ಬೀದರ್‌ | ಗೋಲ್ಡನ್ ಸ್ಕಾಲರಶಿಪ್ ಪ್ರವೇಶ ಪರೀಕ್ಷೆ : 1,207 ಮಕ್ಕಳು ಪರೀಕ್ಷೆಗೆ ಹಾಜರು

Date:

ಭಾಲ್ಕಿ ತಾಲೂಕಿನ ಕರಡ್ಯಾಳ ಚನ್ನಬಸವೇಶ್ವರ ಗುರುಕುಲದಲ್ಲಿ ಪ್ರತಿ ವರ್ಷದಂತೆ ಭಾನುವಾರ 2026-27ನೇ ಸಾಲಿನ ಮೊದಲ ಹಂತದ ಗುರುಕುಲ ಗೋಲ್ಡನ್ ಸ್ಕಾಲರಶಿಪ್ ಪ್ರವೇಶ ಪರೀಕ್ಷೆ ಸುಸೂತ್ರವಾಗಿ ನಡೆದವು.

- Advertisement -

2026ರ ಜನವರಿ ಅಂತ್ಯದ ವರೆಗೂ ಐದು ಹಂತದಲ್ಲಿ ಪರೀಕ್ಷೆ ನಡೆಯಲಿದ್ದು ಮೊದಲ ಹಂತದ ಪರೀಕ್ಷೆಗೆ ರಾಜ್ಯ ಸೇರಿ ನೆರೆಯ ಮಹಾರಾಷ್ಟ್ರ ತೆಲಂಗಾಣ ರಾಜ್ಯದ ನಾನಾ ಕಡೆಗಳಿಂದ 1,900 ವಿದ್ಯಾರ್ಥಿಗಳು ಪ್ರವೇಶ ಪರೀಕ್ಷೆಗೆ ಹೆಸರು ನೋಂದಾಯಿಸಿದ್ದರು. ಅದರಲ್ಲಿ ವಿವಿಧೆಡೆ ಪ್ರಸ್ತುತ ಎಸ್ಸೆಸ್ಸೆಲ್ಸಿಯಲ್ಲಿ ವ್ಯಾಸಂಗ ಮಾಡುತ್ತಿರುವ 1,207 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಬೀದರ್, ಕಲಬುರಗಿ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ ಸೇರಿದಂತೆ ರಾಜ್ಯದ ಸುಮಾರು 25 ಜಿಲ್ಲೆಯ ವಿದ್ಯಾರ್ಥಿಗಳು ಹಾಗೂ ತೆಲಂಗಾಣ ರಾಜ್ಯದ ಜಹೀರಾಬಾದ್, ಹೈದರಾಬಾದ್ ಮತ್ತು ಮಹಾರಾಷ್ಟ್ರದ ನಾಂದೇಡ, ಲಾತೂರು, ಉದಗೀರ, ಸೋಲಾಪುರ ಸೇರಿದಂತೆ ಮುಂತಾದ ಕಡೆಗಳಿಂದ ವಿದ್ಯಾರ್ಥಿಗಳು ಆಗಮಿಸಿ ಪರೀಕ್ಷೆ ಬರೆದರು.

100 ಮಕ್ಕಳಿಗೆ ಉಚಿತ ಶಿಕ್ಷಣ :

ಗುರುಕುಲ ಗೋಲ್ಡನ್ ಸ್ಕಾಲರ್‌ಶಿಪ್ ಪ್ರವೇಶ ಪರೀಕ್ಷೆಯಲ್ಲಿ ಮೊದಲ 100 ರ‍್ಯಾಂಕ್ ಪಡೆಯುವ ವಿದ್ಯಾರ್ಥಿಗಳಿಗೆ ಉಚಿತ ಎರಡು ವರ್ಷ ಪಿಯುಸಿ ಶಿಕ್ಷಣ, ವಸತಿ, ಕೋಚಿಂಗ್ ಮತ್ತು ರಿಯಾಯಿತಿ ಫೀನಲ್ಲಿ ಶಿಕ್ಷಣ ಸಿಗಲಿದೆ. ಮೊದಲ 25 ರ‍್ಯಾಂಕ್
ಪಡೆಯುವ ವಿದ್ಯಾರ್ಥಿಗಳು ಉಚಿತ ಶಿಕ್ಷಣ, ವಸತಿ ಮತ್ತು ಕೋಚಿಂಗ್ ಸೌಲಭ್ಯ ಪಡೆಯಲಿದ್ದಾರೆ. 75 ವಿದ್ಯಾರ್ಥಿಗಳು ಶೇ.50ರಷ್ಟು ರಿಯಾಯಿತಿಯಲ್ಲಿ ಶಿಕ್ಷಣ, ವಸತಿ, ಕೋಚಿಂಗ್ ಸೌಲಭ್ಯ ಪಡೆದುಕೊಳ್ಳಲಿದ್ದಾರೆ.

ಇದನ್ನೂ ಓದಿ : ಬೀದರ್‌ | ಮುಗಿಯದ ಸಮುದಾಯ ಮಹಿಳಾ ಶೌಚಾಲಯ ಕಾಮಗಾರಿ : ತೆರೆಯದ ಬಾಗಿಲು!

ಹಿರೇಮಠ ಸಂಸ್ಥಾನದ ಪೀಠಾಧಿಪತಿ ಗುರುಬಸವ ಪಟ್ಟದ್ದೇವರು ಮಾತನಾಡಿ, ʼಗಡಿ ಭಾಗದ ಬಡ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉಚಿತ ಮತ್ತು ರಿಯಾಯಿತಿ ಫೀ ನಲ್ಲಿ ಶಿಕ್ಷಣ, ವಸತಿ ಮತ್ತು ಕೋಚಿಂಗ್ ನೀಡುವ ಸದಾಶಯದೊಂದಿಗೆ ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರು ರೂಪಿಸಿರುವ ಗುರುಕುಲ ಗೋಲ್ಡನ್ ಸ್ಕಾಲರ್‌ಶಿಪ್ ಪ್ರವೇಶ ಪರೀಕ್ಷೆಗೆ ಸಾವಿರಾರು ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಪರೀಕ್ಷೆ ಬರೆದಿರುವುದು ಸಂತಸ ತರಿಸಿದೆʼ ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭಾಲ್ಕಿ | ಮಡಿವಾಳ ಮಾಚಿದೇವರ ಕಾಯಕ ನಿಷ್ಠೆ ಸಮಾಜಕ್ಕೆ ಆದರ್ಶ: ಮಹಾಲಿಂಗ ಸ್ವಾಮೀಜಿ

ಕಾಯಕ ಹಾಗೂ ವಿಶಿಷ್ಟ ವಚನಗಳ ಮೂಲಕ ಸಮಾಜ ತಿದ್ದುವ ಕಾರ್ಯ ಮಾಡಿದ...

ಬೀದರ್‌ | ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ದಲಿತರ ಯುವಕರ ಮೇಲೆ ಹಲ್ಲೆ, 8 ಜನರ ವಿರುದ್ಧ ಎಫ್‌ಐಆರ್

ಗಣೇಶ ವಿಸರ್ಜನೆ ಮೆರವಣಿಗೆಯಲ್ಲಿ ನಡೆದ ಗಲಾಟೆಯಲ್ಲಿ ಮೇಲ್ಜಾತಿ ಯುವಕರು ದಲಿತರ ಸಮುದಾಯದವರ...

ಬೀದರ್ | ವಿದ್ಯುತ್ ಸ್ಪರ್ಶಿಸಿ ವಿಬಿ-ಜಿ ರಾಮ್ ಜಿ ಕಾರ್ಮಿಕ ಮಹಿಳೆ ಸಾವು

ಮನೆಯಲ್ಲಿ ವಿದ್ಯುತ್ ಸ್ಪರ್ಶಿಸಿ ಕಾರ್ಮಿಕ ಮಹಿಳೆಯೊಬ್ಬರು ಮೃತಪಟ್ಟ ಘಟನೆ ಭಾಲ್ಕಿ ತಾಲೂಕಿನ...

ಬೀದರ್ | ಸೆ.29ಕ್ಕೆ ರೈತರಿಂದ ‘ಹುಬ್ಬಳ್ಳಿ ಚಲೋ’; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮನೆ ಎದುರು ಪ್ರತಿಭಟನೆ

ರೈತರ ವಿವಿಧ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸೆಪ್ಟೆಂಬರ್ 29ರಂದು ಸಾವಿರಾರು...