ಬೀದರ್‌ | ಬಸವ ಪಂಚಮಿ : ಮೌಢ್ಯತೆ ಆಚರಣೆಯಿಂದ ಹೊರ ಬನ್ನಿ : ಪಟ್ಟದ್ದೇವರು

Date:

ಭಾಲ್ಕಿ ಹಿರೇಮಠ ಸಂಸ್ಥಾನದ ವತಿಯಿಂದ ಬಡ ಮಕ್ಕಳಿಗೆ ಹಾಲು ಕುಡಿಸಿ ಬಸವ ಪಂಚಮಿ ಮತ್ತು ಅಕ್ಕನಾಗಮ್ಮ ಜಯಂತಿ ಅರ್ಥಪೂರ್ಣವಾಗಿ ಆಚರಿಸಲಾಯಿತು. 

- Advertisement -

ನಗರದ ಹಿರೇಮಠ ಸಂಸ್ಥಾನದಲ್ಲಿ ಬಸವಲಿಂಗ ಪಟ್ಟದ್ದೇವರು ಅವರು ಹಾನಗಲ್ ಕುಮಾರೇಶ್ವರ ಪ್ರಸಾದ ನಿಲಯದ ನೂರಾರು ಬಡ ಮಕ್ಕಳಿಗೆ ಹಾಲು ಕುಡಿಸಿ ಆಶೀರ್ವದಿಸಿ, ಕಲ್ಲು ನಾಗ ಎಂದಿಗೂ ಹಾಲು ಕುಡಿಯುವುದಿಲ್ಲ ನಾಗ ಪಂಚಮಿ ಆರಚರಣೆ ಹೆಸರಿನಲ್ಲಿ ಭಕ್ತರು ಕಲ್ಲು ನಾಗ, ಹುತ್ತಕ್ಕೆ ಹಾಲೇರಿಯುವ ಬದಲು ಬಡ ಮಕ್ಕಳು, ನಿರ್ಗತಿಕರು, ನಿರಾಶ್ರಿತರಿಗೆ ಹಾಲು ವಿತರಿಸಿ ಅವರ ಹಸಿವು ನೀಗಿಸುವ ಪ್ರಯತ್ನ ಮಾಡಬೇಕು ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

“ನಾಗಪಂಚಮಿ ಹೆಸರಿನಲ್ಲಿ ಕಲ್ಲು ನಾಗ, ಹುತ್ತಕ್ಕೆ ಹಾಲಯೇರಿದು ವ್ಯರ್ಥ ಮಾಡಬಾರದು. ಪ್ರಾಣಿ ದಯೆಯೇ ಧರ್ಮದ ಮೂಲ ಎಂದು ಸಾರಿದ ಬಸವಣ್ಣನವರ ತತ್ವಗಳಿಗೆ ಇದು ವಿರುದ್ಧವಾಗಿದೆ. ಅಮೂಲ್ಯವಾದ ಹಾಲನ್ನು ವ್ಯರ್ಥ ಮಾಡುವ ಬದಲು ಅದನ್ನು ನಿರ್ಗತಿಕರು, ಹಸಿದ ಮಕ್ಕಳಿಗೆ ನೀಡಿ ನಿಜವಾದ ಭಕ್ತಿ ಸರ್ಮಿಸಬೇಕು” ಎಂದರು.

ಹಿರೇಮಠ ಸಂಸ್ಥಾನದ ಪೀಠಾಧಿಪತಿ ಗುರುಬಸವ ಪಟ್ಟದ್ದೇವರ ನೇತೃತ್ವದಲ್ಲಿ ನಗರದ ಹೊರವಲಯದ ಬುರ್ ಬುರ್ ಪೋಚಮ್ಮ ಬಡಾವಣೆಗೆ ಭೇಟಿ ಅಲ್ಲಿರುವ ನೂರಾರು ಬಡ ಮಕ್ಕಳಿಗೆ ಪ್ರಸಾದ ಬಡಿಸಿ, ಹಾಲುಣಿಸಿದರು.

17blk1 3

ಗುರುಬಸವ ಪಟ್ಟದ್ದೇವರು ಮಾತನಾಡಿ, “ನಾಗ ಪಂಚಮಿ, ವಿಶೇಷ ದಿನ ಆಚರಣೆ ಹೆಸರಿನಲ್ಲಿ ಕಲ್ಲುನಾಗ, ಹುತ್ತಕ್ಕೆ ಹಾಲನ್ನೇರಿಯುವುದು ಮೌಢ್ಯದ ಸಂಕೇತ. ಇಂತಹ ಮೌಢ್ಯತೆ ಆಚರಣೆಯಿಂದ ಭಕ್ತರು ಹೊರ ಬಂದು ನಿರಾಶ್ರಿತರಿಗೆ ಅನ್ನ, ಹಾಲು, ಹಣ್ಣು ನೀಡಿದರೆ ಪುಣ್ಯ ಲಭಿಸುತ್ತದೆ” ಎಂದು ತಿಳಿಸಿದರು.

