ಬೀದರ್‌ | ಸಮಾನತೆ ಸಮಾಜಕ್ಕಾಗಿ ಹೋರಾಡಿದ ಅಂಬೇಡ್ಕರ್ : ರಾಜಕುಮಾರ ಹೆಬ್ಬಾಳೆ

Date:

ಡಾ.ಬಿ.ಆರ್.ಅಂಬೇಡ್ಕರ್ ಅವರು ತಮ್ಮ ಜೀವನದುದ್ದಕ್ಕೂ ಅನೇಕ ಕಷ್ಟ, ಅವಮಾನ ಹಾಗೂ ಸಾಮಾಜಿಕ ತಾರತಮ್ಯಗಳನ್ನು ಎದುರಿಸಿ, ಅವುಗಳ ವಿರುದ್ಧ ದಿಟ್ಟ ಹೋರಾಟ ನಡೆಸುವ ಮೂಲಕ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಕಾನೂನಿನ ಮೂಲಕ ನ್ಯಾಯ ಹಾಗೂ ಸಮಾನ ಹಕ್ಕು ದೊರಕುವಂತೆ ಮಾಡಿದ ಮಹಾನ್ ನಾಯಕರಾಗಿದ್ದಾರೆ ಎಂದು ರಾಷ್ಟ್ರೀಯ ಜನಪದ ಬುಡಕಟ್ಟು ಕಲಾ ಪರಿಷತ್ತು, ನವದೆಹಲಿ ಪ್ರಧಾನ ಕಾರ್ಯದರ್ಶಿ ಡಾ.ರಾಜಕುಮಾರ ಹೆಬ್ಬಾಳೆ ಹೇಳಿದರು.

- Advertisement -

ಬೀದರ್ ನಗರದ ಶ್ರೀ ಸತ್ಯಂ ಪದವಿ ಕಾಲೇಜಿನಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಶ್ರೀ ಸತ್ಯಂ ಪದವಿ ಕಾಲೇಜಿನ ಸಂಯುಕ್ತಾಶ್ರಯದಲ್ಲಿ 2026-27ನೇ ಸಾಲಿನ ವಿಶೇಷ ಘಟಕ ಯೋಜನೆಯಡಿ ಹಮ್ಮಿಕೊಂಡಿದ್ದ ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಓದು ಕಾರ್ಯಕ್ರಮ’ ಹಾಗೂ ಪ್ರಬಂಧ ಸ್ಪರ್ಧೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗ್ರಾಮೀಣ ಮೀಸಲಾತಿಯಲ್ಲಿ ಸಾಮಾಜಿಕ ಅನ್ಯಾಯ; ಬರಿದಾಗುತ್ತಿರುವ ಬಡ ಮಕ್ಕಳ...

ಸರಕಾರಿ ಶಾಲೆ ಸೇರುವವರು ಕೇವಲ ಬಡತನ-ಕೆಳಮಟ್ಟದ ಕುಟುಂಬದವರು ಎಂಬಂತಾಗಿದೆ. ಈ ಋಣಾತ್ಮಕ ಭಾವನೆ ಹೋಗಲಾಡಿಸಲು ಕನ್ನಡದಲ್ಲಿ ಕಲಿತರೆ ಉನ್ನತ ಶಿಕ್ಷಣ, ಉದ್ಯೋಗ ಸ್ಪರ್ಧೆಯಲ್ಲಿ ಜಯಿಸಬಹುದೆಂಬ ವಿಶ್ವಾಸ ಮೂಡಿಸಬೇಕಾಗಿದೆ. ಈಗಿನ ಎಡಬಿಡಂಗಿ ಗ್ರಾಮೀಣ ಮೀಸಲಾತಿ...

ಚಿಕ್ಕಮಗಳೂರು | ಉದ್ಯಾನವನಕ್ಕೆ ಮೀಸಲಿಟ್ಟ ಜಾಗದಲ್ಲಿ ಸಂತೆ ನಡೆಸಲು...

ಉದ್ಯಾನವನ ಮಾನವನ ಮಾನಸಿಕ ನೆಮ್ಮದಿ, ವಿನೋದ, ವಿಶ್ರಾಂತಿ ಹಾಗೂ ವನ್ಯಜೀವಿ ಹಾಗೂ ನೈಸರ್ಗಿಕ ಪರಿಸರವನ್ನು ಸಂರಕ್ಷಿಸಲು ಮೀಸಲಿಟ್ಟ ಒಂದು ಹಸಿರು ತಾಣ ಎಂದೇ ಹೇಳಬಹುದು. ಆಧುನಿಕ ವ್ಯವಸ್ಥೆಯಲ್ಲಿ ನಗರ ಜೀವನದ ಜಂಜಾಟದ ನಡುವೆ...

