ಬೀದರ | 83 ಕೆ.ಜಿ ಗಾಂಜಾ ಜಪ್ತಿ : ಓರ್ವ ಆರೋಪಿ ಬಂಧನ

Date:

ಬೀದರ ಜಿಲ್ಲೆಯ ಮನ್ನಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಕ್ರಮವಾಗಿ ಸಾಗಾಟ ನಡೆಸುತ್ತಿದ್ದವರ ಮೇಲೆ ವಿಶೇಷ ಕಾರ್ಯಾಚರಣೆ ನಡೆಸಿದ ಪೊಲೀಸರು ₹41.83 ಮೌಲ್ಯದ 83.67 ಕೆ.ಜಿ. ಗಾಂಜಾ ಜಪ್ತಿ ಮಾಡಿ ಓರ್ವ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.

- Advertisement -

ಮಾ.25ರಂದು ತಡರಾತ್ರಿ ಬಂದ ಖಚಿತ ಮಾಹಿತಿಯ ಮೇರೆಗೆ ಪೊಲೀಸರು ದಾಳಿ ನಡೆಸಿದರು. ಹೈದರಾಬಾದ್–ಮುಂಬೈ ಹೆದ್ದಾರಿಯ ಸರ್ವೀಸ್‌ ರಸ್ತೆಯಲ್ಲಿ ಅಕ್ರಮವಾಗಿ ಮಹಾರಾಷ್ಟ್ರದ ಪುಣೆಗೆ ಸಾಗಿಸುತ್ತಿದ್ದ ಗಾಂಜಾವನ್ನು ಪೊಲೀಸರು ಜಪ್ತಿ ಮಾಡಿ, ಓರ್ವ ಆರೋಪಿ ಬಂಧಿಸಿದ್ದಾರೆ. ಇನ್ನೋರ್ವ ಆರೋಪಿ ಓಡಿ ಹೋಗಿದ್ದಾನೆ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಪ್ರದೀಪ ಗುಂಟಿ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

‘ವಿಬಿ-ಜಿ ರಾಮ್‌ ಜಿ’ ಅನುಷ್ಠಾನದಲ್ಲಿ ಎಡವಟ್ಟು! ಕೂಲಿ ಸಿಗದೆ...

ಗ್ರಾಮೀಣ ಬಡ ಕುಟುಂಬಗಳಿಗೆ ಆಸರೆಯಾಗಬೇಕಿದ್ದ ‘ವಿಬಿ-ಜಿ ರಾಮ್ ಜಿ’ (VB-G RAM G) ಯೋಜನೆ, ಅನುಷ್ಠಾನದ ಎಡವಟ್ಟುಗಳಿಂದಾಗಿ ಗೊಂದಲದ ಗೂಡಾಗಿದೆ. ಕೆಲಸ ಮಾಡಿದರೂ ತಿಂಗಳುಗಟ್ಟಲೆ ಕೂಲಿ ಸಿಗದೆ ಬಡ ಕಾರ್ಮಿಕರು ಆರ್ಥಿಕ ಸಂಕಷ್ಟಕ್ಕೆ...

ಖಾಲಿಯಾಗುತ್ತಿವೆ ಉತ್ತರ ಕನ್ನಡದ ಹಳ್ಳಿಗಳು: 40ಕ್ಕೂ ಹೆಚ್ಚು ಗ್ರಾಮಗಳಲ್ಲಿ...

ಮಕ್ಕಳ ಗದ್ದಲ, ಕೃಷಿ ಚಟುವಟಿಕೆಯ ಹಿಗ್ಗು, ಹಬ್ಬ-ಹರಿದಿನಗಳ ಸಂಭ್ರಮದಿಂದ ಕಂಗೊಳಿಸುತ್ತಿದ್ದ ಹಳ್ಳಿಗಳು ಇವತ್ತು ನಿಶ್ಶಬ್ದವಾಗಿ ನಿಂತಿವೆ. ಪ್ರಕೃತಿಯ ಮಡಿಲಲ್ಲಿ ಕಟ್ಟಿಕೊಂಡಿದ್ದ ಬದುಕು ನಿಧಾನವಾಗಿ ಕರಗಿ ಹೋಗುತ್ತಿದೆ. ಊರು ತೊರೆದು ಪಟ್ಟಣ ಸೇರವುದು ಅನಿವಾರ್ಯವ...

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಈ ಸಂಬಂಧ NDPS ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದು, ಕಾನೂನು ಕ್ರಮ ಕೈಗೊಂಡಿದ್ದಾರೆ. ಬಂಧಿತ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಮನೆಗಳ್ಳತನ ಪ್ರಕರಣ : ಮೂವರ ಬಂಧನ

ಕಮಲನಗರ ಪಟ್ಟಣದ ಮನೆಯೊಂದರಲ್ಲಿ ಮಾ.9ರ ರಾತ್ರಿ ನಡೆದ ಮನೆಗಳ್ಳತನ ಪ್ರಕರಣವನ್ನು ಕಮಲನಗರ ಠಾಣೆಯ ಪೊಲೀಸರು ಭೇದಿಸಿ ಮೂವರು ಅಂತರರಾಜ್ಯ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಕಳ್ಳತನವಾದ ₹25.60 ಲಕ್ಷ ಮೌಲ್ಯದ 320 ಗ್ರಾಂ ಬಂಗಾರದ ಆಭರಣಗಳು, ₹1.72 ಲಕ್ಷ ಮೌಲ್ಯದ 690 ಗ್ರಾಂ ಬೆಳ್ಳಿಯ ಆಭರಣಗಳು ಹಾಗೂ ಕೃತ್ಯಕ್ಕೆ ಬಳಸಿದ ₹4.50 ಲಕ್ಷದ ಟಾಟಾ ಕಾರು ವಶಕ್ಕೆ ಪಡೆಯಲಾಗಿದೆ.

ಮನೆಗಳ್ಳತನ ಪ್ರಕರಣದ ತನಿಖೆ ಕೈಗೊಂಡ ಪೊಲೀಸರು ಸಿಸಿಟಿವಿ ದೃಶ್ಯಗಳ ಆಧಾರದ ಮೇಲೆ ಆರೋಪಿಗಳನ್ನು ಪತ್ತೆಹಚ್ಚಿ ಬಂಧಿಸಿದ್ದಾರೆ. ಬಂಧಿತರಿಂದ ಒಟ್ಟು ಸುಮಾರು ₹31.87 ಲಕ್ಷ ಮೌಲ್ಯದ ಆಸ್ತಿ ವಶಪಡಿಸಿಕೊಳ್ಳಲಾಗಿದೆ.

WhatsApp Image 2026 03 26 at 7.27.05 AM

ಈ ಕಾರ್ಯಾಚರಣೆಯಲ್ಲಿ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿ ಪ್ರಮುಖ ಪಾತ್ರ ವಹಿಸಿದ್ದು, ಅವರ ಕಾರ್ಯವನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ ಗುಂಟಿ ಅವರು ಪ್ರಶಂಸಿಸಿದ್ದಾರೆ.

ಇದನ್ನೂ ಓದಿ : ಬೀದರ ಜಿಲ್ಲೆಯಲ್ಲಿ ಪೆಟ್ರೋಲ್, ಡೀಸೆಲ್, ಎಲ್‌ಪಿಜಿ ಸಿಲಿಂಡರ್‌ ಕೊರತೆಯಿಲ್ಲ : ಡಿಸಿ ಸ್ಪಷ್ಟನೆ

ಪತ್ರಿಕಾಗೋಷ್ಠಿಯಲ್ಲಿ ಹೆಚ್ಚುವರಿ ಎಸ್ಪಿ ಚಂದ್ರಕಾಂತ ಪೂಜಾರಿ, ಡಿವೈಎಸ್ಪಿ ಶಿವಾನಂದ ಪವಾಡಶೆಟ್ಟಿ, ಕಮಲನಗರ ಠಾಣೆಯ ಸಿಪಿಐ ಶ್ರೀಕಾಂತ ಅಲ್ಲಾಪುರ, ಪಿಎಸ್‌ಐ ಆಶಾ, ಬೀದರ್‌ ಗ್ರಾಮೀಣ ಠಾಣೆ ಸಿಪಿಐ ಗುರುಪಾದ ಎಸ್. ಮನ್ನಳ್ಳಿ‌ ಠಾಣೆ ಪಿಎಸ್‌ಐ ನಂದಿನಿ ಸೇರಿದಂತೆ ಕಮಲನಗರ, ಮನ್ನಳ್ಳಿ ಠಾಣೆಯ ಸಿಬ್ಬಂದಿ ಪತ್ರಿಕಾಗೋಷ್ಠಿಯಲ್ಲಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಸವಕಲ್ಯಾಣ | ಮಡಿವಾಳ ಮಾಚಿದೇವರ ಕುಂಡ ಅಭಿವೃದ್ಧಿಗೆ ಮನವಿ

ಬಸವಕಲ್ಯಾಣ ನಗರದ ಶರಣ ಮಡಿವಾಳ ಮಾಚಿದೇವರ ಕುಂಡವನ್ನು ಸಮಗ್ರವಾಗಿ ಅಭಿವೃದ್ಧಿಪಡಿಸಿ, ಅಗತ್ಯ...

ಎಸ್‌ಐಆರ್ | ಭಾಲ್ಕಿ ಕ್ಷೇತ್ರದಲ್ಲಿ ಮುಸ್ಲಿಮರ ಮತ ಅಳಿಸುವ ಯತ್ನ, ನೂರಾರು ಅರ್ಜಿ ಪತ್ತೆ?

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ಸಮಗ್ರ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಇನ್ನೂ...

ಬೀದರ್‌ | ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮ

2026-27ನೇ ಸಾಲಿನ ಜಿಲ್ಲಾ ಮಟ್ಟದ ಯುವಜನೋತ್ಸವವನ್ನು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ...

ಬೀದರ್‌ | ಸ್ಮಶಾನ ಭೂಮಿ ಸಮಸ್ಯೆ ಬಗೆಹರಿಸದಿದ್ದರೆ ಡಿಸಿ ಕಚೇರಿ ಮುತ್ತಿಗೆ

ಬೀದರ್‌ ತಾಲೂಕಿನ ಅಮಲ್ಲಾಪುರ ಗ್ರಾಮದ ಸರ್ವೇ ನಂ.71ರ ಜಾಗವನ್ನು ದಲಿತ ಸಮುದಾಯದ...