ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿ ಅನುಷ್ಠಾನಗೊಳ್ಳುತ್ತಿರುವ ಪ್ರಧಾನ ಮಂತ್ರಿ ಮಾತೃವಂದನಾ ಯೋಜನೆಯ ಜಿಲ್ಲಾ ಮಹಿಳಾ ಸಬಲೀಕರಣ ಘಟಕದಲ್ಲಿ ಖಾಲಿ ಇರುವ ಜಿಲ್ಲಾ ಸಂಯೋಜಕರ ಹುದ್ದೆ ಭರ್ತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಬೀದರ್‌ನ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರ ಕಚೇರಿಯ ಜಿಲ್ಲಾ ಮಹಿಳಾ ಸಬಲೀಕರಣ ಘಟಕದಲ್ಲಿ ಒಂದು ಜಿಲ್ಲಾ ಸಂಯೋಜಕರ ಹುದ್ದೆ ಖಾಲಿಯಿದ್ದು, ಮಾಸಿಕ ₹35 ಸಾವಿರ ಗೌರವಧನದ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು 2026ರ ಡಿಸೆಂಬರ್ 22ರೊಳಗೆ ಅರ್ಜಿ ಸಲ್ಲಿಸಬೇಕು ಎಂದು ಉಪ ನಿರ್ದೇಶಕ ನವೀನಕುಮಾರ್ ತಿಳಿಸಿದ್ದಾರೆ.
ಅಭ್ಯರ್ಥಿಗಳು ಇಲಾಖೆಯು ನಿಗದಿಪಡಿಸಿರುವ ಅರ್ಹತೆಗಳನ್ನು ಹೊಂದಿರಬೇಕು ಹಾಗೂ ಹುದ್ದೆಯ ಜವಾಬ್ದಾರಿಗಳನ್ನು ನಿರ್ವಹಿಸಲು ಸಿದ್ಧರಿರಬೇಕು. ಸ್ಥಳೀಯ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು. ಹುದ್ದೆಯ ಅರ್ಹತೆ ಹಾಗೂ ಅರ್ಜಿ ಸಲ್ಲಿಕೆ ಕುರಿತು ಹೆಚ್ಚಿನ ಮಾಹಿತಿಗಾಗಿ 9535081035 ದೂರವಾಣಿ ಸಂಖ್ಯೆಗೆ ಸಂಪರ್ಕಿಸಬಹುದು ಎಂದು ತಿಳಿಸಿದ್ದಾರೆ.

ಆಸಕ್ತರು ಬೀದರ್‌ನ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರ ಕಚೇರಿಯಿಂದ ಅರ್ಜಿ ಪಡೆದು, ಅಗತ್ಯ ವಿವರಗಳನ್ನು ಭರ್ತಿ ಮಾಡಿ ನಿಗದಿತ ಅವಧಿಯೊಳಗೆ ಸಲ್ಲಿಸಬೇಕು. ಕೊನೆಯ ದಿನಾಂಕದ ನಂತರ ಸಲ್ಲಿಸುವ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ ಎಂದು ಪ್ರಕಟಣೆ ತಿಳಿಸಿದೆ.
ಇದನ್ನೂ ಓದಿ : ಸಂಭ್ರಮದ ತೆರೆ ಕಂಡ ಬೀದರ್ ಜಿಲ್ಲಾ 22ನೇ ಕನ್ನಡ ಸಾಹಿತ್ಯ ಸಮ್ಮೇಳನ: 12 ನಿರ್ಣಯ ಅಂಗೀಕಾರ



