ಬೀದರ್‌ | ಅನುಭವ ಮಂಟಪ ವಿಶ್ವದ ಮೊದಲ ಆಧ್ಯಾತ್ಮಿಕ ವೇದಿಕೆ : ಉಪರಾಷ್ಟ್ರಪತಿ ಸಿ.ಪಿ.ರಾಧಾಕೃಷ್ಣನ್

Date:

ದಾರ್ಶನಿಕ ಬಸವಣ್ಣನವರ ನೇತ್ರತ್ವದಲ್ಲಿ ಪವಿತ್ರ ನೆಲವಾದ ಬಸವಕಲ್ಯಾಣದಲ್ಲಿ ನಿರ್ಮಿಸಿದ ಅನುಭವ ಮಂಟಪವು ವಿಶ್ವದ ಮೊದಲ ಆಧ್ಯಾತ್ಮಿಕ ವೇದಿಕೆಯಾಗಿದೆ ಎಂದು ಉಪರಾಷ್ಟ್ರಪತಿ ಸಿ.ಪಿ.ರಾಧಾಕೃಷ್ಣನ್ ಹೇಳಿದರು.

- Advertisement -

ಭಾಲ್ಕಿ ಪಟ್ಟಣದ ಚನ್ನಬಸವಾಶ್ರಮ ಪರಿಸರದಲ್ಲಿ ಬುಧವಾರ ಆಯೋಜಿಸಿದ್ದ ವಿಶ್ವಗುರು ಬಸವಣ್ಣನವರ ಜಯಂತಿ, ವಚನ ಜಾತ್ರೆ-2026, ಡಾ.ಚನ್ನಬಸವ ಪಟ್ಟದ್ದೇವರ 27ನೇ ಸ್ಮರಣೋತ್ಸವ ಹಾಗೂ ಭಾಲ್ಕಿ ಹಿರೇಮಠದ ಡಾ.ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಪ್ರಚಾರ, ರಾಹುಲ್ ವ್ಯಕ್ತಿತ್ವ ಮತ್ತು ರೆಜಿಮ್ ಚೇಂಜ್

ಮೋದಿ ಅನುಭವಿ ನಟನಂತೆ, ಪ್ರದರ್ಶಕನಂತೆ ಕಾಣುತ್ತಾರೆ. ರಾಹುಲ್ ಗಾಂಧಿ ಪಾತ್ರದ ಒಳಹೊಕ್ಕು ನಟಿಸುವ ಕಲಾವಿದನಂತೆ ಕಾಣುತ್ತಾರೆ. ಈ ನಿಟ್ಟಿನಲ್ಲಿ ರಾಹುಲ್ ರಾಜಕೀಯ ನಡೆಗಳು ಮೋದಿಯವರ ರಾಜಕೀಯ ನಡೆಗಳೊಂದಿಗೆ ವಿಶ್ಲೇಷಣೆಗೊಳಗಾಗುತ್ತಿವೆ. ಕಳೆದ 12 ವರ್ಷಗಳ...

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

ʼಬೀದರ ಜಿಲ್ಲೆಯು ಶರಣರ, ಸಂತರು ನಡೆದಾಡಿದ ಆಧ್ಯಾತ್ಮಿಕ ನೆಲವಾಗಿದೆ. ಸಾಮಾಜಿಕ ಭೇದ-ಭಾವವನ್ನು ಕಟುವಾಗಿ ವಿರೋಧಿಸಿ, ಸಮಾನತೆ ಸಮಾಜಕ್ಕಾಗಿ ಶ್ರಮಿಸಿದರು. ಅನುಭವ ಮಂಟಪದ ಚಿಂತನೆಗಳು ಇಂದಿನ ಸಮಾಜಕ್ಕೆ ದಾರಿದೀಪವಾಗಿವೆʼ ಎಂದರು.

