ಬೀದರ್‌ | ಕಾಡು ಪ್ರಾಣಿಗಳ ಹಾವಳಿ ತಡೆಗೆ ಕ್ರಮವಹಿಸಲು ಅರಣ್ಯ ಸಚಿವರಿಗೆ ಮನವಿ

Date:

ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ವಿವಿಧ ಗ್ರಾಮಗಳಲ್ಲಿ ಹೆಚ್ಚುತ್ತಿರುವ ಕಾಡು ಪ್ರಾಣಿಗಳ ಹಾವಳಿಯನ್ನು ನಿಯಂತ್ರಿಸಲು ಅಗತ್ಯ ಕ್ರಮ ಕೈಗೊಳ್ಳುವುದರ ಜೊತೆಗೆ, ಕಾಡು ಪ್ರಾಣಿಗಳಿಂದ ಬೆಳೆ ಹಾಗೂ ಜಾನುವಾರು ಹಾನಿಗೊಳಗಾದ ರೈತರಿಗೆ ಶೀಘ್ರವಾಗಿ ಪರಿಹಾರ ಬಿಡುಗಡೆ ಮಾಡಬೇಕು ಎಂದು ಶಾಸಕ ಡಾ.ಶೈಲೇಂದ್ರ ಬೆಲ್ದಾಳೆ ಅವರು ಅರಣ್ಯ ಸಚಿವ ರಾಮಲಿಂಗಾ ರೆಡ್ಡಿ ಅವರಿಗೆ ಮನವಿ ಮಾಡಿದರು.

- Advertisement -

ಬೀದರ್ ಜಿಲ್ಲೆಗೆ ಆಗಮಿಸಿದ್ದ ಅರಣ್ಯ ಸಚಿವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ ಅವರು, “ಕ್ಷೇತ್ರದ ಅಮಲಾಪುರ, ಮನ್ನಳ್ಳಿ ರಸ್ತೆ ಹಾಗೂ ಬೆಳ್ಳೂರ ಗ್ರಾಮದ ಮುಖ್ಯ ದ್ವಾರದಿಂದ ಕಮಠಾಣಾ ಗ್ರಾಮಕ್ಕೆ ತೆರಳುವ ರಸ್ತೆಯ ಕೆಲವು ಭಾಗಗಳು ದಟ್ಟ ಅರಣ್ಯ ಪ್ರದೇಶದ ಮೂಲಕ ಹಾದು ಹೋಗುತ್ತವೆ. ಈ ಮಾರ್ಗಗಳಲ್ಲಿ ಇತ್ತೀಚಿನ ದಿನಗಳಲ್ಲಿ ಕಾಡುಹಂದಿ, ಜಿಂಕೆ, ಕೃಷ್ಣಮೃಗ, ಮಂಗ ಸೇರಿದಂತೆ ವಿವಿಧ ಕಾಡು ಪ್ರಾಣಿಗಳ ಓಡಾಟ ಹೆಚ್ಚಾಗಿದೆ. ಅದರಲ್ಲೂ ರಾತ್ರಿ ವೇಳೆ ಪ್ರಾಣಿಗಳು ಏಕಾಏಕಿ ರಸ್ತೆ ದಾಟುತ್ತಿರುವುದರಿಂದ ವಾಹನ ಸವಾರರು ಹಾಗೂ ಸಾರ್ವಜನಿಕರಲ್ಲಿ ಆತಂಕ ಉಂಟಾಗಿದೆ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಕಾಡು ಪ್ರಾಣಿಗಳಿಂದ ಉಂಟಾಗುತ್ತಿರುವ ಅಪಘಾತದ ಅಪಾಯವನ್ನು ಕಡಿಮೆ ಮಾಡಲು ಅಮಲಾಪುರ-ಮನ್ನಳ್ಳಿ ಹಾಗೂ ಬೆಳ್ಳೂರ-ಕಮಠಾಣಾ ರಸ್ತೆಗಳಿಗೆ ಹೊಂದಿಕೊಂಡಿರುವ ಅರಣ್ಯ ಪ್ರದೇಶದ ಎರಡೂ ಬದಿಗಳಲ್ಲಿ ಸೂಕ್ತ ಗುಣಮಟ್ಟದ ತಂತಿ ಬೇಲಿ ನಿರ್ಮಿಸಬೇಕು ಎಂದು ಶಾಸಕರು ಒತ್ತಾಯಿಸಿದರು.

ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ, ಕಾಡು ಪ್ರಾಣಿಗಳ ಓಡಾಟ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಬೇಕು. ಸಾರ್ವಜನಿಕರ ಸುರಕ್ಷತೆ ಹಾಗೂ ಸುಗಮ ವಾಹನ ಸಂಚಾರಕ್ಕೆ ಅಗತ್ಯವಾದ ಶಾಶ್ವತ ಕ್ರಮಗಳನ್ನು ಕೈಗೊಳ್ಳಬೇಕು. ತಂತಿ ಬೇಲಿ ನಿರ್ಮಿಸುವುದರಿಂದ ಕಾಡು ಪ್ರಾಣಿಗಳು ರಸ್ತೆಗೆ ಪ್ರವೇಶಿಸುವುದನ್ನು ನಿಯಂತ್ರಿಸುವುದರ ಜೊತೆಗೆ, ಅವುಗಳ ಸಂರಕ್ಷಣೆಗೂ ಸಹಕಾರಿಯಾಗಲಿದೆ ಎಂದು ಹೇಳಿದರು.

ಬೀದರ್ ದಕ್ಷಿಣ ಕ್ಷೇತ್ರದ ವಿವಿಧ ಗ್ರಾಮಗಳಲ್ಲಿ ಕಾಡು ಪ್ರಾಣಿಗಳು ರೈತರ ಜಮೀನುಗಳಿಗೆ ನುಗ್ಗಿ ಬೆಳೆಗಳನ್ನು ನಾಶಪಡಿಸುತ್ತಿರುವುದರಿಂದ ರೈತರು ಭಾರೀ ಆರ್ಥಿಕ ನಷ್ಟ ಅನುಭವಿಸುತ್ತಿದ್ದಾರೆ. ಜಾನುವಾರುಗಳಿಗೂ ಹಾನಿಯಾಗುತ್ತಿರುವ ಘಟನೆಗಳು ನಡೆಯುತ್ತಿದ್ದು, ಗ್ರಾಮೀಣ ಜನರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ ಎಂದು ಶಾಸಕ ಬೆಲ್ದಾಳೆಯವರು ಸಚಿವರ ಗಮನಕ್ಕೆ ತಂದರು.

WhatsApp Image 2026 08 14 at 11.58.13 AM 6
ಜಾಹೀರಾತು

ಕಾಡು ಪ್ರಾಣಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳಲ್ಲಿ ನಿಯಮಿತ ಗಸ್ತು, ಮುನ್ನೆಚ್ಚರಿಕಾ ಕ್ರಮಗಳು ಹಾಗೂ ಸಾರ್ವಜನಿಕರ ಸುರಕ್ಷತೆಗೆ ಅಗತ್ಯ ವ್ಯವಸ್ಥೆ ಕಲ್ಪಿಸುವಂತೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ನಿರ್ದೇಶನ ನೀಡಬೇಕು. ಈಗಾಗಲೇ ಕಾಡು ಪ್ರಾಣಿಗಳ ಹಾವಳಿಯಿಂದ ಬೆಳೆ, ಜಾನುವಾರು ಹಾಗೂ ಇತರೆ ರೀತಿಯಲ್ಲಿ ಹಾನಿಗೊಳಗಾದ ಸಂತ್ರಸ್ತರಿಗೆ ಸರ್ಕಾರದಿಂದ ನೀಡಬೇಕಾದ ಪರಿಹಾರ ಹಣ ತ್ವರಿತವಾಗಿ ಬಿಡುಗಡೆ ಮಾಡಬೇಕು ಎಂದರು.

ಇದನ್ನೂ ಓದಿ : ವಚನ ಕಲ್ಯಾಣ | ದೇಹವೆಂಬುದು ತುಂಬಿದ ಬಂಡಿ ಕಂಡಯ್ಯಾ

ಈ ಸಂದರ್ಭದಲ್ಲಿ ಹುಮನಾಬಾದ ಶಾಸಕ ಡಾ.ಸಿದ್ದಲಿಂಗಪ್ಪ ಪಾಟೀಲ್, ಬೀದರ್ ಮಂಡಲ ಅಧ್ಯಕ್ಷ ಗುರುನಾಥ ರಾಜಗೀರ, ಮುಖಂಡರಾದ ಸುರೇಶ್ ಮಾಶೆಟ್ಟಿ, ಪ್ರಧಾನ ಕಾರ್ಯದರ್ಶಿ ಚಂದ್ರಯ್ಯ ಸ್ವಾಮಿ, ಸಂಜುಕುಮಾರ ಕೋಳಿ, ಸಂತೋಷ ರೆಡ್ಡಿ ಸೇರಿದಂತೆ ಮತ್ತಿತರರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‌ಬೀದರ್‌ | ಮತದಾನ ಹಕ್ಕು ಕಸಿಯುವ ʼಎಸ್‌ಐಆರ್ʼ ಪ್ರಕ್ರಿಯೆ ವಿರೋಧಿಸಿ ಅ.12ರಂದು ಪ್ರತಿಭಟನೆ

ದೇಶಾದ್ಯಂತ ಎಸ್‌ಐಆರ್ ಹೆಸರಿನಲ್ಲಿ ಮತದಾರರ ಪಟ್ಟಿಯಿಂದ ಕೋಟ್ಯಂತರ ಮತದಾರರನ್ನು ಕೈಬಿಡಲಾಗಿರುವುದನ್ನು ಆರೋಪಿಸಿ,...

ವಿಜಯಪುರ | ದಸಂಸ ರಾಜ್ಯ ಸಂಘಟನಾ ಸಂಚಾಲಕಿಯಾಗಿ ಪ್ರತಿಭಾ ಹೊಸಮನಿ ಆಯ್ಕೆ

ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್‌ವಾದ) ಚಿಕ್ಕಮಗಳೂರಿನಲ್ಲಿ ಆಯೋಜಿಸಲಾಗಿದ್ದ ರಾಜ್ಯ...

ʼವೋಟ್‌ ಚೋರಿʼ ಆರೋಪಕ್ಕೆ ಪುರಾವೆ ಅಗತ್ಯʼ: ಚುನಾವಣಾ ಆಯೋಗದ ಪರ 124 ನಿವೃತ್ತ ಅಧಿಕಾರಿಗಳ ಪತ್ರ

ಚುನಾವಣಾ ಅಕ್ರಮಗಳ ಆರೋಪಗಳಿಗೆ ವಿಶ್ವಾಸಾರ್ಹ ಪುರಾವೆಗಳು ಅಗತ್ಯ ಎಂದು ಪ್ರತಿಪಾದಿಸಿರುವ 124...

ಮುದ್ದೇಬಿಹಾಳ | ದೆಹಲಿ ಸಭೆಗೂ ಮುನ್ನ ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಕೆಗೆ ಆಗ್ರಹ

ಕಬ್ಬು ಬೆಳೆಗಾರರಿಗೆ ಪ್ರತಿ ಟನ್‌ಗೆ ₹8,500 ಕನಿಷ್ಠ ಬೆಲೆ ಹಾಗೂ ಹೆಚ್ಚುವರಿಯಾಗಿ...