ಬೀದರ್‌ | 12 ಸುಮೋಟೋ ಪ್ರಕರಣ ದಾಖಲು: ಉಪಲೋಕಾಯುಕ್ತ ಬಿ.ವೀರಪ್ಪ ಎಚ್ಚರಿಕೆ

Date:

​ಜಿಲ್ಲೆಯ ವಿವಿಧ ಸರ್ಕಾರಿ ಕಚೇರಿಗಳು ಹಾಗೂ ಆಸ್ಪತ್ರೆಗಳಲ್ಲಿ ಕಂಡುಬಂದಿರುವ ಗಂಭೀರ ಲೋಪದೋಷಗಳು ಹಾಗೂ ಸಾರ್ವಜನಿಕರ ದೂರುಗಳ ಹಿನ್ನೆಲೆಯಲ್ಲಿ ಸುಮಾರು 12 ಪ್ರಕರಣಗಳನ್ನು ಸ್ವಯಂಪ್ರೇರಿತವಾಗಿ (ಸುಮೋಟೋ) ದಾಖಲಿಕೊಳ್ಳಲಾಗಿದೆ ಎಂದು ಉಪಲೋಕಾಯುಕ್ತ ನ್ಯಾಯಾಮೂರ್ತಿ ಬಿ.ವೀರಪ್ಪ ಹೇಳಿದರು.

- Advertisement -

ಅವರು ಶನಿವಾರ ನಗರದ ಹಬ್ಸಿ ಕೋಟೆ ಅತಿಥಿ ಗೃಹದಲ್ಲಿ ಕರೆದ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದರು. ​​ಬೀದರ್‌ನ ಹಳೆಯ ಮತ್ತು ಹೊಸ ಬಸ್ ನಿಲ್ದಾಣಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಕಸದ ತೊಟ್ಟಿಗಳು ತುಂಬಿ ತುಳುಕುತ್ತಿದ್ದು, ಶೌಚಾಲಯ ಹಾಗೂ ಪಾರ್ಕಿಂಗ್ ವ್ಯವಸ್ಥೆಗಳು ತೀರಾ ಹದಗೆಟ್ಟಿವೆ. ಸ್ವಚ್ಛತೆಯ ಕೊರತೆಯಿರುವ ಕಾರಣ ಇವುಗಳ ವಿರುದ್ಧ ಸುಮೋಟೋ ಪ್ರಕರಣ ದಾಖಲಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಅಸ್ಸಾಂ, ಬಿಹಾರ ಕತ್ತಲಲ್ಲಿ ಮುಳುಗಿದಾಗ ಮೋದಿಗೆ ‘ಆಶೀರ್ವಾದ್ ಕಾ...

ದೆಹಲಿಯಲ್ಲಿ ಕಟ್ಟಡ ಕುಸಿದು ವಿದ್ಯಾರ್ಥಿಗಳು ಹೆಣವಾದಾಗ, ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಆಘಾತಗೊಂಡು ಎಳೆ ಜೀವಗಳು ಸಾವಿನ ದಾರಿ ಹಿಡಿದಾಗ, ತಮ್ಮ ಹಕ್ಕುಗಳಿಗಾಗಿ ದೇಶದ ಯುವಜನ ಬೀದಿಗಿಳಿದಾಗ, ಕೊನೆಗೆ ನೈಸರ್ಗಿಕ ವಿಕೋಪದಿಂದ ದೇಶದ ಜನ...

ಚುನಾವಣಾ ಕಳ್ಳತನ: ಎದುರಾಳಿಗಳೇ ಮಾಯವಾದರೆ! ನಂದಿಗ್ರಾಮದ ಟ್ರೇಲರ್ –...

ಮತದಾನಕ್ಕೂ ಮುನ್ನ ಎದುರಾಳಿಯೇ ಕಣದಿಂದ ಮಾಯವಾದರೆ, ಅದನ್ನು ಚುನಾವಣೆ ಎನ್ನಬಹುದೇ? ನಂದಿಗ್ರಾಮದ ಬೆಳವಣಿಗೆಗಳು 2027ರ ಉತ್ತರ ಪ್ರದೇಶ ಚುನಾವಣೆಗೂ ಗಂಭೀರ ಸವಾಲು ಒಡ್ಡುವಂತಿವೆ ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯುತ್ತಿದೆ. ನಂದಿಗ್ರಾಮದ...

ಡಿಜಿಟಲ್ ಇಂಡಿಯಾಕ್ಕೆ ಹಿನ್ನಡೆ; ಮೋದಿ ನೀತಿಯಿಂದ ಮತ್ತೆ ನಗದಿನತ್ತ...

