ಬೀದರ್‌ | ಅಕ್ಷರ ಜಾತ್ರೆಗೆ ಸಿಂಗಾರಗೊಂಡ ಔರಾದ್‌

Date:

ಫೆ.4ರಂದು ನಡೆಯಲಿರುವ ಔರಾದ್ ತಾಲೂಕು ಏಳನೇ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಘಮಲು‌ ಎಲ್ಲೆಡೆ ಹರಡಿದೆ. ಕನ್ನಡಾಭಿಮಾನಿಗಳು ಹಗಲಿರುಳು ಸಮ್ಮೇಳನದ ಯಶಸ್ಸಿಗೆ ಶ್ರಮಿಸುತ್ತಿದ್ದಾರೆ. ಗಡಿಯಲ್ಲಿ ಅಕ್ಷರ ಜಾತ್ರೆಯ ತೇರು ಎಳೆಯಲು ಪಟ್ಟಣದಲ್ಲಿ ಭರದ ಸಿದ್ಧತೆಗಳು ನಡೆದಿವೆ.

- Advertisement -

ತಾಲೂಕಿನವರೇ ಆದ ಹಿರಿಯ ಸಾಹಿತಿ ಹಾಗೂ ಪ್ರಾಚಾರ್ಯ ಡಾ.ಮನ್ಮತ ಡೋಳೆ ಅವರ ಅಧ್ಯಕ್ಷತೆಯಲ್ಲಿ ಸಮ್ಮೇಳನ ನಡೆಯುತ್ತಿದ್ದು, ಔರಾದ್ ಪಟ್ಟಣ ಮದುವಣಗಿತ್ತಿಯಂತೆ ಸಿಂಗಾರಗೊಂಡು ಕನ್ನಡ ನುಡಿ ಹಬ್ಬದ ವಾತಾವರಣ ಉಂಟಾಗಿದೆ. ಸಮ್ಮೇಳನ ಪ್ರಯುಕ್ತ ಭಾಷಣ, ಪ್ರಬಂಧ ಸ್ಪರ್ಧೆಗಳು ನಡೆದಿದ್ದು, ಸಮ್ಮೇಳನದ ದಿನ ರಂಗೋಲಿ, ಚಿತ್ರಕಲೆ, ಚಿತ್ರ ಪ್ರದರ್ಶನ ನಡೆಲಿದೆ. ಇನ್ನು ತಾಲೂಕಿನ ಐತಿಹಾಸಿಕ ವೈಶಿಷ್ಟತೆ ಸಾರುವ ಪೋಸ್ಟರ್‌ಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ...

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ, ನಿರುದ್ಯೋಗ-ಬೆಲೆ ಏರಿಕೆಯ ಭಾರದಿಂದ ಜನ ಹೈರಾಣಾಗಿರುವಾಗ ಭಾರತದ ಪ್ರಧಾನಿ ಭಜನೆ ಮಾಡುತ್ತಿದ್ದಾರೆ. ರೋಂ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು...

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ...

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು ಇದೇ ಮೊದಲೇನಲ್ಲ. ಕರಾವಳಿಯ ಜನತೆ ಇಂತಹ ಪ್ರಚೋದನಾತ್ಮಕ ನಡೆಗಳನ್ನು ತಿರಸ್ಕರಿಸಿ, ಸತ್ಯ ಮತ್ತು ನ್ಯಾಯದ ಪರವಾಗಿ ನಿಲ್ಲಬೇಕಾಗಿದೆ. ಕರಾವಳಿ ಕರ್ನಾಟಕವಾಗಲಿ...

ನಾಲ್ಕು ವರ್ಷಗಳ ನಂತರ ಗಡಿ ತಾಲೂಕಿನಲ್ಲಿ ‘ಅಕ್ಷರ ಜಾತ್ರೆ’ ನಡೆಯುತ್ತಿದೆ. ನುಡಿ ಜಾತ್ರೆಯನ್ನು ಅದ್ಧೂರಿಯಾಗಿ ನಡೆಸಲು ಜಿಲ್ಲಾ, ತಾಲೂಕು ಕನ್ನಡ ಸಾಹಿತ್ಯ ಪರಿಷತ್‌ ಎಲ್ಲ ರೀತಿಯ ಸಿದ್ಧತೆ ಮಾಡಿಕೊಂಡಿದೆ. ಪಟ್ಟಣದ ಚಿಂತಾಕಿ ರಸ್ತೆಯಲ್ಲಿರುವ ಡಾ.ಗುರುಪಾದಪ್ಪ ನಾಗಮಾರಪಳ್ಳಿ ಕಲ್ಯಾಣ ಮಂಟಪದಲ್ಲಿ ‘ನುಡಿಹಬ್ಬ’ ಆಚರಣೆ ಭವ್ಯದಿಂದ ನಡೆಯಲಿದ್ದು, ಗಡಿನಾಡು ಸಂಸ್ಕೃತಿ ಮೆರೆಯುವ ಸಾಹಿತ್ಯಾಭಿಮಾನಿಗಳ ಸ್ವಾಗತಕ್ಕೆ ಸಜ್ಜಾಗಿದೆ.

WhatsApp Image 2026 02 02 at 1.40.11 PM
ತಾಲೂಕು ಕಸಾಪ ಮಹಿಳಾ ಘಟಕದ ಪದಾಧಿಕಾರಿಗಳು ಪಟ್ಟಣದಲ್ಲಿ ಮನೆ-ಮನೆಗೆ ತೆರಳಿ ಸಮ್ಮೇಳನ ಕರಪತ್ರ ನೀಡಿ ಆಹ್ವಾನಿಸಿದರು.

ಪಟ್ಟಣದ ಪ್ರಮುಖ ಬೀದಿಗಳು ಕನ್ನಡ ಧ್ವಜ, ಬ್ಯಾನರ್‌ಗಳು ಕಂಗೊಳಿಸುತ್ತಿವೆ. ಸಮ್ಮೇಳನದ ಪ್ರಧಾನ ವೇದಿಕೆಗೆ ಚಂದ್ರಪ್ಪ ಪಾಟೀಲ್‌, ಡಾ.ಕಲ್ಲಪ್ಪ ಉಪ್ಪೆ ಹೆಸರಿನ ಮಂಟಪ ಹಾಗೂ ಮಹಾದ್ವಾರಗಳಿಗೆ ನಾಗಮಣಿ ಗುಂಡಪ್ಪ ವಕೀಲ್‌ ಹಾಗೂ ವಿಠಲರಾವ್‌ ಯೋಗಿ ಅವರ ಹೆಸರು ಇಡಲಾಗಿದೆ. ಸಮ್ಮೇಳನದಲ್ಲಿ ಸ್ಥಳದಲ್ಲಿ ಪುಸ್ತಕ ಮಾರಾಟ ಮಳಿಗೆ, ಚಿತ್ರಕಲಾ ಪ್ರದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ

ಅಂದು ಬೆಳಗ್ಗೆ ಉದ್ಭವಲಿಂಗ ಶ್ರೀ ಅಮರೇಶ್ವರ ದೇವಸ್ಥಾನ ಎದುರು ಬೆಳಗ್ಗೆ 7:30ಕ್ಕೆ ತಹಸೀಲ್ದಾರ್‌ ಮಹೇಶ ಪಾಟೀಲ್‌, ಜಿಲ್ಲಾ ಕಸಾಪ ಅಧ್ಯಕ್ಷ ಸುರೇಶ ಚನ್ನಶೆಟ್ಟಿ ಹಾಗೂ ತಾಲೂಕು ಕಸಾಪ ಅಧ್ಯಕ್ಷ ಬಿ.ಎಂ.ಅಮರವಾಡಿ ನೇತ್ರತ್ವದಲ್ಲಿ ರಾಷ್ಟ್ರಧ್ವಜ, ನಾಡಧ್ವಜ, ಕನ್ನಡ ಸಾಹಿತ್ಯ ಪರಿಷತ್ತಿನ ಧ್ವಜಾರೋಹಣ ನೆರವೇರಲಿದೆ. ಬಳಿಕ 8:15 ಗಂಟೆಗೆ ತಾಲೂಕು ಪಂಚಾಯತ್‌ ಇಒ ಕಿರಣ ಪಾಟೀಲ್ ಅವರು ಮೆರವಣಿಗೆಗೆ ಚಾಲನೆ ನೀಡಲಿದ್ದಾರೆ.

ಬಳಿಕ ಅಲಂಕೃತ ರಥದಲ್ಲಿ ಸರ್ವಾಧ್ಯಕ್ಷರಾದ ಡಾ.ಮನ್ಮತ ಡೋಳೆ ಅವರ ಮೆರವಣಿಗೆಯು ಬಸವೇಶ್ವರ ವೃತ್ತ, ಕನಕದಾಸ ವೃತ್ತ, ಛತ್ರಪತಿ ಶಿವಾಜಿ ವೃತ್ತ, ಕನ್ನಡಾಂಬೆ ವೃತ್ತ, ಡಾ.ಚನ್ನಬಸವ ಪಟ್ಟದ್ದೇವರು ವೃತ್ತದ ಮಾರ್ಗವಾಗಿ ಪ್ರಧಾನ ವೇದಿಕೆಗೆ ಸಾಗಲಿದೆ.

ಬೆಳಗ್ಗೆ 10:30ಕ್ಕೆ ಉದ್ಘಾಟನಾ ಸಮಾರಂಭ ನಡೆಯಲಿದೆ. ಚಿಕ್ಕಮಗಳೂರಿನ ಸಂಸ್ಕೃತಿ ಚಿಂತಕ ಚಟ್ನಳ್ಳಿ ಮಹೇಶ ಸಮಾರಂಭದ ಉದ್ಘಾಟಿಸುತ್ತಾರೆ. ಮಾಜಿ ಸಚಿವ, ಔರಾದ್ ಶಾಸಕ‌ ಪ್ರಭು ಬಿ.ಚವ್ಹಾಣ ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ಬಸವಕಲ್ಯಾಣ ಅನುಭವ ಮಂಟಪ ಅಧ್ಯಕ್ಷ ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರು ಸಾನಿಧ್ಯ ವಹಿಸುವರು. ತಹಸೀಲ್ದಾರ್‌ ಮಹೇಶ ಪಾಟೀಲ್‌ ಸ್ಮರಣ ಸಂಚಿಕೆ ಬಿಡುಗಡೆ ಮಾಡಲಿದ್ದಾರೆ. ವಾಣಿಜ್ಯ ತೆರಿಗೆ ಇಲಾಕೆ ಅಧಿಕಾರಿ ಖಾಜಾ ಖಲೀಲುಲ್ಲಾ ಪುಸ್ತಕ ಮಳಿಗೆ ಉದ್ಘಾಟಿಸುವರು. ಪ್ರಗತಿಪರ ಕೃಷಿ ಚಿಂತಕಿ ಕವಿತಾ ಮಿಶ್ರಾ ಅವರು ವಸ್ತು ಪ್ರದರ್ಶನಕ್ಕೆ ಚಾಲನೆ ನೀಡಲಿದ್ದಾರೆ.

WhatsApp Image 2026 02 02 at 5.41.09 PM
ಸಮ್ಮೇಳನಾಧ್ಯಕ್ಷ ಡಾ.ಮನ್ಮತ ಡೋಳೆ

ಮಧ್ಯಾಹ್ನ 1:30ಕ್ಕೆ ವಿಶೇಷ ಉಪನ್ಯಾಸ ಗೋಷ್ಠಿ ಪ್ರಾರಂಭಗೊಳ್ಳಲಿದ್ದು, ಸಾಹಿತಿ ಡಾ.ಮಲ್ಲಿಕಾರ್ಜುನ ಆಮ್ಣೆ ಅವರು ʼಸಮ್ಮೇನಾಧ್ಯಕ್ಷರ ಬದುಕು-ಬರಹʼ ಕುರಿತು ಉಪನ್ಯಾಸ ನೀಡಲಿದ್ದಾರೆ. ಗೋಷ್ಠಿಯ ಅಧ್ಯಕ್ಷತೆಯನ್ನು ಬಸವ ಕೇಂದ್ರ ತಾಲೂಕು ಅಧ್ಯಕ್ಷ ಜಗನ್ನಾಥ ಮೂಲಗೆ ವಹಿಸುತ್ತಾರೆ. ಸಾಹಿತಿಗಳು, ಕಸಾಪ ಪದಾಧಿಕಾರಿಗಳು ಗೋಷ್ಠಿಯಲ್ಲಿ ಭಾಗವಹಿಸುತ್ತಾರೆ.

ಸಂಕಿರಣ ಗೋಷ್ಠಿ ಮಧ್ಯಾಹ್ನ 2:30ಕ್ಕೆ ನಡೆಯಲಿದ್ದು, ʼಔರಾದ್‌ ತಾಲೂಕಿನ ಐತಿಹಾಸಿಕ ನೆಲೆಗಳು’ ಎಂಬ ವಿಷಯ ಕುರಿತು ಸಾಹಿತಿ ಶಿವಕುಮಾರ ಕಟ್ಟೆ ಮಾತನಾಡಲಿದ್ದಾರೆ. ಸಾಹಿತಿ ಡಾ.ರೇಣುಕಾ ಸ್ವಾಮಿ ಅವರು ʼಔರಾದ್‌ ತಾಲೂಕಿನ ಜನಪದ ಹಾಗೂ ಮಹಿಳಾ ಸಾಹಿತ್ಯʼ ಎಂಬ ವಿಷಯ ಕುರಿತು ಉಪನ್ಯಾಸ ನೀಡಲಿದ್ದಾರೆ. ಗೋಷ್ಠಿಯ ಅಧ್ಯಕ್ಷತೆಯನ್ನು ನಿಕಟಪೂರ್ವ ಜಿಲ್ಲಾ ಕಸಾಪ ಅಧ್ಯಕ್ಷ ಪ್ರೊ.ಸಿದ್ರಾಮಪ್ಪಾ ಮಾಸಿಮಾಡೆ ವಹಿಸಲಿದ್ದಾರೆ. ಪ್ರಾಚಾರ್ಯ ಡಾ.ಬಸವರಾಜ ಬಲ್ಲೂರ ಆಶಯ ನುಡಿ ನುಡಿಯಲಿದ್ದು, ಮುಖಂಡರು, ಚಿಂತಕರು ಗೋಷ್ಠಿಯಲ್ಲಿ ಗೌರವ ಉಪಸ್ಥಿತಿ ಇರಲಿದ್ದಾರೆ.

ಮಧ್ಯಾಹ್ನ 4ಕ್ಕೆ ನಡೆಯುವ ಕವಿಗೋಷ್ಠಿಯಲ್ಲಿ ಕವಿಗೋಷ್ಠಿಯ ಅಧ್ಯಕ್ಷತೆಯನ್ನು ಸಾಹಿತಿ ಡಾ.ಪ್ರೇಮಾ ಹೂಗಾರ ವಹಿಸಲಿದ್ದಾರೆ. ಕಲಬುರಗಿಯ ಸಾಹಿತಿ ಮಲ್ಲಿಕಾರ್ಜು ಪಾಲಾಮೂರ ಆಶಯ ನುಡಿ ಹೇಳಲಿದ್ದಾರೆ. ಡಾ.ಶಿವಲಿಂಗ ಹೇಡೆ, ಮಾಣಿಕ ನೆಳಗಿ, ಶಾಂತಮ್ಮಾ ಬಲ್ಲೂರ, ಸಂಗೀತಾ ಕೊರೊಳೆ, ಸವಿತಾ ಮೀಸೆ ಸೇರಿ 39 ಕವಿಗಳು ತಮ್ಮ ಸ್ವರಚಿತ ಕವಿತೆಯನ್ನು ವಾಚಿಸುತ್ತಾರೆ. ಕವಿಗೋಷ್ಠಿ ನಂತರ ವಿವಿಧ ಕ್ಷೇತ್ರದಲ್ಲಿ ಸಾಧನೈದ ಸಾಧಕರಿಗೆ ವಿಶೇಷ ಸನ್ಮಾನ ನಡೆಯಲಿದೆ.

WhatsApp Image 2026 02 02 at 5.50.09 PM
ಸಮ್ಮೇಳನ ಪ್ರಯುಕ್ತ ಆಯೋಜಿಸಿದ ಭಾಷಣ, ಪ್ರಬಂಧ ಸ್ಪರ್ಧೆಯಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳು

ಸಂಜೆ 5.45ಕ್ಕೆ ಬಹಿರಂಗ ಅಧಿವೇಶನವನ್ನು ಔರಾದ್ ತಾಲೂಕು ಕಸಾಪ ಅಧ್ಯಕ್ಷ ಬಿ.ಎಂ.ಅಮರವಾಡಿ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ. ತಾಲೂಕು ಕನ್ನಡ ಸಾಹಿತ್ಯ ಪರಿಷತ್‍ನ ಗೌರವ ಕಾರ್ಯದರ್ಶಿ ಜಗನ್ನಾಥ ದೇಶಮುಖ ಗೊತ್ತುವಳಿ ಮಂಡಿಸುತ್ತಾರೆ. ಸಂಜೆ 6ಕ್ಕೆ ಸಮಾರೋಪ ಭಾಷಣವನ್ನು ಮೈಸೂರಿನ ಹಿರಿಯ ಸಾಹಿತಿ ಶಶಿಕಲಾ ವಸ್ತ್ರದ ಮಾಡಲಿದ್ದಾರೆ. ಔರಾದ್‌ನ ದತ್ತ ಮಂದಿರದ ಶಂಕರಲಿಂಗ ಶಿವಚಾರ್ಯ, ಹೆಡಗಾಪುರ ಮಠದ ದಾರುಕಲಿಂಗ ಶಿವಚಾರ್ಯ ಅವರು ಸಾನಿಧ್ಯ-ನೇತ್ರತ್ವ ವಹಿಸಲಿದ್ದಾರೆ. ಜಿಲ್ಲೆಯ ಜನಪ್ರತಿನಿಧಿಗಳು, ಹಲವಾರು ಗಣ್ಯರು ಸಮಾರೋಪ ಕಾರ್ಯಕ್ರಮದಲ್ಲಿ ಇರುತ್ತಾರೆ.

ಸಮ್ಮೇಳನಾಧ್ಯಕ್ಷರಿಗೆ ಆಹ್ವಾನ :

ಔರಾದ್ ತಾಲ್ಲೂಕು ಏಳನೇ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಆಯ್ಕೆಯಾಗಿರುವ ಹಿರಿಯ ಸಾಹಿತಿ, ಪದವಿಪೂರ್ವ ಕಾಲೇಜು ಪ್ರಾಚಾರ್ಯ ಡಾ.ಮನ್ಮತ ಡೋಳೆ ಅವರಿಗೆ ಭಾನುವಾರ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಅಧಿಕೃತವಾಗಿ ಆಹ್ವಾನ ನೀಡಲಾಯಿತು.

WhatsApp Image 2026 02 01 at 6.04.16 PM
ಕಸಾಪ ತಂಡ ಪದಾಧಿಕಾರಿಗಳು ಸಮ್ಮೇಳನ ಸರ್ವಾಧ್ಯಕ್ಷರಾದ ಡಾ.ಮನ್ಮತ ಡೋಳೆ ಅವರಿಗೆ ಅಧಿಕೃತವಾಗಿ ಆಮಂತ್ರಣ ಪತ್ರ ನೀಡಿ ಆಹ್ವಾನಿಸಿದರು.

ಕಸಾಪ ಜಿಲ್ಲಾಧ್ಯಕ್ಷ ಸುರೇಶ ಚನ್ನಶೆಟ್ಟಿ ನೇತ್ರತ್ವದಲ್ಲಿ ತಾಲ್ಲೂಕು ಕಸಾಪ ಘಟಕದ ಪದಾಧಿಕಾರಿಗಳು ಸಾಹಿತಿಗಳು, ಚಿಂತಕರು, ಕನ್ನಡಪರ ಸಂಘಟನೆಗಳ ಪದಾಧಿಕಾರಿಗಳು, ಹೋರಾಟಗಾರರು ಡೋಳೆ ಅವರ ನಿವಾಸಕ್ಕೆ ತೆರಳಿ ಶಾಲು ಹೊದಿಸಿ ಗೌರವಿಸಿ, ಆಮಂತ್ರಣ ಪತ್ರಿಕೆ ನೀಡಿ ಸಮ್ಮೇಳನಕ್ಕೆ ಆಹ್ವಾನಿಸಿದರು.

