ಬೀದರ್‌ | ರಾಜ್ಯ ಬಜೆಟ್‌ನಲ್ಲಿ ಪರಿಶಿಷ್ಟ ಜಾತಿಗೆ ಹೆಚ್ಚಿನ ಅನುದಾನ ಮೀಸಲಿಡಿ : ಡಿವಿಪಿ ಆಗ್ರಹ

Date:

ಪ್ರಸಕ್ತ ಸಾಲಿನ ರಾಜ್ಯ ಬಜೆಟ್‌ನಲ್ಲಿ ಪರಿಶಿಷ್ಟ ಜಾತಿ ಸಮುದಾಯಗಳಿಗೆ ಹೆಚ್ಚಿನ ಆದ್ಯತೆ ನೀಡಬೇಕೆಂದು ಒತ್ತಾಯಿಸಿ ಬೀದರ್‌ ಜಿಲ್ಲಾ ದಲಿತ ವಿದ್ಯಾರ್ಥಿ ಪರಿಷತ್ತಿನಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಜಿಲ್ಲಾಧಿಕಾರಿಗಳ ಮೂಲಕ ಮನವಿ ಸಲ್ಲಿಸಲಾಯಿತು.

- Advertisement -

ʼದೇಶ ಸ್ವಾತಂತ್ರ‍್ಯ ಪಡೆದು 75 ವರ್ಷಗಳಾದರೂ, ಸಂವಿಧಾನ ಜಾರಿಗೆ ಬಂದು ದೀರ್ಘಕಾಲವಾದರೂ ಪರಿಶಿಷ್ಟ ಜಾತಿ ಸಮುದಾಯವು ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಹಾಗೂ ರಾಜಕೀಯವಾಗಿ ಸಮರ್ಪಕವಾಗಿ ಅಭಿವೃದ್ಧಿಯಾಗಿಲ್ಲ. ಹಲವು ಸರ್ಕಾರಗಳು ಅಧಿಕಾರಕ್ಕೆ ಬಂದರೂ ಸಮುದಾಯಕ್ಕೆ ನೀಡುವ ಅನುದಾನಗಳು ಸಮರ್ಪಕವಾಗಿ ತಲುಪುತ್ತಿಲ್ಲʼ ಎಂದು ಮನವಿಯಲ್ಲಿ ಉಲ್ಲೇಖಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

JNU ವಿದ್ಯಾರ್ಥಿ ‘ನಜೀಬ್’ ನಾಪತ್ತೆಗೆ 10 ವರ್ಷಗಳು: ಉತ್ತರ...

ತನಿಖಾ ಸಂಸ್ಥೆಗಳು ಕಡತವನ್ನು ಮುಚ್ಚಿದ ಮಾತ್ರಕ್ಕೆ ಒಬ್ಬ ತಾಯಿಯ ಹುಡುಕಾಟವನ್ನಾಗಲಿ ಅಥವಾ ಅಮಾಯಕ ವಿದ್ಯಾರ್ಥಿಯೊಬ್ಬನ ನಾಪತ್ತೆ ಕುರಿತ ಪ್ರಶ್ನೆಗಳನ್ನಾಗಲಿ ಅಳಿಸಿಹಾಕಲು ಸಾಧ್ಯವಿಲ್ಲ. ನಜೀಬ್ ಅಹ್ಮದ್ ಅವರನ್ನು ಕೇವಲ ಒಂದು ಪ್ರತಿಭಟನೆಯ ಸಂಕೇತವಾಗಿ ನೆನೆಯುವ...

ʼಪರಿಶಿಷ್ಟರಿಗೆ ಮೀಸಲಾದ ಅನುದಾನವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಸಲಾಗುತ್ತಿದೆ ಎಂದು ಆರೋಪಿಸಲಾಗಿದೆ. ಬಾಬಾ ಸಾಹೇಬರ ಹಾಗೂ ಸಂವಿಧಾನದ ಹೆಸರಿನಲ್ಲಿ ಮತ ಪಡೆದ ಸರ್ಕಾರ ಅಧಿಕಾರಕ್ಕೆ ಬಂದು 3 ಕಳೆದರೂ ರಾಜ್ಯ ಸರ್ಕಾರ ಸಮುದಾಯದಕ್ಕೆ ಹೆಚ್ಚು ಪ್ರಾತಿನಿದ್ಯ ನೀಡಿಲ್ಲʼ ಎಂದು ಮುಖಂಡರು ಅಸಮಾಧಾನ ವ್ಯಕ್ತಪಡಿಸಿದರು.

ʼಒಟ್ಟು ಬಜೆಟ್‌ನಲ್ಲಿ ಶೇ.30ರಷ್ಟು ಅನುದಾನವನ್ನು ಪರಿಶಿಷ್ಟ ಜಾತಿಗೆ ಮೀಸಲಿಡಬೇಕು. ಕಳೆದ ಮೂರು ವರ್ಷಗಳಲ್ಲಿ ಗ್ಯಾರಂಟಿ ಯೋಜನೆಗಳಿಗೆ ಬಳಸಿದ ಪರಿಶಿಷ್ಟರ ಹಣವನ್ನು ಹಿಂದಿರುಗಿಸಬೇಕು. ಸಮಾಜ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ಹಾಗೂ ನಂತರದ ವಸತಿ ಶಾಲೆಗಳ ಮೂಲಸೌಕರ್ಯಕ್ಕೆ ಹೆಚ್ಚಿನ ಅನುದಾನ ನೀಡಬೇಕು. ವಿದ್ಯಾರ್ಥಿ ನಿಲಯಗಳ ಗ್ರಂಥಾಲಯಗಳ ಡಿಜಿಟಲೀಕರಣ ಹಾಗೂ 2 ವಿದ್ಯಾರ್ಥಿಗಳಿಗೆ 1 ಕಂಪ್ಯೂಟರ್ ವ್ಯವಸ್ಥೆ ನೀಡಬೇಕುʼ ಎಂದು ಬೇಡಿಕೆಯಿಟ್ಟಿದ್ದಾರೆ.

ʼವಿದ್ಯಾರ್ಥಿ ನಿಲಯದ ವಿದ್ಯಾರ್ಥಿಗಳ ಊಟದ ವೆಚ್ಚವನ್ನು ಮಾಸಿಕ 2,500ಕ್ಕೆ ಹೆಚ್ಚಿಸುವುದು. ಪ್ರತಿ ಜಿಲ್ಲೆಯಲ್ಲಿ ಡಾ.ಅಂಬೇಡ್ಕರ್ ತರಬೇತಿ ಕೇಂದ್ರ’ ಸ್ಥಾಪಿಸಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ತರಬೇತಿ‌ ನೀಡಬೇಕು. ಸರ್ಕಾರಿ ನೇಮಕಾತಿ ಪರೀಕ್ಷೆಗಳಿಗೆ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡುವುದು, ಪದವಿ ಹಾಗೂ ತಾಂತ್ರಿಕ ವಿದ್ಯಾರ್ಥಿಗಳಿಗೆ ಉಚಿತ ಗುಣಮಟ್ಟದ ಲ್ಯಾಪ್‌ಟಾಪ್ ಮರುಜಾರಿ, ಹಲವು ವರ್ಷಗಳಿಂದ ಉಳುಮೆ ಮಾಡುತ್ತಿರುವ ಬಗರ್‌ ಹುಕುಂ ಭೂಮಿಗೆ ಹಕ್ಕುಪತ್ರ ನೀಡುವುದು ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದ ಸಾಲ ಸೌಲಭ್ಯವನ್ನು ಜಿಲ್ಲೆಗೆ ಕನಿಷ್ಠ 100 ಮಂದಿಗೆ ತಲುಪಿಸಿ ಶೇ.70ರಷ್ಟು ಸಬ್ಸಿಡಿ ನೀಡಬೇಕು ಎಂಬುದು ಮನವಿಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ : ಬೀದರ್‌ | ಕುಡಿಯುವ ನೀರಿನ ಸಮಸ್ಯೆಯೇ? : ನೇರವಾಗಿ ಅಧಿಕಾರಿಗಳಿಗೆ ಸಂಪರ್ಕಿಸಲು ಮನವಿ

ದಲಿತ ವಿದ್ಯಾರ್ಥಿ ಪರಿಷತ್ ಜಿಲ್ಲಾ ಸಮಿತಿ ಜಿಲ್ಲಾ ಸಂಚಾಲಕ ಸಂದೀಪ್ ಕಾಂಟೆ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಮೇಶ ಮಾಲೆ, ಜಿಲ್ಲಾ ಕಾರ್ಯದರ್ಶಿ ಅನೀಲ ಮಡ್ಡೆ, ಕರ್ನಾಟಕ ಪ್ರಜಾ ಶಕ್ತಿ ಸಮಿತಿ ಜಿಲ್ಲಾ ಉಪಾಧ್ಯಕ್ಷ ಮಹೇಂದ್ರಕುಮಾರ ಹೊಸಮನಿ, ಬಹುಜನ ಯುತ್ ಪ್ಯಾಂಥರ್ ಜಿಲ್ಲಾಧ್ಯಕ್ಷ ಜನಾರ್ಧನ ದೀನೆ, ಯುವ ಮುಖಂಡ ಸಾಯಿ ಕೌರವ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ವೈಜ್ಞಾನಿಕ ತಂತ್ರಜ್ಞಾನ ಅಳವಡಿಸಿಕೊಂಡು ಹೆಚ್ಚಿನ ಇಳುವರಿ ಪಡೆಯಿರಿ: ಜಾಬಾ ಜಗದೀಶ

ವೈಜ್ಞಾನಿಕವಾಗಿ ಅಭಿವೃದ್ಧಿಪಡಿಸಿದ ಬೆಳೆ ತಳಿಗಳನ್ನು ಬಳಸಿಕೊಳ್ಳುವ ಮೂಲಕ ರೈತರು ಕಡಿಮೆ ಅವಧಿಯಲ್ಲಿ...

ಬೀದರ್ ದಕ್ಷಿಣ | ಜಿಪಂ ಮೀಸಲಾತಿಯಲ್ಲಿ ಪರಿಶಿಷ್ಟ ಜಾತಿಗೆ ಅನ್ಯಾಯ: ಜನಪ್ರತಿನಿಧಿಗಳಿಗೆ ಎಚ್ಚರಿಕೆ

ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಆರು ಜಿಲ್ಲಾ ಪಂಚಾಯಿತಿ ಕ್ಷೇತ್ರಗಳಲ್ಲಿ...

ಬೀದರ್ | ಸಿಇಸಿ ಜ್ಞಾನೇಶ್‌ ಕುಮಾರ್‌ ವಜಾ, ಎಸ್ಐಆರ್ ರದ್ದತಿಗೆ ಕದಸಂಸ ಆಗ್ರಹ

ಮತದಾರರ ಪಟ್ಟಿಯ ಸಮಗ್ರ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಸ್ಥಗಿತಗೊಳಿಸಿ, ಮುಖ್ಯ...

ಬಸವಕಲ್ಯಾಣ | ಫುಲೆ, ಶಾಹು, ಅಂಬೇಡ್ಕರ್ ವಿಚಾರ ಮಂಚ್ ಉದ್ಘಾಟನೆ

ಮಹಾತ್ಮ ಜ್ಯೋತಿಬಾ ಫುಲೆ, ರಾಜರ್ಷಿ ಶಾಹು ಮಹಾರಾಜ್ ಹಾಗೂ ಡಾ. ಬಿ.ಆರ್....