ಬೀದರ್‌ | ಮಾನವ ಕಳ್ಳಸಾಗಣೆ ತಡೆಗೆ ಜಾಗೃತಿ ಅಗತ್ಯ: ನ್ಯಾ.ರಾಘವೇಂದ್ರ ಉಪಾಧ್ಯ

Date:

ಮಾನವ ಕಳ್ಳಸಾಗಣೆ ಹಾಗೂ ಸೈಬರ್ ಅಪರಾಧಗಳಂತಹ ಸಾಮಾಜಿಕ ಪಿಡುಗುಗಳನ್ನು ತಡೆಯಲು ಸಾರ್ವಜನಿಕರಲ್ಲಿ ವ್ಯಾಪಕ ಜಾಗೃತಿ ಮೂಡಿಸುವುದು ಅತ್ಯಗತ್ಯ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ರಾಘವೇಂದ್ರ ಉಪಾಧ್ಯ ಹೇಳಿದರು.

- Advertisement -

ನಗರದ ಜಿಲ್ಲಾ ಪಂಚಾಯತ್ ಸಂಪನ್ಮೂಲ ಕೇಂದ್ರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಪೊಲೀಸ್ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಹಯೋಗದಲ್ಲಿ ಗುರುವಾರ ಆಯೋಜಿಸಿದ ಮಾನವ ಕಳ್ಳಸಾಗಣೆ ತಡೆ ದಿನಾಚರಣೆ ಹಾಗೂ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಇಸ್ರೇಲ್‌ ಚುನಾವಣೆ | ಅರಬ್ಬರ ಭರ್ಜರಿ ವೋಟಿಂಗ್, 19...

ಇಸ್ರೇಲ್‌ ಪ್ರಧಾನಿ ನೆತನ್ಯಾಹುವಿನ ದ್ವೇಷದ ರಾಜಕೀಯಕ್ಕೆ ಬೇಸತ್ತ ಇಸ್ರೇಲ್‌ ಅರಬ್ಬರು ಈ ಬಾರಿಯ ಸಾರ್ವತ್ರಿಕ ಚುನಾವಣೆಯಲ್ಲಿ ದಾಖಲೆಮಟ್ಟದಲ್ಲಿ ಮತಗಟ್ಟೆಗೆ ಧಾವಿಸಿ ಭರ್ಜರಿ ಓಟಿಂಗ್‌ ಮಾಡಿದ್ದಾರೆ. 19 ಸೀಟುಗಳನ್ನು ಗೆಲ್ಲುವ ಮೂಲಕ ನೆತನ್ಯಾಹು ಭವಿಷ್ಯವನ್ನು...

ಅಭಿವೃದ್ಧಿಯಿಂದ ದೂರ ಉಳಿದ ಜೀವನಮರಡಗಿ: ಬಸ್ ಇಲ್ಲ, ನೀರಿಲ್ಲ,...

ಸ್ವಾತಂತ್ರ್ಯಾನಂತರದ ಅಭಿವೃದ್ಧಿಯ ಹಾದಿಯಲ್ಲಿ ಗ್ರಾಮೀಣ ಪ್ರದೇಶಗಳಿಗೆ ಮೂಲಭೂತ ಸೌಲಭ್ಯಗಳನ್ನು ತಲುಪಿಸುವ ಪ್ರಯತ್ನಗಳು ನಡೆಯುತ್ತಿದ್ದರೂ, ಕಲಬುರಗಿ ಜಿಲ್ಲೆಯ ಕಾಳಗಿ ತಾಲೂಕಿನ ಜೀವನಮರಡಗಿ ಗ್ರಾಮದ ಜನರ ಬದುಕಿನಲ್ಲಿ ಮಾತ್ರ ಇಂದಿಗೂ ಹಲವು ಸಮಸ್ಯೆಗಳು ಮುಂದುವರಿದಿವೆ. ಗ್ರಾಮಕ್ಕೆ...

