ಬೀದರ್‌ | ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ದಲಿತರ ಯುವಕರ ಮೇಲೆ ಹಲ್ಲೆ, 8 ಜನರ ವಿರುದ್ಧ ಎಫ್‌ಐಆರ್

Date:

ಗಣೇಶ ವಿಸರ್ಜನೆ ಮೆರವಣಿಗೆಯಲ್ಲಿ ನಡೆದ ಗಲಾಟೆಯಲ್ಲಿ ಮೇಲ್ಜಾತಿ ಯುವಕರು ದಲಿತರ ಸಮುದಾಯದವರ ಮೇಲೆ ಹಲ್ಲೆ ಹಾಗೂ ಜಾತಿ ನಿಂದನೆ ಮಾಡಿದ ಆರೋಪದ ಮೇರೆಗೆ 8 ಜನರ ವಿರುದ್ಧ ಭಾಲ್ಕಿ ತಾಲೂಕಿನ ಖಟಕ ಚಿಂಚೋಳಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

- Advertisement -

ಭಾಲ್ಕಿ ತಾಲೂಕಿನ ಖಟಕ ಚಿಂಚೋಳಿ ಗ್ರಾಮದ ಸುಧಾಕರ ಭೀಮಶಾ ಬೇಂದ್ರೆ ಎಂಬುವವರು ನೀಡಿದ ದೂರಿನ ಆಧಾರದ ಮೇಲೆ ಭಾರತೀಯ ನ್ಯಾಯ ಸಂಹಿತೆ (ಬಿಎನ್‌ಎಸ್) ಸೆಕ್ಷನ್ 189(2), 191(2), 191(3), 115(2), 118(1), 351(3), 352 ಹಾಗೂ 190 ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯ ಸೆಕ್ಷನ್ 3(1)(ಆರ್), 3‌(1) (ಆರ್)(), 3(2)(ವಿ-ಎ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಸೆ.23 ‘ಭೀಮ ಸಂಕಲ್ಪ ದಿನ’: ಡಾ ಬಿ ಆರ್...

1917ರ ಸೆಪ್ಟೆಂಬರ್ 23ರಂದು ವಡೋದರದ ಆಲದ ಮರದ ಕೆಳಗೆ ಕುಳಿತಿದ್ದ ಯುವ ಅಂಬೇಡ್ಕರ್ ಅವರ ಬಳಿ ಅಧಿಕಾರವಿರಲಿಲ್ಲ, ದೊಡ್ಡ ಸಂಘಟನೆಯಿರಲಿಲ್ಲ. ಆದರೆ ಅನ್ಯಾಯವನ್ನು ಒಪ್ಪಿಕೊಳ್ಳದ ಮನಸ್ಸು ಮತ್ತು ಸಮಾಜವನ್ನು ಬದಲಿಸಬೇಕೆಂಬ ದೃಢ ಸಂಕಲ್ಪವಿತ್ತು....

ಸೌಜನ್ಯ ಪ್ರಕರಣ: ಪ್ರಭಾವಿಗಳ ಜೊತೆ ಲಜ್ಜೆ ಬಿಟ್ಟು ಹೆಜ್ಜೆ...

ತನಿಖಾಧಿಕಾರಿಗಳು ಹಣದ ಆಮಿಷಕ್ಕೆ ಒಳಗಾಗಿದ್ದರೇ ಅಥವಾ ಬಲಾಢ್ಯರ ಒತ್ತಡಕ್ಕೆ ಮಣಿದು ಸಾಕ್ಷ್ಯ ನಾಶ ಮಾಡಿ ಅಪರಾಧಿಗಳ ರಕ್ಷಣೆಗೆ ನಿಂತರೇ ಎಂಬ ಅನುಮಾನ ಸಾಮಾನ್ಯ ಜನರಿಗೂ ಬರುತ್ತಿರುವಾಗ ಕರ್ನಾಟಕದ ಬಹುತೇಕ ಸುದ್ದಿ ಮಾಧ್ಯಮಗಳು ಈ...

ಉತ್ತರ ಪ್ರದೇಶ | ಅಖಿಲೇಶ್ ‘ಧರ್ಮ ರಕ್ಷಣೆ’ಯ ಯುದ್ಧ...

ಉತ್ತರ ಪ್ರದೇಶದ ಯುವಜನತೆಯ (Gen Z) ಅಸಮಾಧಾನ, ನಿರುದ್ಯೋಗ ಸಮಸ್ಯೆ ಮತ್ತು ಬದಲಾಗುತ್ತಿರುವ ಜಾತಿ ಸಮೀಕರಣಗಳು ತಮಗೆ ಪೂರಕವಾಗಿವೆ ಎಂಬುದನ್ನು ಅಖಿಲೇಶ್ ಯಾದವ್ ಅರಿತಿದ್ದಾರೆ. ತಮ್ಮ ಪಕ್ಷ ಕೇವಲ "ಮುಸ್ಲಿಂ ಮತ್ತು ಯಾದವರ...

