ಬೀದರ್ | ಗುಣಾತ್ಮಕ ಶಿಕ್ಷಣಕ್ಕೆ ಒತ್ತಾಯಿಸಿ ಅಹೋರಾತ್ರಿ ಧರಣಿ

Date:

ರಾಜ್ಯದಲ್ಲಿ ಪ್ರತಿಯೊಬ್ಬರಿಗೂ ಶಿಕ್ಷಣ ಹಕ್ಕು ಕಾಯ್ದೆಯಡಿ ಗುಣಾತ್ಮಕ ಶಿಕ್ಷಣ ನೀಡುವಂತೆ ಆಗ್ರಹಿಸಿ ಸರ್ಕಾರಿ ಶಾಲೆ ಅಭಿವೃದ್ಧಿ ವೇದಿಕೆಯ ಪದಾಧಿಕಾರಿಗಳು ಅಹೋರಾತ್ರಿ ಧರಣಿ ಸತ್ಯಾಗ್ರಹ ನಡೆಯಿತು.

- Advertisement -

ಏ.14ರಿಂದ ಬೀದರ್ ನಗರದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತ ಸಮೀಪದ ಜಿಲ್ಲಾ ಉಸ್ತುವಾರಿ ಸಚಿವರ ಕಾರ್ಯಾಲಯ ಎದುರಗಡೆ ಅಹೋರಾತ್ರಿ ಧರಣಿ ನಡೆಸಿದರು. ಏ.15 ರಂದು ಸಂಜೆ ಗ್ರೇಡ್-2 ತಹಸೀಲ್ದಾರ್ ಅವರು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ ಮನವಿ ಪತ್ರ ಸ್ವೀಕರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ದೇಶದಲ್ಲಿ ಶಿಕ್ಷಣ ಹಕ್ಕು ಕಾಯ್ದೆ ಜಾರಿಯಾಗಿ 17 ವರ್ಷ ಕಳೆದರೂ ಮಕ್ಕಳಿಗೆ ಗುಣಮಟ್ಟ ಶಿಕ್ಷಣ ದೊರಕುತ್ತಿಲ್ಲ. ಗುಣಮಟ್ಟ ಶಿಕ್ಷಣ ಸಮರ್ಪಕವಾಗಿ ಜಾರಿಗಾಗಿ ಕಳೆದ ಒಂದು ದಶಕದಿಂದ ಹೋರಾಟ ನಡೆಸುತ್ತಿದ್ದರೂ ಸರ್ಕಾರ ಸ್ಪಂದಿಸುತ್ತಿಲ್ಲ. ಶಿಕ್ಷಣ ಹಕ್ಕು ಸಮರ್ಪಕ ಜಾರಿಯಾಗದೇ ಇರುವುದರಿಂದ ಸರ್ಕಾರಿ ಶಾಲೆಗಳಲ್ಲಿ ದಾಖಲಾತಿ ಕುಸಿಯುತ್ತಿದ್ದು, ಇದರಿಂದ ಬಡ-ದಲಿತ ಕುಟುಂಬಗಳ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿದೆ ಎಂದು ಆರೋಪಿಸಿದರು.

ರಾಜ್ಯದಲ್ಲಿ 62,420ಕ್ಕೂ ಅಧಿಕ ಶಿಕ್ಷಕರ ಹುದ್ದೆಗಳು ಖಾಲಿ ಇವೆ. ಕೂಡಲೇ ಖಾಲಿ ಇರುವ ಶಿಕ್ಷಕರ ಹುದ್ದೆಗಳನ್ನು ತಕ್ಷಣ ಭರ್ತಿ ಮಾಡಬೇಕು. ಶಿಕ್ಷಣ ಹಕ್ಕು ಕಾಯ್ದೆ ಪ್ರಕಾರ 1ರಿಂದ 5ನೇ ತರಗತಿ ಶಾಲೆಗಳು ನೆರೆಹೊರೆ ಶಾಲೆ ಇರಬೇಕು. 6ರಿಂದ 8ನೇ ತರಗತಿ 3ಕಿ.ಮೀ ಒಳಗಿರಬೇಕು ಎಂಬ ನಿಯಮವಿದ್ದು, ಆದರೆ ಸರ್ಕಾರ ಈ ನಿಯಮವನ್ನು ಉಲ್ಲಂಘಿಸುತ್ತಿದೆ. ಕಡ್ಡಾಯವಾಗಿ ನಿಯಮವನ್ನು ಪಾಲಿಸಬೇಕುʼ ಎಂದರುಕೆಪಿಎಸ್ ಮ್ಯಾಗ್ನೆಟ್ ಶಾಲೆ ಮಾಡುವ ಆಲೋಚನೆಯನ್ನು ತಕ್ಷಣ ಕೈಬಿಡಬೇಕು. ಆರ್‌ಟಿಇ ಕಾಯ್ದೆ  ಸಮರ್ಪಕವಾಗಿ ಜಾರಿಗೊಳಿಸಬೇಕು. ಖಾಲಿ ಇರುವ ಹುದ್ದೆಗಳನ್ನು ತಕ್ಷಣ ಭರ್ತಿ ಮಾಡಬೇಕು. ಶಾಲೆಯಲ್ಲಿ ಆಟದ ಮೈದಾನ, ಶೌಚಾಲಯ, ಶುದ್ಧ ಕುಡಿಯುವ ನೀರು ಸೇರಿದಂತೆ ಅಗತ್ಯ ಸೌಲಭ್ಯಗಳನ್ನು ಒದಗಿಸಬೇಕು ಎಂದು ಆಗ್ರಹಿಸಿದರು.

1005086228

“ರಾಜ್ಯಮಟ್ಟದಲ್ಲಿ ಶಿಕ್ಷಣ ತಜ್ಞರ ಒಳಗೊಂಡು ಆರ್‌ಟಿಇ ಅನುಷ್ಠಾನ ಕುರಿತು ಇಲ್ಲಿಯವರೆಗೆ ಜಾರಿ ಮಾಡಿದ ಕೆಲಸಗಳ ಕುರಿತು ಶ್ವೇತಪತ್ರ ಹೊರಡಿಸುವ ಮೂಲಕ ಆರ್‌ಟಿಇ ಅನುಷ್ಠಾನಕ್ಕೆ ತಜ್ಞರ ಸಮಿತಿಯ ಒಳಗೊಂಡು ಸಮಿತಿಯನ್ನು ರಚಿಸಬೇಕು” ಎಂದು ತಿಳಿಸಿದರು.

ವೇದಿಕೆಯ ಮುಖ್ಯಸ್ಥರಾದ ಸಪ್ನಾದೀಪ ಮಾತನಾಡಿ, ‘ಸರ್ಕಾರ ಕನ್ನಡವನ್ನು ಉಳಿಸಬೇಕಾಗಿದ್ದರೆ ಕನ್ನಡ ಶಾಲೆಗಳನ್ನು ಉಳಿಸಬೇಕಾಗಿದೆ. ಸುಮಾರು ವರ್ಷಗಳಿಂದ ಖಾಲಿ ಹುದ್ದೆಗಳನ್ನು ಭರ್ತಿ ಮಾಡದೆ ಗುಣಮಟ್ಟ ಶಿಕ್ಷಣ ಕೊಡದೆ ಈ ಭಾಗದ ವಿದ್ಯಾರ್ಥಿಗಳನ್ನು ವಂಚಿಸುತ್ತಿದೆ. ಸರಕಾರಕ್ಕೆ ಕಿಂಚಿತ್ತಾದರೂ ಬಡವರ ಬಗ್ಗೆ ಕನ್ನಡದ ಬಗ್ಗೆ ಗ್ರಾಮೀಣ ಪ್ರದೇಶದ ಜನರ ಬಗ್ಗೆ ಕಾಳಜಿ ಇದ್ದರೆ. ತಕ್ಷಣ ಶಿಕ್ಷಕರನ್ನು ತುಂಬುವ ಮೂಲಕ ಗುಣಮಟ್ಟ ಶಿಕ್ಷಣಕ್ಕೆ ಒತ್ತು ಕೊಡಬೇಕು. ಅರ್‌.ಟಿ.ಇ ಯನ್ನು ಸಮರ್ಪಕವಾಗಿ ಜಾರಿಗೊಳಿಸಬೇಕು. ಕೆ.ಪಿ.ಎಸ್ ಮ್ಯಾಗ್ನೆಟ್ ಶಾಲೆ ಮಾಡುವ ಆಲೋಚನೆಯನ್ನು ತಕ್ಷಣ ಕೈಬಿಡಬೇಕು ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ವಿವಿಧ ಹಂತದ ಹೋರಾಟ ಮಾಡುವುದು ಅನಿವಾರ್ಯವಾಗುತ್ತದೆ’ ಎಂದು ಎಚ್ಚರಿಸಿದರು.

ಪ್ರತಿಭಟನೆಗೆ ಬೆಂಬಲ :

ಸರ್ಕಾರಿ ಶಾಲೆಗಳ ಸರ್ವಾಂಗೀಣ ಅಭಿವೃದ್ಧಿಗೆ ಆಗ್ರಹಿಸಿ ನಡೆದ ಅಹೋರಾತ್ರಿ ಧರಣಿಗೆ ಕರ್ನಾಟಕ ವಿದ್ಯಾವರ್ಧಕ ಸಂಘದ ಜಿಲ್ಲಾ ಸಂಚಾಲಕ ಮಹೇಶ ಗೋರನಾಳಕರ್ ಹಾಗೂ ಜಿಲ್ಲಾ ಕಸಾಪ ಕಾರ್ಯದರ್ಶಿ ಎಂ.ಎಸ್ ಮನೋಹರ್ ಅವರು ಈ ನ್ಯಾಯಯುತ ಹೋರಾಟಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಬೆಂಬಲಿಸಲು ಕರೆ ನೀಡಿದರು.

ಇದನ್ನೂ ಓದಿ : ಬೀದರ್‌ | ದೇಶದ ಸರ್ವತೋಮುಖ ಅಭಿವೃದ್ಧಿಗೆ ಬುನಾದಿ ಹಾಕಿದವರು ಅಂಬೇಡ್ಕರ್‌ : ಸಚಿವ ಈಶ್ವರ ಖಂಡ್ರೆ

ಪ್ರತಿಭಟನೆಯಲ್ಲಿ ಸರ್ಕಾರಿ ಶಾಲೆ ಅಭಿವೃದ್ಧಿ ವೇದಿಕೆಯ ರೇಖಾ, ರೇಷ್ಮಾ, ಗೀತಾ ಡಿಗಾರೆ, ಸುಶೀಲಾ ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ವಿದ್ಯಾರ್ಥಿಗಳು ಮಾನಸಿಕ ಆರೋಗ್ಯದ ಬಗ್ಗೆ ಜಾಗೃತಿ ಬೆಳೆಸಿಕೊಳ್ಳಲಿ ಕರೆ

ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ ಅಂಗವಾಗಿ ಬೀದರ್ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ...

ಹುಮನಾಬಾದ್‌ | ಪಶು ಇಲಾಖೆ ವಾಹನ ನಿರ್ವಹಣೆ ವೆಚ್ಚದಲ್ಲಿ ಅಕ್ರಮ ಆರೋಪ: ತನಿಖೆಗೆ ಭೀಮರೆಡ್ಡಿ ಆಗ್ರಹ

ಹುಮನಾಬಾದ್ ತಾಲ್ಲೂಕಿನ ಪಶುಸಂಗೋಪನೆ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಗೆ ಸರ್ಕಾರದಿಂದ ಒದಗಿಸಿರುವ...

ಬೀದರ್‌ | ಭ್ರಷ್ಟಾಚಾರದಲ್ಲಿ ಮುಳುಗಿದ ಬಿಜೆಪಿ, ಕಾಂಗ್ರೆಸ್ : ಆಪ್ ಶಾಸಕ ಅನಿಲ್ ಝಾ

ರಾಷ್ಟ್ರೀಯ ಪಕ್ಷಗಳಾದ ಬಿಜೆಪಿ ಮತ್ತು ಕಾಂಗ್ರೆಸ್ ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ....

ಬೀದರ್‌ | ಯುವ ಪೀಳಿಗೆ ಸಾಮಾಜಿಕ ಪ್ರಜ್ಞೆ ಬೆಳೆಸಿಕೊಳ್ಳಲಿ: ಮುಬಾಶಿರ್ ಸಿಂಧೆ

ಯುವ ಪೀಳಿಗೆ ಸಾಮಾಜಿಕ ಪ್ರಜ್ಞೆ ಬೆಳೆಸಿಕೊಂಡು ಸಮಾಜದ ಅಭಿವೃದ್ಧಿಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು...