ಬೀದರ್‌ | 8 ದಿನಗಳ ʼಧಮ್ಮ ಪ್ರವಚನʼ ಸಮಾರೋಪ

Date:

ಬೀದರ್ ನಗರದ ಸಿದ್ಧಾರ್ಥ ಕಾಲೇಜು ಆವರಣದಲ್ಲಿ ಫೆಬ್ರವರಿ 22ರಿಂದ ಮಾರ್ಚ್ 1ರವರೆಗೆ 8 ದಿನಗಳ ಕಾಲ ಪ್ರತಿ ದಿನ ಸಂಜೆ ನಡೆದ ಧಮ್ಮ ಪ್ರವಚನ ಮಾಲಿಕೆಯ ಸಮಾರೋಪ ಸಮಾರಂಭವು ಭಾನುವಾರ ನೆರವೇರಿತು.

- Advertisement -

ಮುಖ್ಯ ಪ್ರವಚನಕಾರ ಭಂತೆ ಡಾ.ಕಲ್ಲಯಾಣ ಸಿರಿ ಮಾತನಾಡಿ, ʼಧಮ್ಮ ಸಂಸ್ಕಾರಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಕಾರ್ಯಗತಗೊಳಿಸಿದಾಗ ಮಾತ್ರ ಬಾಬಾ ಸಾಹೇಬರ ಕನಸು ನನಸಾಗುತ್ತದೆ. ಅಂಬೇಡ್ಕರ್‌ ಅವರು ಶೋಷಿತರ, ದಮನಿತರ ಶ್ರೇಯೋಭಿವೃದ್ಧಿಗಾಗಿ ಬೌದ್ಧ ಧಮ್ಮವನ್ನು ಸ್ವೀಕರಿಸಿ, ಇತರರಿಗೂ ಧಮ್ಮ ಮಾರ್ಗವನ್ನು ಅನುಸರಿಸುವಂತೆ ಕರೆ ನೀಡಿದ್ದರು. ಬೌದ್ಧ ಧಮ್ಮವನ್ನು ಬೌದ್ಧಿಕವಾಗಿ ಅರ್ಥ ಮಾಡಿಕೊಂಡು ಅನುಸರಿಸುವ ಅಗತ್ಯವಿದೆʼ ಎಂದು ಅವರು ಅಭಿಪ್ರಾಯಪಟ್ಟರು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಿಯಾಂಡ್ ಬೆಂಗಳೂರು: ಡಿಜಿಟಲ್ ಆರ್ಥಿಕತೆಯಲ್ಲಿ ರಾಯಚೂರಿಗೆ ಸಿಗುವುದೇ ಪ್ರತ್ಯೇಕ...

ಕರ್ನಾಟಕದ ಅಭಿವೃದ್ಧಿ ಬೆಂಗಳೂರಿಗೆ ಮಾತ್ರ ಸೀಮಿತವಾಗದೆ ರಾಜ್ಯದ ವಿವಿಧ ನಗರಗಳಿಗೂ ತಲುಪಬೇಕು ಎಂಬ ಉದ್ದೇಶದಿಂದ ರಾಜ್ಯ ಸರ್ಕಾರದ ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ (KDEM) ‘Beyond Bengaluru’ ಯೋಜನೆಯನ್ನು ಜಾರಿಗೊಳಿಸಿದೆ. ಐಟಿ, ಐಟಿಇಎಸ್,...

ಸ್ಥಳೀಯ ಸಂಸ್ಥೆ ಚುನಾವಣೆ: ಆಕಾಂಕ್ಷಿಗಳ ಲೆಕ್ಕಾಚಾರ ತಲೆಕೆಳಗು, ಬಂಡಾಯದ...

ಜಿಲ್ಲಾ ಪಂಚಾಯತ್‌ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳ ಕರಡು ಮೀಸಲಾತಿ ಪ್ರಕಟವಾಗುತ್ತಿದ್ದಂತೆ ರಾಯಚೂರು ಜಿಲ್ಲೆಯಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣಾ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಮೀಸಲಾತಿ ಬದಲಾವಣೆಯಿಂದ ಕೆಲವರ ಸ್ಪರ್ಧೆಯ ಲೆಕ್ಕಾಚಾರ ತಲೆಕೆಳಗಾಗಿದ್ದರೆ, ಮತ್ತೊಂದೆಡೆ...

