ಬೀದರ್‌ | ವಿವಿಧ ಯೋಜನೆಗಳ ಸೌಲಭ್ಯಕ್ಕೆ ಅರ್ಜಿ ಆಹ್ವಾನ

Date:

ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ವತಿಯಿಂದ 2026–27ನೇ ಸಾಲಿನ ಧನಶ್ರೀ, ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ, ಚೇತನ ಹಾಗೂ ಉದ್ಯೋಗಿನಿ ಯೋಜನೆಗಳ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಹರು ಸೇವಾಸಿಂಧು ಪೋರ್ಟಲ್ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.

- Advertisement -

ಧನಶ್ರೀ ಹಾಗೂ ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಯೋಜನೆಗಳಿಗೆ ಆನ್‌ಲೈನ್ ಮತ್ತು ಆಫ್‌ಲೈನ್ ಎರಡೂ ವಿಧಾನದಲ್ಲಿ ಅರ್ಜಿ ಸಲ್ಲಿಸಲು ಅವಕಾಶವಿದೆ. ಆಫ್‌ಲೈನ್ ಅರ್ಜಿಗಳನ್ನು ಉಪ ನಿರ್ದೇಶಕರ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಮೈಲೂರ್, ಬೀದರ್ ಇಲ್ಲಿ ಸಲ್ಲಿಸಬಹುದು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

SIR ಅಕ್ರಮ | ಜ್ಞಾನೇಶ್‌ ಕುಮಾರ್ ‘ಅಪರಾಧಿ’ಯಾದ್ರೆ, ಮೋದಿ-ಅಮಿತ್...

ಭಾರತೀಯ ಪ್ರಜಾಪ್ರಭುತ್ವದ ಇತಿಹಾಸದಲ್ಲೇ ಅತ್ಯಂತ ಕರಾಳ ಅಧ್ಯಾಯವೊಂದು ಈಗ ಜಗಜ್ಜಾಹೀರಾಗಿದೆ. ಪ್ರತಿಯೊಬ್ಬ ನಾಗರಿಕನ ಅತಿ ದೊಡ್ಡ ರಾಜಕೀಯ ಶಕ್ತಿಯಾಗಿರುವ 'ಮತದಾನದ ಹಕ್ಕು' ಮತ್ತು ಅದನ್ನು ಕಾಯಬೇಕಾದ ಸಾಂವಿಧಾನಿಕ ಸಂಸ್ಥೆಯನ್ನೇ ಆಡಳಿತಾರೂಢ ಮೋದಿ-ಅಮಿತ್ ಶಾ...

7 ದಿನಗಳಲ್ಲಿ 8 ಇ-ಮೇಲ್‌ಗಳು; ಆದರೂ ಮತಪಟ್ಟಿಯಲ್ಲಿ ಉಳಿಯಲಿಲ್ಲ...

90 ಕೋಟಿಗೂ ಹೆಚ್ಚು ಮತದಾರರನ್ನು ಹೊಂದಿರುವ ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವದಲ್ಲಿ 97 ಮತದಾರರು ಎಂಬ ಸಂಖ್ಯೆ ಅತಿ ಚಿಕ್ಕದಾಗಿ ಕಾಣಬಹುದು. ಆದರೆ, ಗೋವಾದ ಈ 97 ಮತದಾರರ ಪ್ರಕರಣವು ಚುನಾವಣಾ ಆಯೋಗದ ಕಾರ್ಯವಿಧಾನ,...

ಮತದಾರರ ಪಟ್ಟಿ: ನಿರ್ಧಾರ ತೆಗೆದುಕೊಳ್ಳುವುದು, ಜಾರಿಗೆ ತರುವುದು ಯಾರು?

ಗೋವಾದ 97 ಮತದಾರರ ಪ್ರಕರಣ ಚುನಾವಣಾ ವ್ಯವಸ್ಥೆಯ ಮುಂದಿರುವ ಒಂದು ಮಹತ್ವದ ಪ್ರಶ್ನೆಯನ್ನು ಎದುರುತರುತ್ತದೆ: ಸ್ಥಳೀಯ ಮಟ್ಟದ ಮತದಾರರ ನೋಂದಣಿ ಅಧಿಕಾರಿಗಳು (ERO) ದಾಖಲೆಗಳನ್ನು ಪರಿಶೀಲಿಸಿ ಅಂತಿಮ ಪಟ್ಟಿಯಲ್ಲಿ ಸೇರಿಸಲು ಅರ್ಹರೆಂದು ಕಂಡುಕೊಂಡ...

ಅರ್ಜಿದಾರರು ಹತ್ತಿರದ ಬಾಪೂಜಿ ಸೇವಾ ಕೇಂದ್ರ, ಗ್ರಾಮ ಒನ್, ಬೆಂಗಳೂರು ಒನ್ ಅಥವಾ ಕರ್ನಾಟಕ ಒನ್ ಕೇಂದ್ರಗಳಲ್ಲಿಯೂ ಅರ್ಜಿ ಸಲ್ಲಿಸಬಹುದಾಗಿದೆ. ಉದ್ಯೋಗಿನಿ ಯೋಜನೆಗೆ 21ರಿಂದ 55 ವರ್ಷ, ಚೇತನ, ಧನಶ್ರೀ ಹಾಗೂ ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಯೋಜನೆಗಳಿಗೆ 20ರಿಂದ 55 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ.

ಅರ್ಜಿ ಸಲ್ಲಿಸಲು ಅಕ್ಟೋಬರ್ 31ರಂದು ಸಂಜೆ 5.30 ಗಂಟೆ ಕೊನೆಯ ದಿನವಾಗಿದೆ. 2023–24, 2024–25 ಹಾಗೂ 2025–26ನೇ ಸಾಲಿನಲ್ಲಿ ಅರ್ಜಿ ಸಲ್ಲಿಸಿ ಸೌಲಭ್ಯ ಪಡೆಯದೇ ಇರುವವರು ಪುನಃ ಅರ್ಜಿ ಸಲ್ಲಿಸುವ ಅಗತ್ಯವಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ : ಬಸವಾದಿ ಶರಣರ ಹಿಂದೂ ಸಮಾವೇಶ ವಿರೋಧಿಸಿ ನಾಳೆ ʼಕಲಬುರಗಿ ಚಲೋʼ

ಹೆಚ್ಚಿನ ಮಾಹಿತಿಗಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರ ಕಚೇರಿ ಹಾಗೂ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಜಿಲ್ಲಾ ಅಭಿವೃದ್ಧಿ ನಿರೀಕ್ಷಕರ ಕಚೇರಿಯನ್ನು ಸಂಪರ್ಕಿಸಬಹುದು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೈಕ್ ಟ್ಯಾಕ್ಸಿಗೆ ಹೈಕೋರ್ಟ್ ಹಸಿರು ನಿಶಾನೆ; ಚಾಲಕರ ಸಂಘದಿಂದ ಸುಪ್ರೀಂಗೆ ಮೇಲ್ಮನವಿ

ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ಸೇವೆಗೆ ಹಸಿರು ನಿಶಾನೆ ತೋರಿಸಿದ್ದ ಹೈಕೋರ್ಟ್ ತೀರ್ಪು...

EC ಒಳಜಗಳ | ಗ್ಯಾನೇಶ್‌ ಕುಮಾರ್‌ ಎಡವಟ್ಟುಗಳಿಗೆ ಆಕ್ಷೇಪಗಳ ಸರಮಾಲೆ

SIR ವಿಚಾರದಲ್ಲಿ ಚುನಾವಣಾ ಆಯೋಗದೊಳಗಿನ ಭಿನ್ನಾಭಿಪ್ರಾಯ ಬಹಿರಂಗಗೊಂಡ ಬೆನ್ನಲ್ಲೇ, ಮುಖ್ಯ ಚುನಾವಣಾ...

ಏಷ್ಯನ್ ಗೇಮ್ಸ್: ಜಪಾನ್ ಅಂಗಳದಲ್ಲಿ ಭಾರತದ ಭರ್ಜರಿ ಪ್ರದರ್ಶನ; ಶೂಟರ್‌ಗಳ ಕಮಾಲ್, ಕ್ರಿಕೆಟ್‌ನಲ್ಲಿ ಮಿನುಗಿದ ಚಿನ್ನ

ಜಪಾನ್‌ನ ಐಚಿ–ನಾಗೋಯಾದಲ್ಲಿ ಅತ್ಯಂತ ಅದ್ದೂರಿಯಾಗಿ ನಡೆಯುತ್ತಿರುವ 20ನೇ ಆವೃತ್ತಿಯ ಏಷ್ಯನ್ ಗೇಮ್ಸ್...