ಬೀದರ್‌ | ಸೋಯಾಬೀನ್ ಬಿತ್ತನೆಗೆ ಕೃಷಿ ಇಲಾಖೆ ಸಲಹೆ

Date:

ಪ್ರಸ್ತುತ ಜಿಲ್ಲೆಯ ಕೆಲವು ಪ್ರದೇಶಗಳಲ್ಲಿ ಆರಂಭಿಕ ಮಳೆಯಾಗಿದ್ದರೂ ಮುಂಗಾರು ಮಳೆ ಇನ್ನೂ ಸಂಪೂರ್ಣವಾಗಿ ಸ್ಥಿರವಾಗಿಲ್ಲ. ಮುಂದಿನ ಕೆಲವು ದಿನಗಳಲ್ಲಿ ಮುಂಗಾರು ಮಳೆ ವಿಳಂಬವಾಗುವ ಸಾಧ್ಯತೆ ಇರುವುದರಿಂದ ರೈತರು ಆತುರದಲ್ಲಿ ಸೋಯಾಬೀನ್ ಬಿತ್ತನೆ ಮಾಡದೇ ಹವಾಮಾನ ಪರಿಸ್ಥಿತಿಯನ್ನು ಗಮನಿಸಿ ಸೂಕ್ತ ನಿರ್ಧಾರ ಕೈಗೊಳ್ಳಬೇಕು ಎಂದು ಬೀದರನ ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.

- Advertisement -

ಸೋಯಾಬೀನ್ ಬೆಳೆಯಲ್ಲಿ ಉತ್ತಮ ಮೊಳಕೆ, ಸಮಾನ ಗಿಡಗಳ ಸ್ಥಾಪನೆ ಹಾಗೂ ಹೆಚ್ಚಿನ ಇಳುವರಿ ಪಡೆಯಲು ಕೆಲವು ಪ್ರಮುಖ ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸುವುದು ಅಗತ್ಯವಾಗಿದೆ. ಮೊದಲ ಮಳೆಯಾದ ತಕ್ಷಣ ಬಿತ್ತನೆ ಮಾಡುವುದನ್ನು ತಪ್ಪಿಸಬೇಕು. ಒಂದು ಅಥವಾ ಎರಡು ಮಳೆಯ ನಂತರ ದೀರ್ಘಕಾಲ ಮಳೆ ಬಾರದಿದ್ದರೆ ಬೀಜ ಮೊಳಕೆಯಲ್ಲಿ ಸಮಸ್ಯೆ ಉಂಟಾಗುವ ಜೊತೆಗೆ ಬೆಳೆ ಒಣಗುವ ಸಾಧ್ಯತೆಯೂ ಇದೆ. ಆದ್ದರಿಂದ ಮುಂಗಾರು ಸ್ಥಿರಗೊಂಡು ನಿರಂತರ ಮಳೆಯಾದ ಬಳಿಕ ಬಿತ್ತನೆ ಕೈಗೊಳ್ಳುವುದು ಸೂಕ್ತವಾಗಿದೆ. ಮಣ್ಣಿನಲ್ಲಿ ಕನಿಷ್ಠ 3 ರಿಂದ 5 ಸೆಂ.ಮೀ ಆಳದವರೆಗೆ ಸಮರ್ಪಕ ತೇವಾಂಶ ಇರುವುದನ್ನು ಖಚಿತಪಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಮೆರಿಕದ ಮಧ್ಯಂತರ ಚುನಾವಣೆ: ಬೆಲೆ ಏರಿಕೆ, ಇರಾನ್ ಯುದ್ಧದ...

ಅಮೆರಿಕದಲ್ಲಿ ಏರುತ್ತಿರುವ ಪೆಟ್ರೋಲ್ ಬೆಲೆ, ದುಬಾರಿಯಾಗುತ್ತಿರುವ ದಿನಬಳಕೆಯ ವಸ್ತುಗಳು ಹಾಗೂ ಇರಾನ್ ವಿರುದ್ಧದ ಯುದ್ಧದ ಆರ್ಥಿಕ ಪರಿಣಾಮಗಳು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಡಳಿತಕ್ಕೆ ದೊಡ್ಡ ರಾಜಕೀಯ ಸವಾಲಾಗಿವೆ. ನವೆಂಬರ್ 3ರಂದು ನಡೆಯಲಿರುವ ಮಧ್ಯಂತರ...

ಖಾಲಿದ್‌ರಂತೆ ಸಿಜೆಪಿ ನಾಯಕರನ್ನೂ ದೀರ್ಘ ಜೈಲುವಾಸದ ಸುಳಿಯಲ್ಲಿ ಸಿಲುಕಿಸುವ...

