ಬೀದರ್‌ | ಕನ್ನಡ ರಕ್ಷಣೆಗೆ ಹೋರಾಡುವ ಹೋರಾಟಗಾರರ ಬಂಧನಕ್ಕೆ ಖಂಡನೆ

Date:

ಕನ್ನಡ ರಕ್ಷಣೆಗೆ ಹೋರಾಡುವ ಹೋರಾಟಗಾರರ ಬಂಧನವನ್ನು ಖಂಡಿಸಿ ಕಲ್ಯಾಣ ಕರ್ನಾಟಕ ಜನಪರ ಸಂಘರ್ಷ ಸಮಿತಿಯಿಂದ ಬೀದರ್ ಜಿಲ್ಲಾಧಿಕಾರಿ ಮುಖಾಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದರು.

- Advertisement -

“ಕರ್ನಾಟಕದಲ್ಲಿ ಕನ್ನಡವೇ ತಾಯಿ. ಆದರೆ, ಸರ್ಕಾರದ ಕಾರ್ಯ ವೈಖರಿಯಿಂದ ಧೋರಣೆ ಉಂಟಾಗಿರುವುದು ದುರ್ದೈವದ ಸಂಗತಿ. ಬೆಂಗಳೂರಿನಲ್ಲಿ ಐಟಿಬಿಟಿ ಕಂಪನಿಗಳು, ಹೊರನಾಡಿನಿಂದ ಬಂದ ವ್ಯಾಪರಿಗಳ ಅಂಗಡಿಗಳ ಮೇಲೆ ಕನ್ನಡ ಹೊರತು ಪಡಿಸಿ ಬೇರೆ ಭಾಷೆಯ ನಾಮಫಲಕಗಳು ರಾರಾಜಿಸುತ್ತಿರುವಾಗ ಕರ್ನಾಟಕ ಸರ್ಕಾರ, ಕನ್ನಡ ಸಂಸ್ಕೃತಿ ಇಲಾಖೆ, ಕನ್ನಡ ಅಭಿವೃದ್ಧಿ ಪ್ರಾಧಿಕಾರಿಗಳು ಕುಂಭಕರಣನಂತೆ ನಿದ್ರೆಗೆ ಜಾರಿವೆ. ಆದ್ದರಿಂದ ಕನ್ನಡಪರ ಸಂಘಟನೆಗಳು ಜಾಗೃತರಾಗಿ ಅನ್ಯಭಾಷೀಯ ನಾಮಫಲಕಗಳನ್ನು ಕಿತ್ತು ಹಾಕಿರುವುದು ಹೆಮ್ಮೆಯ ಸಂಗತಿ. ಆದರೆ ಕರ್ನಾಟಕ ಸರ್ಕಾರ ಅವರನ್ನು ಬಂಧಿಸಿ, ಜೈಲಿಗೆ ಹಾಕಿರುವುದು ಬ್ರಿಟೀಷರು ಸ್ವಾತಂತ್ರ್ಯ ಸೈನಾನಿಗಳ ಮೇಲೆ ದಬ್ಬಾಳಿಕೆ ಮಾಡಿದಂತಾಗಿದೆ. ಇದು ಕರ್ನಾಟಕ ಸರ್ಕಾರವೇ, ಕನ್ನಡ ವಿರೋಧಿ ಸರ್ಕಾರವೇ ತಿಳಿಯದಾಗಿದೆ” ಎಂದು ಸಂಘಟನಾಕಾರರು ಅಸಮಾಧಾನ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

“ಬೆಂಗಳೂರಿನಲ್ಲಷ್ಟೇ ಅನ್ಯ ಭಾಷೆಯ ನಾಮಫಲಕಗಳಿಲ್ಲ. ನಮ್ಮ ಬೀದರ್ ಜಿಲ್ಲೆಯಲ್ಲಿಯೂ ಕನ್ನಡವನ್ನು ನಿರ್ಲಕ್ಷಿಸಲಾಗಿದೆ. ಎರಡು ತಿಂಗಳೊಳಗೆ ಈ ಎಲ್ಲ ನಾಮಫಲಕಗಳ ಮೇಲೆ ಕನ್ನಡ ರಾರಾಜಿಸಬೇಕು. ಇಲ್ಲವಾದಲ್ಲಿ ಬೀದರ್ ಜಿಲ್ಲೆಯಲ್ಲಿ ಬೀದಿ ಹೋರಾಟಕ್ಕೆ ಇಳಿಯಲು ಸರ್ಕಾರ ಮತ್ತು ಜಿಲ್ಲಾಡಳಿತವೇ ಅವಕಾಶ ಕಲ್ಪಿಸಿದಂತಾಗುತ್ತದೆ.‌ ಬೆಂಗಳೂರಿನಲ್ಲಿ ಬಂಧಿಸಿರುವ ಕನ್ನಡ ಹೋರಾಟಗಾರರನ್ನು ಶೀಘ್ರ ಬಿಡುಗಡೆಗೊಳಿಸಬೇಕು. ಇಲ್ಲವಾದಲ್ಲಿ ಸರ್ಕಾರದ ಕ್ರಮ ಖಂಡಿಸಿ ಹೋರಾಟ ಮಾಡಬೇಕಾಗುತ್ತದೆ” ಎಂದು ಎಚ್ಚರಿಕೆ ನೀಡಿದರು.

