ಬೀದರ್ | 12,415 ಟನ್ ರಸಗೊಬ್ಬರ ಕೊರತೆ : ಕೇಂದ್ರದ ನಿರ್ಲಕ್ಷ್ಯದ ವಿರುದ್ಧ ಸಂಸದ ಸಾಗರ್ ಖಂಡ್ರೆ ಆಕ್ರೋಶ

Date:

ಮುಂಗಾರು ಹಂಗಾಮಿನ ಆರಂಭದಲ್ಲೇ ಬೀದರ್ ಜಿಲ್ಲೆಯ ರೈತರು ರಸಗೊಬ್ಬರ ಕೊರತೆಯಿಂದ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದು, ಜಿಲ್ಲೆಗೆ ಅಗತ್ಯ ಪ್ರಮಾಣದ ರಸಗೊಬ್ಬರ ಪೂರೈಸುವಲ್ಲಿ ಕೇಂದ್ರ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಬೀದರ್ ಲೋಕಸಭಾ ಕ್ಷೇತ್ರದ ಸಂಸದ ಸಾಗರ್ ಖಂಡ್ರೆ ಆರೋಪಿಸಿದ್ದಾರೆ.

- Advertisement -

“ಜಿಲ್ಲೆಯಲ್ಲಿ ಉಂಟಾಗಿರುವ ರಸಗೊಬ್ಬರ ಕೊರತೆಯ ಬಗ್ಗೆ ತೀವ್ರ ಆತಂಕ ವ್ಯಕ್ತಪಡಿಸಿದ್ದು, ಏಪ್ರಿಲ್‌ನಿಂದ ಜೂನ್‌ವರೆಗೆ ಮುಂಗಾರು ಹಂಗಾಮಿಗಾಗಿ ಬೀದರ್ ಜಿಲ್ಲೆಗೆ ಒಟ್ಟು 21,559 ಟನ್ ರಸಗೊಬ್ಬರದ ಅವಶ್ಯಕತೆ ಇದೆ. ಆದರೆ ಕೇಂದ್ರ ಸರ್ಕಾರದಿಂದ ಇದುವರೆಗೆ ಕೇವಲ 9,144 ಟನ್ ರಸಗೊಬ್ಬರ ಮಾತ್ರ ಪೂರೈಕೆಯಾಗಿದ್ದು, 12,415 ಟನ್ ರಸಗೊಬ್ಬರದ ಭಾರೀ ಕೊರತೆ ಉಂಟಾಗಿದೆ. ಇದರಿಂದ ಜಿಲ್ಲೆಯ ರೈತರು ಬಿತ್ತನೆ ಕಾರ್ಯ ಆರಂಭಿಸುವ ಸಂದರ್ಭದಲ್ಲಿ ಅಗತ್ಯ ಗೊಬ್ಬರಕ್ಕಾಗಿ ಅಲೆದಾಡುವಂತಾಗಿದೆ” ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಾಲಿವುಡ್‌ ಮೇಲೆ ಭೂಗತ ಲೋಕದ ಕರಿನೆರಳು: ದಾವೂದ್ ಇಬ್ರಾಹಿಂನಿಂದ...

ಒಂದು ಕಾಲದಲ್ಲಿ ಬಾಲಿವುಡ್ ಸಿನಿಮಾಗಳಿಗೆ ಹಣ ಹೂಡುತ್ತಿದ್ದ, ನಟ-ನಟಿಯರ ವೃತ್ತಿಜೀವನದ ಮೇಲೆ ಪ್ರಭಾವ ಬೀರುತ್ತಿದ್ದ ಭೂಗತ ಲೋಕ, ಈಗ ಗುಂಡಿನ ದಾಳಿ ಮತ್ತು ಜೀವಬೆದರಿಕೆಗಳ ಮೂಲಕ ಮತ್ತೊಮ್ಮೆ ತನ್ನ ಅಸ್ತಿತ್ವ ಪ್ರದರ್ಶಿಸುತ್ತಿದೆ. ದಾವೂದ್...

ಲೋಕಸಭೆಯ ಬಲ 850ಕ್ಕೆ ಏರಿಕೆ: ಕಲಾಪದ ಸಮಯ ಹೆಚ್ಚಳವಿಲ್ಲದಿದ್ದರೆ...

ಲೋಕಸಭೆಯ ಸದಸ್ಯರ ಬಲವನ್ನು 550ರಿಂದ 850ಕ್ಕೆ ಹೆಚ್ಚಿಸುವ ‘ಕ್ಷೇತ್ರ ಪುನರ್‌ವಿಂಗಡಣೆ ಮಸೂದೆ–2026’ ಸಂಸದೀಯ ಪ್ರಜಾಪ್ರಭುತ್ವದಲ್ಲಿ ಹೊಸ ಚರ್ಚೆ ಹುಟ್ಟುಹಾಕಿದೆ. ಜನಸಂಖ್ಯೆಗೆ ಅನುಗುಣವಾಗಿ ಸೀಟುಗಳ ಹೆಚ್ಚಳ ಅನಿವಾರ್ಯವಾದರೂ, ಸಂಸತ್ತಿನ ವಾರ್ಷಿಕ ಕಲಾಪದ ದಿನಗಳು ಮತ್ತು...

ಸೌದಿ ಅರೇಬಿಯಾದ ಕಂಠನಾಳಕ್ಕೇ ಕೈಹಾಕಿರುವ ಯೆಮನ್!

ಸೌದಿ ಅರೇಬಿಯಾದ ಜೀವನಾಡಿಗೇ ಕೈಹಾಕಿರುವ ಯೆಮನ್‌ನ ಈ ಪ್ರತಿರೋಧವು ಕೇವಲ ಒಂದು ಯುದ್ಧದ ಕಥೆಯಲ್ಲ; ಇದು ಮಧ್ಯಪ್ರಾಚ್ಯದ ರಾಜಕೀಯ ಇತಿಹಾಸವನ್ನೇ ಮರುಬರೆಯಬಹುದಾದ ಸಂಘರ್ಷವಾಗಿದೆ. ಅಲ್ಲಿಯವರೆಗೆ, ಯೆಮನ್ ಕೇವಲ ಅರಬ್ ಜಗತ್ತಿಗಷ್ಟೇ ಅಲ್ಲ, ಇಡೀ...

“ಮುಂಗಾರು ಅವಧಿಯಲ್ಲಿ ರಸಗೊಬ್ಬರದ ಬೇಡಿಕೆ ಹೆಚ್ಚಾಗುವುದು ಸಾಮಾನ್ಯ ಸಂಗತಿಯಾಗಿದೆ. ಆದರೆ ಈ ಬಗ್ಗೆ ಪೂರ್ವ ಸಿದ್ಧತೆ ಕೈಗೊಳ್ಳಬೇಕಿದ್ದ ಕೇಂದ್ರ ಸರ್ಕಾರ ಯಾವುದೇ ದೂರದೃಷ್ಟಿ ತೋರದೆ ನಿರ್ಲಕ್ಷ್ಯ ವಹಿಸಿದೆ. ಮುಂಗಾರು ಆರಂಭಕ್ಕೂ ಮುನ್ನವೇ ಅಗತ್ಯ ಪ್ರಮಾಣದ ರಸಗೊಬ್ಬರವನ್ನು ರಾಜ್ಯಗಳಿಗೆ ಹಂಚಿಕೆ ಮಾಡಬೇಕಾಗಿದ್ದರೂ, ಕೇಂದ್ರ ಸರ್ಕಾರ ಈ ಜವಾಬ್ದಾರಿಯನ್ನು ಸಮರ್ಪಕವಾಗಿ ನಿರ್ವಹಿಸಿಲ್ಲ” ಎಂದು ಖಂಡ್ರೆ ಟೀಕಿಸಿದ್ದಾರೆ.

“ರಸಗೊಬ್ಬರ ಕೊರತೆಯಿಂದಾಗಿ ಮಾರುಕಟ್ಟೆಯಲ್ಲಿ ಕೃತಕ ಅಭಾವ ಸೃಷ್ಟಿಯಾಗಿದ್ದು, ಕೆಲವೆಡೆ ರೈತರು ಹೆಚ್ಚಿನ ದರ ನೀಡಿ ಗೊಬ್ಬರ ಖರೀದಿಸಬೇಕಾದ ಪರಿಸ್ಥಿತಿ ಎದುರಾಗಿದೆ. ಸರ್ಕಾರದ ನಿರ್ಲಕ್ಷ್ಯದಿಂದಾಗಿ ರೈತರು ಆರ್ಥಿಕವಾಗಿ ಮತ್ತಷ್ಟು ಸಂಕಷ್ಟಕ್ಕೆ ಸಿಲುಕುತ್ತಿದ್ದಾರೆ. ದೇಶದ ಅನ್ನದಾತರ ಹಿತಾಸಕ್ತಿಯನ್ನು ಕಾಪಾಡಬೇಕಾದ ಕೇಂದ್ರ ಸರ್ಕಾರ ರಾಜಕೀಯ ಪ್ರಚಾರ ಮತ್ತು ಚುನಾವಣೆಗಳತ್ತ ಹೆಚ್ಚಿನ ಗಮನ ಹರಿಸಿ ರೈತರ ಸಮಸ್ಯೆಗಳನ್ನು ಕಡೆಗಣಿಸಿದೆ” ಎಂದು ಆರೋಪಿಸಿದ್ದಾರೆ.

“ಜಿಲ್ಲೆಯ ವಿವಿಧ ಭಾಗಗಳಲ್ಲಿ ರೈತರು ರಸಗೊಬ್ಬರಕ್ಕಾಗಿ ಕೃಷಿ ಸೇವಾ ಕೇಂದ್ರಗಳು ಹಾಗೂ ಗೊಬ್ಬರ ಮಾರಾಟ ಮಳಿಗೆಗಳ ಮುಂದೆ ಸಾಲುಗಟ್ಟಿ ನಿಲ್ಲುವ ಸ್ಥಿತಿ ನಿರ್ಮಾಣವಾಗಿದೆ. ಸಮಯಕ್ಕೆ ಸರಿಯಾಗಿ ಗೊಬ್ಬರ ದೊರೆಯದಿದ್ದರೆ ಬಿತ್ತನೆ ಕಾರ್ಯ ವಿಳಂಬವಾಗುವ ಸಾಧ್ಯತೆ ಇದ್ದು, ಇದರಿಂದ ಕೃಷಿ ಉತ್ಪಾದನೆ ಮೇಲೆಯೂ ಪ್ರತಿಕೂಲ ಪರಿಣಾಮ ಬೀರುವ ಆತಂಕ ಎದುರಾಗಿದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ : ಬೀದರ್‌ | ಬಸವಾದಿ ಶರಣರ ಹಿಂದೂ ಸಮಾವೇಶಕ್ಕೆ ವಿರೋಧ : ಬಸವಪ್ರಭು ಸ್ವಾಮೀಜಿ

ಬೀದರ್ ಜಿಲ್ಲೆಯ ಅನ್ನದಾತರು ರಸಗೊಬ್ಬರಕ್ಕಾಗಿ ಅಂಗಡಿಗಳ ಮುಂದೆ ಕಾಯುವಂತಾಗಿರುವುದು ಅತ್ಯಂತ ಖೇದಕರ ಸಂಗತಿಯಾಗಿದೆ. ಕೇಂದ್ರ ಸರ್ಕಾರವು ಇನ್ನಾದರೂ ರಾಜಕೀಯ ಬಿಟ್ಟು ಎಚ್ಚೆತ್ತುಕೊಳ್ಳಬೇಕು. ತಕ್ಷಣವೇ ಜಿಲ್ಲೆಗೆ ಬಾಕಿ ಇರುವ 12,415 ಟನ್ ರಸಗೊಬ್ಬರವನ್ನು ಸಮರ್ಪಕವಾಗಿ ಪೂರೈಸಲು ತುರ್ತು ಕ್ರಮ ಜರುಗಿಸಬೇಕು ಮತ್ತು ಸಂಕಷ್ಟದಲ್ಲಿರುವ ಜಿಲ್ಲೆಯ ರೈತರ ನೆರವಿಗೆ ಧಾವಿಸಬೇಕು ಎಂದು ಸಂಸದ ಸಾಗರ್ ಖಂಡ್ರೆ ಅವರು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ನೆಹರೂ–ಗಾಂಧಿ, ಯಾದವ್ ಕುಟುಂಬಗಳ ನಾಯಕತ್ವ ಬೇಡ’: ಒವೈಸಿ ಹೇಳಿಕೆಗೆ ವಿಪಕ್ಷಗಳ ತೀವ್ರ ಆಕ್ರೋಶ

ಮುಸ್ಲಿಂ ಯುವಕರು ನೆಹರೂ–ಗಾಂಧಿ ಮತ್ತು ಯಾದವ್ ಕುಟುಂಬಗಳ ರಾಜಕೀಯ ನಾಯಕತ್ವವನ್ನು ಅನುಸರಿಸುವುದನ್ನು...

ಬೀದರ್‌ | ಗಾಯಕ ದೇವದಾಸಗೆ ಒಲಿದ ಜಾನಪದ ಅಕಾಡೆಮಿ ವಾರ್ಷಿಕ ಗೌರವ ಪ್ರಶಸ್ತಿ

ಕರ್ನಾಟಕ ಜಾನಪದ ಅಕಾಡೆಮಿಯು 2026ನೇ ಸಾಲಿನ ವಾರ್ಷಿಕ ಗೌರವ ಪ್ರಶಸ್ತಿಗಳನ್ನು ಪ್ರಕಟಿಸಿದ್ದು,...

ಬಡತನ ಮೆಟ್ಟಿ ಬಿಲ್ಲುಗಾರಿಕೆ ಒಲಿಸಿಕೊಂಡ ದೇವಮ್ಮ: ಒಲಂಪಿಕ್ಸ್‌ ಕನಸಿಗೆ ಸ್ಪೂರ್ತಿ ತುಂಬಿದ ಎಂ.ಬಿ ಪಾಟೀಲ್‌

ಬಡತನದ ನಡುವೆಯೂ ಬಿಲ್ಲುಗಾರಿಕೆಯಲ್ಲಿ ಸಾಧನೆಯ ಹಾದಿಯಲ್ಲಿ ಮುನ್ನಡೆಯುತ್ತಿರುವ ಕಲ್ಯಾಣ ಕರ್ನಾಟಕದ ಪ್ರತಿಭೆ...

ಬಾಲಿವುಡ್‌ ಮೇಲೆ ಭೂಗತ ಲೋಕದ ಕರಿನೆರಳು: ದಾವೂದ್ ಇಬ್ರಾಹಿಂನಿಂದ ಲಾರೆನ್ಸ್ ಬಿಷ್ಣೋಯ್‌ವರೆಗೆ!

ಒಂದು ಕಾಲದಲ್ಲಿ ಬಾಲಿವುಡ್ ಸಿನಿಮಾಗಳಿಗೆ ಹಣ ಹೂಡುತ್ತಿದ್ದ, ನಟ-ನಟಿಯರ ವೃತ್ತಿಜೀವನದ ಮೇಲೆ...