ʼಕನ್ನಡ ನಾಡು-ನುಡಿಯ ರಕ್ಷಣೆ ನಮ್ಮೆಲ್ಲರ ಹೊಣೆಯಾಗಿದೆ. ಸಾಹಿತ್ಯ ಸಮ್ಮೇಳನಗಳು ಭಾಷೆಯ ಸಂರಕ್ಷಣೆ ಹಾಗೂ ಬೆಳವಣಿಗೆ ಸಹಕಾರಿಯಾಗುತ್ತವೆ. ಔರಾದ ಪಟ್ಟಣದಲ್ಲಿ ಫೆ.4ರಂದು ನಡೆಯುತ್ತಿರುವ ಕನ್ನಡ ಸಾಹಿತ್ಯ ಸಮ್ಮೇಳನವು ತಾಲೂಕಿನ ಸಾಂಸ್ಕೃತಿಕ ಶ್ರೀಮಂತಿಕೆ, ಕನ್ನಡ ಭಾಷೆಯ ಮೇಲಿನ ಅಭಿಮಾನವನ್ನು ಮತ್ತಷ್ಟು ಗಟ್ಟಿಗೊಳಿಸಲಿದೆ. ನುಡಿ ಜಾತ್ರೆಯಲ್ಲಿ ವಿದ್ಯಾರ್ಥಿಗಳು, ಯುವಕರು, ಶಿಕ್ಷಕರು, ಸಾಹಿತ್ಯಾಸಕ್ತರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕನ್ನಡದ ಕಾರ್ಯಕ್ರಮ ಯಶಸ್ವಿಗೊಳಿಸಬೇಕೆಂದು ಶಾಸಕ ಪ್ರಭು ಚವ್ಹಾಣ ಅವರು ಮನವಿ ಮಾಡಿದ್ದಾರೆ.

ಶಿಕ್ಷಕರಿಗೆ ಓಓಡಿ :

ಫೆ.4 ರಂದು ಒಂದು ದಿನ ನಡೆಯಲಿರುವ ಔರಾದ್ ತಾಲೂಕು ‌ಏಳನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಪಾಲ್ಗೊಳ್ಳುವ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಶಾಲಾ ಶಿಕ್ಷಕರಿಗೆ ಒಒಡಿ ಸೌಲಭ್ಯ ನೀಡಲಾಗುತ್ತದೆ ಎಂದು ಔರಾದ್‌ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ತಿಳಿಸಿದೆ.

ಈ ಕುರಿತು ಫೆ.2ರಂದು ಜ್ಞಾಪನ ಹೊರಡಿಸಿರುವ ಬಿಇಒ ಕಚೇರಿಯು, ಔರಾದ್‌ ಪಟ್ಟಣದ ಡಾ.ಗುರುಪಾದಪ್ಪಾ ನಾಗಮಾರಪಳ್ಳಿ ಕಲ್ಯಾಣ ಮಂಟಪದಲ್ಲಿ ನಡೆಯುವ ಸಾಹಿತ್ಯ ಸಮ್ಮೇಳನದಲ್ಲಿ ಭಾಗವಹಿಸಲು ಔರಾದ್‌ ವಿಧಾನಸಭಾ ಕ್ಷೇತ್ರ (ಔರಾದ್-ಕಮಲನಗರ ತಾಲೂಕು) ಶಿಕ್ಷಕರಿಗೆ ಅನುಮತಿಸಲಾಗಿದ್ದು, ಅಂದು ಸಮ್ಮೇಳನದಲ್ಲಿ ಪಾಲ್ಗೊಳ್ಳುವವರಿಗೆ ಓಓಡಿ ಸೌಲಭ್ಯ ನೀಡಲಾಗುತ್ತದೆ. ಸಮ್ಮೇಳನಕ್ಕೆ ಹಾಜರಾದ ಶಿಕ್ಷಕರು ಹಾಜರಾತಿ ಪ್ರಮಾಣ ಪತ್ರವನ್ನು ಕಡ್ಡಾಯವಾಗಿ ಪಡೆದುಕೊಳ್ಳುವುದು ಹಾಗೂ ಅಂದು ಶಾಲಾ ಕೆಲಸ ಕಾರ್ಯಗಳಿಗೆ ರಜೆ ನೀಡಬಾರದೆಂದು ತಿಳಿಸಲಾಗಿದೆ.

