ಬೀದರ್‌ | ಜನವರಿಯಲ್ಲಿ ಅಗ್ನಿವೀರ ಸೇನಾ ಭರ್ತಿ ರ‍್ಯಾಲಿ

Date:

ಬೀದರ್‌ ನಗರದಲ್ಲಿ 2027ರ ಜನವರಿ ತಿಂಗಳಲ್ಲಿ 15 ದಿನಗಳ ಕಾಲ ಅಗ್ನಿವೀರ ಸೇನಾ ಭರ್ತಿ ರ‍್ಯಾಲಿ ನಡೆಯಲಿದ್ದು, ರ‍್ಯಾಲಿಯನ್ನು ಸುವ್ಯವಸ್ಥಿತವಾಗಿ ನಡೆಸಲು ಜಿಲ್ಲಾಡಳಿತದಿಂದ ಅಗತ್ಯ ಸಹಕಾರ ಮತ್ತು ಸೌಲಭ್ಯಗಳನ್ನು ಕಲ್ಪಿಸಲಾಗುವುದು ಎಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ತಿಳಿಸಿದರು.

- Advertisement -

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಸೇನಾ ಭರ್ತಿ ರ‍್ಯಾಲಿಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, “ಕಲ್ಯಾಣ ಕರ್ನಾಟಕದ ವಿವಿಧ ಜಿಲ್ಲೆಗಳಿಂದ ಸುಮಾರು 12,000 ಅಭ್ಯರ್ಥಿಗಳು ಸೇನಾ ಭರ್ತಿ ರ‍್ಯಾಲಿಯಲ್ಲಿ ಪಾಲ್ಗೊಳ್ಳಲಿದ್ದಾರೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಬೆಳ್ಳಿತೆರೆಯ ಮೇಲಿನ ಬಣ್ಣ: ಚಿತ್ರ ಚೌಕಟ್ಟಿನಲ್ಲಿ ರಂಗಿನಾಟ

ಸಿನೆಮಾ ಪರದೆಯ ಮೇಲಿನ ಬಣ್ಣವು ಸೌಂದರ್ಯಪ್ರಜ್ಞೆಯಷ್ಟೇ ಅಲ್ಲ, ತಾಂತ್ರಿಕ ಮಿತಿ ಮತ್ತು ರಾಜಕೀಯದ ಭಾಗವೂ ಹೌದು. ಆರಂಭದ ಕಪ್ಪು-ಬಿಳುಪಿನ ನೆರಳುಗಳಿಂದ ಇಂದಿನ ಅಲ್ಟ್ರಾ-ಸ್ಯಾಚುರೇಟೆಡ್ ಪರದೆಯವರೆಗೆ, ಸಿನೆಮಾದ ಸೌಂದರ್ಯ, ತಂತ್ರಜ್ಞಾನ ಮತ್ತು ಅಧಿಕಾರ ರಾಜಕಾರಣವನ್ನು...

ರ‍್ಯಾಲಿ ನಡೆಯುವ ನೆಹರು ಕ್ರೀಡಾಂಗಣದಲ್ಲಿ ಸ್ವಚ್ಛತೆ, ಅಭ್ಯರ್ಥಿಗಳ ಅನುಕೂಲಕ್ಕಾಗಿ ಬಸ್ ಸಂಚಾರ, ವೈದ್ಯಕೀಯ ತಂಡ, ಅಂಬುಲೆನ್ಸ್, ಕುಡಿಯುವ ನೀರು, ಬ್ಯಾರಿಕೇಡ್, ಭದ್ರತೆ, ಇಂಟರ್‌ನೆಟ್, ವಿದ್ಯುತ್, ಶಾಮಿಯಾನ, ಟೆಂಟ್ ಹಾಗೂ ಅಗ್ನಿಶಾಮಕ ವಾಹನ ಸೇರಿದಂತೆ ಅಗತ್ಯ ವ್ಯವಸ್ಥೆಗಳನ್ನು ಸಮರ್ಪಕವಾಗಿ ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚಿಸಿದರು.

ಬೆಳಗಾವಿಯ ಡೈರೆಕ್ಟರ್ ಆರ್ಮಿ ರಿಕ್ರೂಟಿಂಗ್ ಕಚೇರಿಯ ಕರ್ನಲ್ ಜಸವೀರಸಿಂಗ್ ಎಸ್.ಎಂ. ಮಾತನಾಡಿ, “ಪ್ರತಿ ದಿನ 800 ರಿಂದ 1,000 ಅಭ್ಯರ್ಥಿಗಳು ದೈಹಿಕ ಹಾಗೂ ವೈದ್ಯಕೀಯ ಪರೀಕ್ಷೆಗೆ ಒಳಪಡುತ್ತಾರೆ. ಬೀದರ, ಕಲಬುರಗಿ, ಯಾದಗಿರಿ, ರಾಯಚೂರ, ಕೊಪ್ಪಳ ಹಾಗೂ ಬೆಳಗಾವಿ ಜಿಲ್ಲೆಗಳ ಸುಮಾರು 12,100 ಅಭ್ಯರ್ಥಿಗಳು ಈ ರ‍್ಯಾಲಿಯಲ್ಲಿ ಪಾಲ್ಗೊಳ್ಳಲಿದ್ದಾರೆ. ಸೇನಾ ಭರ್ತಿ ರ‍್ಯಾಲಿಯು ಯಶಸ್ವಿಯಾಗಲು ಜಿಲ್ಲಾಡಳಿತ ಸಹಕಾರ ನೀಡಬೇಕು” ಎಂದು ಕೋರಿದರು.

ಜಿಲ್ಲಾ ಪಂಚಾಯತ್ ಸಿಇಒ ಗಿತ್ತೆ ಮಾಧವ ವಿಠ್ಠಲರಾವ್ ಅವರು ಮಾತನಾಡಿ ನೆಹರು ಕ್ರೀಡಾಂಗಣದ ಸ್ವಚ್ಛತೆಗೆ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಇದನ್ನೂ ಓದಿ : ಔರಾದ್ : ನಕಲಿ ವೈದ್ಯಕೀಯ ವೃತ್ತಿ: ಕ್ಲಿನಿಕ್ ಸೀಜ್

ಸಭೆಯಲ್ಲಿ ಡಿವೈಎಸ್‌ಪಿ ದಾದಾಪೀರ್ ಮುಲ್ಲಾ, ಸೇನಾ ಭರ್ತಿ ಕಚೇರಿಯ ಹವಾಲ್ದಾರ್ ಧೀರಜ್ ಭಂಡಾರಿ, ಸುಭೇದಾರ್ ಮೇಜರ್ ಮನೋಜ್ ಕುಮಾರ್ ಶರ್ಮಾ, ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘದ ಅಧ್ಯಕ್ಷ ರಾಜಕುಮಾರ್ ಲದ್ದೆ, ಲೋಕೋಪಯೋಗಿ ಇಲಾಖೆಯ ಇಇ ಕಾಮಶೆಟ್ಟಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹನೂರು | ರಾತ್ರಿಪೂರ್ತಿ ಸುರಿದ ಭಾರೀ ಮಳೆ: ಮನೆ, ಅಂಗಡಿಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿ

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಬಹುತೇಕ ಕಡೆ ರಾತ್ರಿಪೂರ್ತಿ ಭಾರೀ ಮಳೆಯಾಗಿದ್ದು,...

ಉತ್ತರ ಪ್ರದೇಶ ಚುನಾವಣೆ: ಯಾವುದೇ ಪಕ್ಷ ಸೇರದೆ, ಜನಪ್ರತಿನಿಧಿಯಾಗಿ ಕೆಲಸ ಮಾಡುತ್ತೇನೆ: ಮಾಜಿ ಐಎಎಸ್ ದಿವ್ಯಾ ಮಿತ್ತಲ್

ಇತ್ತೀಚೆಗೆ, ತಮ್ಮ ಆಡಳಿತಾತ್ಮಕ ಸೇವೆಯ (ಐಎಎಸ್‌) ಹುದ್ದೆಗೆ ರಾಜೀನಾಮೆ ನೀಡಿದ್ದ ಉತ್ತರ...

ಬೆಂಗಳೂರು | 700 ಕೆ.ಜಿ ಪಿಒಪಿ ಗಣೇಶ ಮೂರ್ತಿ ತ್ಯಾಜ್ಯ ತೆರವುಗೊಳಿಸಿದ ‘ವಿ ಆರ್ ಆರಂಭ್’

ಬೆಂಗಳೂರಿನ ಸರ್ಜಾಪುರ ಸಮೀಪದ ಹಲನಾಯಕನಹಳ್ಳಿ ಕೆರೆಯಲ್ಲಿ ಸಂಗ್ರಹವಾಗಿದ್ದ ಪ್ಲಾಸ್ಟರ್ ಆಫ್ ಪ್ಯಾರಿಸ್...

ಮಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬಳಿಕ ಬಂಧನವಾಗಿದ್ದ ಕಾಂಗ್ರೆಸ್‌ ಅಭ್ಯರ್ಥಿ ಪ್ರಧಾನ್‌ಗೆ ಮಧ್ಯಂತರ ಜಾಮೀನು

2007ರ ನಂದಿಗ್ರಾಮ್ ಭೂಸ್ವಾಧೀನ ವಿರೋಧಿ ಹೋರಾಟಕ್ಕೆ ಸಂಬಂಧಿಸಿದ ಕೊಲೆ ಪ್ರಕರಣಗಳಲ್ಲಿ ಆರೋಪಿಯಾಗಿ...