ಬೀದರ್‌ | ಕಾನೂನು ತರಬೇತಿ ಭತ್ಯೆಗೆ ಅರ್ಜಿ ಆಹ್ವಾನ

Date:

ಬೀದರ ಜಿಲ್ಲೆಯಲ್ಲಿ 2026-27ನೇ ಸಾಲಿನ ಕಾನೂನು ಪದವಿ ಪಡೆದಿರುವ ಹಿಂದುಳಿದ ವರ್ಗಗಳ 10 ಅಭ್ಯರ್ಥಿಗಳಿಗೆ ಸರಕಾರಿ ವಕೀಲರು ಅಥವಾ 20 ವರ್ಷಗಳಿಗಿಂತ ಹೆಚ್ಚಿನ ಅನುಭವವುಳ್ಳ ವಕೀಲರಿಂದ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಬೀದರ ಜಿಲ್ಲಾ ಮಟ್ಟದ ಹಿಂದುಳಿದ ವರ್ಗಗಳ ಕಾನೂನು ಪದವೀಧರರ ಆಯ್ಕೆ ಸಮಿತಿ ಸದಸ್ಯ ಕಾರ್ಯದರ್ಶಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ತಿಳಿಸಿದ್ದಾರೆ.

- Advertisement -

ತರಬೇತಿಯ ಅವಧಿಯು 4 ವರ್ಷಗಳಿದ್ದು, ತರಬೇತಿ ಅವಧಿ ಮಾಸಿಕ 4,000 ರೂ.ಗಳ ತರಬೇತಿ ಭತ್ಯೆ ನೀಡಲಿದೆ. ಅರ್ಜಿಗಳನ್ನು ಸಲ್ಲಿಸಬಯಸುವವರು ಈ ಕೆಳಕಂಡ ಷರತ್ತುಗಳನ್ನು ಪೂರೈಸಿರಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜಾಗತಿಕ ಪೈಪೋಟಿಗೆ ಕನ್ನಡಿಗರನ್ನು ಸಜ್ಜುಗೊಳಿಸುವ ಬೃಹತ್ ವೇದಿಕೆ ‘ಬೆಂಗಳೂರು...

ರಾಜ್ಯದ ಯುವಜನತೆಯನ್ನು ಭವಿಷ್ಯದ ಜಾಗತಿಕ ಉದ್ಯೋಗ ಮಾರುಕಟ್ಟೆಯ ತೀವ್ರ ಪೈಪೋಟಿ ಮತ್ತು ಸವಾಲುಗಳಿಗೆ ಸುಸಜ್ಜಿತವಾಗಿ ಸಿದ್ಧಪಡಿಸುವ ಮಹತ್ವಾಕಾಂಕ್ಷೆಯೊಂದಿಗೆ ರಾಜ್ಯ ಸರ್ಕಾರವು ಬೃಹತ್ ಹೆಜ್ಜೆಯನ್ನಿಟ್ಟಿದೆ. ಇದರ ಅಂಗವಾಗಿ ಮುಂಬರುವ ನವೆಂಬರ್ 3, 4 ಹಾಗೂ...

ಇಸ್ರೇಲ್‌ ಚುನಾವಣೆ | ಅರಬ್ಬರ ಭರ್ಜರಿ ವೋಟಿಂಗ್, 19...

ಇಸ್ರೇಲ್‌ ಪ್ರಧಾನಿ ನೆತನ್ಯಾಹುವಿನ ದ್ವೇಷದ ರಾಜಕೀಯಕ್ಕೆ ಬೇಸತ್ತ ಇಸ್ರೇಲ್‌ ಅರಬ್ಬರು ಈ ಬಾರಿಯ ಸಾರ್ವತ್ರಿಕ ಚುನಾವಣೆಯಲ್ಲಿ ದಾಖಲೆಮಟ್ಟದಲ್ಲಿ ಮತಗಟ್ಟೆಗೆ ಧಾವಿಸಿ ಭರ್ಜರಿ ಓಟಿಂಗ್‌ ಮಾಡಿದ್ದಾರೆ. 19 ಸೀಟುಗಳನ್ನು ಗೆಲ್ಲುವ ಮೂಲಕ ನೆತನ್ಯಾಹು ಭವಿಷ್ಯವನ್ನು...

ಅಭಿವೃದ್ಧಿಯಿಂದ ದೂರ ಉಳಿದ ಜೀವನಮರಡಗಿ: ಬಸ್ ಇಲ್ಲ, ನೀರಿಲ್ಲ,...

