ಬೈಕ್ ಮತ್ತು ಕಾರು ನಡುವೆ ಭೀಕರ ಅಪಘಾತ ಸಂಭವಿಸಿ ಮೂವರು ಯುವಕರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಭಾಲ್ಕಿ ತಾಲೂಕಿನ ಮಹಾತ್ಮ ಗಾಂಧಿ ಸಹಕಾರ ಸಕ್ಕರೆ ಕಾರ್ಖಾನೆ ಸಮೀಪ ಗುರುವಾರ ತಡರಾತ್ರಿ ನಡೆದಿದೆ.
ಭಾಲ್ಕಿ ತಾಲ್ಲೂಕಿನ ಕಳಸದಾಳ ಗ್ರಾಮದ ವಿಠ್ಠಲ ಪಾಂಚಾಳ (25), ಮಹೇಶ್ ಬಿರಾದಾರ (25) ಹಾಗೂ ಕಾಕನಾಳ ಗ್ರಾಮದ ರಾಜೇಂದ್ರ ಪಾಂಚಾಳ (28) ಎಂದು ಗುರುತಿಸಲಾಗಿದೆ.

ವೇಗವಾಗಿ ಬಂದ ಕಾರು ಬೈಕ್‌ಗೆ ಡಿಕ್ಕಿ ಹೊಡೆದಿದೆ, ಡಿಕ್ಕಿಯ ರಭಸಕ್ಕೆ ಬೈಕ್ ನಲ್ಲಿ ಸಂಚರಿಸುತ್ತಿದ್ದ ಮೂವರು ಸವಾರರ ಪ್ರಾಣ ಪಕ್ಷಿ ಹಾರಿಹೋಗಿದೆ.
ಘಟನಾ ಸ್ಥಳಕ್ಕೆ ಎಎಸ್ಪಿ ಪೂಜಾರಿ, ಭಾಲ್ಕಿ ಗ್ರಾಮೀಣ ಠಾಣೆ ಪೊಲೀಸರ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ಕುರಿತು ಭಾಲ್ಕಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಇದನ್ನೂ ಓದಿ : ಬೀದರ್ | ಮೈಸುಡುವ ಕೆಂಡದಂತಹ ಬಿಸಿಲಿಗೆ ತತ್ತರಿಸಿದ ಜನ : ಪಾರಾಗುವುದು ಹೇಗೆ?




