ಬೀದರ್‌ | ಜೀವನದಲ್ಲಿ ಬುದ್ಧರ ತತ್ವ ಅಳವಡಿಸಿಕೊಳ್ಳಿ

Date:

ʼಅಹಂಕಾರ ತೊರೆದು ಕರುಣೆ ಮತ್ತು ಪ್ರೀತಿಯಿಂದ ಸರಳ ಜೀವನ ನಡೆಸುವಂತೆ ಭಗವಾನ್ ಬುದ್ಧರು ಸಂದೇಶ ನೀಡಿದರು. ಪ್ರತಿಯೊಬ್ಬರು ಬುದ್ಧರ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕುʼ ಎಂದು ಶಾಸಕ ಡಾ.ಶೈಲೇಂದ್ರ ಬೆಲ್ದಾಳೆ ಹೇಳಿದರು.

- Advertisement -

ಚಿಟಗುಪ್ಪಾ ತಾಲೂಕಿನ ಚಾಂಗಲೇರಾ ಗ್ರಾಮದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಯುವಕ ಸಂಘದ ವತಿಯಿಂದ ಆಯೋಜಿಸಿದ ಭಗವಾನ್ ಬುದ್ಧರ 2,570ನೇ ಜಯಂತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ʼಬುದ್ಧರು ಪ್ರತಿಯೊಬ್ಬರೂ ಸ್ವಯಂ ಪ್ರಕಾಶಿತರಾಗಲು ಮಾರ್ಗ ತೋರಿಸಿದ್ದಾರೆ. ಗುರಿ ಹಾಗೂ ಶ್ರದ್ಧೆಯಿಂದ ಪ್ರಯತ್ನಿಸಿದರೆ ಯಶಸ್ಸು ಸಾಧ್ಯʼ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

ʼಡಾ.ಬಿ.ಆರ್.ಅಂಬೇಡ್ಕರ್ ಅವರು ವೈಜ್ಞಾನಿಕ ಧಮ್ಮ ಪರಿಚಯಿಸಿದ್ದು, ಅವರ ಮಾರ್ಗದಲ್ಲಿ ನಾವು ನಡೆಯಬೇಕು. ಅಂಬೇಡ್ಕರ್ ಅವರು ಜ್ಞಾನ ಸಂಪಾದನೆಗಾಗಿ ಸಂಗ್ರಹಿಸಿದ 50 ಸಾವಿರಕ್ಕೂ ಅಧಿಕ ಪುಸ್ತಕಗಳನ್ನು ಬೃಹತ್‌ ಬಂಗಲೆ ಕಟ್ಟಿಸಿ ಗ್ರಂಥಾಲಯ ನಿರ್ಮಿಸಿದ್ದರು. ಪ್ರತಿಯೊಬ್ಬರೂ ತಮ್ಮ ಮನೆಯಲ್ಲಿ ಗ್ರಂಥಾಲಯ ಸ್ಥಾಪಿಸಿ ಓದುವ ಹವ್ಯಾಸ ಬೆಳೆಸಿಕೊಳ್ಳಬೇಕುʼ ಎಂದು ಸಲಹೆ ನೀಡಿದರು.

ಹಿರಿಯ ಚಿಂತಕ ಶಿವಶರಣಪ್ಪ ಹುಗ್ಗಿ ಪಾಟೀಲ ವಿಶೇಷ ಉಪನ್ಯಾಸ ನೀಡಿದ ಅವರು, ʼಬುದ್ಧ ಪ್ರಾಣಿ, ಪಕ್ಷಿ ಸೇರಿದಂತೆ ಸಕಲ ಜೀವಿಗಳಿಗೆ ಕರುಣೆ ತೋರಿದ ಪ್ರಥಮ ಗುರು. ಧ್ಯಾನ ಮಾರ್ಗವನ್ನು ವಿಶ್ವಕ್ಕೆ ಪರಿಚಯಿಸಿದ ಬುದ್ಧರು ಮಾನವ ಕಲ್ಯಾಣಕ್ಕಾಗಿ ದುಃಖದ ಮೂಲ ಕಾರಣವನ್ನು ವಿವರಿಸಿದ ಮಹಾನ್ ತತ್ವಜ್ಞಾನಿಯಾಗಿದ್ದರುʼ ಎಂದು ತಿಳಿಸಿದರು.

ಬುದ್ಧ ಬೆಳಕು ಟ್ರಸ್ಟ್ ಅಧ್ಯಕ್ಷ ಮಹೇಶ ಗೋರನಾಳಕರ್ ಮಾತನಾಡಿ, ʼಸಮಾಜದಲ್ಲಿ ಆರ್ಥಿಕವಾಗಿ ಹಿಂದುಳಿದವರಿಗೆ ನಿಜವಾದ ಸಹಾಯ ಮಾಡುವ ಮನೋಭಾವ ಬೆಳೆಸಿಕೊಳ್ಳಬೇಕು. ಮಹಾತ್ಮರನ್ನು ಮೆರವಣಿಗೆ, ಆರಾಧನೆಗೆ ಸೀಮಿತಗೊಳಿದೆ ಅವರ ತತ್ವಾದರ್ಶಗಳನ್ನು ನಿಜ ಜೀವನದಲ್ಲಿ ಮೈಗೂಡಿಸಿಕೊಳ್ಳುವುದು ಮುಖ್ಯವಾಗಿದೆʼ ಎಂದು ಅಭಿಪ್ರಾಯಪಟ್ಟರು.

ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ಪ್ರೇಮಸಾಗರ ದಾಂಡೆಕರ್ ಮಾತನಾಡಿ, ʼಗೌತಮ್ ಬುದ್ಧರ ತತ್ವಗಳನ್ನು ವಿಶ್ವವೇ ಅನುಸರಿಸುತ್ತಿದ್ದು, ನಮ್ಮ ಇತಿಹಾಸವನ್ನು ಅರಿತುಕೊಂಡು ಸಮಗ್ರ ಅಭಿವೃದ್ಧಿಯತ್ತ ಸಾಗಬೇಕುʼ ಎಂದು ಹೇಳಿದರು.

ತಾಳಮಡಗಿ ಪಿಯು ಕಾಲೇಜಿನ ಪ್ರಾಂಶುಪಾಲ ಹಣಮಂತರಾವ ಗೌಡಗಾಂವಕರ್ ಮಾತನಾಡಿ, ʼಬುದ್ಧ ಜಯಂತಿಯನ್ನು ವರ್ಷಕ್ಕೊಮ್ಮೆ ಆಚರಿಸುವುದಕ್ಕಿಂತ, ಬುದ್ಧರ ತತ್ವಗಳನ್ನು ಪ್ರತಿದಿನ ಜೀವನದಲ್ಲಿ ಅಳವಡಿಸಿಕೊಳ್ಳಬೇಕುʼ ಎಂದು ಸಲಹೆ ನೀಡಿದರು.

ಕಾರ್ಯಕ್ರಮದಲ್ಲಿ ಪೂಜ್ಯ ಭಂತೆ ಧಮ್ಮದೀಪ ಅವರ ಸಾನಿಧ್ಯದಲ್ಲಿ ತ್ರೀಶರಣ ಪಂಚಶೀಲ ಪಠಣ ನಡೆಯಿತು. ಡಾ.ಬಿ.ಆರ್.ಅಂಬೇಡ್ಕರ್ ಯುವಕ ಸಂಘದ ಅಧ್ಯಕ್ಷ ಸತೀಶ್ ಸಾಗರ ಅಧ್ಯಕ್ಷತೆ ವಹಿಸಿದ್ದರು.

ಇದನ್ನೂ ಓದಿ : ಸಿಲಿಂಡರ್‌ ಬೆಲೆ ಏರಿಕೆ | ಬಿಜೆಪಿಯ ಬಡಜನ ವಿರೋಧಿ ನೀತಿ ಮತ್ತೆ ಬಯಲು : ಈಶ್ವರ ಖಂಡ್ರೆ

ಬೇಮಳಖೇಡಾ ಪೊಲೀಸ್ ಠಾಣೆಯ ಪಿಎಸ್‌ಐ ಸವೀತಾ ಪ್ರಿಯಾಂಕ್, ಜೈಸಿಂಗ್ ರಾಠೋಡ, ಬಸವರಾಜ ಪವಾರ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು. ಮಿಥುನ್ ವರ್ಮಾ ನಿರೂಪಿಸಿದರು. ಅರ್ಜುನ ಶರ್ಮಾ ಸ್ವಾಗತಿಸಿದರು. ಪ್ರಕಾಶ ಪ್ರಸಾದ್ ವಂದಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮುದ್ದೇಬಿಹಾಳ | ದಾಸೋಹಿ ರೈತ ಉತ್ಪಾದಕ ಸಹಕಾರಿ ಸಂಘದ ಆರ್ಥಿಕ ಚಟುವಟಿಕೆ: ಗವಿಸಿದ್ದೇಶ್ವರ ಶ್ರೀಗಳಿಂದ ಚಾಲನೆ

ರೈತರೇ ಮಾಲೀಕರಾಗಿ, ರೈತರ ಆರ್ಥಿಕ ಸಬಲೀಕರಣವನ್ನೇ ಕೇಂದ್ರವಾಗಿಟ್ಟುಕೊಂಡು ಅಸ್ತಿತ್ವಕ್ಕೆ ಬಂದಿರುವ ದಾಸೋಹಿ...

ಸಮುದ್ರದಲ್ಲಿ ಅಲೆಗಳು ಭೋರ್ಗರೆಯುತ್ತಿರುವಾಗ ಈಜುವುದು ನನಗಿಷ್ಟ: ವೈರಲ್ ಆಯ್ತು ರಾಹುಲ್ ಗಾಂಧಿ ‘X’ ಪೋಸ್ಟ್

ಸಮುದ್ರದಲ್ಲಿ ಅಲೆಗಳು ಭೋರ್ಗರೆಯುತ್ತಿರುವಾಗ ಈಜುವುದು ನನಗಿಷ್ಟ ಎಂದು ಕಾಂಗ್ರೆಸ್ ನಾಯಕ ಹಾಗೂ...

ಗವಿಸಿದ್ದೇಶ್ವರ ಸ್ವಾಮೀಜಿ ದಸರಾ ಉದ್ಘಾಟನೆ ಆಹ್ವಾನ ತಿರಸ್ಕರಿಸಿದ್ದಾರೆಂಬ ಸುಳ್ಳುಸುದ್ದಿ: ತಪ್ಪಿತಸ್ಥನ ವಿರುದ್ಧ FIR

ಗವಿಮಠದ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ ಮೈಸೂರು ದಸರಾ ಮಹೋತ್ಸವದ ಉದ್ಘಾಟನೆ ಆಹ್ವಾನವನ್ನು...