Advertisements

ʼಗಡಿಭಾಗದಲ್ಲಿ ಬಸವಲಿಂಗ ಪಟ್ಟದ್ದೇವರು ತಮ್ಮ ಇಡೀ ಬದುಕು ಸಮಾಜ ಸೇವೆಗೆ ಮುಡಿಪಾಗಿಟ್ಟಿದ್ದಾರೆ. ಧರ್ಮ ಪ್ರಸಾರ, ಪ್ರವಚನ ಮತ್ತು ಶಿಕ್ಷಣ ಸೇವೆ ಮೂಲಕ ಈ ಭಾಗವನ್ನು ಶ್ರೀಮಂತಗೊಳಿಸುವ ಪ್ರಯತ್ನ ಮಾಡಿದ್ದಾರೆ. ಗಡಿ, ಭಾಷೆಯನ್ನು ಮೀರಿ ಬಸವತತ್ವ ಪ್ರಚಾರ ಪ್ರಸಾರದ ಜತೆಗೆ ಸಾಹಿತ್ಯ ಪ್ರಕಟಿಸಿ ಸಮಾನತೆ ಮತ್ತು ಅಧ್ಯಾತ್ಮಿಕ ಜ್ಞಾನದ ಸಂದೇಶ ಸಾರುತ್ತಿದ್ದಾರೆʼ ಎಂದರು.

WhatsApp Image 2026 04 22 at 7.25.39 PM 1

ʼಲಿಂಗಾಯತ ಒಕ್ಕೂಟದ ಅಧ್ಯಕ್ಷರಾಗಿ ಲಿಂಗಾಯತ ಸಮಾಜದ ಏಳಿಗೆಗೆ ಹಗಲಿರಳು ಶ್ರಮಿಸುತ್ತಿದ್ದಾರೆ. ಹಿರೇಮಠ ಸಂಸ್ಥಾನ ವಿದ್ಯಾಪೀಠ ಟ್ರಸ್ಟ್‌ ಅಡಿಯಲ್ಲಿ ಸ್ಥಾಪಿಸಿದ ವಿದ್ಯಾಸಂಸ್ಥೆ ಇಂದು 60 ಅಂಗ ಸಂಸ್ಥೆಗಳು ಹೊಂದಿದ್ದು, ಸಾವಿರಾರು ಮಕ್ಕಳಿಗೆ ಶಿಕ್ಷಣವನ್ನು ಧಾರೆಯರೆಯುತ್ತಿವೆ. 500 ಬಡ, ನಿರ್ಗತಿಕ ಮಕ್ಕಳಿಗೆ ಅನ್ನ, ಅಕ್ಷರ, ಆಶ್ರಯ ಕಲ್ಪಿಸಿ ಅವರ ಭವಿಷ್ಯವನ್ನು ಉಜ್ವಲಗೊಳಿಸಿದ್ದಾರೆ. ಇಂತಹ ಅನೇಕ ವಿಧಾಯಕ ಕಾರ್ಯಗಳ ಮೂಲಕ ಮೇರು ವ್ಯಕ್ತಿಯಾಗಿ ಅವರು ಬೆಳೆದಿದ್ದಾರೆ. ಬಸವಲಿಂಗ ಪಟ್ಟದ್ದೇವರ ಸಮಾಜೋಧಾರ್ಮಿಕ ಕಾರ್ಯ ಹೀಗೆ ಮುಂದುವರೆಯಲಿʼ ಎಂದು ಹಾರೈಸಿದರು.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಮಾತನಾಡಿ, ʼಬಸವಾದಿ ಶರಣರ ಚಿಂತನೆಗಳನ್ನು ಕೇವಲ ಪ್ರಚಾರಗೈದರೆ ಸಾಲದು ಅದರಂತೆ ನಡೆ-ನುಡಿ ಒಂದಾಗಿಸಿಕೊಂಡಲ್ಲಿ ಸಮ ಸಮಾಜ ನಿರ್ಮಾಣಗೊಳ್ಳಲು ಸಾಧ್ಯವಾಗುತ್ತದೆ. ನಾನು ಬುದ್ಧ-ಬಸವ-ಅಂಬೇಡ್ಕರ್, ನಾರಾಯಣಗುರು, ಕಬೀರದಾಸ್‌ ಅವರ ವಿಚಾರಗಳನ್ನು ಬಲವಾಗಿ ನಂಬುತ್ತೇನೆ. ಮಹಾತ್ಮರ ಆಚಾರ, ವಿಚಾರ, ನಡೆ, ನುಡಿ ಒಂದೇ ಆಗಿದ್ದವು. ಆದರೆ, ಇಂದಿನ ದಿನಮಾನಗಳಲ್ಲಿ ಉಪದೇಶ ಹೇಳುವರ ಸಂಖ್ಯೆ ಹೆಚ್ಚುತ್ತಿದೆ ಆದರೆ, ನಿಜ ಜೀವನದಲ್ಲಿ ಆಚರಣೆಗೆ ಬರುತ್ತಿಲ್ಲ, ಇಂದಿಗೂ ಸಮಾಜದಲ್ಲಿ ಜಾತಿಯತೆ, ಕಂದಾಚಾರ, ಅಂಧಶ್ರದ್ಧೆ ಮುಂದುವರೆದಿದೆʼ ಎಂದು ಕಳವಳ ವ್ಯಕ್ತ ಪಡಿಸಿದರು.