ಈ ಸುದ್ದಿ ಓದಿದ್ದೀರಾ? ಮೈಸೂರು | ಮದ್ಯದಗಂಡಿ ತೆರವಿಗೆ ರೈತ ಸಂಘ ಆಗ್ರಹ

ಈ ಸಂದರ್ಭದಲ್ಲಿ ಕಲ್ಯಾಣ ಕರ್ನಾಟಕ ಜನಪರ ಸಂಘರ್ಷ ಸಮಿತಿಯ ಜಿಲ್ಲಾಧ್ಯಕ್ಷ ಅನಂತರೆಡ್ಡಿ ಟಿ ಮಿರ್ಜಾಪೂರ, ಪ್ರಧಾನ ಕಾರ್ಯದರ್ಶಿ ಬಕ್ಕಪ್ಪಾ ನಾಗೂರಾ, ಕಾರ್ಯದರ್ಶಿ ವಿದ್ಯಾಸಾಗರ, ವಿಶ್ವನಾಥ ಉಪ್ಪೆ, ರಮೇಶ ಬಿರಾದಾರ, ಅನಿಲ್ ಕುಮಾರ್, ಅಟಂಗೆ ಶಿವಾಜಿ ದದ್ದಾಪುರ್, ಶಂಕರ್ ರಾವ್ ಸಜ್ಜನ್, ನಾಗೇಶ್ ಕುಮಾರ್ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | 25 ವರ್ಷ ನೆನಗುದಿಗೆ ಬಿದ್ದಿದ್ದ ಆಟೋ ನಿಲ್ದಾಣ ನಿರ್ಮಾಣ 

ಹಾಸನ ಜಿಲ್ಲೆ ಸಕಲೇಶಪುರ ಪಟ್ಟಣದ ಹಳೆ ಬಸ್ ನಿಲ್ದಾಣದ ಸಮೀಪ ಸ್ಥಳೀಯ...

ಕಾರವಾರ | ಗ್ರಾಮ ಆಡಳಿತ ಅಧಿಕಾರಿ ಪರೀಕ್ಷೆ ಸುಸೂತ್ರ: ಒಟ್ಟು 11,671 ಅಭ್ಯರ್ಥಿಗಳು ಹಾಜರು

ಕಾರವಾರ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ವತಿಯಿಂದ ಕಂದಾಯ ಇಲಾಖೆಯ ಗ್ರಾಮ...

ಹಾಸನ | ₹426 ಕೋಟಿ; ಹಾಸನ-ಬೇಲೂರು ಚತುಷ್ಪಥ ರಸ್ತೆ ಅಭಿವೃದ್ಧಿ ಯೋಜನೆ; ಸಂಸದ ಶ್ರೇಯಸ್ ಪಟೇಲ್ 

ಹಾಸನ ನಗರದಲ್ಲಿ ಸುದ್ದಿಗಾರರೊಂದಿಗೆ ಸಂಸದ ಶ್ರೇಯಸ್ ಪಟೇಲ್ ಮಾತನಾಡಿ, ಹಾಸನ -...

ಯಲ್ಲಾಪುರ | ವಜ್ರಳ್ಳಿಯಲ್ಲಿ ರಸ್ತೆ ಕಾಮಗಾರಿಗೆ ಸಂಗ್ರಹಿಸಿದ್ದ ₹36 ಸಾವಿರ ಮೌಲ್ಯದ ಕಡಿ, ಎಂ-ಸ್ಯಾಂಡ್ ಕಳವು

ಯಲ್ಲಾಪುರ: ರಸ್ತೆ ಕಾಮಗಾರಿಗಾಗಿ ಸಂಗ್ರಹಿಸಿಟ್ಟಿದ್ದ ಕಡಿ ಹಾಗೂ ಎಂ-ಸ್ಯಾಂಡ್ ಕಳವು ಮಾಡಿರುವ...