ಬೀದರ್‌ | ಡಿಕೆಶಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ರೈತರ ಸಾಲ ಮನ್ನಾ ಘೋಷಿಸಲಿ : ಮಲ್ಲಿಕಾರ್ಜುನ ಸ್ವಾಮಿ

Date:

ಡಿ.ಕೆ.ಶಿವಕುಮಾರ ಅವರು ಜೂ. 3ರಂದು ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ನಾಡಿನ ರೈತರ ಸಾಲ ಮನ್ನಾ ಘೋಷಿಸಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಸಂಯುಕ್ತ ಕಿಸಾನ್‌ ಮೋರ್ಚಾದ ಮಲ್ಲಿಕಾರ್ಜುನ ಸ್ವಾಮಿ ತಿಳಿಸಿದರು.

- Advertisement -

ನಗರದ ಜಿಲ್ಲಾ ಪತ್ರಿಕಾ ಭವನದಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, “ಜೂ. 3 ರಂದು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುತ್ತಿರುವ ಡಿ.ಕೆ. ಶಿವಕುಮಾರ ಅವರಿಗೆ ಬೀದರ ಜಿಲ್ಲೆಯ ರೈತರ ಪರವಾಗಿ ಅಭಿನಂದನೆ ಸಲ್ಲಿಸುತ್ತೇವೆ. ಪ್ರಮಾನ ವಚನ ಸ್ವೀಕರಿಸಿದ ಮೊದಲನೇ ಆದ್ಯತೆಯಾಗಿ ರೈತರ ಸಂಪೂರ್ಣ ಸಾಲಮನ್ನಾ ಘೋಷಿಸುವ ಮುಖಾಂತರ ರೈತ ನಾಯಕನಾಗಿ ರೂಪಗೊಳ್ಳಬೇಕು” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

“ಡಿ.ಕೆ.ಶಿವಕುಮಾರ ಅವರ ಸಚಿವ ಸಂಪುಟದಲ್ಲಿ ಸೇರ್ಪಡೆಯಾಗುವ ಎಲ್ಲ ಸಚಿವರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಭ್ರಷ್ಟಚಾರ ರಹಿತ ಪಾರದರ್ಶಕ ಆಡಳಿತ ನಡೆಸಬೇಕು. ಬಡವರ, ಕಾರ್ಮಿಕರ, ರೈತರ ಶ್ರೇಯೋಭಿವೃದ್ಧಿಗಾಗಿ ಸರ್ಕಾರ ವಿನೂತನ ಯೋಜನೆಗಳನ್ನು ಜಾರಿಗೊಳಿಸಬೇಕು” ಎಂದರು.

“ಕಾರ್ಖಾನೆಗಳಿಗೆ ಕಬ್ಬು ಸಾಗಿಸಿದ ರೈತರಿಗೆ ಬಾಕಿ ಹಣ ಉಳಿಸಿಕೊಂಡ ಕಾರ್ಖಾನೆಗಳು ಶೀಘ್ರದಲ್ಲೇ ಹಣ ಪಾವತಿಸಲು ಜಿಲ್ಲಾಡಳಿತ ಕ್ರಮ ವಹಿಸಬೇಕು. ಮುಂಗಾರು ಹಂಗಾಮು ಆರಂಭವಾಗಿದ್ದು ಜಿಲ್ಲೆಯಲ್ಲಿ ರಸಗೊಬ್ಬರದ ಕೊರತೆ ಎದ್ದು ಕಾಣಿಸುತ್ತಿದೆ. ಇದರಿಂದ ರೈತರು ಆತಂಕಕ್ಕೆ ಒಳಗಾಗಿದ್ದಾರೆ. ಪಿಕೆಪಿಎಸ್, ಮಾರುಕಟ್ಟೆಯಲ್ಲಿ ಗೊಬ್ಬರ ಕೊರತೆ ಆಗದಂತೆ ಕ್ರಮಕೈಗೊಳ್ಳಬೇಕು. ಅನ್ನದಾತರಿಗೆ ಎಫ್‌ಐಡಿ ಹಾಗೂ ಇತರೆ ತಾಂತ್ರಿಕ ತೊಂದರೆ ನೀಡದೆ ನೇರವಾಗಿ ಬೀಜ, ಗೊಬ್ಬರ ವಿತರಣೆಗೆ ಅನುವು ಮಾಡಿಕೊಡಬೇಕು” ಎಂದು ಆಗ್ರಹಿಸಿದರು.

“ಕೃಷಿ ಚಟುವಟಿಕೆ ಕೈಗೊಳ್ಳಲು ಬ್ಯಾಂಕ್ ಸಾಲದ ನೀತಿಯಲ್ಲಿ ಸಿವಿಲ್ ಸ್ಕೋರ್ ನೆಪದಲ್ಲಿ ರೈತರಿಗೆ ಸಾಲ ಸಿಗದೇ ಒದ್ದಾಡುತ್ತಿದ್ದಾರೆ. ಸರಳ ರೀತಿಯಲ್ಲಿ ಕೃಷಿ ಆಧಾರಿತ ಸಾಲವಾಗಿರುವುದರಿಂದ ರೈತರಿಗೆ ಸಿವಿಲ್ ಸ್ಕೋರ್ ವ್ಯವಸ್ಥೆಯಿಂದ ಹೊರಗಿಟ್ಟು ಸರಳ ಸಾಲ ವಿತರಿಸಬೇಕು. ಜಿಲ್ಲೆಯ ಜೀವನಾಡಿಯಾಗಿರುವ ಬೀದರ್‌ ಸಹಕಾರ ಸಕ್ಕರೆ ಕಾರ್ಖಾನೆಯನ್ನು ಸರ್ಕಾರವು ರೈತರ ಹಾಗೂ ಕಾರ್ಮಿಕರ ಹಿತದೃಷ್ಟಿಯಿಂದ ಯಾವುದಾದರೂ ವ್ಯವಸ್ಥೆಯಿಂದಾಗಿ ಪುನರಾಂಭಿಸಲು ಕ್ರಮಕೈಗೊಳ್ಳಬೇಕು. ಇದಕ್ಕೆ ಜಿಲ್ಲೆಯ ಎಲ್ಲಾ ಸಂಸದ, ಶಾಸಕರು ರೈತರ ಹಿತದೃಷ್ಟಿಯಿಂದ ಪಕ್ಷಭೇದ ಮರೆತು ಕಾರ್ಖಾನೆ ಪುನಾರಂಭಿಸಲು ಕೈಜೋಡಿಸಬೇಕು” ಎಂದರು.

ಇದನ್ನೂ ಓದಿ : ಬೀದರ್‌ | JEE ಫಲಿತಾಂಶ : ಚನ್ನಬಸವೇಶ್ವರ ಗುರುಕುಲದ 64 ವಿದ್ಯಾರ್ಥಿಗಳು ಐಐಟಿ ಪ್ರವೇಶಕ್ಕೆ ಅರ್ಹತೆ

ಪತ್ರಿಕಾ ಗೋಷ್ಠಿಯಲ್ಲಿ ಪ್ರಮುಖರಾದ ಬಾಬುರಾವ ಹೊನ್ನಾ, ಖಾಸೀಂ ಅಲಿ, ಬಸವರಾಜ ಅಷ್ಟೂರ, ಶಿವರಾಜ ಪಾಟೀಲ ಅತಿವಾಳ, ವೀರಾರೆಡ್ಡಿ ಪಾಟೀಲ್, ಕೋಂಡಿಬಾರಾವ ಪಾಂಡ್ರೆ, ವಿಠಲರೆಡ್ಡಿ ಅಣದೂರು, ಧೂಳಪ್ಪಾ ಸೋರಳ್ಳೆ, ಶಿವರಾಯ ಮುಧಾಳೆ, ಮಲ್ಲಿಕಾರ್ಜುನ ಬಿರಾದಾರ ಸಂಗಮ, ಬಾಬುರಾವ ಭೋಸ್ಥೆ, ವಿಶ್ವನಾಥ ಧರಣೆ, ವಿಜಯಕುಮಾರ ಬಾವಗಿ, ನಜೀರ್ ಅಹ್ಮದ್, ರಾಜಕುಮಾರ ಸ್ವಾಮಿ , ಶಫೀಯೋದ್ದೀನ್ ಸೇರಿದಂತೆ ಇತರರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮುಂಬೈ ಗರ್ಬಾ ಉತ್ಸವಕ್ಕೆ ಮುಸ್ಲಿಮರ ಪ್ರವೇಶಕ್ಕೆ ನಿರ್ಬಂಧ: ತಿಲಕ, ಆಧಾರ್ ಕಾರ್ಡ್ ಹಾಗೂ ಕುಟುಂಬ ಸಮೇತ ಆಗಮನ ಕಡ್ಡಾಯ!

ಮುಂಬೈನ ಬೋರಿವಲಿಯಲ್ಲಿ ಆಯೋಜಿಸಲಾಗುತ್ತಿರುವ ಮುಂಬರುವ ನವರಾತ್ರಿ ಗರ್ಬಾ ಮತ್ತು ದಾಂಡಿಯಾ ಉತ್ಸವದಲ್ಲಿ...

ಯುಪಿ ಚುನಾವಣೆ | ಪ್ರತಿ ಕ್ಷೇತ್ರದಲ್ಲೂ ಬಿಜೆಪಿ ಮತಗಳನ್ನು 27,000 ಕಡಿತಗೊಳಿಸುತ್ತೇವೆ: ಅಖಿಲೇಶ್ ಪ್ರತಿಜ್ಞೆ

2027ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಎಲ್ಲ ಪಕ್ಷಗಳು ಸಿದ್ದತೆಯಲ್ಲಿ ತೊಡಗಿವೆ....

ಅಮೃತಸರದಲ್ಲಿ ಕಳೆದುಹೋಗಿ ಗಯಾದಲ್ಲಿ ಪತ್ತೆ; ಎಐ ತಂತ್ರಜ್ಞಾನದ ನೆರವಿನಿಂದ ಕುಟುಂಬವನ್ನು ಸೇರಿದ ವ್ಯಕ್ತಿ

ಪಂಜಾಬ್‌ನಿಂದ ದಾರಿ ತಪ್ಪಿ 1,200 ಕಿಲೋಮೀಟರ್‌ಗೂ ಹೆಚ್ಚು ದೂರದ ಬಿಹಾರ ತಲುಪಿದ್ದ...

ಕೊಲ್ಹಾರ | ಶಾಸಕರಿಲ್ಲದ ಪ್ರಜಾಸೇವಾ ಆಂದೋಲನ: ಅಹವಾಲು ಹೊತ್ತುಬಂದವರಿಗೆ ನಿರಾಸೆ, ಅಧಿಕಾರಿಗಳಿಂದ ಪರಿಹಾರದ ಭರವಸೆ

ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದಲ್ಲಿ ಶಾಸಕರಿಲ್ಲದೆ ಪ್ರಜಾಸೇವಾ ಆಂದೋಲನ ನಡೆಯಿತು. ಇದರಿಂದಾಗಿ...