ಕರ್ನಾಟಕದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಮಾತನಾಡಿ, ʼಗಡಿಭಾಗದಲ್ಲಿ ಡಾ.ಬಸವಲಿಂಗ ಪಟ್ಟದ್ದೇವರು ತಮ್ಮ ಅಧ್ಯಾತ್ಮಿಕ ಜ್ಞಾನ ಮತ್ತು ಅತ್ಯುತ್ತಮ ವಿಚಾರಗಳ ಮೂಲಕ ಈ ಭಾಗವನ್ನು ಪ್ರಗತಿಯತ್ತ ಕೊಂಡೊಯ್ಯುವ ಪ್ರಯತ್ನ ಮಾಡುತ್ತಿದ್ದಾರೆ. ಶ್ರೀಗಳ ನಿಸ್ವಾರ್ಥ, ತ್ಯಾಗ, ಕರುಣೆ ಮೂಲಕ ಅದ್ಭುತ ಸೇವೆಗೈಯುತ್ತಿದ್ದಾರೆ. ಶಿಕ್ಷಣ ಸಂಸ್ಥೆಯನ್ನು ವ್ಯಾಪಾರಕ್ಕಾಗಿ ಹುಟ್ಟು ಹಾಕದೇ ಶಿಕ್ಷಣವೆಂಬುದು ಜೀವನ ನಿರ್ಮಾಣ ಮಾಡುವ ಮಾಧ್ಯಮ ಎಂಬುದನ್ನು ತೋರಿಸಿ ಕೊಟ್ಟಿದ್ದಾರೆʼ ಎಂದು ತಿಳಿಸಿದರು.

WhatsApp Image 2026 04 22 at 8.30.33 PM 1 1
ಉಪರಾಷ್ಟ್ರಪತಿ ಸಿ.ಪಿ.ರಾಧಾಕೃಷ್ಣನ್ ಅವರಿಗೆ ಗೌರವಿಸಿದರು.

ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಮಾತನಾಡಿ, ಡಾ.ಬಸವಲಿಂಗ ಪಟ್ಟದ್ದೇವರು ಗಡಿ, ಭಾಷೆ ಮೀರಿ ಬಸವತತ್ವ ಪ್ರಚಾರ ಪ್ರಸಾರದ ಮೂಲಕ ಅತ್ಯುತ್ತಮ ಸೇವೆಗೈಯುತ್ತಿದ್ದಾರೆ. 12ನೇ ಶತಮಾನದಲ್ಲಿ ವಿಶ್ವಗುರು ಬಸವಣ್ಣನವರು ಕಾಯಕ-ದಾಸೋಹ ತತ್ವ ಬೋಧಿಸಿದರು. ಅದನ್ನು 21ನೇ ಶತಮಾನದಲ್ಲಿ ಚನ್ನಬಸವ ಪಟ್ಟದ್ದೇವರು ಆಚರಣೆಗೆ ತಂದಿದ್ದರು. ಚನ್ನಬಸವ ಪಟ್ಟದ್ದೇವರು, ಭೀಮಣ್ಣ ಖಂಡ್ರೆ ಸೇರಿ ಸ್ವತಃ ಕಲ್ಲು, ಮಣ್ಣು ಹೊತ್ತು ಬಸವಕಲ್ಯಾಣದಲ್ಲಿ ಅನುಭವ ಮಂಟಪ ಕಟ್ಟಿಸಿದ್ದರು’ ಎಂದು ಸ್ಮರಿಸಿದರು.

