ಬೀದರ್‌ | ರೇಷನ್‌ ಕಾರ್ಡ್‌ ಇ-ಕೆವೈಸಿ ಮಾಡಿಸಿಕೊಳ್ಳಲು ʼಅನ್ನ ಸೇವೆʼ ಮೊಬೈಲ್ ಆ್ಯಪ್

Date:

ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ಐದು ವರ್ಷಗಳ ಹಿಂದೆ ಇ-ಕೆವೈಸಿ ಮಾಡಿಸಿರುವ ಪಡಿತರ ಚೀಟಿ ಸದಸ್ಯರು ಕಡ್ಡಾಯವಾಗಿ ಮರು ಇ-ಕೆವೈಸಿ ಮಾಡಿಸಿಕೊಳ್ಳಬೇಕು ಎಂದು ಆಹಾರ ಮತ್ತು ನಾಗರೀಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.

- Advertisement -

ಬೀದರ್ ಜಿಲ್ಲೆಯಲ್ಲಿ ಐದು ವರ್ಷಗಳ ಹಿಂದೆ ಇ-ಕೆವೈಸಿ ಮಾಡಿಸಿಕೊಂಡಿರುವ ಒಟ್ಟು 8,39,132 ಪಡಿತರ ಚೀಟಿ ಸದಸ್ಯರಿದ್ದು, ಈ ಪೈಕಿ ಈಗಾಗಲೇ 4,89,078 ಸದಸ್ಯರ ಇ-ಕೆವೈಸಿ ಪೂರ್ಣಗೊಂಡಿದೆ. ಇನ್ನೂ 3,50,045 ಸದಸ್ಯರ ಇ-ಕೆವೈಸಿ ಬಾಕಿ ಇದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಚುನಾವಣಾ ಆಯೋಗವು ತಾನೇ ಹಾಕಿಕೊಂಡ ಗಂಟುಗಳನ್ನು ಬಿಡಿಸಿಕೊಳ್ಳಬಲ್ಲದೇ? ಇದೇ...

SIR ನಡೆಸುವ ನಿರ್ಧಾರ ಸರ್ವಾನುಮತದಿಂದ ಕೂಡಿತ್ತು ಎಂದು ಜನ ನಂಬಬೇಕಾದರೆ, ಆಯೋಗವು ಸಂಬಂಧಿಸಿದ ಸಭೆಯ ಅಧಿಕೃತ ನಡಾವಳಿಗಳನ್ನು ಸಾರ್ವಜನಿಕವಾಗಿ ಬಿಡುಗಡೆ ಮಾಡಬೇಕು. ಆ ಮೂಲಕ ಚುನಾವಣಾ ಆಯೋಗವು ತಾನೇ ಸೃಷ್ಟಿಸಿಕೊಂಡಿರುವ ಗೋಜಲುಗಳಿಂದ ಬಿಡಿಸಿಕೊಳ್ಳಬೇಕು. ಭಾರತೀಯ...

ನೊಬೆಲ್‌ ಪ್ರಶಸ್ತಿ ಸರಣಿ | ಕಣ ಭೌತವಿಜ್ಞಾನ-ಖಗೋಳವಿಜ್ಞಾನಗಳೆರಡರ ಸಮ್ಮಿಳನದ...

ಫ್ರಾನ್ಸಿಸ್ ಹಾಲ್ಜೆನ್ ಅವರ ಮೂಲ ಆಲೋಚನೆ ಕೇವಲ ಹಿಮದೊಳಗೆ ಸಂವೇದಕಗಳನ್ನು ಇಡುವ ಯೋಜನೆಯಾಗಿರಲಿಲ್ಲ. ಅದು ವಿಶ್ವವನ್ನು ನೋಡುವ ಹೊಸ ವಿಧಾನಕ್ಕೆ ಬಾಗಿಲು ತೆರೆಯುವ ಆಲೋಚನೆಯಾಗಿತ್ತು. ಅಗೋಚರವಾಗಿರುವ ಕಣಗಳನ್ನು ಹಿಡಿಯುವ ಮೂಲಕ, ವಿಶ್ವದ ಅತ್ಯಂತ...

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಬಾಕಿ ಇರುವ ಸದಸ್ಯರು ಕೂಡಲೇ ತಮ್ಮ ಸಮೀಪದ ನ್ಯಾಯಬೆಲೆ ಅಂಗಡಿಗೆ ಭೇಟಿ ನೀಡಿ ಇ-ಕೆವೈಸಿ ಮಾಡಿಸಿಕೊಳ್ಳಬಹುದು. ರಾಜ್ಯ ಸರ್ಕಾರದ ‘ಅನ್ನ ಸೇವೆ’ ಮೊಬೈಲ್ ಆ್ಯಪ್ ಮೂಲಕವೂ ಸ್ವಯಂ ಇ-ಕೆವೈಸಿ ಮಾಡಿಕೊಳ್ಳುವ ಅವಕಾಶವಿದೆ. ಬಾಕಿ ಇರುವ ಎಲ್ಲ ಸದಸ್ಯರು ಅ.20ರೊಳಗೆ ಇ-ಕೆವೈಸಿ ಪ್ರಕ್ರಿಯೆ ಪೂರ್ಣಗೊಳಿಸಬೇಕು.