ವಿಜಯಪುರ | 80ರ ಗಡಿ ದಾಟಿದ ಬಿಳಿ ಜೋಳ,...

ವಿಜಯಪುರ ಎಂದಾಕ್ಷಣ ನೆನಪಾಗುವುದು ಬಿಳಿ ಜೋಳದ ರೊಟ್ಟಿ. ಉತ್ತರ ಕರ್ನಾಟಕದ ಜನರ ಬದುಕು, ಆಹಾರ ಸಂಸ್ಕೃತಿಯ ಅವಿಭಾಜ್ಯ ಭಾಗವಾಗಿರುವ ಜೋಳವೇ ಈಗ ಸಾಮಾನ್ಯ ಜನರ ಕೈಗೆಟುಕದ ವಸ್ತುವಾಗುತ್ತಿದೆ. ಕೆಲವೇ ದಿನಗಳ ಹಿಂದೆ ಕೆಜಿಗೆ...

ಕರ್ನಾಟಕ ಜಾನಪದ ಪರಿಷತ್ತಿನ ಜಿಲ್ಲಾ ಕಾರ್ಯದರ್ಶಿ ಸುನಿತಾ ಕೂಡ್ಲಿಕರ್ ಮಾತನಾಡಿ, “ಅಂಬೇಡ್ಕರ್ ಅವರ ಬದುಕಿನಲ್ಲಿ ಓದು ಮತ್ತು ಶಿಕ್ಷಣಕ್ಕೆ ಅಪಾರ ಮಹತ್ವವಿತ್ತು. ಎಷ್ಟೇ ಕಷ್ಟಗಳು ಎದುರಾದರೂ ಶಿಕ್ಷಣದ ಮೇಲಿನ ಆಸಕ್ತಿ ಹಾಗೂ ಜ್ಞಾನ ಸಂಪಾದಿಸುವ ಹಂಬಲವನ್ನು ಅವರು ಎಂದಿಗೂ ಕೈ ಬಿಡಲಿಲ್ಲ. ಓದಿನಲ್ಲಿರುವ ಶಕ್ತಿ ಏನು ಎಂಬುದನ್ನು ತಮ್ಮ ಜೀವನದ ಮೂಲಕವೇ ಅಂಬೇಡ್ಕರ್ ಅವರು ಇಡೀ ಸಮಾಜಕ್ಕೆ ತೋರಿಸಿಕೊಟ್ಟಿದ್ದಾರೆ” ಎಂದು ಹೇಳಿದರು.

ವಿಶೇಷ ಉಪನ್ಯಾಸಕ ಎಸ್.ಬಿ. ಕುಚಬಾಳ ಮಾತನಾಡಿ, “ಡಾ. ಬಿ.ಆರ್.ಅಂಬೇಡ್ಕರ್ ಅವರು ಶಿಕ್ಷಣ, ಜ್ಞಾನ ಹಾಗೂ ಕಾನೂನು ಕ್ಷೇತ್ರದಲ್ಲಿ ಅಪಾರ ಸಾಧನೆ ಮಾಡಿದ ಮಹಾನ್ ಚಿಂತಕರಾಗಿದ್ದು, ಅವರ ವಿಚಾರಧಾರೆಗಳು ಇಂದು ಇಡೀ ಜಗತ್ತಿಗೆ ಮಾದರಿಯಾಗಿವೆ. ಅಂಬೇಡ್ಕರ್ ಅವರ ಬದುಕು ಮತ್ತು ವಿಚಾರಧಾರೆಗಳನ್ನು ವಿದ್ಯಾರ್ಥಿಗಳಿಗೆ ಪರಿಚಯಿಸುವ ಉದ್ದೇಶದಿಂದ ಸರ್ಕಾರ ಇಂತಹ ಕಾರ್ಯಕ್ರಮಗಳನ್ನು ಆಯೋಜಿಸುತ್ತಿರುವುದು ಸಂತೋಷದ ಸಂಗತಿಯಾಗಿದೆ” ಎಂದು ಅವರು ಹೇಳಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸಿದ್ರಾಮ ಸಿಂಧೆ ಅವರು  ಸ್ವಾಗತಿಸಿ ಪ್ರಾಸ್ತಾವಿಕವಾಗಿ  ಮಾತನಾಡಿದರು.

