖರೀದಿಗೆ ಮತ್ತೊಂದು ಬೆಲೆ ನಿಗದಿಯಾಗಿದೆ. ಅಂಡರ್ ಬಿಲ್ಲಿಂಗ್...

‘ಪರಿಹಾರ ನೀಡುವುದರಿಂದ ಕಳೆದುಹೋದ ಜೀವವನ್ನು ಮರಳಿ ತರಲು ಸಾಧ್ಯವಿಲ್ಲ. ಆದರೆ ದುಃಖದಲ್ಲಿರುವ ಕುಟುಂಬಕ್ಕೆ ಸರ್ಕಾರದ ನೆರವು ಸ್ವಲ್ಪಮಟ್ಟಿನ ಆಸರೆಯಾಗಲಿದೆ. ಕುಟುಂಬದ ನೋವಿನಲ್ಲಿ ಸರ್ಕಾರ ಮತ್ತು ನಾವೆಲ್ಲರೂ ಜೊತೆಯಾಗಿದ್ದೇವೆ’ ಎಂದು ಅವರು ಹೇಳಿದರು.

ಕಾಡುಪ್ರಾಣಿಗಳ ದಾಳಿಯಿಂದ ರೈತರು ಹಾಗೂ ಗ್ರಾಮೀಣ ಜನರ ಜೀವಕ್ಕೆ ಅಪಾಯವಾಗದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವುದರ ಜೊತೆಗೆ, ಶಾಶ್ವತ ಪರಿಹಾರ ಕ್ರಮಗಳನ್ನು ಜಾರಿಗೊಳಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿರುವುದಾಗಿ ತಿಳಿಸಿದರು.

ಆನಂದವಾಡಿ ಗ್ರಾಮದಲ್ಲಿ ಕಾಡುಹಂದಿ ದಾಳಿಯಿಂದ ಗಾಯಗೊಂಡು ಬೀದರ ಬ್ರಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ರೈತ ಮಹಿಳೆ ಸಂಪದಾ ಅವರನ್ನು ಸಚಿವ ಈಶ್ವರ ಖಂಡ್ರೆ ಅವರು ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.

1006185412

ಅವರ ಚಿಕಿತ್ಸೆಯ ಕುರಿತು ವೈದ್ಯರಿಂದ ಮಾಹಿತಿ ಪಡೆದರು. ಸಂಪದಾ ಅವರು ಶೀಘ್ರವಾಗಿ ಸಂಪೂರ್ಣ ಗುಣಮುಖರಾಗಲಿ ಎಂದು ಹಾರೈಸಿದ ಅವರು, ಸಂಪದಾ ಅವರ ಸಂಪೂರ್ಣ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಲಿದೆ ಎಂದು ಭರವಸೆ ನೀಡಿದರು.ವೈಯಕ್ತಿಕವಾಗಿ ಧನ ಸಹಾಯ ನೀಡಿ, ಸಂಕಷ್ಟದಲ್ಲಿರುವ ಕುಟುಂಬದೊಂದಿಗೆ ಸರ್ಕಾರ ಸದಾ ನಿಂತಿರುತ್ತದೆ ಎಂಬ ಧೈರ್ಯ ತುಂಬಿದರು.

ಇದನ್ನೂ ಓದಿ : ಬೀದರ್‌ | ದಲಿತರ ಮೇಲಿನ ದೌರ್ಜನ್ಯ: ಉನ್ನತ ಮಟ್ಟದ ತನಿಖೆಗೆ ಆಗ್ರಹಿಸಿ ಬೃಹತ್‌ ಪ್ರತಿಭಟನೆ

ಕಾಡುಪ್ರಾಣಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳಲ್ಲಿ ಜನರ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಬೇಕು. ರೈತರು ಮತ್ತು ಗ್ರಾಮಸ್ಥರ ಜೀವ ರಕ್ಷಣೆಗೆ ಅಗತ್ಯವಿರುವ ಎಲ್ಲ ಕ್ರಮಗಳನ್ನು ತುರ್ತಾಗಿ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಲಸೆ ಹಳ್ಳಿಗರಿಗೆ ಮಾತ್ರವೇ? ಉದ್ಯೋಗಕ್ಕಾಗಿ ನಗರ ಸೇರುವ ಯುವಜನರೂ ವಲಸಿಗರೇ..?

ಭಾರತವು ವಿಶ್ವದಲ್ಲೇ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ದೇಶ. ಹೆಚ್ಚುತ್ತಿರುವ ಜನಸಂಖ್ಯೆಯೊಂದಿಗೆ...

‘ಉಗ್ರ ಕೃತ್ಯದ ಆರೋಪಿಗೆ ಇಷ್ಟೊಂದು ವಿನಾಯಿತಿ ಏಕೆ?’- ಅಮೆರಿಕ ಪ್ರಜೆ ವ್ಯಾನ್‌ಡೈಕ್ ಬಿಡುಗಡೆಗೆ ಕಾಂಗ್ರೆಸ್ ಕಿಡಿ

ಮ್ಯಾನ್ಮಾರ್‌ ಶಸ್ತ್ರಾಸ್ತ್ರ ತರಬೇತಿ ಪ್ರಕರಣದಲ್ಲಿ ಆರೋಪಿಯಾಗಿರುವ ಅಮೆರಿಕದ ಪ್ರಜೆ ಮ್ಯಾಥ್ಯೂ ವ್ಯಾನ್‌ಡೈಕ್...

KPSC ಅಕ್ರಮ ಪ್ರಕರಣ; IAS ಅಧಿಕಾರಿ ಗಂಗ್ವಾರ್‌ ವಿರುದ್ಧ ಕಾನೂನು ಕ್ರಮಕ್ಕೆ ರಾಜ್ಯ ಸರ್ಕಾರ ಅನುಮತಿ

ಕರ್ನಾಟಕ ಲೋಕಸೇವಾ ಆಯೋಗದ (KPSC) ನೇಮಕಾತಿ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ...

30 ವರ್ಷಗಳ ಹಿಂದಿನ ಕುಂಬ್ಳೆ-ಶ್ರೀನಾಥ್ ಆಟ ನೆನಪಿಸಿದ ಹೈದರಾಬಾದ್ ಹುಡುಗರಾದ ತಿಲಕ್-ನಿತೀಶ್ ಗೆಲುವಿನಾಟ

ನ್ಯೂಜಿಲೆಂಡ್ ವಿರುದ್ಧದ ಕ್ರೈಸ್ಟ್‌ಚರ್ಚ್‌ ಟಿ20 ಪಂದ್ಯದಲ್ಲಿ ಭಾರತ ಭರ್ಜರಿ ಜಯ ಸಾಧಿಸಿದೆ....