‘ಅನ್ನ ಸೇವೆ’ ಆ್ಯಪ್ ಮೂಲಕ ಇ-ಕೆವೈಸಿ ಮಾಡಿಕೊಳ್ಳಲು ಪಡಿತರ ಚೀಟಿಯೊಂದಿಗೆ ಮೊಬೈಲ್ ಸಂಖ್ಯೆ ನೋಂದಣಿಯಾಗಿರುವುದು ಕಡ್ಡಾಯ. ಮೊಬೈಲ್ ಸಂಖ್ಯೆ ನೋಂದಣಿಯಾಗದಿದ್ದರೆ, ಕುಟುಂಬದ ಮುಖ್ಯಸ್ಥರು ನ್ಯಾಯಬೆಲೆ ಅಂಗಡಿಯಲ್ಲಿ ಇ-ಕೆವೈಸಿ ಮಾಡಿಸಿಕೊಂಡ ನಂತರ ಮೊಬೈಲ್ ಸಂಖ್ಯೆ ಪಡಿತರ ಚೀಟಿಗೆ ನೋಂದಣಿಯಾಗುತ್ತದೆ. ಬಳಿಕ ಉಳಿದ ಸದಸ್ಯರು ಆ್ಯಪ್ ಮೂಲಕ ಇ-ಕೆವೈಸಿ ಮಾಡಿಕೊಳ್ಳಬಹುದು.

Advertisements

ನ್ಯಾಯಬೆಲೆ ಅಂಗಡಿಗಳಲ್ಲಿ ಪ್ರತಿದಿನ ಬೆಳಿಗ್ಗೆ 6 ರಿಂದ ರಾತ್ರಿ 10ರವರೆಗೆ ಇ-ಕೆವೈಸಿ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಈ ಸೇವೆ ಸಂಪೂರ್ಣ ಉಚಿತವಾಗಿದ್ದು, ಪಡಿತರ ಚೀಟಿದಾರರು ನ್ಯಾಯಬೆಲೆ ಅಂಗಡಿ ಅಥವಾ ಕಂಪ್ಯೂಟರ್ ಕೇಂದ್ರಗಳಿಗೆ ಯಾವುದೇ ಹಣ ಪಾವತಿಸುವ ಅಗತ್ಯವಿಲ್ಲ.

ಇದನ್ನೂ ಓದಿ : ಬೀದರ್‌ | ಅ.24, 25ರಂದು ʼಕಲ್ಯಾಣ ಪರ್ವʼ ರಜತ ಮಹೋತ್ಸವ

ಹೆಚ್ಚಿನ ಮಾಹಿತಿಗಾಗಿ ಉಚಿತ ಸಹಾಯವಾಣಿ 1967, ಸಂಬಂಧಪಟ್ಟ ತಾಲ್ಲೂಕಿನ ತಹಸೀಲ್ದಾರ್ ಕಚೇರಿ ಅಥವಾ ಬೀದರ್ ಉಪ ನಿರ್ದೇಶಕರ ಕಚೇರಿಯ 08482-226232 ಸಂಖ್ಯೆಗೆ ಸಂಪರ್ಕಿಸಬಹುದು ಎಂದು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಡಾವ್ನ್‌ ಆಫ್ ಯೆಮನ್’ ಕಾರ್ಯಾಚರಣೆ: ಅಲ್-ವಝೀಯಾ ಮರಳಿ ಪಡೆಯಲು ಯೆಮನ್ ಪಡೆಗಳ ದಾಳಿ

ಸನಾ: ಯೆಮನ್‌ನ ಅಂತಾರಾಷ್ಟ್ರೀಯವಾಗಿ ಮಾನ್ಯತೆ ಪಡೆದ ಸರ್ಕಾರದ ಪಡೆಗಳು, ಹೂತಿಗಳ ವಶದಲ್ಲಿರುವ ಪರ್ವತ...

ಮೋಶಾ ಆಡಳಿತ ಬಿತ್ತಿದ ಭಯ ತೊಲಗಿದ್ದು ಒಂದು ಅದ್ಭುತ: ನೇಹಾ ಬೋರಾ

ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ...

ಈಜಿಪ್ಟ್‌ನ ಪುರಾತನ ಸೇನಾ ಕೋಟೆಯಲ್ಲಿ 3 ಸಾವಿರ ವರ್ಷಗಳ ಹಳೆಯ ಕುದುರೆಯ ಅಸ್ಥಿಪಂಜರ ಪತ್ತೆ

ಈಜಿಪ್ಟ್‌ನ ಪಶ್ಚಿಮ ನೈಲ್ ಡೆಲ್ಟಾ ಭಾಗದಲ್ಲಿರುವ ಪುರಾತನ ಸೇನಾ ಕೋಟೆಯೊಂದರಲ್ಲಿ ಸುಮಾರು...

ಮತದಾನದ ಹಕ್ಕು ಕಳೆದುಕೊಂಡವರ ನೆರವಿಗೆ ಕಾಂಗ್ರೆಸ್ ಬೂತ್ ಮಟ್ಟದ ಅಭಿಯಾನ: ‘ಮತ ರಕ್ಷಕ’ರ ನೇಮಕಕ್ಕೆ ತೀರ್ಮಾನ

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ಮೂಲಕ ಮತದಾರರ...