ಬೀದರ್‌ | 29ರಂದು ಮರಾಠಾ ಸಮಾಜದಿಂದ ಅದ್ದೂರಿಯಾಗಿ ಅಂಬೇಡ್ಕರ್ ಜಯಂತಿ ಆಚರಣೆ

Date:

ಬೀದರ್ ನಗರದ‌ ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ಛತ್ರಪತಿ ಶಿವಾಜಿ ಮಹಾರಾಜ ಅವರ ವೃತ್ತದ ಸಮೀಪದ ಮುಖ್ಯರಸ್ತೆಯಲ್ಲಿ ಬೃಹತ್ ವೇದಿಕೆಯಲ್ಲಿ ಏ.29ರಂದು ಸಂಜೆ 5ಗಂಟೆಗೆ ಸಂವಿಧಾನ ಶಿಲ್ಪಿ ಡಾ.ಭೀಮರಾವ ಅಂಬೇಡ್ಕರ್ ಅವರ ಜಯಂತ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಮರಾಠ ಸಮಾಜದ ಪೂಜ್ಯ ದಾದಾ ಮಹಾರಾಜ ನಗರಕರ್ ತಿಳಿಸಿದರು.

- Advertisement -

ಜಿಲ್ಲಾ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ʼಹರಿದು ಹಂಚಿ ಹೋಗುತ್ತಿರುವ ಸಣ್ಣ ಸಣ್ಣ ಸಮಾಜಗಳನ್ನು ಒಗ್ಗೂಡಿಸುವುದು,ದಲಿತ ಸಮುದಾಯ ಹಾಗೂ ಮರಾಠಾ ಸಮುದಾಯಗಳನ್ನು ಒಗ್ಗೂಡಿಸುವ ಉದ್ದೇಶದಿಂದ ಪ್ರತಿ ವರ್ಷ ಮರಾಠಾ ಸಮಾಜದಿಂದ ಬಾಬಾ ಸಾಹೇಬ್ ಅಂಬೇಡ್ಕರ್‌ ಅವರ ಜಯಂತಿ ಆಚರಿಸುತ್ತಲಿದ್ದೇವೆʼ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವಿಜಯಪುರ | 80ರ ಗಡಿ ದಾಟಿದ ಬಿಳಿ ಜೋಳ,...

ವಿಜಯಪುರ ಎಂದಾಕ್ಷಣ ನೆನಪಾಗುವುದು ಬಿಳಿ ಜೋಳದ ರೊಟ್ಟಿ. ಉತ್ತರ ಕರ್ನಾಟಕದ ಜನರ ಬದುಕು, ಆಹಾರ ಸಂಸ್ಕೃತಿಯ ಅವಿಭಾಜ್ಯ ಭಾಗವಾಗಿರುವ ಜೋಳವೇ ಈಗ ಸಾಮಾನ್ಯ ಜನರ ಕೈಗೆಟುಕದ ವಸ್ತುವಾಗುತ್ತಿದೆ. ಕೆಲವೇ ದಿನಗಳ ಹಿಂದೆ ಕೆಜಿಗೆ...

ರಾಜಕಾರಣಿಯ ಬೆಡ್‌ರೂಮಿನಲ್ಲಿ ಪ್ರಜಾಪ್ರಭುತ್ವ ಹುಡುಕುವ ಮಾಧ್ಯಮಗಳು!

ಒಂದು ಸಣ್ಣ ಪ್ರಶ್ನೆ, ಪ್ರಿಯ ಓದುಗರೇ! ಬೆಡ್‌ರೂಮಿನ ಹೊಗೆಯ ಹಿಂದೆ ಓಡುವ ಮಾಧ್ಯಮಗಳಿಗೆ, ಜನರ ಬದುಕನ್ನು ಸುಡುತ್ತಿರುವ ಬೆಂಕಿ ಕಾಣುವುದಿಲ್ಲವೇ? ರಾಜಕಾರಣಿಯೊಬ್ಬರ ಖಾಸಗಿ ಬದುಕಿನ ಬಗ್ಗೆ ಸುದ್ದಿ ಹೊರಬಿದ್ದರೆ ಸಾಕು; ಮಾಧ್ಯಮಗಳಲ್ಲಿ ಚರ್ಚೆಗಳ ಮಹಾಪೂರ. ಯಾರು...

ಬ್ರೆಜಿಲ್‌ನಲ್ಲಿ ʼಲೂಲಾʼ ಐತಿಹಾಸಿಕ ಗೆಲುವು: ನಾಗರಿಕ ಸಂಘಟನೆಗಳು ಚುನಾವಣೆಯ...

ಬ್ರೆಜಿಲ್‌ನ ಅಧ್ಯಕ್ಷೀಯ ಚುನಾವಣೆಯಲ್ಲಿ ಎಡಪಂಥೀಯ ನಾಯಕ ಲೂಯಿಸ್ ಇನಾಸಿಯೊ ಲೂಲಾ ಡಿ ಸಿಲ್ವಾ ಅವರು ಅತ್ಯಂತ ಐತಿಹಾಸಿಕ ರೀತಿಯಲ್ಲಿ ಮರುಆಯ್ಕೆಯಾಗಿದ್ದಾರೆ. ಅಕ್ಟೋಬರ್ 25ರಂದು ನಡೆದ ಎರಡನೇ ಸುತ್ತಿನ ಮತದಾನದಲ್ಲಿ ಅವರು ಬಲಪಂಥೀಯ ಅಭ್ಯರ್ಥಿ...

ʼಈ ಹಿಂದೆ ಮಹಾರಾಷ್ಟ್ರದಲ್ಲಿ ಈ ಕಾರ್ಯಕ್ರಮ ಹಮ್ಮಿಕೊಳ್ಳುತ್ತಿದ್ದೆವು. ಈ ವರ್ಷದಿಂದ ಕರ್ನಾಟಕದಲ್ಲಿಯೂ ಸಯ್ಯಾಜಿರಾವ ಗಾಯಕವಾಡ ಹಾಗೂ ಶಾಹೂ ಮಹಾರಾಜರ ತತ್ವಗಳನ್ನು ನಮ್ಮ ಸಮುದಾಯಕ್ಕೆ ಪರಿಚಯಿಸುವ ಕಾರ್ಯ ಮಾಡಬೇಕಾದ ಹಿನ್ನೆಲೆ ಈ ಕಾರ್ಯಕ್ರಮ ಸೂಕ್ತವಾಗಿದೆʼ ಎಂದರು.

ಅಣದೂರಿನ ವೈಶಾಲಿ ನಗರದ ಪೂಜ್ಯ ಭಂತೆ ಸಂಘರಕ್ಷಿತ ಮಾತನಾಡಿ, ʼಅಂಬೇಡ್ಕರ್ ಅವರು ಒಂದು ಸಮುದಾಯದ ಆಸ್ತಿ ಅಲ್ಲ, ಅವರು ಸರ್ವ ಸಮುದಾಯದ ಬೆಳಕು. ಹಾಗಾಗಿ ಪರಸ್ಪರ ಸಮುದಾಯಗಳು ಸಾಮೂಹಿಕವಾಗಿ ಸೇರಿ ಮಹಾತ್ಮರ ಜಯಂತಿ ಆಚರಿಸಿದರೆ ಸಮ ಸಮಾಜಕ್ಕಾಗಿ ಎಲ್ಲರೂ ಸಂಘಟಿಸಬಹುದಾಗಿದೆʼ ಎಂದರು.

ನ್ಯಾಯವಾದಿ ನಾರಾಯಣ ಗಣೇಶ ಮಾತನಾಡಿ, ʼಅಂಬೇಡ್ಕರ್‌ ಜಯಂತಿ ಕಾರ್ಯಕ್ರಮವನ್ನು ಕಾರ್ಮಿಕ ಸಚಿವ ಸಂತೋಷ ಲಾಡ್ ಉದ್ಘಾಟಿಸಲಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ, ಪೌರಾಡಳಿತ ಸಚಿವ ರಹೀಂ ಖಾನ್ ಸೇರಿ ಜಿಲ್ಲೆಯ ಎಲ್ಲ ಶಾಸಕರು, ವಿಧಾನ ಪರಿಷತ್ ಸದಸ್ಯರನ್ನು ಕಾರ್ಯಕ್ರಮಕ್ಕೆ ಅಹ್ವಾನಿಸಲಾಗುತ್ತಿದೆ. ಸರ್ವಜನಾಂಗದ ಶಾಂತಿಯ ತೋಟ ಎಂಬಂತೆ ಎಲ್ಲ ಪಕ್ಷದವರನ್ನು ಸಹ ಕಾರ್ಯಕ್ರಮಕ್ಕೆ ಆಹ್ವಾನಿಸಲಾಗುತ್ತಿದೆʼ ಎಂದರು.

ಲಿಡ್ಕರ್ ಬೋರ್ಡ್ ಅಧ್ಯಕ್ಷ ಮುಂಡರಗಿ ನಾಗರಾಜ ಮಾತನಾಡಿ, ʼಸಚಿವ ಸಂತೋಷ ಲಾಡ್ ಅವರು ಪ್ರತಿಯೊಂದು ಜಿಲ್ಲೆಗಳಲ್ಲಿ ಇಂತಹ ಧರ್ಮಾಧಾರಿತ, ಜಾತಿ ರಹಿತ ಕಾರ್ಯಕ್ರಮಗಳನ್ನು ಆಯೋಜಿಸುತ್ತಿದ್ದು, ಗಡಿ ಜಿಲ್ಲೆ ಬೀದರ್‌ನಲ್ಲಿ ಸಹ ಕಾರ್ಯಕ್ರಮ ಆಯೋಜಿಸಲಾಗುತ್ತಿದೆʼ ಎಂದರು.

ಇದನ್ನೂ ಓದಿ : ಬೀದರ್‌ | ನಮ್ಗ ಅನ್ನ ಕೊಡಬೇಡ್ರಿ; ಕುಡಿಯೋಕೆ ನೀರು ಕೊಟ್ಟು ಪುಣ್ಯ ಕಟ್ಟಿಕೊಳ್ಳಿ!

ದಲಿತ ಮುಖಂಡರಾದ ಮಹೇಶ ಗೋರನಾಳಕರ್, ಬಾಬುರಾವ ಪಾಸ್ವಾನ್, ಮರಾಠಾ ಸಮಾಜದ ಗೋವಿಂದರಾವ ಜಾಧವ, ಭೋವಿ ವಡ್ಡರ್ ಸಮಾಜದ ಅಧ್ಯಕ್ಷ ತಾನಾಜಿ ಸಗರ್ ಮಾತನಾಡಿದರು. ದಲಿತ ಮುಖಂಡರಾದ ಡಾ.ಕಾಶಿನಾಥ ಚಲ್ವಾ, ಧನರಾಜ ಮುಸ್ತಾಪುರೆ ಹಾಗೂ ಇತರರು ಪತ್ರಿಕಾಗೋಷ್ಟಿಯಲ್ಲಿದ್ದರು.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪೂನಾದ ‘IISER’ ಗ್ರಂಥಾಲಯದಿಂದ ಉಮರ್ ಖಾಲಿದ್ ಪುಸ್ತಕ ತೆರವು

ಪುಣೆಯಲ್ಲಿರುವ 'ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಸೈನ್ಸ್ ಎಜುಕೇಶನ್ ಆಂಡ್ ರಿಸರ್ಚ್' (IISER)...

ವಿಜಯಪುರ | 80ರ ಗಡಿ ದಾಟಿದ ಬಿಳಿ ಜೋಳ, ಬಡಪಾಯಿ ಜನರಿಗೆ ರೊಟ್ಟಿಯೂ ತುಟ್ಟಿ!

ವಿಜಯಪುರ ಎಂದಾಕ್ಷಣ ನೆನಪಾಗುವುದು ಬಿಳಿ ಜೋಳದ ರೊಟ್ಟಿ. ಉತ್ತರ ಕರ್ನಾಟಕದ ಜನರ...

ದೀಪಾವಳಿ ವ್ಯಾಪಾರದ ಮೇಲೆ ರ‍್ಯಾಲಿ ಬಿಸಿ; ರಾಹುಲ್ ಗಾಂಧಿಗೆ ಮತ್ತೊಮ್ಮೆ ಪತ್ರ ಬರೆದ ದೆಹಲಿ ವ್ಯಾಪಾರಿಗಳ ಸಂಘ

ದೆಹಲಿಯಲ್ಲಿ ನವೆಂಬರ್ 1ರಂದು ನಡೆಯಲಿರುವ ಇಂಡಿಯಾ (INDIA) ಮೈತ್ರಿಕೂಟದ ಬೃಹತ್ ಪ್ರತಿಭಟನಾ...