ಕಸಾಪ ಜಿಲ್ಲಾಧ್ಯಕ್ಷ ಸುರೇಶ ಚನ್ನಶೆಟ್ಟಿ ಮಾತನಾಡಿ, ʼಕನ್ನಡವನ್ನು ಬದುಕಿನ ಭಾಗವಾಗಿಸಿಕೊಂಡ ಗಡಿಭಾಗ ಔರಾದ್ ತಾಲ್ಲೂಕಿನ ಜನರು ಸಮ್ಮೇಳನವನ್ನು ಅತ್ಯಂತ ಅರ್ಥಪೂರ್ಣ ಹಾಗೂ ಉಲ್ಲಾಸದಿಂದ ಮಾಡುತ್ತಿರುವುದು ಖುಷಿ ನೀಡಿದೆ. ಸಮ್ಮೇಳನದ ಪ್ರಚಾರ ಜಿಲ್ಲೆಯಾದ್ಯಂತ ನಡೆಯುತ್ತಲಿದ್ದು, ಎಲ್ಲೆಡೆ ಹಬ್ಬದ ವಾತಾವರಣ ಸೃಷ್ಟಿಯಾಗಿದೆ. ಜಿಲ್ಲಾ ಸಮ್ಮೇಳನ ಮಾದರಿಯಲ್ಲಿ ತಯಾರಿ ನಡೆಯುತ್ತಿರುವುದು ಇಲ್ಲಿಯ ಯುವಕರ ಉತ್ಸಾಹ ತೋರುತ್ತದೆʼ ಎಂದರು.

ಇದನ್ನೂ ಓದಿ : ʼಈದಿನʼ ಸಂದರ್ಶನ | ಬಹುಭಾಷಿಕ ನೆಲೆಯಲ್ಲಿ ಕನ್ನಡಕ್ಕಿರಲಿ ಮನ್ನಣೆ : ಡಾ.ಮನ್ಮಥ ಡೋಳೆ

ʼಮಹಾರಾಷ್ಟ್ರ-ತೆಲಂಗಾಣ ರಾಜ್ಯಗಳೊಂದಿಗೆ ಗಡಿ ಹಂಚಿಕೊಂಡಿರುವ ಔರಾದ್‌ ತಾಲೂಕು ಐತಿಹಾಸಿಕ ಕಲೆ, ಸಾಹಿತ್ಯ, ಸಂಸ್ಕೃತಿಯ ತವರೂರು. ಈ ಹಿಂದೆ ಆರು ಸಮ್ಮೇಳನಗಳನ್ನು ಅತ್ಯಂತ ಅರ್ಥಪೂರ್ಣವಾಗಿ ಜರುಗಿವೆ. ಈಗ ಏಳನೇ ಸಾಹಿತ್ಯ ಸಮ್ಮೇಳನವೂ ಅದ್ದೂರಿಯಾಗಿ ಯಶಸ್ವಿಯಾಗಲಿದೆ. ಕಸಾಪ ತಂಡ ಸಕಲ ಸಿದ್ಧತೆ ಮಾಡಿಕೊಂಡಿದೆ. ಸಾಹಿತ್ಯಾಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕುʼ ಎಂದು ಕಸಾಪ ತಾಲೂಕು ಅಧ್ಯಕ್ಷ ಬಿ.ಎಂ.ಅಮರವಾಡಿ ಅವರು ವಿನಂತಿಸಿದರು.

WhatsApp Image 2025 02 06 at 11.55.32 e1738823214905
ಬಾಲಾಜಿ ಕುಂಬಾರ್
+ posts

ಬಾಲಾಜಿ ಕುಂಬಾರ ಅವರು ಔರಾದ್ ತಾಲ್ಲೂಕಿನ ಚಟ್ನಾಳ ಗ್ರಾಮದವರು. ಸಾಹಿತ್ಯ, ಶಿಕ್ಷಣ ಹಾಗೂ ರಾಜಕೀಯ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ್ದಾರೆ. ಸದ್ಯ 'ಈದಿನ.ಕಾಮ್‌' ಮಾಧ್ಯಮ ಸಂಸ್ಥೆಯಲ್ಲಿ ಬೀದರ್ ಜಿಲ್ಲಾ ಹಿರಿಯ ಸಂಯೋಜಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಕವಿತೆ, ಲೇಖನ, ದೇಶಿ ನುಡಿ ಬರಹ ಬರೆಯುವುದು ಇವರ ಮುಖ್ಯ ಹವ್ಯಾಸ.

ಪೋಸ್ಟ್ ಹಂಚಿಕೊಳ್ಳಿ:

ಬಾಲಾಜಿ ಕುಂಬಾರ್
ಬಾಲಾಜಿ ಕುಂಬಾರ್
ಬಾಲಾಜಿ ಕುಂಬಾರ ಅವರು ಔರಾದ್ ತಾಲ್ಲೂಕಿನ ಚಟ್ನಾಳ ಗ್ರಾಮದವರು. ಸಾಹಿತ್ಯ, ಶಿಕ್ಷಣ ಹಾಗೂ ರಾಜಕೀಯ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ್ದಾರೆ. ಸದ್ಯ 'ಈದಿನ.ಕಾಮ್‌' ಮಾಧ್ಯಮ ಸಂಸ್ಥೆಯಲ್ಲಿ ಬೀದರ್ ಜಿಲ್ಲಾ ಹಿರಿಯ ಸಂಯೋಜಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಕವಿತೆ, ಲೇಖನ, ದೇಶಿ ನುಡಿ ಬರಹ ಬರೆಯುವುದು ಇವರ ಮುಖ್ಯ ಹವ್ಯಾಸ.

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಸ್ಮಶಾನ ಭೂಮಿ ಸಮಸ್ಯೆ ಬಗೆಹರಿಸದಿದ್ದರೆ ಡಿಸಿ ಕಚೇರಿ ಮುತ್ತಿಗೆ

ಬೀದರ್‌ ತಾಲೂಕಿನ ಅಮಲ್ಲಾಪುರ ಗ್ರಾಮದ ಸರ್ವೇ ನಂ.71ರ ಜಾಗವನ್ನು ದಲಿತ ಸಮುದಾಯದ...

ಬೀದರ್‌ | ಸೆ.27ರಂದು ಹೂಗಾರ ಮಾದಯ್ಯನವರ ಜಯಂತಿ ಅದ್ದೂರಿ ಆಚರಣೆ

ಅಖಂಡ ಕರ್ನಾಟಕ ಹೂಗಾರ ಮಹಾಸಭಾ ಬೀದರ್ ಜಿಲ್ಲಾ ಘಟಕದ ವತಿಯಿಂದ ಸೆ.27ರಂದು...

ಭಾಲ್ಕಿ | ಮಡಿವಾಳ ಮಾಚಿದೇವರ ಕಾಯಕ ನಿಷ್ಠೆ ಸಮಾಜಕ್ಕೆ ಆದರ್ಶ: ಮಹಾಲಿಂಗ ಸ್ವಾಮೀಜಿ

ಕಾಯಕ ಹಾಗೂ ವಿಶಿಷ್ಟ ವಚನಗಳ ಮೂಲಕ ಸಮಾಜ ತಿದ್ದುವ ಕಾರ್ಯ ಮಾಡಿದ...

ಬೀದರ್‌ನಲ್ಲಿ ಸೆ.28ರಂದು ಉದ್ಯೋಗ ಮೇಳ

ಬೀದರ್ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಸೆಪ್ಟೆಂಬರ್ 28ರಂದು ಬೆಳಿಗ್ಗೆ...