ಆಮ್ ಆದ್ಮಿ ಪಕ್ಷದ ರಾಜ್ಯ ಅಲ್ಪಸಂಖ್ಯಾತರ ಘಟಕದ ಉಪಾಧ್ಯಕ್ಷರಾಗಿ ಬೀದರ್‌ನ ಸೈಯದ್ ಜಮೀಲ್ ಅವರನ್ನು ನೇಮಿಸಲಾಗಿದೆ.
ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರ, ಕಾರ್ಯಾಧ್ಯಕ್ಷ ಸೀತಾರಾಮ ಗುಂಡಪ್ಪ, ಪ್ರಧಾನ ಕಾರ್ಯದರ್ಶಿ ಸಂಚೀತ್ ಸಹಾನೀ ಅವರು ನೇಮಕಾತಿ ಪತ್ರ ನೀಡಿ ಪಕ್ಷದ ತತ್ವ, ಸಿದ್ಧಾಂತ ಹಾಗೂ ನಿಯಮಗಳಿಗೆ ಬದ್ಧವಾಗಿ ಕಾರ್ಯನಿರ್ವಹಿಸಿ ಪಕ್ಷದ ಸಂಘಟನೆಯನ್ನು ಮತ್ತಷ್ಟು ಬಲಪಡಿಸಲು ಕಾರ್ಯಾಪ್ರವೃತ್ತರಾಗಬೇಕೆಂದು ಸೂಚಿಸಿದ್ದಾರೆ.
ʼಆಪ್ʼ ಪಕ್ಷದ ರಾಜ್ಯ ಘಟಕಕ್ಕೆ ನೇಮಕರಾದ ಸೈಯದ್ ಜಮೀಲ್ ಅವರನ್ನು ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಸ್ತುವಾರಿ ರಾಜಕುಮಾರ ಪಾಟೀಲ್ ಸೇರಿದಂತೆ ಮತ್ತಿತರರು ಬೀದರ್ ನಗರದ ಪಕ್ಷದ ಕಚೇರಿಯಲ್ಲಿ ಅಭಿನಂದಿಸಿದರು.
ಇದನ್ನೂ ಓದಿ : ₹25 ಕೋಟಿ ವೆಚ್ಚದಲ್ಲಿ ಬೀದರ್ ಕೋಟೆ, ಪಾಪನಾಶ ಕೆರೆ ಅಭಿವೃದ್ಧಿ





