ಬೀದರ್‌ | 71ನೇ ಕನ್ನಡ ರಾಜೋತ್ಸವ: ಧ್ವಜಾರೋಹಣ ನೆರವೇರಿಸಿದ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ

Date:

71ನೇ ಕನ್ನಡ ರಾಜ್ಯೋತ್ಸವ ನಿಮಿತ್ತ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ಇಲಾಖೆ ಸಚಿವರೂ ಆದ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಅವರು ಭಾನುವಾರ ಬೀದರ್‌ನ ನೆಹರು ಕ್ರೀಡಾಂಗಣದಲ್ಲಿ ಧ್ವಜಾರೋಹಣ ನೆರವೇರಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

- Advertisement -

ಸಚಿವ ಈಶ್ವರ ಖಂಡ್ರೆ ಅವರು ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು. ಬಳಿಕ ವಿವಿಧ ಕನ್ನಡ ನಾಡಿನ ಸಂಸ್ಕೃತಿ ಬಿಂಬಿಸುವ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಚಾಲನೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನವೆಂಬರ್ 1 | ಕರ್ನಾಟಕ ರಾಜ್ಯೋತ್ಸವ ಮಾತ್ರವಲ್ಲ; ಭಾರತದ...

ನವೆಂಬರ್ 1 ಕನ್ನಡಿಗರ ಹೆಮ್ಮೆಯ ಕರ್ನಾಟಕ ರಾಜ್ಯೋತ್ಸವ. ಇದೇ ದಿನ ದೇಶದ ಎಂಟು ರಾಜ್ಯಗಳು ಮತ್ತು ಐದು ಕೇಂದ್ರಾಡಳಿತ ಪ್ರದೇಶಗಳ ರಚನೆ, ಮರುರಚನೆ ಹಾಗೂ ವಿಮೋಚನೆಯ ಇತಿಹಾಸವೂ ಇದೆ. ಭಾಷಾವಾರು ರಾಜ್ಯಗಳಿಗಾಗಿ ನಡೆದ...

ರಾಜ್ಯೋತ್ಸವ ವಿಶೇಷ | ಕನ್ನಡಕ್ಕೊಂದು ವಿಜ್ಞಾನದ ಓದು

ವಿಜ್ಞಾನ ಓದು ಎಂದರೇನು? ಕನ್ನಡಕ್ಕಾಗಿ ಅಂತಹದೊಂದು ಬೇಕಾ? ಇಂತಹದ್ದೊಂದರ ಚರ್ಚೆ ಇಂದಿನ ಅಗತ್ಯಗಳಲ್ಲೊಂದು. ಏಕೆಂದರೆ ನಮ್ಮಲ್ಲಿ ಓದು ಎನ್ನುವುದು ಬಹುಪಾಲು ಸಾಹಿತ್ಯಕವಾದ ಓದೇ ಆಗಿದೆ. ಸಾಹಿತ್ಯದಲ್ಲಿ ಸಹಜವಾಗಿ ಕಾಣಬರುವ ಒಂದು ಬಗೆಯ ಎಲ್ಲವೂ...

ರೈತ ಹೋರಾಟದಿಂದ ವಿಧಾನಸಭಾಧ್ಯಕ್ಷ ಸ್ಥಾನದವರೆಗೆ ಕಾಗೋಡು ತಿಮ್ಮಪ್ಪ ಹಾದಿ…

ಕರ್ನಾಟಕದ ಸಾಮಾಜಿಕ ಮತ್ತು ರಾಜಕೀಯ ಇತಿಹಾಸದಲ್ಲಿ ಕೆಲವು ವ್ಯಕ್ತಿಗಳು ತಮ್ಮ ಹೋರಾಟ, ಸಾರ್ವಜನಿಕ ಬದುಕು ಹಾಗೂ ಜನಪರ ಚಟುವಟಿಕೆಗಳ ಮೂಲಕ ವಿಶೇಷ ಛಾಪು ಮೂಡಿಸಿದ್ದಾರೆ. ಅಂತಹವರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯ ಸಾಗರದ ಕಾಂಗ್ರೆಸ್...

ಬಳಿಕ ತೆರೆದ ಜೀಪಿನಲ್ಲಿ ತೆರಳಿ ಗೌರವ ವಂದನೆ ಸ್ವೀಕರಿಸಿದರು. ಆನಂತರ ಪೊಲೀಸ್, ಅರಣ್ಯ, ಎನ್ಎಸ್ಎಸ್ ಸೇರಿದಂತೆ ವಿವಿಧ ತುಕಡಿಗಳಿಂದ ಆಕರ್ಷಕ ಪಥ ಸಂಚಲನ ನಡೆಯಿತು.

ಸಚಿವ ಈಶ್ವರ ಬಿ.ಖಂಡ್ರೆ ಮಾತನಾಡಿ, “ಜಗತ್ತಿನ ಸಾಹಿತ್ಯ ಕ್ಷೇತ್ರಕ್ಕೆ ಅಮೂಲ್ಯ ಕೊಡುಗೆಯಾಗಿದ್ದು ಕನ್ನಡದ ವಚನ ಸಾಹಿತ್ಯ ಹಾಗೂ ದಾಸ ಸಾಹಿತ್ಯ.ಇಂತಹ ಅಮೂಲ್ಯ ಸಾಹಿತ್ಯವನ್ನು ಉಳಿಸಿ ಬೆಳೆಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ.ದೇಶದಲ್ಲಿ ಮೂರು ಸಾವಿರ ಭಾಷೆಗಳಿವೆ. ಅದರಲ್ಲಿ ಎರಡು ಸಾವಿರ ವರ್ಷಗಳ ಇತಿಹಾಸ ಹೊಂದಿರುವ ಕನ್ನಡ ಭಾಷೆ ಶ್ರೀಮಂತವಾಗಿದೆ ಎಂದರು.

1006823934

ಕಾರ್ಯಕ್ರಮದಲ್ಲಿ ವಿವಿಧ ಶಾಲೆಗಳ ಶಾಲಾ-ಕಾಲೇಜಿನ ಮಕ್ಕಳು ಪಾಲ್ಗೊಂಡಿದ್ದು, ಕನ್ನಡ ಗೀತೆಗಳಿಗೆ ನೃತ್ಯ ಮಾಡುವ ಮೂಲಕ ಪ್ರೇಕ್ಷಕರ ಗಮನ ಸೆಳೆದರು. ವಿವಿಧ ಕ್ಷೇತ್ರಗಳಲ್ಲಿ ಸಾಧಗೈದ 14 ಸಾಧಕರಿಗೆ ವಿಶೇಷವಾಗಿ ಸನ್ಮಾನಿಸಿ ಗೌರವಿಸಲಾಯಿತು.

ಸಮಾರಂಭದಲ್ಲಿ ಶಾಸಕರಾದ ರಹೀಂ ಖಾನ್, ಡಾ.ಶೈಲೇಂದ್ರ ಬೆಲ್ದಾಳೆ, ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ, ಜಿಲ್ಲಾ ಪಂಚಾಯತ್ ಸಿಇಒ ಗಿತ್ತೆ ಮಾಧವ ವಿಠಲರಾವ, ಕರ್ನಾಟಕ ಮೀನುಗಾರಿಕಾ ಅಭಿವೃದ್ಧಿ ನಿಗಮ ಅಧ್ಯಕ್ಷ ಮಾಲಾ ಬಿ.ನಾರಾಯಣ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ, ಬೀದರ್ ಸಹಾಯಕ ಆಯುಕ್ತ ಅಭಿನವ್ ಜೈನ್, ಬುಡಾ ಅಧ್ಯಕ್ಷ ವಿನೋದ್ ಅಪ್ಪೆ ಸೇರಿದಂತೆ ಇತರರಿದ್ದರು.

1006823724

ಇದನ್ನೂ ಓದಿ : ಬೀದರ್‌ | ಟನ್ ಕಬ್ಬಿಗೆ ₹5,500 ದರ ನಿಗದಿಗೆ ಆಗ್ರಹಿಸಿ ರಾಷ್ಟ್ರೀಯ ಹೆದ್ದಾರಿ ತಡೆ

WhatsApp Image 2026 10 10 at 7.46.08 PM 29
eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೃಷಿರಂಗ | ರಾಜ್ಯೋತ್ಸವದ ನೆಪದಲ್ಲಿ ಕನ್ನಡದಲ್ಲಿ ಕೃಷಿ ವಿಜ್ಞಾನ ಸಾಹಿತ್ಯ ಆರಂಭದ ಸವಿನೆನಪುಗಳು

ಮಂಗಳೂರಿನಲ್ಲಿ 1841ರಲ್ಲಿ ಮೊಟ್ಟಮೊದಲಿಗೆ ಆರಂಭವಾದ ಬಾಸೆಲ್ ಮಿಷನ್ ಮತ್ತು ಟ್ರಾಕ್ಟ್ ಡೆಪಾಸಿಟರಿ...

ಪ್ರತಿಭಟನೆ ನಂತರ ಸ್ವಲ್ಪ ಶಾಪಿಂಗ್ ಮಾಡಿ: ವರ್ತಕರ ಆಕ್ಷೇಪಕ್ಕೆ ರಾಹುಲ್ ಗಾಂಧಿ ಪ್ರತಿಕ್ರಿಯೆ

ಇಂದು (ನ.1) ದೆಹಲಿಯ ರಾಮಲೀಲಾ ಮೈದಾನದಲ್ಲಿ ಪ್ರತಿಪಕ್ಷಗಳ 'ಇಂಡಿಯಾ' ಒಕ್ಕೂಟ ಆಯೋಜಿಸಿರುವ...

ರಾಜ್ಯೋತ್ಸವ ವಿಶೇಷ | ಕನ್ನಡಕ್ಕೊಂದು ವಿಜ್ಞಾನದ ಓದು

ವಿಜ್ಞಾನ ಓದು ಎಂದರೇನು? ಕನ್ನಡಕ್ಕಾಗಿ ಅಂತಹದೊಂದು ಬೇಕಾ? ಇಂತಹದ್ದೊಂದರ ಚರ್ಚೆ ಇಂದಿನ...