ಬೀದರ್‌ | ಬರಪೀಡಿತ ಜಿಲ್ಲೆಯನ್ನಾಗಿ ಘೋಷಿಸಿ : ಪ್ರತಿ ಎಕರೆಗೆ ₹50 ಸಾವಿರ ಪರಿಹಾರ ನೀಡಲು ಎಎಪಿ ಆಗ್ರಹ

Date:

ಮುಂಗಾರು ಮಳೆ ಸಂಪೂರ್ಣವಾಗಿ ಕೈಕೊಟ್ಟ ಪರಿಣಾಮ ಜಿಲ್ಲೆಯ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದು, ಬೀದರ ಜಿಲ್ಲೆಯನ್ನು ತಕ್ಷಣವೇ ಬರಪೀಡಿತ ಪ್ರದೇಶವೆಂದು ಘೋಷಿಸಿ ಪ್ರತಿ ಎಕರೆಗೆ ₹50 ಸಾವಿರ ಪರಿಹಾರ ನೀಡಬೇಕು ಎಂದು ಆಮ್ ಆದ್ಮಿ ಪಾರ್ಟಿ ಬೀದರ ಜಿಲ್ಲಾ ಘಟಕ ಆಗ್ರಹಿಸಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರ ಹೆಸರಿಗೆ ಬರೆದ ಮನವಿಯನ್ನು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರಿಗೆ ಸಲ್ಲಿಸಿದರು.

- Advertisement -

“ಜಿಲ್ಲೆಯ ರೈತರು ಪ್ರತಿ ವರ್ಷ ಅತಿವೃಷ್ಟಿ-ಅನಾವೃಷ್ಟಿಯಿಂದ ಸಂಕಷ್ಟ ಅನುಭವಿಸುತ್ತಿದ್ದು, ಈ ಬಾರಿ ಮುಂಗಾರು ಮಳೆ ಸಂಪೂರ್ಣ ವಿಫಲವಾಗಿರುವುದರಿಂದ ಬೆಳೆಗಳು ಒಣಗಿ ನಾಶವಾಗುತ್ತಿವೆ. ರೈತರು ಸಾಲ ಮಾಡಿ ಬೀಜ, ಗೊಬ್ಬರ ಹಾಗೂ ಕೃಷಿ ಚಟುವಟಿಕೆಗಳಿಗೆ ಹೆಚ್ಚಿನ ಹಣ ವೆಚ್ಚ ಮಾಡಿ ಬಿತ್ತನೆ ನಡೆಸಿದ್ದರೂ ಸಮರ್ಪಕ ಮಳೆಯ ಕೊರತೆಯಿಂದ ಬೆಳೆ ಹಾನಿಗೊಳಗಾಗಿದೆ. ಇದರಿಂದ ರೈತರು ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದು, ಸಾಲಗಾರರ ಒತ್ತಡದಿಂದ ಆತಂಕದ ವಾತಾವರಣ ನಿರ್ಮಾಣವಾಗಿದೆ. ಸರ್ಕಾರ ಕೂಡಲೇ ಮಧ್ಯಪ್ರವೇಶಿಸಿ ರೈತರ ನೆರವಿಗೆ ಧಾವಿಸಬೇಕು” ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಿ, ಜಿಲ್ಲೆಯ ಪ್ರತಿಯೊಬ್ಬ ರೈತನಿಗೂ ಪ್ರತಿ ಎಕರೆಗೆ ₹50 ಸಾವಿರ ಪರಿಹಾರ ನೀಡುವ ಮೂಲಕ ರೈತರನ್ನು ಆರ್ಥಿಕ ಸಂಕಷ್ಟದಿಂದ ಪಾರು ಮಾಡಬೇಕು ಎಂದು ಎಎಪಿ ಆಗ್ರಹಿಸಿದೆ.

ಆಮ್ ಆದ್ಮಿ ಪಕ್ಷದ ಬೀದರ ಜಿಲ್ಲಾಧ್ಯಕ್ಷ ಸಿದ್ದು ಫುಲಾರಿ ಮಾತನಾಡಿ, “ರೈತರ ಹಿತದೃಷ್ಟಿಯಿಂದ ಸರ್ಕಾರ ಯಾವುದೇ ವಿಳಂಬ ಮಾಡದೆ ಬರಗಾಲ ಘೋಷಿಸಿ, ಪ್ರತಿ ಎಕರೆಗೆ ₹50 ಸಾವಿರ ಪರಿಹಾರ ನೀಡುವ ಮೂಲಕ ರೈತರನ್ನು ಆರ್ಥಿಕ ಸಂಕಷ್ಟದಿಂದ ಪಾರು ಮಾಡಬೇಕು ಇಲ್ಲವಾದಲ್ಲಿ ಆಮ್ ಆದ್ಮಿ ಪಕ್ಷದಿಂದ ಹೋರಾಟ ತೀವ್ರಗೊಳಿಸಲಾಗುವುದು” ಎಂದು ಎಚ್ಚರಿಸಿದರು.

ಇದನ್ನೂ ಓದಿ : ಬೀದರ್‌ | ಹಳೆಗನ್ನಡ ಸಾಹಿತ್ಯ ಮುಂದಿನ ಪೀಳಿಗೆಗೆ ತಲುಪಿಸುವುದು ಅತ್ಯವಶ್ಯಕ: ಪ್ರೊ.ಬಿ.ಎಸ್.ಬಿರಾದಾರ

ಪಕ್ಷದ ಮುಖಂಡರಾದ ಓಂಕಾರ, ವಿಠಲ್ ತುಕಾರಾಮ, ಸೈಯದ್ ಮುಜಾಮಿಲ್, ಜಾವಿದ್, ರಾಜಕುಮಾರ ಪಾಟೀಲ್, ವೆಂಕಟೇಶ, ಕಂಟೆಪ್ಪಾ ಗುಪ್ತಾ, ಬಸವ ಪಾಟೀಲ್, ಚಿದಾನಂದ, ಸೂರ್ಯಕಾಂತ, ಶಾಂತಕುಮಾರ, ಡಿ.ಕೆ.ಯೊಹಾನ್, ಅಶೋಕ, ಪಂಡರಿ ಸೇರಿದಂತೆ ಪಕ್ಷದ ಕಾರ್ಯಕರ್ತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಮೋದಿಯನ್ನು ದೇವರನ್ನಾಗಿಸುವ ಯತ್ನ’: ಬಿಹಾರ ಸಿಎಂ ಹೇಳಿಕೆಗೆ ಪ್ರಶಾಂತ್ ಕಿಶೋರ್ ಕಿಡಿ

ಪ್ರಧಾನಿ ನರೇಂದ್ರ ಮೋದಿ ಅವರು ಶ್ರೀರಾಮನಿಗೂ ಮನೆ ಒದಗಿಸಿದರು ಎಂಬ ಬಿಹಾರ...

ಬಾಗಲಕೋಟೆ | ಎಸ್‌ಐಆರ್ ಪ್ರಕ್ರಿಯೆ ಸ್ಥಗಿತಕ್ಕೆ ಒತ್ತಾಯಿಸಿ ದಲಿತ ಸಂಘರ್ಷ ಸಮಿತಿ ಪ್ರತಿಭಟನೆ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಜಾಗೊಳಿಸಿ, ಅವರ ವಿರುದ್ಧ ಕ್ರಿಮಿನಲ್...

ಬೆಳಗಾವಿ | ಚೂನಪ್ಪ ಪೂಜೇರಿ, ನಾನು ಸತ್ತರೂ ಒಂದೇ ಗೋರಿಯಲ್ಲಿ ಮಣ್ಣಾಗಬೇಕು: ಶಶಿಕಾಂತ ಗುರೂಜಿ

ಕಬ್ಬು ಬೆಳೆಗಾರರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬೆಳಗಾವಿ ಜಿಲ್ಲೆಯ ಹತ್ತರಗಿ...