ಸರ್ಕಾರದ ಈ ನಿರ್ಧಾರ ಜನಸಾಮಾನ್ಯರಿಗೆ ಎಷ್ಟು ಕಿರಿಕಿರಿ ಉಂಟುಮಾಡಿದೆ ಎಂಬುದನ್ನು 'ಲೋಕಲ್ ಸರ್ಕಲ್ಸ್' (Local Circles) ನಡೆಸಿದ 32,000ಕ್ಕೂ ಹೆಚ್ಚು ಜನರ ಸಮೀಕ್ಷೆ ಬಟಾಬಯಲು ಮಾಡಿದೆ. ಸಮೀಕ್ಷೆಯ ಪ್ರಕಾರ, ಕೇವಲ ಶೇ.17ರಷ್ಟು ವರ್ತಕರು...

​ಎಪಿಎಂಸಿ ಮಾರುಕಟ್ಟೆ ಹಗರಣ: ಎಪಿಎಂಸಿ ಮಾರುಕಟ್ಟೆಯಲ್ಲಿ ನಿಯಮಬಾಹಿರವಾಗಿ ರೈತರಿಂದ ಕಮಿಷನ್ ವಸೂಲಿ ಮಾಡುತ್ತಿರುವುದು ಬೆಳಕಿಗೆ ಬಂದಿದೆ. ಕಾನೂನು ಪ್ರಕಾರ ರೈತರಿಂದ ಯಾವುದೇ ಕಮಿಷನ್ ಪಡೆಯುವಂತಿಲ್ಲ. ಅಲ್ಲಿ ಕುಡಿಯುವ ನೀರು, ಶೌಚಾಲಯ ಮತ್ತು ಟ್ರಾಫಿಕ್ ನಿಯಂತ್ರಣದಂತಹ ಯಾವುದೇ ಮೂಲಸೌಕರ್ಯಗಳಿಲ್ಲದ ಕಾರಣ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದರು.

​ಸುಲ್ತಾನಪುರ ಘನತ್ಯಾಜ್ಯ ಘಟಕದ ಸುತ್ತಮುತ್ತಲಿನ ಹಳ್ಳಿಗಳಲ್ಲಿ ವಿಪರೀತ ದುರ್ವಾಸನೆ ಹರಡುತ್ತಿದ್ದು, ಸಾರ್ವಜನಿಕರ ಆರೋಗ್ಯಕ್ಕೆ ಧಕ್ಕೆಯಾಗಿದೆ. ಈ ಬಗ್ಗೆ ಅಲ್ಲಿನ ಪಿಡಿಒ ವಿರುದ್ಧ ಪ್ರಕರಣ ದಾಖಲಿಸಲಾಗಿದ್ದು, ಫಾಗ್ ನಿಯಂತ್ರಣಕ್ಕೆ ಸೂಚಿಸಲಾಗಿದೆ. ಅಲ್ಲದೆ, ಆರೋಗ್ಯ ಕಾರ್ಯಕರ್ತರು ಪ್ರತಿ 15 ದಿನಗಳಿಗೊಮ್ಮೆ ಭೇಟಿ ನೀಡುವಂತೆ ಆದೇಶಿಸಲಾಗಿದೆ ಎಂದು ತಿಳಿಸಿದರು.

​ಬೀದರ್ ಜಿಲ್ಲಾ ಆಸ್ಪತ್ರೆ (ಬ್ರಿಮ್ಸ್) ಅವ್ಯವಸ್ಥೆ ಮತ್ತು ಲಂಚಾವತಾರ: ಆಸ್ಪತ್ರೆಯ ನೆಲಮಹಡಿಯಲ್ಲಿ ನೀರು ತುಂಬಿಕೊಂಡಿದ್ದು, ಬೆಡ್‌ಗಳು ತೀರಾ ಹದಗೆಟ್ಟಿವೆ. ಎಕ್ಸ್‌ರೇ ಲ್ಯಾಬ್‌ಗೆ ಭೇಟಿ ನೀಡಿದಾಗ ಅಲ್ಲಿ ಅನಧಿಕೃತವಾಗಿ ಹಣದ ವಹಿವಾಟು ನಡೆಸುತ್ತಿದ್ದ ಇಬ್ಬರನ್ನು ಪತ್ತೆಹಚ್ಚಿ, ಅವರಿಂದ 90 ಸಾವಿರ ರೂ. ನಗದು ಹಾಗೂ ಸುಮಾರು 8 ಲಕ್ಷ ರೂ. ಮೌಲ್ಯದ ಚೆಕ್‌ಗಳನ್ನು ವಶಪಡಿಸಿಕೊಂಡು ಕ್ರಿಮಿನಲ್ ಪ್ರಕರಣ ದಾಖಲಿಸಿ ಅರೆಸ್ಟ್ ಮಾಡಲಾಗಿದೆ. ಆಸ್ಪತ್ರೆಯ ಪ್ರತಿಯೊಂದು ಫ್ಲೋರ್‌ನಲ್ಲೂ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲು ಒಂದು ತಿಂಗಳ ಗಡುವು ನೀಡಲಾಗಿದೆ ಎಂದರು.

WhatsApp Image 2026 06 20 at 11.14.38 AM
ಬೀದರ್‌ ತಾಲೂಕಿನ ಸುಲ್ತಾನಪುರ ತ್ಯಾಜ್ಯ ವಿಲೇವಾರಿ ಘಟಕಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ಬೀದರ್ ತಹಶೀಲ್ದಾರ್ ಕಚೇರಿಯಲ್ಲಿ ನೂರಾರು ಕಡತಗಳು ಬಾಕಿ ಉಳಿದಿದ್ದು, ಹಾಜರಾತಿ ಮತ್ತು ಕ್ಯಾಶ್ ರಿಜಿಸ್ಟರ್ ಸರಿ ಇಲ್ಲದಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಲಾಗಿದೆ. ಎಡಿಎಲ್‌ಆರ್ ಕಚೇರಿಯಲ್ಲಿ ಸಾರ್ವಜನಿಕರ ಕೆಲಸಗಳನ್ನು ವರ್ಷಗಟ್ಟಲೆ ವಿಳಂಬ ಮಾಡುತ್ತಿರುವ ಬಗ್ಗೆಯೂ ಸುಮೋಟೋ ಕೇಸ್ ದಾಖಲಾಗಿದೆ. ​ಮಹಾನಗರ ಪಾಲಿಕೆ ವಿರುದ್ಧವು ಸುಮೊಟೊ : ನಗರದಲ್ಲಿ ರಾಜಾರೋಷವಾಗಿ ನಡೆದಿರುವ ಒತ್ತುವರಿಗಳು, ನಿಯಮಬಾಹಿರ ಲೈಸೆನ್ಸ್ ನೀಡಿಕೆ ಹಾಗೂ ಬಿಲ್ಡಿಂಗ್ ವೈಲೇಷನ್ ತಡೆಗಟ್ಟುವಲ್ಲಿ ವಿಫಲರಾದ 7-8 ಇಂಜಿನಿಯರ್‌ಗಳ ವಿರುದ್ಧ ಸುಮೋಟೋ ಕೇಸ್ ಹಾಕಲಾಗಿದೆ ಎಂದು ಮಾಹಿತಿ ನೀಡಿದರು.

​ಆರ್‌ಟಿಒ ಕಚೇರಿ ಮತ್ತು ಶಾಲಾ ವಾಹನಗಳ ತಪಾಸಣೆ: ಜಿಲ್ಲೆಯಲ್ಲಿ ಸುಮಾರು ೪೧೬ ಶಾಲಾ ವಾಹನಗಳು ಎಫ್‌ಸಿ (ಫಿಟ್‌ನೆಸ್ ಸರ್ಟಿಫಿಕೇಟ್) ಮತ್ತು ಇನ್ಶೂರೆನ್ಸ್ ಇಲ್ಲದೆ ಸಂಚರಿಸುತ್ತಿರುವುದು ಕಂಡುಬಂದಿದೆ. ಇವುಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಸಾರಿಗೆ ಅಧಿಕಾರಿಗಳಿಗೆ ಒಂದು ತಿಂಗಳ ಕಾಲಾವಕಾಶ ನೀಡಿ ಸ್ವಯಂ ಪ್ರೇರಿತ ದೂರು ದಾಖಲಿಸಲಾಗಿದೆ ಎಂದರು.

ವಸತಿ ನಿಲಯದಲ್ಲಿ ವಿದ್ಯಾರ್ಥಿನಿಯರಿಗೆ ಕನಿಷ್ಠ ಸೌಕರ್ಯಗಳೂ ಇಲ್ಲ. ಆರು ಶೌಚಾಲಯಗಳಲ್ಲಿ ಮೂರು ಸಂಪೂರ್ಣ ಹಾಳಾಗಿವೆ. ಪ್ರಥಮ ಚಿಕಿತ್ಸಾ ಪೆಟ್ಟಿಗೆಯಾಗಲಿ ಅಥವಾ ಬಟ್ಟೆ ಒಣಗಿಸುವ ವ್ಯವಸ್ಥೆಯಾಗಲಿ ಇಲ್ಲ. ಕಲುಷಿತ ವಾತಾವರಣವಿರುವ ಕಾರಣ ಅಧಿಕಾರಿಗಳಿಗೆ ಸುಧಾರಣೆಗೆ ಎರಡು ತಿಂಗಳ ಗಡುವು ಸುಮೋಟೋ ಕೇಸ್ ಬುಕ್ ಮಾಡಲಾಗಿದೆ ಎಂದು ಹೇಳಿದರು.

​”ಈ ಎಲ್ಲಾ 12 ಪ್ರಕರಣಗಳ ಪ್ರಗತಿಯನ್ನು ನಾನು ಖುದ್ದಾಗಿ ಪ್ರತಿ ತಿಂಗಳು ಮಾನಿಟರ್ ಮಾಡುತ್ತೇನೆ. ಅಧಿಕಾರಿಗಳು ಪ್ರತಿ ತಿಂಗಳು ವರದಿ ಸಲ್ಲಿಸಬೇಕು. ಸಾರ್ವಜನಿಕರು ಮತ್ತು ಮಾಧ್ಯಮದವರು ಇಂತಹ ಲೋಪಗಳನ್ನು ನಮ್ಮ ಗಮನಕ್ಕೆ ತಂದರೆ ತಕ್ಷಣವೇ ಕಠಿಣ ಕ್ರಮ ಜರುಗಿಸಲಾಗುವುದು. ಬೀದರ್ ಜನತೆ ನಮ್ಮ ಜನ, ಅವರಿಗೆ ನ್ಯಾಯ ಸಿಗುವವರೆಗೂ ನಾನು ಬಿಡುವುದಿಲ್ಲ” ಎಂದರು.

ಇದನ್ನೂ ಓದಿ : ಬೀದರ್‌ | ಜೂ.28ರಂದು ಕನೇರಿ ಶ್ರೀ ಪ್ರವೇಶ ವಿರೋಧಿಸಿ ಬೃಹತ್‌ ಪ್ರತಿಭಟನೆ : ಭಿತ್ತಿಪತ್ರ ಬಿಡುಗಡೆ

ಪತ್ರಿಕಾಗೋಷ್ಟಿಯಲ್ಲಿ ನ್ಯಾಯಾಧೀಶರಾದ ರಾಘವೇಂದ್ರ ಉಪಾಧ್ಯೆ, ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ, ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಡಾ. ಗಿರೀಶ್ ದಿಲೀಪ್ ಬದೋಲೆ, ಮಹಾನಗರ ಪಾಲಿಕೆ ಆಯುಕ್ತ ಮುಕುಲ್ ಜೈನ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಮೆರಿಕ ಜೊತೆ ಮಾತುಕತೆಗೆ ಇರಾನ್‌‌ನ 7 ಷರತ್ತು: ನಿರಾಕರಿಸಿದರೆ ‘ನಿರ್ಣಾಯಕ ಯುದ್ಧ’ದ ಎಚ್ಚರಿಕೆ

ಪ್ರಸ್ತುತ ನಡೆಯುತ್ತಿರುವ ಯುದ್ಧವನ್ನು ಅಂತ್ಯಗೊಳಿಸಲು ಅಮೆರಿಕ-ಇರಾನ್ ನಡುವೆ ಸಂಧಾನ ಮಾತುಕತೆ ಆರಂಭಿಸಲು...

ಎಲೆಕ್ಟ್ರಿಕ್ ಮೊಬಿಲಿಟಿ ಸೂಚ್ಯಂಕ 2025: ದೇಶದಲ್ಲೇ ಮೂರನೇ ಸ್ಥಾನಕ್ಕೆ ಜಿಗಿದ ಕರ್ನಾಟಕ!

ದೇಶದಲ್ಲಿ ಎಲೆಕ್ಟ್ರಿಕ್ ವಾಹನ (EV) ಬಳಕೆಯ ವಿಸ್ತರಣೆ ಮತ್ತು ಅಗತ್ಯ ಮೂಲಸೌಕರ್ಯ...

ಅದಾನಿ-ಅಂಬಾನಿ, ದೋವಲ್, ಭಾಗವತ್ ಹೈಜಾಕ್ ಮಾಡಿದ ವ್ಯವಸ್ಥೆ: ಫೋಟೋ ಪ್ರದರ್ಶಿಸಿ ಹೇಗೆಂದು ವಿವರಿಸಿದ ರಾಹುಲ್ ಗಾಂಧಿ

"ದೇಶವನ್ನು ನಿರ್ಮಿಸಬೇಕಾದ ವಿದ್ಯಾರ್ಥಿಗಳ ಭವಿಷ್ಯವನ್ನು ಇಂದಿನ ವ್ಯವಸ್ಥೆಯು ಧಮನ ಮಾಡುತ್ತಿದ್ದು, ಇಡೀ...