ಸ್ವಾತಂತ್ರ್ಯಾನಂತರದ ಅಭಿವೃದ್ಧಿಯ ಹಾದಿಯಲ್ಲಿ ಗ್ರಾಮೀಣ ಪ್ರದೇಶಗಳಿಗೆ ಮೂಲಭೂತ ಸೌಲಭ್ಯಗಳನ್ನು ತಲುಪಿಸುವ ಪ್ರಯತ್ನಗಳು ನಡೆಯುತ್ತಿದ್ದರೂ, ಕಲಬುರಗಿ ಜಿಲ್ಲೆಯ ಕಾಳಗಿ ತಾಲೂಕಿನ ಜೀವನಮರಡಗಿ ಗ್ರಾಮದ ಜನರ ಬದುಕಿನಲ್ಲಿ ಮಾತ್ರ ಇಂದಿಗೂ ಹಲವು ಸಮಸ್ಯೆಗಳು ಮುಂದುವರಿದಿವೆ. ಗ್ರಾಮಕ್ಕೆ...

ಷರತ್ತುಗಳು : ಅಭ್ಯರ್ಥಿಯು ಹಿಂದುಳಿದ ವರ್ಗಗಳ ಪ್ರವರ್ಗ 1, 2(ಎ), 3(ಎ), 3(ಬಿ)ಗೆ ಸೇರಿದವರಾಗಿರಬೇಕು. ಬೀದರ ಜಿಲ್ಲೆಯ ನಿವಾಸಿಯಾಗಿರಬೇಕು. ಅಭ್ಯರ್ಥಿಯ ಕುಟುಂಬದ ವಾರ್ಷಿಕ ಆದಾಯ ಪ್ರವರ್ಗ-(1) ರಡಿಯಲ್ಲಿ ಬರುವ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ಆದಾಯ 3.50 ಲಕ್ಷ ಮತ್ತು ಪ್ರವರ್ಗ-2(ಎ), 3(ಎ) ಮತ್ತು 3(ಬಿ) ಪ್ರವರ್ಗಗಳಿಗೆ ಸೇರಿದ ಅಭ್ಯರ್ಥಿಗಳಿಗೆ ಆದಾಯ 2.50 ಲಕ್ಷ ರೂ.ಗಳ ಮಿತಿ ಒಳಗಿರಬೇಕು. ಅಭ್ಯರ್ಥಿಯು ಬಾರಕೌನ್ಸಿಲ್‌ನಲ್ಲಿ ಹೆಸರನ್ನು ನೋಂದಾಯಿಸಿರಬೇಕು.

ತರಬೇತಿಗೆ ಅರ್ಜಿಗಳನ್ನು ಸಲ್ಲಿಸಲು ಕೊನೆಯ ದಿನಾಂಕಕ್ಕೆ ಹಿಂದೆ 2 ವರ್ಷ ಒಳಗೆ ಕಾನೂನು ಪದವಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಅರ್ಜಿ ಸಲ್ಲಿಸಲು ನಿಗದಿ ಪಡಿಸಿದ ಕಡೆಯ ದಿನಾಂಕಕ್ಕೆ ಪ್ರವರ್ಗ 2(ಎ), 3(ಎ), ಮತ್ತು 3(ಬಿ)ಯ ಅಭ್ಯರ್ಥಿಯ ವಯಸ್ಸು 38ಕ್ಕೆ ಹಾಗೂ ಪ್ರವರ್ಗ-(1)ಕ್ಕೆ ಸೇರಿದ ಅಭ್ಯರ್ಥಿಗಳ 40 ವರ್ಷ ಒಳಗಿರಬೇಕು, ಅರ್ಜಿ ಸ್ವೀಕರಿಸಲು ನಿಗಡಿಪಡಿಸಿರುವ ಕಡೆಯ ದಿನಾಂಕಕ್ಕೆ ಅಭ್ಯರ್ಥಿಯು 3 ವರ್ಷಗಳ ಅವಧಿ ಒಳಗೆ ಕಾನೂನು ಪದವಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಎಂದು ತಿಳಿಸಲಾಗಿದೆ.

