ಬೀದರ್‌ | ಆಶ್ರಯ ಯೋಜನೆಯಡಿ ಉಚಿತ ನಿವೇಶನ ಪಡೆಯಲು ಅರ್ಜಿ ಆಹ್ವಾನ

Date:

ಬೀದರ್ ಜಿಲ್ಲೆಯ ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ವಾಸಿಸುತ್ತಿರುವ ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಹಿಂದುಳಿದ ಅರ್ಹ ನಿವೇಶನ ರಹಿತ ಬಡ ಕುಟುಂಬಗಳಿಗೆ ಗ್ರಾಮೀಣ ಆಶ್ರಯ ನಿವೇಶನ ಯೋಜನೆಯಡಿ ಉಚಿತ ನಿವೇಶನ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ‌ ಎಂದು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗಿರೀಶ ಬದೋಲೆ ತಿಳಿಸಿದ್ದಾರೆ.

- Advertisement -

ಕಂದಾಯ ಇಲಾಖೆಯ ಮೂಲಕ ಲಭ್ಯವಿರುವ ಸರ್ಕಾರಿ ಜಮೀನುಗಳನ್ನು ಮಂಜೂರು ಮಾಡಿ ಅರ್ಹರಿಗೆ ಹಂಚಿಕೆ ಮಾಡಲು ಕ್ರಮ ಕೈಗೊಳ್ಳಲಾಗುತ್ತಿದ್ದು, ಪ್ರತಿ ಜಿಲ್ಲೆಗೆ 50,000 ನಿವೇಶನಗಳ ಬೃಹತ್ ಗುರಿಯನ್ನು ನಿಗದಿಪಡಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ಈ ಯೋಜನೆಯಡಿ ಸೌಲಭ್ಯ ಪಡೆಯಲು ಅರ್ಜಿದಾರರು ಕಡ್ಡಾಯವಾಗಿ ಮಹಿಳೆಯಾಗಿರಬೇಕು (ವಿವಾಹಿತ ಅಥವಾ ಏಕ ಮಹಿಳಾ ಒಡೆತನದ ಗೃಹಿಣಿ). ಆದರೆ ಮಾಜಿ ಸೈನಿಕರು, ವಿಧುರರು, ಅಂಗವಿಕಲರು ಹಾಗೂ ಹಿರಿಯ ನಾಗರಿಕರಾಗಿದ್ದಲ್ಲಿ ಪುರುಷರಿಗೂ ಸಹ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಅರ್ಜಿದಾರರ ಕುಟುಂಬದ ವಾರ್ಷಿಕ ಆದಾಯ ರೂ. 1,20,000 ಕ್ಕಿಂತ ಕಡಿಮೆಯಿರಬೇಕು ಹಾಗೂ ಅರ್ಜಿದಾರರಾಗಲಿ ಅಥವಾ ಅವರ ಕುಟುಂಬದ ಯಾವುದೇ ಸದಸ್ಯರಾಗಲಿ ರಾಜ್ಯದ ಯಾವುದೇ ಭಾಗದಲ್ಲಿ ಸ್ವಂತ ಮನೆ ಅಥವಾ ನಿವೇಶನ ಹೊಂದಿರಬಾರದು. ಅಲ್ಲದೆ, ಈ ಹಿಂದೆ ಯಾವುದೇ ಸರ್ಕಾರಿ ಯೋಜನೆಯಡಿ ವಸತಿ ಅಥವಾ ನಿವೇಶನ ಸೌಲಭ್ಯ ಪಡೆದಿರಬಾರದು ಎಂದು ತಿಳಿಸಲಾಗಿದೆ.

ಪ್ರಸ್ತುತ ಆಯಾ ಗ್ರಾಮ ಪಂಚಾಯತಿಗಳಲ್ಲಿ ನಿವೇಶನ ರಹಿತರ ಸಮೀಕ್ಷೆ ಕಾರ್ಯ ಪ್ರಗತಿಯಲ್ಲಿದ್ದು, ಅರ್ಹ ಫಲಾನುಭವಿಗಳು ಪಡಿತರ ಚೀಟಿ, ಆಧಾರ್ ಕಾರ್ಡ್, ಜಾತಿ ಪ್ರಮಾಣ ಪತ್ರ ಹಾಗೂ ಆದಾಯ ಪ್ರಮಾಣ ಪತ್ರಗಳೊಂದಿಗೆ ಅರ್ಜಿ ಸಲ್ಲಿಸಬೇಕಾಗಿದೆ.

ಆಸಕ್ತರು ತಮ್ಮ ವ್ಯಾಪ್ತಿಯ ಗ್ರಾಮ ಪಂಚಾಯತಿ ಕಚೇರಿಯನ್ನು ಸಂಪರ್ಕಿಸಿ ಸೆಪ್ಟೆಂಬರ್‌ 10ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ : ಬೀದರ್ ಜಿಲ್ಲೆಯನ್ನು ಸಂಪೂರ್ಣ ಬರಪೀಡಿತ ಘೋಷಿಸಿ: ರೈತ ಸಂಘ ಆಗ್ರಹ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಜಿಪಂ, ತಾಪಂ ಚುನಾವಣೆ: ಸಾಮಾಜಿಕ ಜಾಲತಾಣದಲ್ಲಿ ಆಕಾಂಕ್ಷಿಗಳ ಪ್ರಚಾರ ಜೋರು!

ರಾಜ್ಯದಲ್ಲಿ ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯಿತಿ ಕ್ಷೇತ್ರವಾರು ಮೀಸಲಾತಿ ಪ್ರಕಟವಾಗುತ್ತಿದ್ದಂತೆ, ಬೀದರ್‌...

ಸಿಜೆಪಿ ನಾಯಕರ ಬಂಧನಕ್ಕೆ ತೀವ್ರ ಖಂಡನೆ: ತಕ್ಷಣ ರಾಂಕಾ, ಸೌರವ್ ಬಿಡುಗಡೆಗೆ ವಿಪಕ್ಷಗಳ ಆಗ್ರಹ

ಏಕಪಕ್ಷೀಯ ನಿರ್ಧಾರ ಕೈಗೊಂಡ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್...

ಪತಿಯನ್ನು ಕೊಂದು ಕಾಂಕ್ರೀಟ್ ಡ್ರಮ್‌ನಲ್ಲಿ ಹೂತಿಟ್ಟ ಪ್ರಕರಣ: ಪತ್ನಿ, ಪ್ರಿಯಕರನಿಗೆ ಗಲ್ಲು ಶಿಕ್ಷೆ

ಮರ್ಚೆಂಟ್ ನೇವಿ ಅಧಿಕಾರಿ ಸೌರಭ್ ರಜಪೂತ್ ಅವರನ್ನು ಬರ್ಬರವಾಗಿ ಹತ್ಯೆಗೈದು, ಮೃತದೇಹವನ್ನು...

ಜಂತರ್ ಮಂತರ್ ಧರಣಿ ಸ್ಥಳ ರದ್ದತಿ ಖಂಡಿಸಿ ಎಸ್‌ಎಫ್‌ಐ, ಡಿವೈಎಫ್‌ಐ ಪ್ರತಿಭಟನಾ ಮೆರವಣಿಗೆ: ಹಲವು ನಾಯಕರು ಪೊಲೀಸ್ ವಶಕ್ಕೆ

ದೇಶದ ರಾಜಧಾನಿ ದೆಹಲಿಯ ಐತಿಹಾಸಿಕ 'ಜಂತರ್ ಮಂತರ್' ಅನ್ನು ಪ್ರಜಾಸತ್ತಾತ್ಮಕ ಪ್ರತಿಭಟನಾ...