ಸೆ.22ರಂದು ಖಟಕ ಚಿಂಚೋಳಿ ಗ್ರಾಮದಲ್ಲಿ ಆದಿ ಜಾಂಬವ ಗಣೇಶ ಮಂಡಳಿಯಿಂದ ಗಣೇಶ ವಿಸರ್ಜನೆ ಮೆರವಣಿಗೆ ಆಯೋಜಿಸಲಾಗಿತ್ತು. ರಾತ್ರಿ 10.40ರ ಸುಮಾರಿಗೆ ಮೆರವಣಿಗೆಯು ಶಿಲುಬೆ ಕಟ್ಟೆ ಬಳಿ ಬಂದಾಗ ಗ್ರಾಮದ ಯುವಕ ಸಿದ್ದು ಬಿರಾದರ್‌ ಎಂಬುವವರು ಬೈಕ್ ಮೇಲೆ ಜೊತೆಗೆ ಇನ್ನಿಬ್ಬರನ್ನು ಕೂಡಿಸಿಕೊಂಡು ಜೋರಾಗಿ ಬಂದಿರುವುದನ್ನು ಪ್ರಶ್ನಿಸಿದ ಅಲ್ಲಿನ ಗಣೇಶ ಮಂಡಳಿಯ ಯುವಕರು ಬೈಕ್‌ ನಿಧಾನ ಓಡಿಸಿ ಎಂದು ಹೇಳಿದ್ದರು. ಈ ದಲಿತ ಯುವಕರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ, ಜಾತಿ ನಿಂದನೆ ಮಾಡಿ, ಕಡಗ, ಬಡಿಗೆಯಿಂದ ಹೊಡೆದು ಮಾರಣಾಂತಿಕ ಹಲ್ಲೆ ನಡೆಸಿ ಗಾಯಗೊಳಿಸಿದ್ದಾರೆ ಎಂದು ದೂರಿನಲ್ಲಿ ಆರೋಪಿಸಿದ್ದಾರೆ.

ಈ ಕುರಿತು ಸಿದ್ದು ಬಿರಾದರ್,‌ ಶರಣು ಜಶೆಟ್ಟೆ, ನಾಗರಾಜ ಚನ್ನಮಲ್ಲ, ಸಂಗಮೇಶ ಜಶೆಟ್ಟೆಮ ಸಂಗಮೇಶ ಚನ್ನಶೆಟ್ಟೆ, ಬಸವರಾಜ ಹತ್ತೆ, ವಿಕಾಶ ಚನ್ಲಾಶೆಟ್ಟೆ, ಶ್ರಾವಂತ ಬಿರಾದರ್‌ ಸೇರಿ 8 ಜನರ ವಿರುದ್ಧ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Advertisements

ಇದನ್ನೂ ಓದಿ : ಕೊಪ್ಪಳ | ಡಿಜೆ, ಪಟಾಕಿಗೆ ಗುಡ್‌ ಬೈ: ರಸ್ತೆ, ಬಾವಿ, ಶಾಲೆ ಅಂದಗೊಳಿಸಿದ ಗಣೇಶ ಮಂಡಳಿ ಯುವಕರು!

ಗಲಾಟೆಯಲ್ಲಿ‌ ಒಟ್ಟು 8 ಜನರಿಗೆ ಗಾಯಗೊಂಡಿದ್ದಾರೆ ಎನ್ನಲಾಗಿದೆ, ಆದಿ ಜಾಂಬವ ಗಣೇಶ ಮಂಡಳಿಯ ಓರ್ವ ಯುವಕನನ್ನು ಬೀದರ್ ಬ್ರಿಮ್ಸ್‌ ಆಸ್ಪತ್ರೆಯಲ್ಲಿ ದಾಖಲಿಸಿ, ಚಿಕಿತ್ಸೆ ನೀಡಲಾಗಿದೆ ಎಂದು ತಿಳಿದುಬಂದಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಗ್ರಾಮೀಣದಲ್ಲಿ ಕುಡಿಯುವ ನೀರಿನ ಸಮಸ್ಯೆಯೇ? ಹಾಗಾದ್ರೆ ಈ ನಂಬರ್‌ಗೆ ಕರೆ ಮಾಡಿ

ಬೀದರ್ ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಸಾರ್ವಜನಿಕರಿಗೆ ಕುಡಿಯುವ ನೀರಿಗೆ ಸಂಬಂಧಿಸಿದ ಸಮಸ್ಯೆಗಳು...

ಸೌಜನ್ಯ ಪ್ರಕರಣ: ಪ್ರಭಾವಿಗಳ ಜೊತೆ ಲಜ್ಜೆ ಬಿಟ್ಟು ಹೆಜ್ಜೆ ಹಾಕಿದ ಮಾಧ್ಯಮಗಳು

ತನಿಖಾಧಿಕಾರಿಗಳು ಹಣದ ಆಮಿಷಕ್ಕೆ ಒಳಗಾಗಿದ್ದರೇ ಅಥವಾ ಬಲಾಢ್ಯರ ಒತ್ತಡಕ್ಕೆ ಮಣಿದು ಸಾಕ್ಷ್ಯ...

ಕಲಬುರಗಿಯಲ್ಲಿ ಸೆ.27ರಂದು ಬಸವಾದಿ ಶರಣರ ಹಿಂದೂ ಸಮಾವೇಶ : ಕನೇರಿ ಸ್ವಾಮೀಜಿಗೆ ಅನುಮತಿ ಬೇಡ

ಕಲಬುರಗಿಯಲ್ಲಿ ಸೆ. 27ರಂದು ಹಮ್ಮಿಕೊಳ್ಳಲಾಗಿರುವ ಕನೇರಿ ಮಠದ ಅದೃಶ್ಯ ಕಾಡಸಿದ್ಧೇಶ್ವರ ಸ್ವಾಮೀಜಿ...