ಶ್ರಾವಣ ಮಾಸದ ಪ್ರವಚನ ಸೇವಾ ಸಮಿತಿ ಅಧ್ಯಕ್ಷೆ ಸ್ವರೂಪ ಬಳತೆ, ಶಾರದಾಬಾಯಿ ಕರಕಾಳೆ, ರೇಖಾಬಾಯಿ ಅಷ್ಟೂರೆ, ಕರುಣಾ ಕಮಠಾಣೆ, ಮನಿಷಾ ವಾಲೆ, ಪುರಸಭೆ ಮಾಜಿ ಸದಸ್ಯ ವಿಜಯಕುಮಾರ ರಾಜಭವನ, ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಜೈರಾಜ ಪಾತ್ರೆ, ಬಸವರಾಜ ಹೊಸಪೆಟ್ಟಿ, ನಿವೃತ್ತ ಪ್ರಾಚಾರ್ಯ ಮಲಮ್ಮ ಆರ್.ಪಾಟೀಲ್, ತಾಲೂಕು ಕದಳಿ ವೇದಿಕೆ ಅಧ್ಯಕ್ಷೆ ಮಲಮ್ಮ ನಾಗನಕೇರೆ, ಸಿದ್ದಯ್ಯ ಕಾವಡಿಮಠ, ಸಂಗಮೇಶ ವಾಲೆ, ಸುಮತಿ, ಬಸವರಾಜ ಮರೆ , ರಾಜಕುಮಾರ ಸಿರ್ಸೆ, ಮಲ್ಲಿಕಾರ್ಜುನ ಪಂಚಾಕ್ಷರೆ, ಶಾಂತಯ್ಯ ಸ್ವಾಮಿ , ಮನೋಹರ, ಸಂಜುಕುಮಾರ, ನಾಗಶೆಟ್ಟಿ ಚೋಳಾ ಸೇರಿದಂತೆಅನೇಕರಿದ್ದರು. ಶಿವಪುತ್ರ ದಾಬಶಟ್ಟೆ ಸ್ವಾಗತಿಸಿದರು, ದೀಪಕ ಠಮಕೆ ನಿರೂಪಿಸಿ ವಂದಿಸಿದರು.

IMG 20260817 WA0144
ಬೀದರ್ ನಗರದ ಡಾ. ಚನ್ನಬಸವ ಪಟ್ಟದ್ದೇವರ ಪ್ರಸಾದ ನಿಲಯದ ವತಿಯಿಂದ ನವಜೀವನ ವಿಶೇಷ ಅಂಗವಿಕಲ ಮಕ್ಕಳ ಶಾಲೆ ವಿದ್ಯಾನಗರ ಕಾಲೋನಿಯಲ್ಲಿ ಬಸವ ಪಂಚಮಿ ದಿನಾಚರಣೆ ಜರುಗಿತು.

ಇದನ್ನೂ ಓದಿ : ವಚನ ಕಲ್ಯಾಣ | ಆಸೆಯೆಂಬುದು ಅರಸಿಂಗಲ್ಲದೆ, ಶಿವಭಕ್ತರಿಗುಂಟೆ ಅಯ್ಯಾ?

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಾಂಧೀಜಿ ಹೆಸರು, ವಿಚಾರಧಾರೆ ಅಳಿಸಲು ಯಾರಿಂದಲೂ ಸಾಧ್ಯವಿಲ್ಲ: ಡಿ.ಕೆ. ಶಿವಕುಮಾರ್

"ಮಹಾತ್ಮ ಗಾಂಧೀಜಿ ಭಾರತದ ಆತ್ಮವಿದ್ದಂತೆ. ಅವರ ಹೆಸರು ಹಾಗೂ ವಿಚಾರಧಾರೆಯನ್ನು ಅಳಿಸಿಹಾಕಲು...

ಸಾಗರ | ಗೂಡ್ಸ್ ಆಟೋ ಢಿಕ್ಕಿ; ಚಿಕಿತ್ಸೆ ಫಲಿಸದೆ ಬಾಲಕ ಸಾವು

ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ಗೂಡ್ಸ್ ಆಟೋ ಢಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ...

ಏಷ್ಯನ್ ಗೇಮ್ಸ್: 4 ದಶಕಗಳ ಬಳಿಕ ಮಹಿಳಾ ಹಾಕಿಯಲ್ಲಿ ಭಾರತಕ್ಕೆ ಒಲಿದ ಸುವರ್ಣ ಪದಕ

ಜಪಾನಿನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ ಭಾರತೀಯ ಮಹಿಳಾ ಹಾಕಿ...

ಬಾಗಲಕೋಟೆ | ಗಾಂಧಿ ಜಯಂತಿ ನಿಮಿತ್ತ ಕಾಂಗ್ರೆಸ್‌ನಿಂದ ಸ್ವಚ್ಛತಾ ಅಭಿಯಾನ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಜಯಂತಿ ಅಂಗವಾಗಿ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ...