ಬೀದರ್‌ | ಯರಬಾಗ ಗ್ರಾಮ ಪಂಚಾಯಿತಿನಲ್ಲಿ ₹33 ಲಕ್ಷ ಅವ್ಯವಹಾರ : ತನಿಖೆಗೆ ಭೀಮರೆಡ್ಡಿ ಆಗ್ರಹ

Date:

ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಯರಬಾಗ ಗ್ರಾಮ ಪಂಚಾಯಿತಿನಲ್ಲಿ 2023-24ನೇ ಸಾಲಿನ 15ನೇ ಹಣಕಾಸಿನ ಯೋಜನೆ ಅನುದಾನದಲ್ಲಿ ಅವ್ಯವಹಾರ ನಡೆದಿದ್ದು, ಕೂಡಲೇ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮಕೈಗೊಳ್ಳಬೇಕೆಂದು ಸಾಮಾಜಿಕ ಕಾರ್ಯಕರ್ತ ಭೀಮರೆಡ್ಡಿ ಸಿಂಧನಕೇರಾ ಆಗ್ರಹಿಸಿದ್ದಾರೆ.

- Advertisement -

ಈ ಕುರಿತು ವಿಡಿಯೊ ಮೂಲಕ ಗ್ರಾಮ ಪಂಚಾಯತಿನಲ್ಲಿ ನಡೆದಿರುವ ದಾಖಲೆಗಳನ್ನು ಪ್ರದರ್ಶಿಸಿ, ಗ್ರಾಮ ಪಂಚಾಯತ್‌ ಅವ್ಯವಹಾರದಲ್ಲಿ ತೊಡಗಿರುವ ಪಂಚಾಯತ್ ಪಿಡಿಒ ಹಾಗೂ ಅಧ್ಯಕ್ಷರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾ ಪಂಚಾಯತ್ ಅಧಿಕಾರಿಗಳಿಗೆ ದೂರು ಸಲ್ಲಿಸಿದರೂ‌ ಇಲ್ಲಿಯವರೆಗೆ ಸೂಕ್ತ ತನಿಖೆ ನಡೆಸುತ್ತಿಲ್ಲ ಎಂದು ದೂರಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ...

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು ಉತ್ತೇಜಿಸುವ ನಿಟ್ಟಿನಲ್ಲಿ ನಡೆಸಿದ ಪ್ರಯತ್ನಗಳಿಗಾಗಿ, ಮಾನವ ಹಕ್ಕುಗಳ ರಕ್ಷಣೆಗಾಗಿ ಜೀವನವನ್ನೇ ಮುಡಿಪಾಗಿಟ್ಟ ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ಡಾ. ನವನೀತಮ್‌...

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ʼಈ ಅವ್ಯವಹಾರ ಬಗ್ಗೆ ಹುಮನಾಬಾದ್‌ನ ಆಶ್ರಯ ದೀಪ ಚಾರಿಟೇಬಲ್‌ ಟ್ರಸ್ಟ್‌ ದಿಂದ ಜಿಲ್ಲಾ ಪಂಚಾಯತ್ ಸಿಇಒ ಅವರಿಗೆ ಹಲವು ಬಾರಿ ದೂರು ನೀಡಲಾಗಿತ್ತು. ದೂರಿನ ಅನ್ವಯ ತನಿಖೆ ನಡೆಸಿ ವಾರದೊಳಗೆ ವರದಿ ಸಲ್ಲಿಸಲು ಸಿಇಒ ಆದೇಶಿಸಿದ್ದರು. ಆದರೆ, ಬಸವಕಲ್ಯಾಣ ತಾಲೂಕು ಪಂಚಾಯತ್ ಇಒ ರಮೇಶ ಅವರು ತನಿಖೆ ನಡೆಸದೆ ನಿರ್ಲಕ್ಷ್ಯ ವಹಿಸಿದ್ದಾರೆʼ ಎಂದರು.

ʼಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ಸಿಸಿ ಕ್ಯಾಮೆರಾ ಅಳವಡಿಕೆ, ಬ್ಲಿಚಿಂಗ್‌ ಪೌಡರ್‌, ಚರಂಡಿ ಸ್ವಚ್ಛತೆ, ಅಂಗವಿಕಲರಿಗೆ ಶೇ 5ರಷ್ಟು ಹಣ ಬಳಕೆ, ಪಂಚಾಯತ್‌ ಕಟ್ಟಡ ಕಾಮಗಾರಿ ಸೇರಿ ವಿವಿಧ ಕಾಮಗಾರಿ ನಡೆಸಲಾಗಿದೆ ಎಂದು ಸುಳ್ಳು ದಾಖಲೆ ಸೃಷ್ಟಿಸಿ 15ನೇ ಹಣಕಾಸು ಯೋಜನೆಯ ಅಂದಾಜು ಹಣ ₹33.39 ಲಕ್ಷ ದುರ್ಬಳಕೆ ಮಾಡಿಕೊಂಡಿದ್ದಾರೆʼ ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ : ಪ್ರಭುರಾವ ಕಂಬಳಿವಾಲೆ, ಡಾ.ಜಯದೇವಿ ತಾಯಿ ಲಿಗಾಡೆ ಹೆಸರಿನಲ್ಲಿ ಟ್ರಸ್ಟ್‌ಗಳು ರಚಿಸಿ ಸರ್ಕಾರ ಆದೇಶ

ಜಿಲ್ಲಾ ಪಂಚಾಯತ್‌ ಸಿಇಒ ಅವರು ಅವ್ಯವಹಾರ ಕುರಿತು ತನಿಖೆ ನಡೆಸುವಂತೆ ಆದೇಶಿಸಿದ್ದರೂ ಅಧಿಕಾರಿಗಳು ತನಿಖೆ ನಡೆಸುತ್ತಿಲ್ಲ. ಕೂಡಲೇ ಈ ಬಗ್ಗೆ ಶೀಘ್ರ ತನಿಖೆ ಕೈಗೊಂಡು ಸರ್ಕಾರದ ಹಣ ದುರ್ಬಳಕೆ ಮಾಡಿಕೊಂಡಿರುವ ಪಿಡಿಒ ಹಾಗೂ ಗ್ರಾಮ ಪಂಚಾಯತ್‌ ಅಧ್ಯಕ್ಷರ ವಿರುದ್ಧ ಕ್ರಮ ಜರುಗಿಸಿ, ದುರ್ಬಳಕೆಯಾದ ಹಣ ಸರ್ಕಾರದ ಬೊಕ್ಕಸಕ್ಕೆ ಮರುಪಾವತಿ ಆಗುವಂತೆ ಮಾಡಬೇಕುʼ ಎಂದು ಭೀಮರೆಡ್ಡಿ ಸಿಂಧನಕೇರಾ ಆಗ್ರಹಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಬೆಂಬಲ ಬೆಲೆಯಲ್ಲಿ ಹೆಸರುಕಾಳು, ಸೋಯಾಬೀನ್ ಖರೀದಿಗೆ ನೋಂದಣಿ ಆರಂಭ

ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ 2026-27ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ...

ಬೀದರ್‌ | ಬೈಕ್ ಅಪಘಾತ: ಇಬ್ಬರು ಯುವಕರು ಸಾವು

ನೆರೆಯ ತೆಲಂಗಾಣದ ಸಂಗಾರೆಡ್ಡಿ ಸಮೀಪ ಬುಧವಾರ ನಸುಕಿನ ಜಾವ ಸಂಭವಿಸಿದ ರಸ್ತೆ...

ಬೀದರ್‌ | 9 ವರ್ಷಗಳ ಹಿಂದೆ ಬೀದರ್‌ಗೆ ಆಗಮಿಸಿದ್ದ ನಟ ನಾನಾ ಪಾಟೇಕರ್

ಹೃದಯಾಘಾತದಿಂದ ನಿಧನರಾದ ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್‌ಗೆ ಬೀದರ್...

ಬೀದರ್‌ | ನ.28, 29ರಂದು ಅನುಭವ ಮಂಟಪ ಉತ್ಸವ : ತುಮಕೂರು ಸಿದ್ಧಗಂಗೆ ಶ್ರೀಗಳಿಗೆ ಆಹ್ವಾನ

ಬೀದರ್‌ ಜಿಲ್ಲೆಯ ಬಸವಕಲ್ಯಾಣ ನಗರದ ಅನುಭವ ಮಂಟಪ ಪರಿಸರದಲ್ಲಿ ನವೆಂಬರ್ 28...