ಬೀದರ್‌ | ದೇಶದ ಸರ್ವತೋಮುಖ ಅಭಿವೃದ್ಧಿಗೆ ಬುನಾದಿ ಹಾಕಿದವರು ಅಂಬೇಡ್ಕರ್‌ : ಸಚಿವ ಈಶ್ವರ ಖಂಡ್ರೆ

Date:

ಭಾರತದ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರು ಸಂವಿಧಾನ ರಚನಾ ಸಭೆಯ ಕರಡು ಸಮಿತಿಯ ಅಧ್ಯಕ್ಷರಾಗಿ, ದೇಶದ ಸರ್ವತೋಮುಖ ಅಭಿವೃದ್ಧಿಗೆ ಬುನಾದಿಯಾದ ಸಮಾನತೆ, ಸ್ವಾತಂತ್ರ‍್ಯ ಮತ್ತು ನ್ಯಾಯದ ಮೌಲ್ಯಗಳನ್ನು ಸಂವಿಧಾನದಲ್ಲಿ ಅಚ್ಚಳಿಯದಂತೆ ಮೂಡಿಸಿದರು ಎಂದು ಬೀದರ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ.ಖಂಡ್ರೆ ತಿಳಿಸಿದರು.

- Advertisement -

ಮಂಗಳವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಮಹಾನಗರ ಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಸಮಾಜ ಕಲ್ಯಾಣ ಇಲಾಖೆ ಬೀದರ ಇವರುಳ ಸಂಯುಕ್ತಾಶ್ರಯದಲ್ಲಿ ಸಂವಿಧಾನ ಶಿಲ್ಪಿ ಭಾರತರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರ 135ನೇ ಜಯಂತ್ಯೋತ್ಸವ ನಿಮಿತ್ಯ ಮಾನವತಾವಾದಿ ಅಂಬೇಡ್ಕರ್ ವೃತ್ತದಲ್ಲಿರುವ ಅವರ ಪುತ್ತಳಿಗೆ ಪುಷ್ಪನಮನ ಸಲ್ಲಿಸಿ ನಂತರ ಮೆರವಣಿಗೆಗೆ ಚಾಲನೆ ನೀಡಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...
WhatsApp Image 2026 04 14 at 5.57.43 PM

“ಬಾಬಾ ಸಾಹೇಬರ ದೂರದೃಷ್ಠಿ ಮತ್ತು ಬದ್ಧತೆಯ ಫಲವಾಗಿ ನಮ್ಮ ಸಂವಿಧಾನವು ಪ್ರತಿಯೊಬ್ಬ ನಾಗರಿಕರಿಗೂ ಹಕ್ಕುಗಳ ಮತ್ತು ಗೌರವಯುತ ಜೀವನದ ಭರವಸೆ ನೀಡುತ್ತಿದೆ. ಶೋಷಿತರ ಹಾಗೂ ಹಿಂದುಳಿದವರ ಹಕ್ಕುಗಳಿಗಾಗಿ ಅವರು ನಡೆಸಿದ ಹೋರಾಟವು ಸದಾ ಪ್ರೇರಣೆಯಾಗಿ ಉಳಿದಿದೆ. ಅವರ ಆದರ್ಶಗಳು ಮತ್ತು ಸಂವಿಧಾನದ ಮೌಲ್ಯಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡು ಸಮಾನತೆ ಮತ್ತು ನ್ಯಾಯಯುತ ಸಮಾಜ ನಿರ್ಮಾಣದ ದಿಸೆಯಲ್ಲಿ ನಾವೆಲ್ಲರೂ ಕೈಜೋಡಿಸೋಣ” ಎಂದರು.

ಪೌರಾಡಳಿತ ಹಾಗೂ ಹಜ್ ಸಚಿವ ರಹೀಂ ಖಾನ್ ಮಾತನಾಡಿ, “ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಆದರ್ಶಗಳು ಸಮಾಜಕ್ಕೆ ದಾರಿದೀಪವಾಗಿದ್ದು, ಸಮಾನತೆ ನ್ಯಾಯ ಮತ್ತು ಸ್ವಾಭಿಮಾನಕ್ಕಾಗಿ ಅವರು ನೀಡಿದ ಮಹತ್ವದ ಸಂದೇಶಗಳನ್ನು ನಾವು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳೋಣ” ಎಂದರು.

ಬೀದರ ದಕ್ಷಿಣ ಶಾಸಕ ಡಾ.ಶೈಲೇಂದ್ರ ಬೆಲ್ದಾಳೆ ಮಾತನಾಡಿ, “ಡಾ.ಅಂಬೇಡ್ಕರ್ ಅವರು ಕೇವಲ ವ್ಯಕ್ತಿಯಲ್ಲ, ಒಂದು ಚಿಂತನೆ ಕ್ರಾಂತಿ ಅವರು ನೀಡಿದ ಸಮಾನತೆ, ನ್ಯಾಯ ಮತ್ತು ಸ್ವಾಭಿಮಾನದ ಸಂದೇಶಗಳು ನಮ್ಮ ಸಮಾಜಕ್ಕೆ ದಾರಿದೀಪವಾಗಿದೆ. ಶೋಷಿತರು, ಹಿಂದುಳಿದವರು ಮತ್ತು ಬಡವರ ಹಕ್ಕಿಗಾಗಿ ಅವರು ನಡೆಸಿದ ಹೋರಾಟ ನಮ್ಮೆಲ್ಲರಿಗೂ ಪ್ರೇರಣೆ ಅವರು ಸದಾ ಶಿಕ್ಷಣವೇ ಶಕ್ತಿ ಎಂದು ಸಾರಿದರು. ಸಮಾಜದ ಅಭಿವೃದ್ಧಿಗೆ ಶಿಕ್ಷಣವೇ ಪ್ರಮುಖ ಸಾಧನೆ, ಪ್ರತಿಯೊಬ್ಬರು ವಿದ್ಯಾಭ್ಯಾಸಕ್ಕೆ ಆದ್ಯತೆ ನೀಡಬೇಕು. ಅವರ ಮಹಾನ್ ತತ್ವಗಳನ್ನು ನಾವು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳೋಣ” ಎಂದರು.‌

ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಅವರು ಧಮ್ಮ, ಸಂಸ್ಕೃತಿ ಮತ್ತು ಶಿಕ್ಷಣ ಜಾಗೃತಿ ವೇದಿಕೆ ಬೀದರ ವತಿಯಿಂದ ಡಾ.ಬಾಬಾಸಾಹೇಬ ಅಂಬೇಡ್ಕರ್ ಅವರ ಜೀವನ ಚರಿತ್ರೆ ಭಾವಚಿತ್ರ ಪ್ರದರ್ಶನ ಮಳಿಗೆ ಉದ್ಘಾಟಿಸಿದರು.

ಇದನ್ನೂ ಓದಿ : ಅಂಬೇಡ್ಕರ್‌ ಅವರ ‘ಸ್ಟೇಟ್ಸ್‌ ಅಂಡ್‌ ಮೈನಾರಿಟೀಸ್‌’ ಕೃತಿ ಹೇಳುವುದೇನು?

ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ, ಜಿಲ್ಲಾ ಪಂಚಾಯತ ಸಿಇಒ ಡಾ.ಗಿರೀಶ ಬದೋಲೆ, ಮಹಾನಗರ ಪಾಲಿಕೆಯ ಆಯುಕ್ತ ಮುಕುಲ್ ಜೈನ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ ಗುಂಟಿ, ಮಹಾನಗರ ಪಾಲಿಕೆಯ ಅಧ್ಯಕ್ಷ ಎಂ.ಡಿ.ಗೌಸ್, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ಅಮೃತರಾವ ಚಿಮಕೋಡೆ, ಮಾಜಿ ಸಚಿವ ಬಂಡೆಪ್ಪಾ ಖಾಶೆಂಪೂರ, ಮಾಜಿ ವಿಧಾನ ಪರಿಷತ್ ಸದಸ್ಯ ಅರವಿಂದಕುಮಾರ ಅರಳಿ, ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಯೋಗೇಶ ಸೇರಿದಂತೆ ಮುಖಂಡರಾದ ಸೂರ್ಯಕಾಂತ ನಾಗಮಾರಪಳ್ಳಿ, ಈಶ್ವರಸಿಂಗ್ ಠಾಕೂರ್, ವಿಜಯಕುಮಾರ ಸೋನಾರೆ, ಮಾರುತಿ ಬೌದ್ಧೆ, ಅನೀಲಕುಮಾರ ಬೆಲ್ದಾರ್, ಸಂಜಯ ಜಾಗೀರದಾರ, ವಿನೋದ ಅಪ್ಪೆ, ಪೃತ್ವಿರಾಜ್, ಮಹೇಶ ಗೋರನಾಳಕರ್, ಪಂಡಿತರಾವ ಚಿದ್ರಿ, ಸಿದ್ದರಾಮಯ್ಯ ಸ್ವಾಮಿ, ಬಾಬುರಾವ್ ಪಾಸ್ವಾನ್, ಶ್ರೀಪತರಾವ ದೀನೆ, ಶಿವಕುಮಾರ ನೀಲಿಕಟ್ಟಿ, ವಿನಯಕುಮಾರ ಮಾಳಗೆ, ರಾಜಕುಮಾರ ವಾಘಮೊರೆ, ಅಭಿ ಕಾಳೆ, ರಾಜಕುಮಾರ ಬನ್ನೂರ ಸೇರಿದಂತೆ ವಿವಿಧ ಸಂಘ-ಸಂಸ್ಥೆ ಪದಾಧಿಕಾರಿಗಳು ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಆಚರಣೆ :

ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು.

WhatsApp Image 2026 04 14 at 5.31.18 PM

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಗಿರೀಶ ಬದೋಲೆ, ಅಪರ ಜಿಲ್ಲಾಧಿಕಾರಿ ಶಿವಾನಂದ ಕರಾಳೆ, ಸಹಾಯಕ ಆಯುಕ್ತ ಮಹಮ್ಮದ ಶಕೀಲ್, ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಯೋಗೇಶ, ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಚಂದ್ರಕಾಂತ ಶಾಬಾದಕರ, ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ಅಧ್ಯಕ್ಷ ಅಮೃತರಾವ ಚಿಮಕೋಡೆ ಇತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ವಿದ್ಯಾರ್ಥಿಗಳು ಮಾನಸಿಕ ಆರೋಗ್ಯದ ಬಗ್ಗೆ ಜಾಗೃತಿ ಬೆಳೆಸಿಕೊಳ್ಳಲಿ ಕರೆ

ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ ಅಂಗವಾಗಿ ಬೀದರ್ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ...

ಹುಮನಾಬಾದ್‌ | ಪಶು ಇಲಾಖೆ ವಾಹನ ನಿರ್ವಹಣೆ ವೆಚ್ಚದಲ್ಲಿ ಅಕ್ರಮ ಆರೋಪ: ತನಿಖೆಗೆ ಭೀಮರೆಡ್ಡಿ ಆಗ್ರಹ

ಹುಮನಾಬಾದ್ ತಾಲ್ಲೂಕಿನ ಪಶುಸಂಗೋಪನೆ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಗೆ ಸರ್ಕಾರದಿಂದ ಒದಗಿಸಿರುವ...

ಬೀದರ್‌ | ಭ್ರಷ್ಟಾಚಾರದಲ್ಲಿ ಮುಳುಗಿದ ಬಿಜೆಪಿ, ಕಾಂಗ್ರೆಸ್ : ಆಪ್ ಶಾಸಕ ಅನಿಲ್ ಝಾ

ರಾಷ್ಟ್ರೀಯ ಪಕ್ಷಗಳಾದ ಬಿಜೆಪಿ ಮತ್ತು ಕಾಂಗ್ರೆಸ್ ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ....

ಬೀದರ್‌ | ಯುವ ಪೀಳಿಗೆ ಸಾಮಾಜಿಕ ಪ್ರಜ್ಞೆ ಬೆಳೆಸಿಕೊಳ್ಳಲಿ: ಮುಬಾಶಿರ್ ಸಿಂಧೆ

ಯುವ ಪೀಳಿಗೆ ಸಾಮಾಜಿಕ ಪ್ರಜ್ಞೆ ಬೆಳೆಸಿಕೊಂಡು ಸಮಾಜದ ಅಭಿವೃದ್ಧಿಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು...