ಬೀದರ್‌ | ಕಾರ್ಮಿಕ ಹಕ್ಕುಗಳ ಬಗ್ಗೆ ಜಾಗೃತಿ ಅಗತ್ಯ : ಜಿ.ಶ್ರೀನಿವಾಸ

Date:

ಪ್ರತಿವರ್ಷ ಕಾರ್ಮಿಕ ದಿನಾಚರಣೆ ಆಚರಿಸುವುದು ಅತ್ಯಂತ ಅಗತ್ಯವಾಗಿದ್ದು, ಕಾರ್ಮಿಕರಿಗೆ ಸರ್ಕಾರದಿಂದ ದೊರೆಯುವ ಸೌಲಭ್ಯಗಳ ಹಾಗೂ ಕಾರ್ಮಿಕ ಹಕ್ಕುಗಳ ಕುರಿತು ಅರಿವು ಮೂಡಿಸುವುದು ಅಗತ್ಯವಾಗಿದೆ ಎಂದು ಕಾರ್ಮಿಕ ಪಡೆಯ ರಾಜ್ಯಾಧ್ಯಕ್ಷ ಜಿ.ಶ್ರೀನಿವಾಸ ಹೇಳಿದರು.

- Advertisement -

ಬೀದರ್ ನಗರದ ಕೃಷ್ಣಾ ರೇಜೆನ್ಸಿಯಲ್ಲಿ ಕಾರ್ಮಿಕ ಪಡೆ ಜಿಲ್ಲಾ ಘಟಕದ ವತಿಯಿಂದ ಆಯೋಜಿಸಿದ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿ,ʼಕಡ್ಡಾಯವಾಗಿ ಕಾರ್ಮಿಕ ದಿನ ಕಡ್ಡಾಯವಾಗಿ ಆಚರಿಸಬೇಕು. ಕಾರ್ಮಿಕರ ಬೇಡಿಕೆಗಳಿಗೆ ಸರ್ಕಾರ ಸ್ಪಂದಿಸಿ ಕ್ರಮಕೈಗೊಳ್ಳಬೇಕುʼ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಕಾರ್ಮಿಕ ಪಡೆ ಕಲ್ಯಾಣ ಕರ್ನಾಟಕ ವಿಭಾಗೀಯ ಅಧ್ಯಕ್ಷ ಸೋಮನಾಥ ಪಾಂಚಾಳ ಮಾತನಾಡಿ, ʼಕಾರ್ಮಿಕರಿಗೆ ಸರ್ಕಾರದ ಸೌಲಭ್ಯಗಳು ಸಮರ್ಪಕವಾಗಿ ದೊರೆಯುತ್ತಿಲ್ಲ. ಕಾರ್ಮಿಕರನ್ನು 8 ಗಂಟೆಗಳ ಬದಲು 12 ಗಂಟೆಗಳ ಕಾಲ ದುಡಿಸಿಕೊಳ್ಳಲಾಗುತ್ತಿದ್ದು, ಕನಿಷ್ಠ ವೇತನವೂ ಸರಿಯಾಗಿ ಪಾವತಿಯಾಗುತ್ತಿಲ್ಲ ಎಂದು ಆರೋಪಿಸಿದರು. ಕೈಗಾರಿಕಾ ವಸಾಹತುಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕುʼ ಎಂದು ಆಗ್ರಹಿಸಿದರು.

ಮುಖ್ಯ ಅತಿಥಿಗಳಾಗಿ ಜಿಲ್ಲಾ ಕಾರ್ಮಿಕ ಅಧಿಕಾರಿ ಮಹೇಶ ಕುಳಲಿ ಮಾತನಾಡಿದರು.‌

ಇದನ್ನೂ ಓದಿ : ಬೀದರ್‌ | 43 ಗ್ರಾಮಗಳಲ್ಲಿ ನೀರಿನ ಅಭಾವ : ನೀರು ಸರಬರಾಜಿಗೆ ಅಡ್ಡಿಪಡಿಸಿದರೆ ನಿರ್ದಾಕ್ಷಿಣ್ಯ ಕ್ರಮ

ಈ ಕಾರ್ಯಕ್ರಮದಲ್ಲಿ ಪ್ರಮುಖರಾದ ಡಾ.ಶೇಖಪ್ಪ ಮಾಸಿಮಾಡೆ, ಸಂಜು ವಿ.ಡಾಕುಳಗಿ, ಪಡೆಯ ರಾಜ್ಯ ಉಪಾಧ್ಯಕ್ಷ ರಾಕೇಶ, ಗೌರವಾಧ್ಯಕ್ಷ ಶಿವಶರಣಪ್ಪ ಪಾಟೀಲ, ಸಂತೋಷ ಪಾಟೀಲ, ಶಿವಶರಣಪ್ಪ ಮುದಕಪ್ಪ, ವಿದ್ಯಾಸಾಗರ ಬಿರಾದಾರ, ದಯಾನಂದ ಸೇರಿದಂತೆ ಕಾರ್ಮಿಕ ಪಡೆ ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯುವ ಪೀಳಿಗೆ ಸತ್ಯ, ಸರಳತೆಯ ತತ್ವಗಳನ್ನು ಅಳವಡಿಸಿಕೊಳ್ಳಬೇಕು: ಪ್ರೊ. ವಿಜಯಾ ಕೋರಿಶೆಟ್ಟಿ

ಸತ್ಯ, ಅಹಿಂಸೆ, ಸರಳತೆ, ಕರ್ತವ್ಯನಿಷ್ಠೆ ಮತ್ತು ನೈತಿಕ ಮೌಲ್ಯಗಳು ಕೇವಲ ಇತಿಹಾಸದ...

ಗಾಂಧೀಜಿ ಹೆಸರು, ವಿಚಾರಧಾರೆ ಅಳಿಸಲು ಯಾರಿಂದಲೂ ಸಾಧ್ಯವಿಲ್ಲ: ಡಿ.ಕೆ. ಶಿವಕುಮಾರ್

"ಮಹಾತ್ಮ ಗಾಂಧೀಜಿ ಭಾರತದ ಆತ್ಮವಿದ್ದಂತೆ. ಅವರ ಹೆಸರು ಹಾಗೂ ವಿಚಾರಧಾರೆಯನ್ನು ಅಳಿಸಿಹಾಕಲು...

ಸಾಗರ | ಗೂಡ್ಸ್ ಆಟೋ ಢಿಕ್ಕಿ; ಚಿಕಿತ್ಸೆ ಫಲಿಸದೆ ಬಾಲಕ ಸಾವು

ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ಗೂಡ್ಸ್ ಆಟೋ ಢಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ...

ಏಷ್ಯನ್ ಗೇಮ್ಸ್: 4 ದಶಕಗಳ ಬಳಿಕ ಮಹಿಳಾ ಹಾಕಿಯಲ್ಲಿ ಭಾರತಕ್ಕೆ ಒಲಿದ ಸುವರ್ಣ ಪದಕ

ಜಪಾನಿನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ ಭಾರತೀಯ ಮಹಿಳಾ ಹಾಕಿ...