ಜೂನ್ 12 ರಂದು ಬಾಲಕಾರ್ಮಿಕ ವಿರೋಧಿ ದಿನಾಚರಣೆ ಪ್ರಯುಕ್ತ ಬೀದರ ಜಿಲ್ಲಾಡಳಿತ ಹಾಗೂ ಬೀದರ ಜಿಲ್ಲಾ ನ್ಯಾಯಾಲಯ ಸಹಯೋಗದಲ್ಲಿ ಜಾಗೃತಿ ಜಾಥಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಹೇಳಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜೂ.9ರಂದು ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆಯ ಜಿಲ್ಲಾ ಟಾಸ್ಕ್ ಫೋರ್ಸ್ ಸಲಹಾ ಸಮಿತಿ ಸಭೆಯ ಅಧ್ಯಕ್ಷರು ವಹಿಸಿ ಅವರು ಮಾತನಾಡಿದರು.
“ಬೀದರ ಜಿಲ್ಲೆಯಲ್ಲಿ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಹಿನ್ನಲೆ ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆ ಎಲ್ಲಾ ಇಲಾಖೆ ಸಹಕಾರದಿಂದ ಈ ಅನಿಷ್ಟ ಪದ್ದತಿಯನ್ನು ನಿರ್ಮೂಲನೆಗೊಳಿಸಲು ಸಾಧ್ಯವಿದೆ. ಅಂದು ಜಾಗೃತಿ ಜಾಥಾ ಕಾರ್ಯಕ್ರಮ ಹಮ್ಮಿಕೊಂಡಿದ್ದು, ತಹಸೀಲ್ ಕಚೇರಿ, ಬಸವೇಶ್ವರ ಚೌಕ್, ಅಂಬೇಡ್ಕರ್ ವೃತ್ತದಿಂದ ರೋಟರಿ ಕ್ಲಬ್ ವೃತ್ತದ ಮಾರ್ಗವಾಗಿ ಪೂಜ್ಯ ಚನ್ನಬಸವ ಪಟ್ಟದ್ದೇವರು ರಂಗಮಂದಿರಕ್ಕೆ ತಲುಪುತ್ತದೆ. ಬಳಿಕ ವೇದಿಕೆ ಕಾರ್ಯಕ್ರಮ ನಡೆಯಲಿದೆ” ಎಂದರು.
ಸಭೆಯಲ್ಲಿ ಬೀದರ ಜಿಲ್ಲಾ ಕಾನೂನು ಸೇವ ಪ್ರಾಧಿಕಾರ ಅಧ್ಯಕ್ಷರು ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ರಾಘವೇಂದ್ರ ಸೇರಿದಂತೆ ಜಿಲ್ಲಾಮಟ್ಟದ ಅಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು.
ಇದನ್ನೂ ಓದಿ : ಬೀದರ್ ಜಿಲ್ಲೆಯ ರೈತರಿಗೆ ₹246 ಕೋಟಿ ಅತ್ಯಧಿಕ ಬೆಳೆ ವಿಮೆ ಪರಿಹಾರ





