ಬೀದರ್‌ | JEE ಫಲಿತಾಂಶ : ಚನ್ನಬಸವೇಶ್ವರ ಗುರುಕುಲದ 64 ವಿದ್ಯಾರ್ಥಿಗಳು ಐಐಟಿ ಪ್ರವೇಶಕ್ಕೆ ಅರ್ಹತೆ

Date:

ಜಂಟಿ ಪ್ರವೇಶ ಪರೀಕ್ಷೆ (JEE) ಅಡ್ವಾನ್ಸ್ಡ್ ಫಲಿತಾಂಶ ಪ್ರಕಟಗೊಂಡಿದ್ದು, ಭಾಲ್ಕಿ ತಾಲೂಕಿನ ಕರಡ್ಯಾಳದ ಚನ್ನಬಸವೇಶ್ವರ ಗುರುಕುಲ ವಸತಿ ವಿಜ್ಞಾನ ಪದವಿ ಪೂರ್ವ ಕಾಲೇಜಿನ 64 ವಿದ್ಯಾರ್ಥಿಗಳು ಭಾರತೀಯ ತಂತ್ರಜ್ಞಾನ ಸಂಸ್ಥೆಗಳು (ಐಐಟಿ) ಹಾಗೂ ದೇಶದ ಪ್ರಮುಖ ಎಂಜಿನಿಯರಿಂಗ್ ಶಿಕ್ಷಣ ಸಂಸ್ಥೆಗಳಲ್ಲಿ ಪ್ರವೇಶ ಪಡೆಯಲು ಅರ್ಹತೆ ಪಡೆದಿದ್ದಾರೆ ಎಂದು ಹಿರೇಮಠ ಸಂಸ್ಥಾನದ ಪೀಠಾಧಿಪತಿ ಗುರುಬಸವ ಪಟ್ಟದ್ದೇವರು ತಿಳಿಸಿದ್ದಾರೆ.

- Advertisement -

ಭಾಲ್ಕಿಯ ಹಿರೇಮಠ ಸಂಸ್ಥಾನದಲ್ಲಿ ಮಂಗಳವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಈ ಬಾರಿ ದೇಶಾದ್ಯಂತ ಸುಮಾರು 15 ಲಕ್ಷ ವಿದ್ಯಾರ್ಥಿಗಳು ಜೆಇಇ ಪರೀಕ್ಷೆ ಬರೆದಿದ್ದು, ಚನ್ನಬಸವೇಶ್ವರ ಗುರುಕುಲದಿಂದ 150 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಅವರಲ್ಲಿ 64 ವಿದ್ಯಾರ್ಥಿಗಳು ಉತ್ತಮ ರ‍್ಯಾಂಕ್ ಗಳಿಸಿ ಐಐಟಿ ಪ್ರವೇಶಕ್ಕೆ ಅರ್ಹತೆ ಪಡೆದಿದ್ದಾರೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

“ಗುರುಕುಲದ ವಿದ್ಯಾರ್ಥಿ ವಿಶ್ವರಾಜ್ ಅಂಗವಿಕಲರ ಕೋಟಾದಲ್ಲಿ ದೇಶದಲ್ಲೇ ಪ್ರಥಮ ರ‍್ಯಾಂಕ್ ಪಡೆದು ಗಮನಾರ್ಹ ಸಾಧನೆ ಮಾಡಿದ್ದು, ಇಡೀ ದೇಶದ ಗಮನ ಸೆಳೆದಿದ್ದಾನೆ. ಈ ಯಶಸ್ಸಿನ ಹಿಂದೆ ಹಿರೇಮಠಸ ಡಾ.ಬಸವಲಿಂಗ ಪಟ್ಟದ್ದೇವರು ಅವರ ಮಾರ್ಗದರ್ಶನ, ಸಂಸ್ಥೆಯ ಆಡಳಿತಾಧಿಕಾರಿಗಳು, ಪ್ರಾಚಾರ್ಯರು ಹಾಗೂ ಉಪನ್ಯಾಸಕರ ಪರಿಶ್ರಮ ಅಡಗಿದೆ” ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

“ಶೈಕ್ಷಣಿಕವಾಗಿ ಹಿಂದುಳಿದ ಕಲ್ಯಾಣ ಕರ್ನಾಟಕ ಎಂಬ ಹಣೆಪಟ್ಟಿಯನ್ನು ಕಳಚುವುದು ಪೂಜ್ಯ ಡಾ. ಬಸವಲಿಂಗ ಪಟ್ಟದ್ದೇವರ ಆಶಯವಾಗಿದೆ. ಅದರಂತೆ ನಮ್ಮ ಸಂಸ್ಥೆಯಲ್ಲಿ ಶಿಕ್ಷಣ ಪಡೆದ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ರಾಷ್ಟ್ರಮಟ್ಟದ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಅತ್ಯುತ್ತಮ ರ‍್ಯಾಂಕ್ ಗಳಿಸಿ ಸಂಶೋಧಕರು ಹಾಗೂ ತಜ್ಞರಾಗಿ ದೇಶಕ್ಕೆ ಕೊಡುಗೆ ನೀಡುತ್ತಿರುವುದು ಹೆಮ್ಮೆಯ ವಿಷಯವಾಗಿದೆ” ಎಂದು ಹೇಳಿದರು.

WhatsApp Image 2026 06 02 at 6.10.10 PM
ಜೆಇಇ ಅಡ್ವಾನ್ಸ್ ಪರೀಕ್ಷೆಯಲ್ಲಿ ಅಂಗವಿಕಲ ಕೋಟಾದಲ್ಲಿ ದೇಶಕ್ಕೆ ಮೊದಲ ರ‍್ಯಾಂಕ್ ಪಡೆದ ಪ್ರಯುಕ್ತ ಪೂಜ್ಯ ಮಹಾಲಿಂಗ ದೇವರ ಸನ್ನಿಧಾನದಲ್ಲಿ ರಾಜ್ಯಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ನಿಕಟಪೂರ್ವ ಅಧ್ಯಕ್ಷ ಶಶಿಧರ್ ಕೋಸಂಬೆ ಸನ್ಮಾನಿಸಿ, ಅಭಿನಂದನೆಗಳು ಸಲ್ಲಿಸಿದರು.

ಕಾಲೇಜು ಪ್ರಾಚಾರ್ಯ ಬಸವರಾಜ ಮೊಳಕೀರೆ ಮಾತನಾಡಿ, “ಜೆಇಇ ಅಡ್ವಾನ್ಸ್ಡ್‌ನಂತಹ ರಾಷ್ಟ್ರಮಟ್ಟದ ಕಠಿಣ ಪರೀಕ್ಷೆಯಲ್ಲಿ ಗ್ರಾಮೀಣ ಭಾಗದ 64 ಬಡ ವಿದ್ಯಾರ್ಥಿಗಳು ಐಐಟಿ ಪ್ರವೇಶಕ್ಕೆ ಅರ್ಹತೆ ಪಡೆಯುವ ಮೂಲಕ ರಾಜ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಈ ಬಾರಿ ಜೆಇಇ ಅಡ್ವಾನ್ಸ್ಡ್ ಪರೀಕ್ಷೆಯಲ್ಲಿ 1ರಿಂದ 100ರೊಳಗೆ ನಾಲ್ವರು ವಿದ್ಯಾರ್ಥಿಗಳು ರ‍್ಯಾಂಕ್ ಪಡೆದಿದ್ದು, 101ರಿಂದ 1000ರೊಳಗೆ 14 ವಿದ್ಯಾರ್ಥಿಗಳು ಸ್ಥಾನ ಪಡೆದಿದ್ದಾರೆ. ಕಲ್ಯಾಣ ಕರ್ನಾಟಕ ಭಾಗದ ಕೀರ್ತಿ ರಾಷ್ಟ್ರಮಟ್ಟದಲ್ಲಿ ಮತ್ತಷ್ಟು ಎತ್ತರಕ್ಕೆ ಏರಿದೆ. ಗ್ರಾಮೀಣ ಭಾಗದ ಬಡವರು, ಕೂಲಿ ಕಾರ್ಮಿಕರು, ರೈತರು ಹಾಗೂ ಸಣ್ಣ ವ್ಯಾಪಾರಿಗಳ ಮಕ್ಕಳು ಈ ಸಾಧನೆ ಮಾಡಿರುವುದು ಸಂತಸ ತಂದಿದೆ” ಎಂದರು.