ಪ್ರಬಂಧ ಸ್ಪರ್ಧೆಯಲ್ಲಿ ಭಾಗವಹಿಸಿ ವಿಜೇತರಾದ ಬಿಸಿಎ ಪ್ರಥಮ ವರ್ಷದ ವಿದ್ಯಾರ್ಥಿನಿ ವೈಷ್ಣವಿ ಪ್ರಥಮ ಸ್ಥಾನ, ಬಿ.ಕಾಂ ಐದನೇ ಸೆಮಿಸ್ಟರನ  ವಿದ್ಯಾರ್ಥಿನಿಕವಿತಾ ದ್ವಿತೀಯ ಸ್ಥಾನ, ಅನುರಾಧ ತೃತೀಯ ಸ್ಥಾನ ಪಡೆದರೆ, ಪಾರ್ವತಿ, ಹಾಗೂ ಜ್ಯೋತಿ, ಅವರಿಗೆ ಸಮಾಧಾನಕರ ಬಹುಮಾನ ನೀಡಿ ಗೌರವಿಸಿದರು.

ಇದನ್ನೂ ಓದಿ : ಬೀದರ್‌ | ಪ್ರವಾದಿ ಮುಹಮ್ಮದ್‍ ಜೀವನ ಸಂದೇಶ ಮೇಲೆ ಬೆಳಕು ಚೆಲ್ಲಿದ ʼರೌಂಡ್‌ ಟೇಬಲ್‌ ಟಾಕ್ʼ

ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಚಾರ್ಯ ಸುವರ್ಣಾ ಭೋಸ್ಲೆ ಅಧ್ಯಕ್ಷತೆ ವಹಿಸಿದ್ದರು, ಸಿದ್ದಲಿಂಗ ತಗಾರೆ, ಕು. ಕ್ಲೈಮೆಂಟಿನಾ ಮತ್ತಿತರರಿದ್ದರು. ನಿರ್ಣಾಯಕರಾಗಿ ನರಸಿಂಗ ಧೂಳಪ್ಪಾ ಹಾಗೂ ಡಾ.ಮಹಾದೇವಿ ಕೊಳಾರ ಕಾರ್ಯನಿರ್ವಹಿಸಿದರು.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಸ್ವಂತ ಖರ್ಚಿನಲ್ಲಿ ವಿದ್ಯಾರ್ಥಿಗಳಿಗೆ ವಿಮಾನಯಾನ ಭಾಗ್ಯ ಕಲ್ಪಿಸಿದ ಶಿಕ್ಷಕ!

ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ವಿಮಾನಯಾನದ ಅನುಭವವನ್ನು ಬಹುಮಾನವಾಗಿ...

ಗ್ಯಾನೇಶ್ ವಿರುದ್ಧ ಪ್ರತಿಭಟನೆಗೆ ದೆಹಲಿ ಪೊಲೀಸರ ಅಡ್ಡಿ; ಮೋದಿ ಮನೆ ಮುಂದೆಯೇ‌ ಧರಣಿ ಎಂದ ಕಾಂಗ್ರೆಸ್

ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ವಿರುದ್ಧ ದೆಹಲಿಯಲ್ಲಿ ಅಕ್ಟೋಬರ್ 30ರಂದು...

ಅ.12ರ ಪ್ರತಿಭಟನೆ ವೇಳೆ ಗರ್ಭಿಣಿ ಪತ್ರಕರ್ತೆಗೆ ತಳ್ಳಾಟ: ರಾಹುಲ್ ಗಾಂಧಿಗೆ ಸುಪ್ರೀಂ ಕೋರ್ಟ್ ನೋಟಿಸ್

ಅಕ್ಟೋಬರ್ 12ರಂದು ವಿರೋಧ ಪಕ್ಷಗಳು ಸುಪ್ರೀಂ ಕೋರ್ಟ್‌ಗೆ ನಡೆಸಿದ್ದ ಪ್ರತಿಭಟನಾ ಮೆರವಣಿಗೆಯ...

ಕನ್ನಡಿಗರ ಉದ್ಯೋಗ ಹಕ್ಕುಗಳ ರಕ್ಷಣೆಗೆ ʼನಮ್ಮ ನಾಡು ನಮ್ಮ ಉದ್ಯೋಗʼ ಚಳವಳಿ ಆರಂಭ

ಕರ್ನಾಟಕದಲ್ಲಿ ಕನ್ನಡಿಗರ ಉದ್ಯೋಗಾವಕಾಶಗಳ ರಕ್ಷಣೆ ಹಾಗೂ ಖಾಸಗಿ ವಲಯದಲ್ಲಿ ಸ್ಥಳೀಯರಿಗೆ ನ್ಯಾಯಯುತ...