ಬೀದರ್‌ | ಕೃಷಿ ರತ್ನ ಪ್ರಶಸ್ತಿಗೆ ಅರ್ಜಿ ಆಹ್ವಾನ

Date:

ಕಲ್ಯಾಣ ಕರ್ನಾಟಕ ಭಾಗದಲ್ಲಿ ಕೃಷಿ ಕ್ಷೇತ್ರದಲ್ಲಿ ಅತ್ಯುತ್ತಮ ಸಾಧನೆಗೈದ ಪ್ರಗತಿಪರ ಕೃಷಿಕರನ್ನು ಗುರುತಿಸಿ ಗೌರವಿಸಲು ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ, ರಾಯಚೂರು ವತಿಯಿಂದ ನೀಡಲಾಗುವ ‘ಕೃಷಿ ರತ್ನ’ ಪ್ರಶಸ್ತಿಗೆ 2025-26ನೇ ಸಾಲಿನ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

- Advertisement -

ರಾಯಚೂರು ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ 18ನೇ ಸಂಸ್ಥಾಪನಾ ದಿನಾಚರಣೆಯನ್ನು 2026ರ ನ.22ರಂದು ರಾಯಚೂರು ಮುಖ್ಯ ಆವರಣದಲ್ಲಿ ಆಯೋಜಿಸಲಾಗುತ್ತಿದ್ದು, ಈ ವೇಳೆ ಕೃಷಿ ರತ್ನ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ವಿಶ್ವವಿದ್ಯಾಲಯದ ವಿಸ್ತರಣಾ ನಿರ್ದೇಶಕರು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಾಂಧಿ ಹತ್ಯೆಯನ್ನು ಸಮರ್ಥಿಸುವ ದುರುಳರಿಗೆ ಸರ್ದಾರ್ ಪಟೇಲರ ಪತ್ರಗಳೇ...

ಗಾಂಧಿ ಹತ್ಯೆಯ ಕುರಿತು ಅಡ್ಡಂಡ ಕಾರ್ಯಪ್ಪ ರಚಿಸಿರುವ ನಾಟಕ ಬೆಂಗಳೂರಿನಲ್ಲಿ ತೀವ್ರ ವಿವಾದ ಸೃಷ್ಟಿಸಿದೆ. ನಾಟಕದಲ್ಲಿ ಗಾಂಧೀಜಿಯನ್ನು ದೇಶವಿರೋಧಿಯಂತೆ ಬಿಂಬಿಸಿ, ಅವರ ಹಂತಕ ನಾಥುರಾಮ್ ಗೋಡ್ಸೆಯನ್ನು ಸಮರ್ಥಿಸುವ ಪ್ರಯತ್ನ ನಡೆದಿದೆ. ಗಾಂಧಿ ಹತ್ಯೆಯ...

ʼಈ ದಿನʼ ಸುದ್ದಿ ವಿಶ್ಲೇಷಣೆ | ಇಂದಿರಾ ಅವರನ್ನು...

ಗುಜರಾತ್ ವಿದ್ಯಾರ್ಥಿಗಳು ಹೊತ್ತಿಸಿದ ಹೋರಾಟದ ಕಿಡಿ, ಬಿಹಾರದ ‘ಸಂಪೂರ್ಣ ಕ್ರಾಂತಿ’ ಮೂಲಕ ರಾಷ್ಟ್ರ ರಾಜಕಾರಣವನ್ನೇ ವ್ಯಾಪಿಸಿತು. ಭಾರತದ ಪ್ರಜಾಸತ್ತಾತ್ಮಕ ಇತಿಹಾಸದಲ್ಲಿ ವಿದ್ಯಾರ್ಥಿ ಶಕ್ತಿಯ ಸಾಮರ್ಥ್ಯ ಮತ್ತು ಜನಾಂದೋಲನಗಳ ಸಂಕೀರ್ಣತೆಯನ್ನು ನೆನಪಿಸುವ ಬೆಳಕಿನ ಅಧ್ಯಾಯ ದೆಹಲಿಯಲ್ಲಿ...

ಮೋದಿಗೆ ರಾಹುಲ್‌ ಬಹಿರಂಗ ಸವಾಲು; ಕುತಂತ್ರಗಳಿಗೆ ವಿರುದ್ಧವಾಗಿ ಹೋರಾಟ...

ಭಾರತೀಯ ರಾಜಕಾರಣದಲ್ಲಿ ಕಳೆದ ಒಂದು ದಶಕದಿಂದ ನಿರಂತರವಾಗಿ ಚರ್ಚೆಯಾಗುತ್ತಿರುವ ಪ್ರಮುಖ ಕೇಂದ್ರಬಿಂದು ರಾಹುಲ್ ಗಾಂಧಿ. ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಅಧಿಕಾರಾವಧಿಯಲ್ಲಿ ಪ್ರತಿಪಕ್ಷಗಳನ್ನು ದಮನ ಮಾಡಲು, ಹತ್ತಿಕ್ಕಲು ಮತ್ತು ನಾಯಕರ ವ್ಯಕ್ತಿತ್ವವನ್ನು ಹನನ...

