ಬೀದರ್‌ | ಮಲ್ಲಿಕಾರ್ಜುನ ಖರ್ಗೆಗೆ ಅವಮಾನ ಖಂಡಿಸಿ ಭಾಲ್ಕಿಯಲ್ಲಿ ಕಾಂಗ್ರೆಸ್ ಪ್ರತಿಭಟನೆ

Date:

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಎಐಸಿಸಿ ಅಧ್ಯಕ್ಷರೂ ಆದ ರಾಜ್ಯಸಭೆಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಮಾತನಾಡಿದ ಸ್ಥಳವನ್ನು ಶುದ್ಧೀಕರಣ ಮಾಡುವ ಮೂಲಕ ಅವಮಾನಿಸಿದ ಘಟನೆಯನ್ನು ಖಂಡಿಸಿ ಬೀದರ ಸಂಸದ ಸಾಗರ ಖಂಡ್ರೆ ಅವರ ನೇತೃತ್ವದಲ್ಲಿ ಮಂಗಳವಾರ ಭಾಲ್ಕಿ ಪಟ್ಟಣದಲ್ಲಿ ಕಾಂಗ್ರೆಸ್ ವತಿಯಿಂದ ಬೃಹತ್ ಪ್ರತಿಭಟನೆ ನಡೆಯಿತು.

- Advertisement -

ಭಾಲ್ಕಿ ಕಾಂಗ್ರೆಸ್ ಪಕ್ಷದ ಕಚೇರಿಯಿಂದ ಆರಂಭವಾದ ಪ್ರತಿಭಟನಾ ಮೆರವಣಿಗೆ ಬಸವೇಶ್ವರ ಚೌಕ್, ಗಾಂಧಿ ಚೌಕ್, ಡಾ.ಬಿ.ಆರ್. ಅಂಬೇಡ್ಕರ್ ವೃತ್ತದ ಮಾರ್ಗವಾಗಿ ತಹಶೀಲ್ದಾರ್ ಕಚೇರಿವರೆಗೆ ಸಾಗಿತು. ಪ್ರತಿಭಟನೆಯಲ್ಲಿ ನೂರಾರು ಕಾರ್ಯಕರ್ತರು ಹಾಗೂ ಮುಖಂಡರು ಭಾಗವಹಿಸಿ ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು, ಶುದ್ಧೀಕರಣ ಘಟನೆ ಖಂಡಿಸಿ ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಸಂಸದ ಸಾಗರ್ ಖಂಡ್ರೆ ಮಾತನಾಡಿ, “ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ದೇಶದ ಹಿರಿಯ ನಾಯಕರು ಹಾಗೂ ಸಾಮಾಜಿಕ ನ್ಯಾಯದ ಪರವಾಗಿ ನಿರಂತರವಾಗಿ ಧ್ವನಿ ಎತ್ತುತ್ತಿರುವ ಸಂವಿಧಾನಪರ ನಾಯಕರು. ಅವರನ್ನು ಅವಮಾನಿಸುವ ಉದ್ದೇಶದಿಂದ ನಡೆದಿರುವ ಈ ಕೃತ್ಯ ಅತ್ಯಂತ ಖಂಡನೀಯ. ತಪ್ಪಿತಸ್ಥರ ವಿರುದ್ಧ ಕಾನೂನಿನಡಿ ಕಠಿಣ ಕ್ರಮ ಕೈಗೊಂಡು ಶಿಕ್ಷೆಗೆ ಒಳಪಡಿಸಬೇಕು” ಎಂದು ಆಗ್ರಹಿಸಿದರು.

“ಇಂತಹ ಜಾತೀಯ ಹಾಗೂ ಮನುವಾದಿ ಮನಸ್ಥಿತಿಯ ಕೃತ್ಯಗಳಿಗೆ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಯಾವುದೇ ಸ್ಥಾನವಿಲ್ಲ. ಸಂವಿಧಾನ ಮತ್ತು ಸಾಮಾಜಿಕ ಸಮಾನತೆಯನ್ನು ಗೌರವಿಸುವ ಪ್ರತಿಯೊಬ್ಬರೂ ಇಂತಹ ಘಟನೆಗಳನ್ನು ಖಂಡಿಸಬೇಕು: ಎಂದು ಅವರು ಹೇಳಿದರು.

ಪ್ರತಿಭಟನೆಯ ಬಳಿಕ ಭಾರತದ ರಾಷ್ಟ್ರಪತಿಗಳ ಹೆಸರಿಗೆ ಬರೆದ ಮನವಿಪತ್ರವನ್ನು ತಹಶೀಲ್ದಾರ್ ಮಲ್ಲಿಕಾರ್ಜುನ ವಡ್ಡನಕೇರಿ ಅವರಿಗೆ ಸಲ್ಲಿಸಿದರು.

WhatsApp Image 2026 08 25 at 3.20.36 PM

ಪ್ರತಿಭಟನೆಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹನುಮಂತ್ ಚವ್ಹಾಣ್, ಮಾಜಿ ಜಿ.ಪಂ.ಅಧ್ಯಕ್ಷ ಶಿವರಾಜ್ ಹಾಸನಕರ್ ಸೇರಿದಂತೆ ಪಕ್ಷದ ಪ್ರಮುಖರಾದ ವಿಲಾಸ್ ಮೋರೆ, ಪ್ರಶಾಂತ್ ಕೋಟಗಿರಾ, ಬಸವರಾಜ್ ವಂಕೆ ಭಾಲ್ಕಿ ತಾಲೂಕಿನ ವಿವಿಧ ಭಾಗಗಳ ಕಾಂಗ್ರೆಸ್ ಮುಖಂಡರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಲೈಂಗಿಕ ಕಿರುಕುಳ ಆರೋಪ; ಪ್ರಾಧ್ಯಾಪಕ ಹುದ್ದೆಯಿಂದ ಕಾಂಗ್ರೆಸ್ ಸಂಸದ ಬಿಮೋಲ್ ವಜಾ

11 ವಿದ್ಯಾರ್ಥಿನಿಯರು ಲೈಂಗಿಕ ಕಿರುಕುಳ ಹಾಗೂ ಅನುಚಿತ ವರ್ತನೆಯ ಆರೋಪದಡಿ ದೂರು...

ಬೀದರ್‌ | ಕಾನ್ಶಿರಾಂ ಹೋರಾಟ ಬಹುಜನರ ರಾಜಕೀಯ ಜಾಗೃತಿಗೆ ದಾರಿದೀಪ

ಬೀದರ್ ಜಿಲ್ಲಾ ದಲಿತ ಸಂಘಟನೆಗಳ ಒಕ್ಕೂಟ ಹಾಗೂ ವಿವಿಧ ಬಹುಜನ ಸಂಘಟನೆಗಳ...

ವಿಜಯನಗರ | ಎಸ್‌ಐಆರ್ ರದ್ದತಿಗೆ ಆಗ್ರಹಿಸಿ ವಿದ್ಯಾರ್ಥಿ-ಯುವಜನ ಸಂಘಟನೆಗಳ ಬೃಹತ್ ಪ್ರತಿಭಟನೆ

ಜನವಿರೋಧಿ ಎಸ್‌ಐಆರ್ (SIR) ರದ್ದುಪಡಿಸಿ ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...