ದಾಖಲಾತಿಗಳು : ಎಸ್‌ಎಸ್‌ಎಲ್‌ಸಿ ದೃಢೀಕೃತ ಅಂಕಪಟ್ಟಿ, ಕಾನೂನು ಪದವಿ ಪರೀಕ್ಷೆಯ ಎಲ್ಲಾ ವರ್ಷಗಳ ಧೃಡೀಕೃತ ಅಂಕ ಪಟ್ಟಿ, ತಹಶೀಲ್ದಾರರಿಂದ ನೀಡಲ್ಪಟ್ಟ ಜಾತಿ, ಆದಾಯ ಪ್ರಮಾಣ ಪತ್ರ, ವಾಸಸ್ಥಳ ಪ್ರಮಾಣ ಪತ್ರ. ಬಾರ್ ಕೌನ್ಸಿಲ್‌ನಲ್ಲಿ ಹೆಸರನ್ನು ನೋಂದಾಯಿಸಿದ ಪ್ರಮಾಣ ಪತ್ರ. ಅರ್ಹ ಅಭ್ಯರ್ಥಿಗಳು ಅರ್ಜಿ ನಮೂನೆ ಪಡೆದು ದಾಖಲೆಗಳೊಂದಿಗೆ 2026ರ ಆಗಸ್ಟ್ 29ರ ಸಂಜೆ 5 ಗಂಟೆಯ ಒಳಗೆ ಸಲ್ಲಿಸಬೇಕು. ಅಪೂರ್ಣವಾದ ಹಾಗೂ ಅವಧಿ ಮೀರಿ ಬಂದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.

ಇದನ್ನೂ ಓದಿ : ಹುಲಸೂರು | ಪತ್ರಕರ್ತರು ಜನರ ನೋವಿಗೆ ದನಿಯಾಗಿ : ಗುರುನಾಥ ಅಕ್ಕಣ್ಣ

ಹೆಚ್ಚಿನ ಮಾಹಿತಿಗಾಗಿ ಬೀದರ ನಾವದಗೇರಿ ಜನವಾಡ ರಸ್ತೆ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ದೂರವಾಣಿ ಸಂಖ್ಯೆ 08482233148, ಇಮೇಲ್ [email protected]ಗೆ ಸಂಪರ್ಕಿಸಬಹುದು ಎಂದು ತಿಳಿಸಿದ್ದಾರೆ.  

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನ್ಯಾಯಾಂಗದ ವಿರುದ್ಧ ಹೇಳಿಕೆ ಆರೋಪ; ಸಿಜೆಪಿ ನಾಯಕ ಸೌರವ್‌ ದಾಸ್‌ಗೆ ಮದ್ರಾಸ್ ಹೈಕೋರ್ಟ್ ನೋಟಿಸ್

ನ್ಯಾಯಾಂಗದ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ CJP ವಕ್ತಾರ...

ಶಿಕಾರಿಪುರ | ಖಾಸಗಿ ಬಸ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

ಶಿಕಾರಿಪುರ ಪಟ್ಟಣದ ಗಬ್ಬೂರು ಸಮೀಪ ಗುರುವಾರ ಸಂಜೆ ಸಂಭವಿಸಿದ ರಸ್ತೆ ಅಪಘಾತದಲ್ಲಿ...

ಶಿವಮೊಗ್ಗ | ಸಾಮೂಹಿಕ ನಕಲಿಗೆ ಅವಕಾಶ! KSOU ಪ್ರಾದೇಶಿಕ ನಿರ್ದೇಶಕ ಬಿ.ಎಂ ಸ್ವಾಮಿ ವಿರುದ್ಧ ದೂರು

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ (KSOU) ಶಿವಮೊಗ್ಗ ಪ್ರಾದೇಶಿಕ ಕೇಂದ್ರದಲ್ಲಿ ನಡೆದ...

ಅಭಿವೃದ್ಧಿಯಿಂದ ದೂರ ಉಳಿದ ಜೀವನಮರಡಗಿ: ಬಸ್ ಇಲ್ಲ, ನೀರಿಲ್ಲ, ಊರಲ್ಲಿ ಪಡಿತರವೂ ಇಲ್ಲ!

ಸ್ವಾತಂತ್ರ್ಯಾನಂತರದ ಅಭಿವೃದ್ಧಿಯ ಹಾದಿಯಲ್ಲಿ ಗ್ರಾಮೀಣ ಪ್ರದೇಶಗಳಿಗೆ ಮೂಲಭೂತ ಸೌಲಭ್ಯಗಳನ್ನು ತಲುಪಿಸುವ ಪ್ರಯತ್ನಗಳು...