ಕಲ್ಯಾಣ ಕರ್ನಾಟಕ ಭಾಗದ ಅರ್ಹ ರೈತರು ಪ್ರಶಸ್ತಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ನಮೂನೆಗಳು ಆಯಾ ಜಿಲ್ಲೆಗಳ ಕೃಷಿ ವಿಜ್ಞಾನ ಕೇಂದ್ರ, ಕೃಷಿ ವಿಸ್ತರಣಾ ಶಿಕ್ಷಣ ಕೇಂದ್ರ ಹಾಗೂ ವಿಶ್ವವಿದ್ಯಾಲಯದ ಅಧಿಕೃತ ವೆಬ್‌ಸೈಟ್ ನಲ್ಲಿ ಲಭ್ಯವಿವೆ.

ಭರ್ತಿ ಮಾಡಿದ ಅರ್ಜಿಗಳನ್ನು ಸಂಬಂಧಿತ ದಾಖಲೆಗಳೊಂದಿಗೆ ನವೆಂಬರ್ 12ರ ಸಂಜೆ 5 ಗಂಟೆಯೊಳಗೆ ಆಯಾ ಜಿಲ್ಲೆಗಳ ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥರು ಅಥವಾ ಕೃಷಿ ವಿಸ್ತರಣಾ ಶಿಕ್ಷಣ ಕೇಂದ್ರದ ಮುಖ್ಯಸ್ಥರ ಕಚೇರಿಗೆ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಬೀದರ್, ರಾಯಚೂರು, ಕಲಬುರಗಿ, ರದ್ದೇವಾಡಗಿ, ಕೊಪ್ಪಳ (ಗಂಗಾವತಿ), ಯಾದಗಿರಿ (ಕವಡಿಮಟ್ಟಿ), ಬಳ್ಳಾರಿ (ಹಗರಿ) ಸೇರಿದಂತೆ ವಿವಿಧ ಜಿಲ್ಲೆಗಳ ಕೃಷಿ ವಿಜ್ಞಾನ ಕೇಂದ್ರಗಳ ಹಿರಿಯ ವಿಜ್ಞಾನಿಗಳು ಹಾಗೂ ಮುಖ್ಯಸ್ಥರನ್ನು ಸಂಪರ್ಕಿಸಬಹುದು.

ಭೀಮರಾಯನಗುಡಿ, ಲಿಂಗಸೂಗೂರು, ಕೊಪ್ಪಳ, ನಾಲವಾರ, ದೇವದುರ್ಗ ಹಾಗೂ ವಿಜಯನಗರ ಜಿಲ್ಲೆಯ ಹೂವಿನಹಡಗಲಿ ಕೃಷಿ ವಿಸ್ತರಣಾ ಶಿಕ್ಷಣ ಕೇಂದ್ರಗಳ ಮುಖ್ಯಸ್ಥರ ಕಚೇರಿಯಿಂದಲೂ ಮಾಹಿತಿ ಪಡೆಯಬಹುದು.

WhatsApp Image 2026 10 10 at 7.46.08 PM 32

ಹೆಚ್ಚಿನ ವಿವರಗಳಿಗಾಗಿ 9480696314 /315/ 316/ 317/ 318/ 319/ 334,/335/336 ದೂರವಾಣಿ ಸಂಖ್ಯೆಗಳ ಮೂಲಕ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ : ಭಾಲ್ಕಿ | ವಕೀಲರ ಹಿತರಕ್ಷಣಾ ಕಾಯ್ದೆ ತಕ್ಷಣ ಜಾರಿಗೆ ತರಲು ಆಗ್ರಹ

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೆನಡಾದಿಂದ 4,526 ಭಾರತೀಯರ ಗಡೀಪಾರು: ವರ್ಷವೊಂದರಲ್ಲಿ ಸಾರ್ವಕಾಲಿಕ ದಾಖಲೆ ಎಂದ CBSA

ಕೆನಡಾ ಸರ್ಕಾರವು ತನ್ನ ವಲಸೆ ನಿಯಮಗಳನ್ನು ಬಿಗಿಗೊಳಿಸುತ್ತಿದ್ದು, ದೇಶದಲ್ಲಿ ಕಾನೂನುಬಾಹಿರವಾಗಿ ನೆಲೆಸಿದ್ದವರ...

ಔರಾದ್ | ರಾಷ್ಟ್ರೀಯ ಬಸವದಳದ ಅಧ್ಯಕ್ಷರಾಗಿ ಶರಣಪ್ಪ ನಾಗಲಗಿದ್ದೆ ಆಯ್ಕೆ

ಔರಾದ್ ತಾಲೂಕಿನ ರಾಷ್ಟ್ರೀಯ ಬಸವದಳದ ಅಧ್ಯಕ್ಷರಾಗಿ ಶೆಂಬೆಳ್ಳಿ ಗ್ರಾಮದ ಶರಣಪ್ಪ ನಾಗಲಗಿದ್ದೆ...

KPSC ಅಕ್ರಮ | 35 ಕೋಟಿ ರೂ. ವೆಚ್ಚದ ‘ಡ್ರೀಮ್ ಪ್ರಾಜೆಕ್ಟ್’ ನಿರ್ಮಿಸಲು ಬಂಧಿತ ಸಾಹುಕಾರ್ ಸಂಚು: ಇಡಿ ಸ್ಫೋಟಕ ಮಾಹಿತಿ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ...