ಬೀದರ್‌ | ಹಿಂದುಳಿದ ವರ್ಗಗಳ ವಸತಿ ನಿಲಯಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ

Date:

ಬೀದರ್ ಜಿಲ್ಲೆಯ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ನಡೆಸಲಾಗುತ್ತಿರುವ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳಲ್ಲಿ (ಪಿಯುಸಿ ಕೋರ್ಸ್‍ನ ವಿದ್ಯಾರ್ಥಿಗಳಿಗೆ ಮಾತ್ರ) ಪ್ರವೇಶಕ್ಕಾಗಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2(ಎ), 2(ಬಿ), 3(ಎ), 3(ಬಿ), ಪಜಾ/ಪ. ವರ್ಗ ಮತ್ತು ಇತರೆ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳಿಂದ 2026-27ನೇ ಸಾಲಿಗೆ ಆನ್‍ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಬೀದರ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ತಿಳಿಸಿದ್ದಾರೆ.

- Advertisement -

ವಿದ್ಯಾರ್ಥಿಯ ಪೋಷಕರ ವಾರ್ಷಿಕ ಆದಾಯ ಮಿತಿ ಪ್ರವರ್ಗ-1, ಎಸ್.ಸಿ ಮತ್ತು ಎಸ್.ಟಿ ವಿದ್ಯಾರ್ಥಿಗಳಿಗೆ 2.50 ಲಕ್ಷ ರೂ. ಪ್ರವರ್ಗ-2(ಎ), 3(ಎ), 3(ಬಿ) ಇತರೆ ಹಿಂದುಳಿದ ವರ್ಗ ಮತ್ತು ಇತರರಿಗೆ 1 ಲಕ್ಷ ರೂ. ಇರುತ್ತದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಅರ್ಹ ವಿದ್ಯಾರ್ಥಿಗಳು https://shp.karnataka.gov.in/bcwd  ವೆಬ್‍ಸೈಟ್ ಸಂಪರ್ಕಿಸಿ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಅನ್‍ಲೈನ್ ಮೂಲಕ ಅರ್ಜಿ ಸಲ್ಲಿಸಲು ಜೂನ್‌ 15 ಕೊನೆಯ ದಿನಾಂಕವಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಲ್ಲೂಕುವಾರು ವಿದ್ಯಾರ್ಥಿ ನಿಲಯಗಳ ವಿವರ, ಪ್ರವೇಶಕ್ಕೆ ಇರಬೇಕಾದ ಅರ್ಹತೆ ಹಾಗೂ ಸಲ್ಲಿಸಬೇಕಾದ ದಾಖಲೆಗಳ ಮಾಹಿತಿಗಾಗಿ ಇಲಾಖೆಯ ಅಧಿಕೃತ ವೆಬ್‍ಸೈಟ್ https://bcwd.karnataka.gov.in/  ಅನ್ನು ನೋಡಬಹುದು.

ಅರ್ಜಿ ಸಲ್ಲಿಸುವಾಗ ತಾಂತ್ರಿಕ ತೊಂದರೆಗಳು ಎದುರಾದರೆ ವಿದ್ಯಾರ್ಥಿಗಳು [email protected] ಗೆ ಇ-ಮೇಲ್ ಮುಖಾಂತರ ಅಥವಾ ಜಿಲ್ಲಾ/ತಾಲ್ಲೂಕು ಅಧಿಕಾರಿಗಳು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಬೀದರ್ ಇವರನ್ನು ಅಗತ್ಯ ದಾಖಲೆಗಳೊಂದಿಗೆ ಸಂಪರ್ಕಿಸಬಹುದು. ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆಗಳಾದ 8050770004 ಮತ್ತು 8050770005 ಗೆ ಸಂಪರ್ಕಿಸಬಹುದಾಗಿದೆ ಎಂದು ತಿಳಿಸಿದ್ದಾರೆ.

ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯಗಳ ಪ್ರವೇಶಾತಿಗಾಗಿ ಅರ್ಜಿ ಆಹ್ವಾನ

ಜಿಲ್ಲೆಯ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ನಡೆಸಲಾಗುತ್ತಿರುವ ಮೆಟ್ರಿಕ್ ಪೂರ್ವ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿ ನಿಲಯಗಳಲ್ಲಿ ಪ್ರವೇಶಕ್ಕಾಗಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2(ಎ), 2(ಬಿ), 3(ಎ), 3(ಬಿ), ಪ.ಜಾ./ಪ.ವರ್ಗ ಮತ್ತು ಇತರೆ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳಿಂದ 2026-27ನೇ ಸಾಲಿಗೆ ಆನ್‌ಲೈನ್ ಮೂಲಕ ಅರ್ಜಿ ಅಹ್ವಾನಿಸಲಾಗಿದೆ ಎಂದು ಬೀದರ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ತಿಳಿಸಿದ್ದಾರೆ.

ವಿದ್ಯಾರ್ಥಿಯ ಪೋಷಕರ ವಾರ್ಷಿಕ ಆದಾಯ ಮಿತಿ ಪ್ರವರ್ಗ-1, ಎಸ್.ಸಿ ಮತ್ತು ಎಸ್.ಟಿ ವಿದ್ಯಾರ್ಥಿಗಳಿಗೆ 2.50 ಲಕ್ಷ ರೂ. ಪ್ರವರ್ಗ-2ಎ, 3ಎ, 3ಬಿ ಇತರೆ ಹಿಂದುಳಿದ ವರ್ಗ ಮತ್ತು ಇತರರಿಗೆ 1 ಲಕ್ಷ ರೂ. ಇರುತ್ತದೆ.

ಅರ್ಹ ವಿದ್ಯಾರ್ಥಿಗಳು https://shp.karnataka.gov.in/bcwd ವೆಬ್‍ಸೈಟ್ ಸಂಪರ್ಕಿಸಿ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಜೂನ್‌ 8 ಕೊನೆಯ ದಿನಾಂಕವಾಗಿರುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಲ್ಲೂಕುವಾರು ವಿದ್ಯಾರ್ಥಿ ನಿಲಯಗಳ ವಿವರ, ಪ್ರವೇಶಕ್ಕೆ ಇರಬೇಕಾದ ಅರ್ಹತೆ ಹಾಗೂ ಸಲ್ಲಿಸಬೇಕಾದ ದಾಖಲೆಗಳ ಮಾಹಿತಿಗಾಗಿ ಇಲಾಖೆಯ ಅಧಿಕೃತ ವೆಬ್‍ಸೈಟ್ https://bcwd.karnataka.gov.in/ ಅನ್ನು ನೋಡಬಹುದು.

ಅರ್ಜಿ ಸಲ್ಲಿಸುವಾಗ ತಾಂತ್ರಿಕ ತೊಂದರೆಗಳು ಎದುರಾದರೆ ವಿದ್ಯಾರ್ಥಿಗಳು [email protected]  ಗೆ ಇ-ಮೇಲ್ ಮುಖಾಂತರ ಅಥವಾ ತಾಲ್ಲೂಕು ಅಧಿಕಾರಿಗಳು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯವರಿಗೆ ಅಗತ್ಯ ದಾಖಲೆಗಳೊಂದಿಗೆ ಸಂಪರ್ಕಿಸಬಹುದು. ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆಗಳಾದ 8050770004 ಮತ್ತು 8050770005ಗೆ ಸಂಪರ್ಕಿಸಬಹುದಾಗಿದೆ ಎಂದು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ಉದ್ಯೋಗ ಖಾತ್ರಿ ಪೂರ್ಣ ಕೂಲಿ ಪಾವತಿಗೆ ಆಗ್ರಹಿಸಿ ಅಧಿಕಾರಿಗಳಿಗೆ ಮನವಿ

ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸ ಮಾಡಿರುವ ಕೂಲಿಕಾರರಿಗೆ ಅವರ ಶ್ರಮಕ್ಕೆ ತಕ್ಕಂತೆ...

ಬೀದರ್‌ | ಆಟವಾಡುತ್ತಿದ್ದ ಸಹೋದರರ ಮೇಲೆ ಬೀದಿ ನಾಯಿ ದಾಳಿ, ಬ್ರಿಮ್ಸ್‌ಗೆ ದಾಖಲು

ಮನೆಯ ಮುಂದೆ ಆಟವಾಡುತ್ತಿದ್ದ ಸಹೋದರರ ಮೇಲೆ ಬೀದಿ ನಾಯಿಯೊಂದು ದಾಳಿ ನಡೆಸಿ,...