ಚುನಾವಣಾ ಆಯೋಗದ ಅಕ್ರಮ ಪ್ರಶ್ನಿಸಿದ ಸಿಜೆಪಿ ನಾಯಕರ ವಿರುದ್ಧ ಸರಣಿ ದೂರು ದಾಖಲಿಸಲಾಗುತ್ತಿದೆ. ಮೋದಿ ಸರ್ಕಾರದ ಅವಧಿಯಲ್ಲಿ ‘ವಿಚಾರಣೆಯೇ ಒಂದು ಶಿಕ್ಷೆ’ ಎನ್ನುವ ತಂತ್ರ ಪುನರಾವರ್ತನೆಯಾಗುತ್ತಿದೆಯೇ? ಉಮರ್‌ ಖಾಲಿದ್‌ ರೀತಿಯಲ್ಲೇ ಸೌರವ್ ದಾಸ್,...

ಎಚ್ಚೆತ್ತುಕೊಳ್ಳುತ್ತಿವೆ DMK, YSRCP; ಡಿಲಿಮಿಟೇಷನ್‌ ಮಸೂದೆ ಮತ್ತೆ ಸೋಲುವ...

ಮೋದಿಯವರ ಅಹಂಕಾರದ ಆಡಳಿತಕ್ಕೆ ದಕ್ಷಿಣ ಭಾರತವು ಎಂದಿಗೂ ತಲೆಬಾಗುವುದಿಲ್ಲ, ಮತ್ತು ಈ ಬಾರಿಯ ಅವರ ಹತಾಶೆಯ ರಾಜಕೀಯ ಕುತಂತ್ರಗಳು ಅವರ ಪಾಲಿಗೆ ತಿರುಗುಬಾಣವಾಗಿ ದೇಶದ ಪ್ರಜಾಪ್ರಭುತ್ವವು ಗೆಲ್ಲುವುದು ಖಚಿತ ಮಹಿಳಾ ಮೀಸಲಾತಿ ಎಂಬ ಪವಿತ್ರ...

ಮುಂಗಾರು ವಿಳಂಬವಾದಲ್ಲಿ ರೈತರು ಭೂಮಿಯನ್ನು ಮುಂಚಿತವಾಗಿಯೇ ಸಿದ್ಧಪಡಿಸಿ ಬಿತ್ತನೆಗೆ ಸಜ್ಜುಗೊಳಿಸಬೇಕು. ಹವಾಮಾನ ಮುನ್ಸೂಚನೆಯನ್ನು ದಿನನಿತ್ಯ ಪರಿಶೀಲಿಸುತ್ತಿರಬೇಕು. ತೇವಾಂಶ ಸಂರಕ್ಷಣೆಗಾಗಿ ಅನಗತ್ಯ ಉಳುಮೆಯನ್ನು ತಪ್ಪಿಸಿ, ಮೊದಲ ಮಳೆಯ ತೇವಾಂಶವನ್ನು ಉಳಿಸಿಕೊಳ್ಳಲು ಅಂತರ ಬೇಸಾಯ ಅಥವಾ ಮಣ್ಣಿನ ಮೇಲ್ಮೈ ಸಡಿಲಗೊಳಿಸುವ ಕ್ರಮಗಳನ್ನು ಅನುಸರಿಸಬೇಕು ಎಂದರು.

ಸುಮಾರು 50 ರಿಂದ 75 ಮಿ.ಮೀ. ಪರಿಣಾಮಕಾರಿ ಮಳೆ ಬಂದ ನಂತರ ಬಿತ್ತನೆ ಮಾಡುವುದು ಉತ್ತಮ. ಕೇವಲ ಮೇಲ್ಮೈ ತೇವಾಂಶವನ್ನು ಮಾತ್ರ ನೀಡುವಷ್ಟು ಮಳೆಯಾದರೆ ಬಿತ್ತನೆಯನ್ನು ಮುಂದೂಡುವುದು ಒಳಿತು. ಸೋಯಾಬೀನ್ ಬೀಜ ಮೊಳಕೆಗೆ 25 ರಿಂದ 30 ಡಿಗ್ರಿ ಸೆಲ್ಸಿಯಸ್ ತಾಪಮಾನ ಸೂಕ್ತವಾಗಿದ್ದು, ಅತಿಯಾದ ಉಷ್ಣತೆ ಹಾಗೂ ಕಡಿಮೆ ತೇವಾಂಶದಿಂದ ಮೊಳಕೆ ಪ್ರಮಾಣ ಕಡಿಮೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಿದ್ದಾರೆ.

ಬಿತ್ತನೆ ಮಾಡಿದ ನಂತರ 7 ರಿಂದ 10 ದಿನಗಳವರೆಗೆ ಮಳೆ ಬಾರದಿರುವ ಸಾಧ್ಯತೆ ಕಂಡುಬಂದಲ್ಲಿ ಮೊಳಕೆಯಾದ ಪರಿಸ್ಥಿತಿಯನ್ನು ಗಮನಿಸಿ ಮುಂದಿನ ಕ್ರಮಗಳನ್ನು ಕೈಗೊಳ್ಳಬೇಕು. ಬೀಜೋಪಚಾರವನ್ನು ಕಡ್ಡಾಯವಾಗಿ ಮಾಡಬೇಕು. ಶಿಲೀಂಧ್ರನಾಶಕ ಹಾಗೂ ಜೈವಿಕ ಗೊಬ್ಬರಗಳೊಂದಿಗೆ ಬೀಜ ಸಂಸ್ಕರಣೆ ಮಾಡಿದರೆ ಬೀಜದ ಆರೋಗ್ಯ ಮತ್ತು ಆರಂಭಿಕ ಬೆಳವಣಿಗೆ ಉತ್ತಮವಾಗಿರುತ್ತದೆ. ಮುಂದಿನ ದಿನಗಳಲ್ಲಿ ಏಕಾಏಕಿ ಹೆಚ್ಚಿನ ಮಳೆಯಾದಲ್ಲಿ ಹೊಲದಲ್ಲಿ ನೀರು ನಿಲ್ಲದಂತೆ ಸೂಕ್ತ ಕಾಲುವೆ ವ್ಯವಸ್ಥೆ ಮಾಡಿಕೊಳ್ಳಬೇಕು. ಮುಂಗಾರು ಇನ್ನಷ್ಟು ವಿಳಂಬವಾದಲ್ಲಿ ಸ್ಥಳೀಯ ಕೃಷಿ ವಿಜ್ಞಾನಿಗಳ ಸಲಹೆಯಂತೆ ಕಡಿಮೆ ಅವಧಿಯ ಸೋಯಾಬೀನ್ ತಳಿಗಳನ್ನು ಆಯ್ಕೆ ಮಾಡಬಹುದು ಎಂದು ತಿಳಿಸಿದ್ದಾರೆ.

ಇದನ್ನೂ ಓದಿ : ಬೀದರ್‌ | ಡಿಕೆಶಿ ಸಂಪುಟದಲ್ಲಿ ಈಶ್ವರ ಖಂಡ್ರೆಗೆ ಒಲಿದ ಸಚಿವ ಸ್ಥಾನ

ಒಟ್ಟಾರೆಯಾಗಿ ಬೀದರ್ ಜಿಲ್ಲೆಯಲ್ಲಿ ಪ್ರಸ್ತುತ ಚದುರಿದ ಮಳೆ ಹಾಗೂ ಗುಡುಗು-ಮಿಂಚಿನ ಸಾಧ್ಯತೆ ಕಂಡುಬರುತ್ತಿದ್ದು, ಮುಂಗಾರು ಇನ್ನೂ ಸ್ಥಿರವಾಗದ ಹಿನ್ನೆಲೆಯಲ್ಲಿ ರೈತರು ಆತುರದಲ್ಲಿ ಸೋಯಾಬೀನ್ ಬಿತ್ತನೆ ಮಾಡದೇ ನಿರಂತರ ಮಳೆ ಹಾಗೂ ಸಮರ್ಪಕ ಮಣ್ಣಿನ ತೇವಾಂಶ ಲಭ್ಯವಾದ ನಂತರವೇ ಬಿತ್ತನೆ ಕೈಗೊಳ್ಳುವುದು ಸೂಕ್ತ ಎಂದು ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪ್ರಧಾನಿ ಮೋದಿ ಜೊತೆ ನಾಳೆ ಖರ್ಗೆ ಸಭೆ: ಎಸ್‌ಐಆರ್, ಕ್ಷೇತ್ರ ಪುನರ್‌ವಿಂಗಡಣೆ, ಮಹಿಳಾ ಮೀಸಲಾತಿ ಕುರಿತು ಚರ್ಚೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್), ಕ್ಷೇತ್ರ ಮರುವಿಂಗಡಣೆ ಮತ್ತು...

ಏಷ್ಯನ್ ಪ್ಯಾರಾ ಗೇಮ್ಸ್: ಮಹಿಳೆಯರ 200 ಮೀಟರ್ಸ್ ಓಟದಲ್ಲಿ ಸಿಮ್ರಾನ್‌ಗೆ ಚಿನ್ನ, ತೇಜಲ್‌ಬೆನ್‌ಗೆ ಕಂಚು

ಮಂಗಳವಾರ ಜಪಾನಿನ ನಗೋಯಾದಲ್ಲಿ ನಡೆದ ಏಷ್ಯನ್ ಪ್ಯಾರಾ ಗೇಮ್ಸ್‌ನ ಮಹಿಳೆಯರ 200...

ಅಮೆರಿಕದ ಮಧ್ಯಂತರ ಚುನಾವಣೆ: ಬೆಲೆ ಏರಿಕೆ, ಇರಾನ್ ಯುದ್ಧದ ನಡುವೆ ಟ್ರಂಪ್‌ಗೆ ಅಗ್ನಿಪರೀಕ್ಷೆ!

ಅಮೆರಿಕದಲ್ಲಿ ಏರುತ್ತಿರುವ ಪೆಟ್ರೋಲ್ ಬೆಲೆ, ದುಬಾರಿಯಾಗುತ್ತಿರುವ ದಿನಬಳಕೆಯ ವಸ್ತುಗಳು ಹಾಗೂ ಇರಾನ್...