ಹೊಸ ಓದು | ನಟರಾಜ್ ಹುಳಿಯಾರ್ ಅವರ ‘ಡಾಕ್ಟರ್...

ಇತ್ತೀಚೆಗೆ ಲೋಕಾರ್ಪಣೆಗೊಂಡ ನಟರಾಜ್ ಹುಳಿಯಾರ್ ಅವರ 'ಡಾಕ್ಟರ್ ಸಾಹೇಬ್- ರಾಮಮನೋಹರ ಲೋಹಿಯಾ ಜೀವನಯಾನ' ಕೃತಿಯಿಂದ ಆಯ್ದ 'ಲೋಹಿಯಾ ಮತ್ತು ಕರ್ನಾಟಕ' ಅಧ್ಯಾಯ, ಭಾನುವಾರದ ವಿರಾಮದ ಓದಿಗಾಗಿ... 'ಮಾರ್ಕ್ಸ್, ಗಾಂಧಿ ಅಂಡ್ ಸೋಷಲಿಸಂ' ಪುಸ್ತಕಕ್ಕೆ ಮುನ್ನುಡಿ...

ಭಾರತೀಯ ಬೌದ್ಧ ಮಹಾಸಭೆ ಜಿಲ್ಲಾಧ್ಯಕ್ಷ ರಾಜಪ್ಪ ಗುನ್ನಳ್ಳಿ ಅವರು ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿ, ʼಎಂಟು ದಿನಗಳ ಕಾಲ ವಿವಿಧ ವಿಷಯಗಳ ಕುರಿತು ಭಿಕ್ಕುಗಳ ಬೋಧನೆಗಳಿಂದ ಧಮ್ಮದ ತತ್ವಗಳನ್ನು ತಿಳಿದುಕೊಳ್ಳುವ ಅವಕಾಶ ದೊರೆತಿದೆ. ಬೌದ್ಧರಾದರೆ ಮೀಸಲಾತಿಗೆ ಧಕ್ಕೆಯಾಗುವುದಿಲ್ಲʼ ಎಂದು ಸ್ಪಷ್ಟಪಡಿಸಿದರು.

ʼಗ್ರಾಮೀಣ ಪ್ರದೇಶಗಳಲ್ಲಿ ಬೌದ್ಧಾಚಾರ್ಯರ ಸಂಖ್ಯೆ ಹೆಚ್ಚಿಸುವ ಅಗತ್ಯವಿದೆ. ಪ್ರತಿ ಮನೆಗೊಬ್ಬ ಸಮತಾ ಸೈನಿಕರನ್ನಾಗಿ ಮಾಡುವ ಸಂಕಲ್ಪ ಕೈಗೊಳ್ಳಬೇಕು. ಸಮುದಾಯ ಭವನಗಳು ಮತ್ತು ಬೌದ್ಧ ವಿಹಾರಗಳು ಶಿಕ್ಷಣ ಕೇಂದ್ರಗಳಾಗಿ ರೂಪುಗೊಳ್ಳಬೇಕುʼ ಎಂದು ಹೇಳಿದರು.

WhatsApp Image 2026 03 03 at 8.50.07 AM

ಆಣದೂರು ವೈಶಾಲಿನಗರದ ಭಂತೆ ಧಮ್ಮಾನಂದ, ಹಿಪ್ಪಳಗಾಂವ ಭಂತೆ ಬೋಧಿರತ್ನ ಮತ್ತು ಭಂತೆ ವರಜ್ಯೋತಿಯ ಅವರು ಮಾತನಾಡಿದರು.

ಇದೇ ಸಂದರ್ಭದಲ್ಲಿ ಕರುಣಾ ಸಾಗರರವರ ನೇತ್ರತ್ವದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಧಮ್ಮಕಾರ್ಯದಲ್ಲಿ ಜೀವನ ಸಮರ್ಪಿಸಿದ ಮಹನೀಯರಿಗೆ ಸನ್ಮಾನಿಸಲಾಯಿತು.

ಇದನ್ನೂ ಓದಿ : ಬೀದರ್‌ | ಕುಡಿಯುವ ನೀರಿನ ಸಮಸ್ಯೆಯೇ? : ನೇರವಾಗಿ ಅಧಿಕಾರಿಗಳಿಗೆ ಸಂಪರ್ಕಿಸಲು ಮನವಿ

ಭಂತೆ ಧಮ್ಮದೀಪ, ಸಂಘಜ್ಯೊತಿ, ಸಂಘ ಸೇವಕ, ಶಾಂತಿ ಸಮಣ, ಮಹಾಸಭೆಯ ಭಾಲ್ಕಿ ತಾಲೂಕಾಧ್ಯಕ್ಷ ವಿಜಯಕುಮಾರ ಗಾಯಕವಾಡ, ರಾಜ್ಯ ಪದಾಧಿಕಾರಿ ಬಾಬು ಆಣದೂರೆ, ಕಾಶಿನಾಥ ಚಲುವಾ, ಮಂಜುಳಾ ಭಾವಿದೊಡ್ಡಿ, ಸಂತೋಷ ಫುಲೆ, ತುಕಾರಾಮ ಗೌರೆ ಹಾಗೂ ಬಾಬಶೆಟ್ಟಿ ಮಂಠಾಳಕರ್‌ ಉಪಸ್ಥಿತರಿದ್ದರು. ಚಂದ್ರಕಲಾ ಬಡಿಗೇರ್ ನಿರೂಪಿಸಿದರು.‌ ಮಹಾಸಭೆಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಿಂಗೆ ಸೂರ್ಯಕಾಂತ ಸ್ವಾಗತಿಸಿದರು. ಬೀದರ ತಾಲೂಕಾಧ್ಯಕ್ಷ ಶಿವಕುಮಾರ ಸದಾಫುಲೆ ವಂದಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಮಲನಗರ | ಚಕ್ರ ಎಸೆತ : ಅಂಬೇಡ್ಕರ್‌ ವಸತಿ ಶಾಲೆ ವಿದ್ಯಾರ್ಥಿ ರಾಜ್ಯ ಮಟ್ಟಕ್ಕೆ ಆಯ್ಕೆ

2026–27ನೇ ಸಾಲಿನ ಕ್ರೀಡಾಕೂಟದಲ್ಲಿ ಕಮಲನಗರ ತಾಲ್ಲೂಕಿನ ಡಾ. ಬಿ.ಆರ್. ಅಂಬೇಡ್ಕರ್ ವಸತಿ...

ಔರಾದ ಪಟ್ಟಣದಲ್ಲಿ ಕುಡಿಯುವ ನೀರಿನ ಅಭಾವ: ತೇಗಂಪೂರ ಕೆರೆ ನೀರು ಪೂರೈಕೆಗೆ ಆಗ್ರಹ

ಔರಾದ ಪಟ್ಟಣದಲ್ಲಿ ಕಳೆದ ಎಂಟು ದಿನಗಳಿಂದ ಕುಡಿಯುವ ನೀರು ಸರಬರಾಜಿನಲ್ಲಿ ವ್ಯತ್ಯಯ...

ಔರಾದ್‌ | ಖೋಖೋ : ಕೌಡಗಾಂವ ಶಾಲೆಯ ಬಾಲಕಿಯರ ತಂಡ ವಿಭಾಗ ಮಟ್ಟಕ್ಕೆ ಆಯ್ಕೆ

ಬೀದರ್‌ ಹೊರವಲಯದ ನಂದಿನಗರದಲ್ಲಿರುವ ಪಶುವೈದ್ಯಕೀಯ ವಿಶ್ವವಿದ್ಯಾಲಯದ ಆವರಣದಲ್ಲಿ ಅಕ್ಟೋಬರ್ 16ರಂದು ನಡೆದ...

ಬೀದರ್‌ | ವೈಜ್ಞಾನಿಕ ತಂತ್ರಜ್ಞಾನ ಅಳವಡಿಸಿಕೊಂಡು ಹೆಚ್ಚಿನ ಇಳುವರಿ ಪಡೆಯಿರಿ: ಜಾಬಾ ಜಗದೀಶ

ವೈಜ್ಞಾನಿಕವಾಗಿ ಅಭಿವೃದ್ಧಿಪಡಿಸಿದ ಬೆಳೆ ತಳಿಗಳನ್ನು ಬಳಸಿಕೊಳ್ಳುವ ಮೂಲಕ ರೈತರು ಕಡಿಮೆ ಅವಧಿಯಲ್ಲಿ...