‘Epstein’ ವಿವಾದದ ನಡುವೆಯೂ ಹರದೀಪ್ ಪುರಿಗೆ ಮಣೆ: ಸಿಖ್...

'Epstein files' ವಿವಾದವು ಹರದೀಪ್ ಸಿಂಗ್ ಪುರಿ ಅವರ ರಾಜಕೀಯ ಬದುಕಿನಲ್ಲಿ ಸಣ್ಣದೊಂದು ಬಿರುಗಾಳಿ ಎಬ್ಬಿಸಿದ್ದು ಸುಳ್ಳಲ್ಲ. ವಿರೋಧ ಪಕ್ಷಗಳ ಟೀಕೆಗಳು ಮತ್ತು ನೈತಿಕ ಹೊಣೆಗಾರಿಕೆಯ ಪ್ರಶ್ನೆಗಳು ಅವರನ್ನು ಸಂಪುಟದಿಂದ ಹೊರಗಟ್ಟುವ ಹಂತಕ್ಕೆ...

“ಭಾರತ ಸೇರಿದಂತೆ ಜಗತ್ತಿನಾದ್ಯಂತ ಮಾನವ ಕಳ್ಳಸಾಗಣೆ ಪ್ರಕರಣಗಳು ಹೆಚ್ಚುತ್ತಿದ್ದು, ಮಾನಸಿಕ, ಶಾರೀರಿಕ ಹಾಗೂ ಆರ್ಥಿಕ ಶೋಷಣೆಗಳು ಇದಕ್ಕೆ ಪ್ರಮುಖ ಕಾರಣಗಳಾಗಿವೆ. ಇತ್ತೀಚಿನ ದಿನಗಳಲ್ಲಿ ಸೈಬರ್ ಅಪರಾಧಗಳೂ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜನರಲ್ಲಿ ಅರಿವು ಮೂಡಿಸುವುದು ಪ್ರತಿಯೊಬ್ಬ ಅಧಿಕಾರಿಯ ಜವಾಬ್ದಾರಿಯಾಗಿದೆ” ಎಂದು ಹೇಳಿದರು.

Advertisements

“ಮಾನವ ಕಳ್ಳಸಾಗಣೆ ಮತ್ತು ಸೈಬರ್ ಅಪರಾಧಗಳನ್ನು ತಡೆಯಲು ಪೊಲೀಸ್ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಸಂತ್ರಸ್ತರಿಗೆ ತ್ವರಿತ ಕಾನೂನು ನೆರವು, ಅಗತ್ಯ ರಕ್ಷಣೆ ಹಾಗೂ ಪುನರ್ವಸತಿ ಒದಗಿಸುವ ಮೂಲಕ ಅಪರಾಧಿಗಳಿಗೆ ಕಠಿಣ ಶಿಕ್ಷೆಯಾಗುವಂತೆ ಕ್ರಮ ಕೈಗೊಳ್ಳಬೇಕು” ಎಂದು ಕರೆ ನೀಡಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ನವೀನ್‌ಕುಮಾರ್ ವೈ.ಯು. ಪ್ರಾಸ್ತಾವಿಕ ಮಾತನಾಡಿ, “ದುರುದ್ದೇಶಕ್ಕಾಗಿ ವ್ಯಕ್ತಿಗಳನ್ನು ಒಂದು ಸ್ಥಳದಿಂದ ಮತ್ತೊಂದು ಸ್ಥಳಕ್ಕೆ ಅಕ್ರಮವಾಗಿ ಸಾಗಿಸುವುದೇ ಮಾನವ ಕಳ್ಳಸಾಗಣೆ ಎಂದು ವಿವರಿಸಿದರು. ಇದು ಜಗತ್ತಿನಲ್ಲೇ ಎರಡನೇ ಅತಿ ದೊಡ್ಡ ಲಾಭದಾಯಕ ಅಕ್ರಮ ವ್ಯವಹಾರವಾಗಿದ್ದು, ಆತಂಕಕಾರಿ ಸಂಗತಿಯೆಂದರೆ ಹೆಚ್ಚಿನ ಪ್ರಕರಣಗಳಲ್ಲಿ ನಿಕಟ ಸಂಬಂಧಿಕರು ಅಥವಾ ಕುಟುಂಬದ ಸದಸ್ಯರೇ ಭಾಗಿಯಾಗುತ್ತಿರುವುದು ಕಳವಳಕಾರಿ ಬೆಳವಣಿಗೆಯಾಗಿದೆ” ಎಂದು ಹೇಳಿದರು.

ಇದನ್ನೂ ಓದಿ : ಹುಲಸೂರು | ಪತ್ರಕರ್ತರು ಜನರ ನೋವಿಗೆ ದನಿಯಾಗಿ : ಗುರುನಾಥ ಅಕ್ಕಣ್ಣ

ಕಾರ್ಯಕ್ರಮದಲ್ಲಿ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಶಾರದಾ ಎನ್. ಕಲ್ಲಾಕರ್, ಮಹಿಳಾ ಮತ್ತು ಮಕ್ಕಳ ಕಲ್ಯಾಣಾಧಿಕಾರಿ ಶ್ರೀಕಾಂತ್, ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ಶಿವಪ್ಪ ಬಿ. ಸರ್ಕಾರಿ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ರೂಪಾ ಎಸ್. ಕೋಟಿಗೌಡರ್, ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿ ಸುಭಾಷ್ ರತ್ನ ಹಾಗೂ ಸಂಪನ್ಮೂಲ ವ್ಯಕ್ತಿ ಬಸವರಾಜ ಬುಳ್ಳಾ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೊಪ್ಪಳ | ಪರಿಸರ ನಿಯಮ ಉಲ್ಲಂಘನೆ: 8 ಕಾರ್ಖಾನೆಗಳ ಬಂದ್‌ಗೆ ನಿರ್ಧಾರ

ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯ ನಿಗದಿತ ಮಾನದಂಡಗಳನ್ನು ಉಲ್ಲಂಘಿಸಿರುವ ಹಿನ್ನೆಲೆಯಲ್ಲಿ ಕೊಪ್ಪಳ...

ಔರಾದ್‌ | ಕನ್ನಡ ನಾಮಫಲಕ ಕಡ್ಡಾಯ ಅಳವಡಿಕೆಗೆ ಆಗ್ರಹ

ರಾಜ್ಯ ಸರ್ಕಾರದ ಆದೇಶದಂತೆ ಔರಾದ್ ಪಟ್ಟಣ ಸೇರಿದಂತೆ ತಾಲೂಕು ವ್ಯಾಪ್ತಿಯ ಅಂಗಡಿ...

ಚಿಟಗುಪ್ಪ | ಜೆಜೆಎಂ, ರಾಜ್ಯ ಹೆದ್ದಾರಿ ಕಾಮಗಾರಿ ಕಳಪೆ : ತನಿಖೆಗೆ ಆಗ್ರಹಿಸಿ ಗ್ರಾಮಸ್ಥರ ಪ್ರತಿಭಟನೆ

ಜಲ ಜೀವನ್‌ ಮಿಷನ್‌ (ಜೆಜೆಎಂ) ಯೋಜನೆ ಕಾಮಗಾರಿ ಹಾಗೂ ರಾಜ್ಯ ಹೆದ್ದಾರಿ–122ರ...

ಸೌಜನ್ಯ ಪ್ರಕರಣ: ಎಸ್‌ಐಟಿ ಮುಖ್ಯಸ್ಥರನ್ನು ಭೇಟಿಯಾದ ಸಿಎಂ ಡಿ.ಕೆ. ಶಿವಕುಮಾರ್ ವಿರುದ್ಧ ಸುಪ್ರೀಂ ಕೋರ್ಟ್‌ಗೆ ದೂರು

ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ನಿಷ್ಪಕ್ಷಪಾತ ತನಿಖೆ ನಡೆಸುತ್ತಿರುವ...