ಬೀದರ್‌ | ಕಾರಂಜಾ ಸಂತ್ರಸ್ತರ ಪರಿಹಾರಕ್ಕೆ ಮನವಿ : ಮತ್ತೆ ಭರವಸೆ ನೀಡಿದ ಸಿಎಂ ಸಿದ್ದರಾಮಯ್ಯ

Date:

ಕಾರಂಜಾ ಜಲಾಶಯ ಯೋಜನೆಯಲ್ಲಿ ಭೂಮಿ ನೀಡಿದ ಸಂತ್ರಸ್ತ ರೈತರಿಗೆ ಮಾನವೀಯತೆ ಆಧಾರದಲ್ಲಿ ವೈಜ್ಞಾನಿಕ ಪರಿಹಾರ ನೀಡುವಂತೆ ಕಾರಂಜಾ ಮುಳುಗಡೆ ಸಂತ್ರಸ್ತರ ಹಿತರಕ್ಷಣಾ ಸಮಿತಿ ಸಿಎಂ ಸಿದ್ದರಾಮಯ್ಯ ಅವರನ್ನು ಮನವಿ ಮಾಡಿದೆ.

- Advertisement -

ಪತ್ರಕರ್ತರ ರಾಜ್ಯ ಸಮ್ಮೇಳನ ಪ್ರಯುಕ್ತ ಶನಿವಾರ ಬೀದರ್‌ ನಗರಕ್ಕೆ ಆಗಮಿಸಿದ ವೇಳೆ ಬೀದರ್‌ ಏರಪೋರ್ಟ್‌ ಬಳಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ನೀಡಿ, ಕಾರಂಜಾ ಜಲಾಶಯಕ್ಕೆ ಬೆಲೆಬಾಳುವ ಭೂಮಿ ನೀಡಿ ಮನೆ-ಮಠ ಕಳೆದುಕೊಂಡು ಆರ್ಥಿಕ ಸಂಕಷ್ಟ ಅನುಭವಿಸುತ್ತಿರುವ ರೈತರಿಗೆ ಸಮರ್ಪಕ ಪರಿಹಾರ ನೀಡುವಂತೆ ಹಕ್ಕೊತ್ತಾಯ ಪತ್ರ ಸಲ್ಲಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಸಂತ್ರಸ್ತ ರೈತರ ಮನವಿ ಸ್ವೀಕರಿಸಿದ ಬಳಿಕ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ʼಕಾರಂಜಾ ಸಂತ್ರಸ್ತ ಬೇಡಿಕೆಯನ್ನು ಈಡೇರಿಸುವ ಸಂಬಂಧ ಶೀಘ್ರದಲ್ಲೇ ಹೋರಾಟದ ಮುಖಂಡರನ್ನು ಬೆಂಗಳೂರಿಗೆ ಕರೆಯಿಸಿ ಚರ್ಚಿಸಿ, ಸೂಕ್ತ ನಿರ್ಧಾರ ತೆಗೆದುಕೊಳ್ಳುವುದುʼ ಎಂದು ಅಶ್ವಾಸನೆ ನೀಡಿದ್ದಾರೆ.

ʼದಶಕಗಳ ಕಾಲದ ಕಾರಂಜಾ ಜಲಾಶಯದ ಸಂತ್ರಸ್ತ ರೈತರ ಹೋರಾಟಕ್ಕೆ ಕೊನೆಗೂ ತಾರ್ಕಿಕ ಅಂತ್ಯ ಸಿಗುವ ಲಕ್ಷಣಗಳು ಕಾಣುತ್ತಿವೆ. ಬಹಳ ವರ್ಷಗಳಿಂದ ನನೆಗುದಿಗೆ ಬಿದ್ದಿರುವ ಕಾರಂಜಾ ಸಂತ್ರಸ್ತರ ಪರಿಹಾರದ ವಿಷಯದಲ್ಲಿ ಮುಖ್ಯಮಂತ್ರಿಗಳ ಈ ಭರವಸೆಯು ರೈತರಲ್ಲಿ ಹೊಸ ಭರವಸೆಯನ್ನು ಮೂಡಿಸಿದೆʼ ಎಂದು ಹಿರಿಯ ಹೋರಾಟಗಾರ ಲಕ್ಷ್ಮಣ ದಸ್ತಿ ಹೇಳಿದ್ದಾರೆ.

WhatsApp Image 2026 04 11 at 9.07.02 PM

ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಅವರು ರೈತರಿಗೆ ಪರಿಹಾರ ಕೊಡಿಸುವ ದೃಢ ನಿಶ್ಚಯ ಮಾಡಿದ್ದಾರೆ. ತಮ್ಮ ರಾಜಕೀಯ ಇಚ್ಛಾಶಕ್ತಿ ಪ್ರದರ್ಶಿಸಿ ರೈತರಿಗೆ ಮಾನವೀಯ ಮಾನದಂಡದ ಮೇಲೆ ನ್ಯಾಯಯುತ ಪರಿಹಾರವನ್ನು ಶೀಘ್ರ ಒದಗಿಸಬೇಕೆಂದು ಮುಖ್ಯಮಂತ್ರಿಗಳಿಗೆ ಸಚಿವ ಈಶ್ವರ ಖಂಡ್ರೆ ಅವರು ಮನವರಿಕೆ ಮಾಡಿಕೊಟ್ಟಿದ್ದಾರೆʼ ಎಂದು ಲಕ್ಷ್ಮಣ ದಸ್ತಿ ತಿಳಿಸಿದ್ದಾರೆ.

ಇದನ್ನೂ ಓದಿ : ಬೀದರ್‌ | ನಾಗರಿಕ ವಿಮಾನಯಾನ ಸೇವೆ ಮುಂದುವರಿಸಲು ಸಚಿವ ಈಶ್ವರ ಖಂಡ್ರೆ ಮನವಿ

ಈ ಸಂದರ್ಭದಲ್ಲಿ ಕಲ್ಯಾಣ ಕರ್ನಾಟಕ ಹೋರಾಟ ಸಮಿತಿಯ ಗೌರವಾಧ್ಯಕ್ಷ ಬಸವರಾಜ ದೇಶಮುಖ, ಚಿಂತಕ ಆರ್.ಕೆ.ಹುಡುಗಿ, ಸಮಿತಿಯ ಅಧ್ಯಕ್ಷ ಚಂದ್ರಶೇಖರ್ ಪಾಟೀಲ್ ಹೊಚಕನಳ್ಳಿ ಸೇರಿದಂತೆ ಪ್ರಮುಖರಾದ ನಾಗಶೆಟ್ಟಿ ಹಚ್ಚೆ, ಮಾರುತಿ ಬೌದ್ಧೆ, ವಿನಯ ಕುಮಾರ ಮಾಳಗೆ, ರೋಹನಕುಮಾರ್, ಮಹೇಶ ಗೋರನಾಳಕರ್, ರಾಜಪ್ಪ ಕೋಸಂ, ರಾಜಶೇಖರ, ವೀರೇಂದ್ರ ಭತಮುರ್ಗೆ, ಮಾದಪ್ಪ, ಸಂಗಾರೆಡ್ಡಿ, ಶ್ರೀಧರ್ ಸೋಮನೋರ್, ಯೂಸುಫ್ ಮಿಯಾ, ಎಂ.ಡಿ. ಅಹ್ಮದ್, ರೇವಣಪ್ಪ, ಬಸವರಾಜ ಹಿಂದಾ ಸೇರಿದಂತೆ 28 ಹಳ್ಳಿಗಳ ಸಂತ್ರಸ್ತ ರೈತರು ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ʼಕರೇಜ್‌ʼ ದೇಶದ ಜಲಸಂರಕ್ಷಣೆಗೆ ಮಾದರಿ : ಕೇಂದ್ರದ ಅಧಿಕಾರಿಗಳ ಮೆಚ್ಚುಗೆ

ಬೀದರ್‌ನ ಐತಿಹಾಸಿಕ ʼಕರೇಜ್‌ʼ ಜಲವ್ಯವಸ್ಥೆ ದೇಶದ ಜಲಸಂರಕ್ಷಣೆಗೆ ಮಾದರಿಯಾಗಬಲ್ಲದು ಎಂದು ಕೇಂದ್ರ...

ಬೀದರ್‌ | ಕಾನ್ಶಿರಾಂ ಹೋರಾಟ ಬಹುಜನರ ರಾಜಕೀಯ ಜಾಗೃತಿಗೆ ದಾರಿದೀಪ

ಬೀದರ್ ಜಿಲ್ಲಾ ದಲಿತ ಸಂಘಟನೆಗಳ ಒಕ್ಕೂಟ ಹಾಗೂ ವಿವಿಧ ಬಹುಜನ ಸಂಘಟನೆಗಳ...

ಔರಾದ್ | ಶೋಷಿತ ಸಮುದಾಯಗಳ ರಾಜಕೀಯ ಜಾಗೃತಿಗೆ ಶ್ರಮಿಸಿದ ಕಾನ್ಶಿರಾಂ

ದಲಿತರು, ಹಿಂದುಳಿದವರು ಹಾಗೂ ಅಲ್ಪಸಂಖ್ಯಾತರ ರಾಜಕೀಯ ಹಕ್ಕುಗಳಿಗಾಗಿ ಹೋರಾಟ ರೂಪಿಸಿ, ಬಹುಜನ...

ಹುಮನಾಬಾದ್ ತಾಲೂಕು ಟೋಕರೆ ಕೋಳಿ ಸಮಾಜ ಸಂಘದ ಅಧ್ಯಕ್ಷರಾಗಿ ಸಂತೋಷ ಸಂಗಮ ಆಯ್ಕೆ

ಬೀದರ್‌ ಜಿಲ್ಲೆಯ ಹುಮನಾಬಾದ್ ತಾಲೂಕು ಎಸ್‌ಟಿ ಟೋಕರೆ ಕೋಳಿ ಸಮಾಜ ಸಂಘದ...