“ಗ್ರಾಮೀಣ ಭಾಗದ ಮಕ್ಕಳಿಗೆ ಕನಸಾಗಿದ್ದ ಐಐಟಿ ಶಿಕ್ಷಣವನ್ನು ಸಾಕಾರಗೊಳಿಸಲು ಪೂಜ್ಯ ಡಾ.ಬಸವಲಿಂಗ ಪಟ್ಟದ್ದೇವರು ನಿರಂತರ ಪ್ರಯತ್ನ ನಡೆಸುತ್ತಿದ್ದಾರೆ. ಅವರ ಮಾರ್ಗದರ್ಶನದಲ್ಲಿ ನುರಿತ ಉಪನ್ಯಾಸಕರನ್ನು ನಿಯೋಜಿಸಿ, ನೀಟ್ ಹಾಗೂ ಐಐಟಿ ಪರೀಕ್ಷೆಗಳಲ್ಲಿ ವಿದ್ಯಾರ್ಥಿಗಳನ್ನು ತಯಾರಿಸಲಾಗುತ್ತಿದ್ದು, ಪ್ರತಿವರ್ಷ ಉತ್ತಮ ಫಲಿತಾಂಶಗಳ ಮೂಲಕ ದೇಶಕ್ಕೆ ಪ್ರತಿಭಾವಂತ ವಿದ್ಯಾರ್ಥಿಗಳನ್ನು ನೀಡಲಾಗುತ್ತಿದೆ” ಎಂದು ತಿಳಿಸಿದರು.

ಇದನ್ನೂ ಓದಿ : ಬೀದರ್ | ಇಂಗ್ಲಿಷ್‌ನಲ್ಲಿ ಹೆಚ್ಚು ಅಂಕ ಪಡೆದ ಮಕ್ಕಳಿಗೆ ವಿಮಾನಯಾನ ಮಾಡಿಸಿದ ಶಿಕ್ಷಕ

ಸುದ್ದಿಗೋಷ್ಠಿಯಲ್ಲಿ ಮಹಾಲಿಂಗ ಸ್ವಾಮೀಜಿ, ಹಿರೇಮಠ ಸಂಸ್ಥಾನ ವಿದ್ಯಾಪೀಠ ಟ್ರಸ್ಟ್‌ನ ನಿರ್ದೇಶಕ ಶಶಿಧರ ಕೋಸಂಬೆ, ಆಡಳಿತಾಧಿಕಾರಿ ಮೋಹನ ರೆಡ್ಡಿ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಮೋದಿಯನ್ನು ದೇವರನ್ನಾಗಿಸುವ ಯತ್ನ’: ಬಿಹಾರ ಸಿಎಂ ಹೇಳಿಕೆಗೆ ಪ್ರಶಾಂತ್ ಕಿಶೋರ್ ಕಿಡಿ

ಪ್ರಧಾನಿ ನರೇಂದ್ರ ಮೋದಿ ಅವರು ಶ್ರೀರಾಮನಿಗೂ ಮನೆ ಒದಗಿಸಿದರು ಎಂಬ ಬಿಹಾರ...

ಬಾಗಲಕೋಟೆ | ಎಸ್‌ಐಆರ್ ಪ್ರಕ್ರಿಯೆ ಸ್ಥಗಿತಕ್ಕೆ ಒತ್ತಾಯಿಸಿ ದಲಿತ ಸಂಘರ್ಷ ಸಮಿತಿ ಪ್ರತಿಭಟನೆ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಜಾಗೊಳಿಸಿ, ಅವರ ವಿರುದ್ಧ ಕ್ರಿಮಿನಲ್...

ಬೆಳಗಾವಿ | ಚೂನಪ್ಪ ಪೂಜೇರಿ, ನಾನು ಸತ್ತರೂ ಒಂದೇ ಗೋರಿಯಲ್ಲಿ ಮಣ್ಣಾಗಬೇಕು: ಶಶಿಕಾಂತ ಗುರೂಜಿ

ಕಬ್ಬು ಬೆಳೆಗಾರರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬೆಳಗಾವಿ ಜಿಲ್ಲೆಯ ಹತ್ತರಗಿ...