ಬೀದರ್‌ | ಜಿಲ್ಲಾ 22ನೇ ಕನ್ನಡ ಸಾಹಿತ್ಯ ಸಮ್ಮೇಳನ: ಸರ್ವಾಧ್ಯಕ್ಷರಾಗಿ ಬಸವರಾಜ ಬಲ್ಲೂರ ಆಯ್ಕೆ

Date:

ಅಧ್ಯಯನ, ಅಧ್ಯಾಪನದ ಜೊತೆಗೆ ಸಾಹಿತ್ಯಿಕ ಹಾಗೂ ಸಮಾಜೋಧಾರ್ಮಿಕ ಚಟುವಟಿಕೆಗಳ ಮೂಲಕ ಗುರುತಿಸಿಕೊಂಡಿರುವ ಡಾ.ಬಸವರಾಜ ಬಲ್ಲೂರ ಅವರನ್ನು ಬೀದರ ಜಿಲ್ಲಾ 22ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ.

- Advertisement -

ಕನ್ನಡ ಸಾಹಿತ್ಯ, ವಚನ ಸಾಹಿತ್ಯ ಹಾಗೂ ಶರಣ ಸಂಸ್ಕೃತಿಯ ಅಧ್ಯಯನ ಮತ್ತು ಪ್ರಸಾರದಲ್ಲಿ ವಿಶೇಷ ಆಸಕ್ತಿ ಹೊಂದಿರುವ ಡಾ. ಬಸವರಾಜ ಬಲ್ಲೂರ ಅವರು ಎಂ.ಎ., ಬಿ.ಎಡ್., ಎಂ.ಫಿಲ್., ಪಿಎಚ್.ಡಿ. ಹಾಗೂ ವಚನ ಡಿಪ್ಲೊಮಾ (ಪಿಜಿ) ಪದವೀಧರರಾಗಿದ್ದಾರೆ. ‘ಅನುಭವ ಮಂಟಪ—ಒಂದು ಅಧ್ಯಯನ’ ವಿಷಯದ ಕುರಿತು ಎಂ.ಫಿಲ್. ಮತ್ತು ಪಿಎಚ್.ಡಿ. ಸಂಶೋಧನೆ ನಡೆಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಪ್ರಚಾರ, ರಾಹುಲ್ ವ್ಯಕ್ತಿತ್ವ ಮತ್ತು ರೆಜಿಮ್ ಚೇಂಜ್

ಮೋದಿ ಅನುಭವಿ ನಟನಂತೆ, ಪ್ರದರ್ಶಕನಂತೆ ಕಾಣುತ್ತಾರೆ. ರಾಹುಲ್ ಗಾಂಧಿ ಪಾತ್ರದ ಒಳಹೊಕ್ಕು ನಟಿಸುವ ಕಲಾವಿದನಂತೆ ಕಾಣುತ್ತಾರೆ. ಈ ನಿಟ್ಟಿನಲ್ಲಿ ರಾಹುಲ್ ರಾಜಕೀಯ ನಡೆಗಳು ಮೋದಿಯವರ ರಾಜಕೀಯ ನಡೆಗಳೊಂದಿಗೆ ವಿಶ್ಲೇಷಣೆಗೊಳಗಾಗುತ್ತಿವೆ. ಕಳೆದ 12 ವರ್ಷಗಳ...

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

ವಿವಿಧ ಪದವಿ ಕಾಲೇಜುಗಳಲ್ಲಿ, ಕರ್ನಾಟಕ ಕಾಲೇಜಿನ ಸ್ನಾತಕೋತ್ತರ ಕನ್ನಡ ಅಧ್ಯಯನ ಕೇಂದ್ರದಲ್ಲಿ ಹಾಗೂ ಗುಲ್ಬರ್ಗಾ ವಿಶ್ವವಿದ್ಯಾಲಯದ ಸ್ನಾತಕೋತ್ತರ ಕೇಂದ್ರ, ಹಾಲಹಳ್ಳಿ–ಬೀದರದಲ್ಲಿ ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸಿರುವ ಅವರು, ಪ್ರಸ್ತುತ ಬೀದರಿನ ಕರ್ನಾಟಕ ಪದವಿಪೂರ್ವ ಕಾಲೇಜಿನಲ್ಲಿ ಪ್ರಾಚಾರ್ಯರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

Advertisements

ಬಸವರಾಜ ಬಲ್ಲೂರ ಅವರು ‘ಅನುಭವ ಮಂಟಪದ ಚಾರಿತ್ರಿಕ ನೆಲೆಗಳು’, ‘ಪೂಜ್ಯ ಶ್ರೀ ಗುರುಬಸವ ಪಟ್ಟದ್ದೆವರು’, ‘ಅಕ್ಷರ ಕಲ್ಯಾಣ: ಅಕ್ಷರ ಸಂಸ್ಕೃತಿಯ ಭಾಲ್ಕಿ ಹಿರೇಮಠ’ ಹಾಗೂ ‘ಡಾ. ಜಯದೇವಿ ತಾಯಿ ಲಿಗಾಡೆ’ ಸೇರಿದಂತೆ ಹಲವು ಸ್ವತಂತ್ರ ಕೃತಿಗಳನ್ನು ರಚಿಸಿದ್ದಾರೆ. ‘ಕಲ್ಯಾಣ ಪಣತೆ’, ‘ಗುರುಕುಲ ದರ್ಶನ’, ‘ವ್ಯಷ್ಟಿ ಸಮಷ್ಟಿ ಪ್ರಜ್ಞೆ’, ‘ಸಮರಸ ದಾಂಪತ್ಯ’ ಮತ್ತು ‘ದಾಂಪತ್ಯ ಗೀತೆ’ ಸೇರಿದಂತೆ ಹತ್ತಾರು ಸಂಪಾದಿತ ಕೃತಿಗಳನ್ನು ಪ್ರಕಟಿಸಿದ್ದಾರೆ. ಅಲ್ಲದೆ, ಅನೇಕ ಸ್ಮರಣ ಸಂಚಿಕೆಗಳು ಹಾಗೂ ಅಭಿನಂದನಾ ಸಂಪುಟಗಳ ಸಂಪಾದಕರಾಗಿಯೂ ಕಾರ್ಯನಿರ್ವಹಿಸಿದ್ದಾರೆ.

WhatsApp Image 2026 10 10 at 7.46.08 PM 21
ಜಾಹೀರಾತು

ರಾಜ್ಯ ಮತ್ತು ರಾಷ್ಟ್ರೀಯ ಮಟ್ಟದ ವಿವಿಧ ಸಮ್ಮೇಳನಗಳಲ್ಲಿ ಹತ್ತಾರು ಸಂಶೋಧನಾ ಪ್ರಬಂಧಗಳನ್ನು ಮಂಡಿಸಿರುವ ಅವರು, ಔರಾದ್‌ನಲ್ಲಿ ನಡೆದ ಪ್ರಥಮ ತಾಲೂಕು ಶರಣ ಸಾಹಿತ್ಯ ಸಮ್ಮೇಳನ ಹಾಗೂ ಬೀದರನಲ್ಲಿ ನಡೆದ ಪ್ರಥಮ ಯುವ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದಾರೆ.

ಕನ್ನಡ ಭಾಷೆ, ಸಾಹಿತ್ಯ ಹಾಗೂ ಶರಣ ಸಂಸ್ಕೃತಿಯ ಸೇವೆಯಲ್ಲಿ ನಿರಂತರವಾಗಿ ತೊಡಗಿಸಿಕೊಂಡಿರುವ ಅವರಿಗೆ ಡಾ. ಜಯದೇವಿ ತಾಯಿ ಲಿಗಾಡೆ ರಾಷ್ಟ್ರೀಯ ಪುರಸ್ಕಾರ, ಬೀದರ ಜಿಲ್ಲಾಡಳಿತದ ರಾಜ್ಯೋತ್ಸವ ಪ್ರಶಸ್ತಿ ಸೇರಿದಂತೆ ಹಲವು ಗೌರವಗಳು ಸಂದಿವೆ.

WhatsApp Image 2026 10 10 at 6.59.31 PM 8
ಜಾಹೀರಾತು

ಬೀದರ ಕನ್ನಡ ಭವನದಲ್ಲಿ ಈಚೆಗೆ ನಡೆದ ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಡಾ.ಬಸವರಾಜ ಬಲ್ಲೂರ ಅವರನ್ನು ಬೀದರ ಜಿಲ್ಲಾ 22ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ಸುರೇಶ ಚೆನ್ನಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ : ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆ : ಶೇ.86.97ರಷ್ಟು ದಾಖಲೆ ಮತದಾನ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಹಲ್ಲೆಗೊಳಗಾಗಿ ರೈಲ್ವೆ ಹಳಿ ಮೇಲೆ ಬಿದ್ದಿದ್ದ ಯುವಕ ಚಿಕಿತ್ಸೆ ಫಲಿಸದೆ ಸಾವು

ಶಿವಮೊಗ್ಗ ರೈಲ್ವೆ ಹಳಿ ಬಳಿ ಗಂಭೀರ ಗಾಯಗಳೊಂದಿಗೆ ಪತ್ತೆಯಾಗಿದ್ದ 26 ವರ್ಷದ...

ನೇಣು ಬಿಗಿದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ; ತರಾತುರಿಯಲ್ಲಿ ಅಂತ್ಯಕ್ರಿಯೆ, ಕಾರಣ ನಿಗೂಢ!

ಸೊರಬ ತಾಲೂಕಿನ ಮುಟಗುಪ್ಪೆ ಗ್ರಾಮದಲ್ಲಿ 22 ವರ್ಷದ ಯುವತಿಯೊಬ್ಬರು ಮನೆಯಲ್ಲಿ ನೇಣು...

ಶಿವಮೊಗ್ಗ | ಗಾಂಜಾ ಮಾರಾಟ ಆರೋಪ: ಐವರು ಅರೆಸ್ಟ್‌, 1.23 ಕೆಜಿ ಮಾದಕ ವಸ್ತು ಜಪ್ತಿ

ಶಿವಮೊಗ್ಗ ನಗರದ ಅನುಪಿನಕಟ್ಟೆ ಸಮೀಪ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದಡಿ ತುಂಗಾನಗರ...