ʼಶರಣ ಸಂಸ್ಕೃತಿಯ ಮೌಲ್ಯಗಳನ್ನು ಜನಮಾನಸಕ್ಕೆ ತಲುಪಿಸುವಲ್ಲಿ ಬಸವಲಿಂಗ ಪಟ್ಟದ್ದೇವರು ನಿರಂತರವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಶರಣ ಸಂಗಮ, ಶಿವಾನುಭವ ಪ್ರವಚನ, ವಚನ ಗಾಯನಗಳಂತಹ ಆಧ್ಯಾತ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳ ಮೂಲಕ ಬಸವ ತತ್ವಗಳನ್ನು ಸಮರ್ಥವಾಗಿ ಪ್ರಸಾರ ಮಾಡುತ್ತಿದ್ದಾರೆ. ಸರಳ ಸಾಮೂಹಿಕ ವಿವಾಹಗಳನ್ನು ಆಯೋಜಿಸುವ ಮೂಲಕ ಬಡವರು ಸಾಲದ ಹೊರೆ ಗೀಡಾಗದಂತೆ ಮಾಡಿ, ಸಮಾಜದಲ್ಲಿ ಸಮಾನತೆ ಮತ್ತು ಸೌಹಾರ್ದತೆಯ ಸಂದೇಶವನ್ನು ಬಿತ್ತುತ್ತಿದ್ದಾರೆ. ಶ್ರೀಗಳ ಸೇವಾ ಮನೋಭಾವ, ಸಮಾಜಮುಖಿ ಚಿಂತನೆಗಳು ಎಲ್ಲರಿಗೂ ಮಾದರಿಯಾಗಿದೆ’ ಎಂದು ತಿಳಿಸಿದರು.

ʼಶಿಕ್ಷಣ, ಸಂಸ್ಕೃತಿ ಮತ್ತು ಸಮಾಜಸೇವೆ ಕ್ಷೇತ್ರಗಳಲ್ಲಿ ನೀಡಿರುವ ಮಹತ್ವದ ಕೊಡುಗೆಯನ್ನು ಗುರುತಿಸಿ ಹಂಪಿ ವಿಶ್ವವಿದ್ಯಾಲಯವು ಅವರಿಗೆ ʼನಾಡೋಜʼ ಗೌರವ ನೀಡಿ ಸನ್ಮಾನಿಸಿರುವುದು ನಮ್ಮೆಲ್ಲರಿಗೂ ಹೆಮ್ಮೆಯ ವಿಷಯ. ಇಂತಹ ಮಹನೀಯರು ನಮ್ಮ ಸಮಾಜಕ್ಕೆ ದಿಕ್ಕು ತೋರಿಸುವ ದೀಪಸ್ತಂಭರಾಗಿದ್ದಾರೆ. ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರು ಇನ್ನೂ ದೀರ್ಘಾಯುಷಿಯಾಗಿ ಆರೋಗ್ಯದಿಂದ ನಮ್ಮೆಲ್ಲರಿಗೆ ಮಾರ್ಗದರ್ಶನ ನೀಡಲಿʼ ಎಂದು ಹಾರೈಸಿದರು.

ಸಾನ್ನಿಧ್ಯ ವಹಿಸಿದ್ದ ಡಾ.ಬಸವಲಿಂಗ ಪಟ್ಟದ್ದೇವರು ಮಾತನಾಡಿ, ʼಕೇವಲ ಪೂಜೆ, ಧ್ಯಾನಕ್ಕಿಂತ ಸೇವಾ ಕಾರ್ಯ ಮುಖ್ಯ ನೊಂದವರ ಕಣ್ಣೀರು ಒರೆಸುವುದು ಬಸವಣ್ಣನವರ ಸಿದ್ದಾಂತ ಆಗಿದೆ. ಬಡವರ, ದೀನ ದಲಿತರ, ಅನಾಥರಲ್ಲಿ ದೇವರನ್ನು ಕಂಡಿದ್ದಾರೆ. ನಮ್ಮ ಮಠವು ಬಸವತತ್ವ ಆಚರಣೆಗೆ ತಂದಿದ್ದೇವೆʼ ಎಂದರು.

WhatsApp Image 2026 04 22 at 8.30.34 PM

ʼಬಸವಣ್ಣನವರು ಕೇವಲ ಕರ್ನಾಟಕಕ್ಕೆ ಸೀಮಿತವಾದ ವ್ಯಕ್ತಿ ಅಲ್ಲ, ಅವರ ಚಿಂತನೆ ಇಡೀ ವಿಶ್ವಕ್ಕೆ ಮಾದರಿಯಾಗಿವೆ. ಕೇಂದ್ರ ಸರ್ಕಾರದಿಂದ ಮಹಾವೀರ, ಬುದ್ಧ ಜಯಂತಿ ಆಚರಣೆಗೆ ರಜೆ ಘೋಷಿಸುವಂತೆ ಬಸವಣ್ಣನವರ ಜಯಂತಿಯನ್ನು ರಾಷ್ಟ್ರೀಯ ಮಟ್ಟದಲ್ಲಿ ಆಚರಣೆಗೆ ತಂದು ಸಾರ್ವಜನಿಕ ರಜೆ ಘೋಷಿಸಬೇಕುʼ ಎಂದು ಮನವಿ ಮಾಡಿದರು.

ಉಪರಾಷ್ಟ್ರಪತಿ ಸಿ.ಪಿ.ರಾಧಾಕೃಷ್ಣನ್‌ ಅವರು ನೀಡಿರುವ 75 ಲಕ್ಷ ಹಣದ ಚೆಕ್ ಅನ್ನು ಬಸವಕಲ್ಯಾಣದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಈ ಬಾರಿಯ ಬಜೆಟ್‌ನಲ್ಲಿ ಘೋಷಿಸಿರುವ ವಚನ ವಿಶ್ವವಿದ್ಯಾಲಯಕ್ಕೆ ನನ್ನ ಪ್ರಥಮ ಕಾಣಿಕೆಯಾಗಿ ಸಲ್ಲಿಸುವೆʼ ಎಂದು ಬಸವಲಿಂಗ ಪಟ್ಟದ್ದೇವರು ಘೋಷಿಸಿದರು.

ಗದಗ-ಡಂಬಳ ಜಗದ್ಗುರು ತೋಂಟದಾರ್ಯ ಮಠದ ಜಗದ್ಗುರು ಡಾ.ತೋಂಟದ ಸಿದ್ಧರಾಮ ಸ್ವಾಮೀಜಿ ದಿವ್ಯ ಸಾನ್ನಿಧ್ಯ ವಹಿಸಿದ್ದರು.

ಇದನ್ನೂ ಓದಿ : ಬೀದರ್ | ಮನುವಾದ, ಚಾತುರ್ವರ್ಣ ವಿಚಾರಧಾರೆ ತಿರಸ್ಕರಿಸಿದ ಬಸವಣ್ಣ : ಮಲ್ಲಿಕಾರ್ಜುನ ಖರ್ಗೆ

12ನೇ ಶತಮಾನದ ಬಸವಾದಿ ಶರಣರ ಸಾಮಾಜಿಕ ಕ್ರಾಂತಿ ಮತ್ತು ಅವರ ವೈಚಾರಿಕ ನಿಲುವುಗಳನ್ನು ವಿಶ್ಲೇಷಿಸುವ ಸಂಶೋಧನಾ ಕೃತಿ (ಶರಣರ ಕ್ರಾಂತಿ ಪಥ), ನಿತ್ಯ ಜೀವನಕ್ಕೆ ವಚನಗಳ ಪ್ರಸ್ತುತತೆಯನ್ನು ಸಾರುವ ಲೇಖನಗಳ ಸಂಗ್ರಹ (ವಚನ ವೈಭವ, ಸಂಪುಟಗಳು), ಭಾಲ್ಕಿ ಹಿರೇಮಠದ ಇತಿಹಾಸ ಮತ್ತು ಸಮಾಜ ಸೇವೆಯನ್ನು ದಾಖಲಿಸಿರುವ ಸ್ಮರಣ ಸಂಚಿಕೆ (ಮಠದ ಪರಂಪರೆ), ಶರಣರ ಅನುಭವ ಮಂಟಪದ ಚರ್ಚೆಗಳು ಮತ್ತು ಪ್ರಜಾಪ್ರಭುತ್ವದ ಮೌಲ್ಯಗಳನ್ನು ಸಾರುವ ಪುಸ್ತಕ (ಅನುಭವ ಮಂಟಪದ ಬೆಳಕು) ಗಳನ್ನು ಗಣ್ಯರು ಬಿಡುಗಡೆಗೊಳಿಸಿದರು.

WhatsApp Image 2026 04 22 at 7.26.11 PM
ಅಮೃತ ಮಹೋತ್ವಸ ಪ್ರಯುಕ್ತ ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರು ಅವರಿಗೆ ಗೌರವಿಸಿದರು.

ಭಾಲ್ಕಿ ಹಿರೇಮಠ ಸಂಸ್ಥಾನದ ಪೀಠಾಧಿಪತಿ ಗುರುಬಸವ ಪಟ್ಟದ್ದೇವರು, ಪೌರಾಡಳಿತ ಇಲಾಖೆಯ ಸಚಿವ ರಹೀಂ ಖಾನ್, ಕೇಂದ್ರದ ಮಾಜಿ ಸಚಿವ ಭಗವಂತ ಖೂಬಾ, ಶಾಸಕ ಡಾ.ಶೈಲೇಂದ್ರ ಬೆಲ್ದಾಳೆ, ಮಾಜಿ ಶಾಸಕ ಪ್ರಕಾಶ ಖಂಡ್ರೆ, ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ನಿಕಟಪೂರ್ವ ಅಧ್ಯಕ್ಷ ಶಶಿಧರ ಕೋಸಂಬೆ ಸೇರಿದಂತೆ ಹಲವರು ಇದ್ದರು. ಸಂಸದ ಸಾಗರ ಖಂಡ್ರೆ ಸ್ವಾಗತಿಸಿದರು. ಭಾರತೀಯ ಬಸವ ಬಳಗದ ರಾಜ್ಯಾಧ್ಯಕ್ಷ ಬಾಬು ವಾಲಿ ನಿರೂಪಿಸಿ, ವಂದಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಾಯದ ಗುರುತುಗಳಿಲ್ಲವೆಂದು ಪೋಕ್ಸೋ ಸಂತ್ರಸ್ತೆಗೆ ಪರಿಹಾರ ನಿರಾಕರಿಸುವಂತಿಲ್ಲ: ಅಲಹಾಬಾದ್‌ ಹೈಕೋರ್ಟ್

ಲೈಂಗಿಕ ದೌರ್ಜನ್ಯ ಪ್ರಕರಣದ ವೈದ್ಯಕೀಯ ವರದಿಯಲ್ಲಿ ದೈಹಿಕ ಗಾಯಗಳ ಗುರುತುಗಳು ದಾಖಲಾಗಿಲ್ಲ...

ಶಿವಮೊಗ್ಗ | ಹಲ್ಲೆಗೊಳಗಾಗಿ ರೈಲ್ವೆ ಹಳಿ ಮೇಲೆ ಬಿದ್ದಿದ್ದ ಯುವಕ ಚಿಕಿತ್ಸೆ ಫಲಿಸದೆ ಸಾವು

ಶಿವಮೊಗ್ಗ ರೈಲ್ವೆ ಹಳಿ ಬಳಿ ಗಂಭೀರ ಗಾಯಗಳೊಂದಿಗೆ ಪತ್ತೆಯಾಗಿದ್ದ 26 ವರ್ಷದ...

ನೇಣು ಬಿಗಿದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ; ತರಾತುರಿಯಲ್ಲಿ ಅಂತ್ಯಕ್ರಿಯೆ, ಕಾರಣ ನಿಗೂಢ!

ಸೊರಬ ತಾಲೂಕಿನ ಮುಟಗುಪ್ಪೆ ಗ್ರಾಮದಲ್ಲಿ 22 ವರ್ಷದ ಯುವತಿಯೊಬ್ಬರು ಮನೆಯಲ್ಲಿ ನೇಣು...