ಬೀದರ್‌ | ಸಮಾನತೆ ಸಿದ್ಧಾಂತದ ಪ್ರತಿಪಾದಕ ಬಾಬು ಜಗಜೀವನ್ ರಾಮ್ : ಸಚಿವ ರಹೀಂ ಖಾನ್

Date:

ಭಾರತದ ಹಸಿರು ಕ್ರಾಂತಿಯ ಹರಿಕಾರರೆಂದೇ ಖ್ಯಾತರಾದ ಬಾಬು ಜಗಜೀವನ್ ರಾಮ್ ಅವರು ಶೋಷಿತ ಸಮುದಾಯದಿಂದ ಬೆಳೆದು ಬಂದು ದೇಶದ ಉಪಪ್ರಧಾನಿ ಹುದ್ದೆಯವರೆಗೆ ಏರಿದ ಅಪ್ರತಿಮ ನಾಯಕ ಎಂದು ಪೌರಾಡಳಿತ ಹಾಗೂ ಹಜ್ ಖಾತೆ ಸಚಿವ ರಹೀಂ ಖಾನ್ ಹೇಳಿದರು.

- Advertisement -

ಭಾನುವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಮಹಾನಗರ ಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಸಮಾಜ ಕಲ್ಯಾಣ ಇಲಾಖೆ ಬೀದರ ಇವರ ಸಂಯುಕ್ತಾಶ್ರಯದಲ್ಲಿ ನಗರದ ಪೂಜ್ಯ ಚನ್ನಬಸವ ಪಟ್ಟದ್ದೇವರು ರಂಗಮಂದಿರದಲ್ಲಿ ಆಯೋಜಿಸಿದ ಡಾ.ಬಾಬು ಜಗಜೀವನ ರಾಮ್ ಅವರ 119ನೇ ಜಯಂತ್ಯೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

“1970ರ ದಶಕದಲ್ಲಿ ಭಾರತವು ಎದುರಿಸುತ್ತಿದ್ದ ತೀವ್ರ ಆಹಾರ ಸಮಸ್ಯೆಯನ್ನು ನೀಗಿಸಿ, ಕೃಷಿಯಲ್ಲಿ ದೇಶವನ್ನು ಸ್ವಾವಲಂಬಿಯಾಗಿಸಿದ ಕೀರ್ತಿ ಬಾಬು ಜಗಜೀವನ ರಾಮ್ ಅವರಿಗೆ ಸಲ್ಲುತ್ತದೆ. ಹೀಗಾಗಿ ಅವರ ಜನ್ಮದಿನವನ್ನು ‘ಸಮತಾ ದಿನ’ ಎಂದು ಆಚರಿಸುತ್ತೇವೆ. ಸುಮಾರು 3 ದಶಕಗಳ ಕಾಲ ಕೇಂದ್ರ ಸಚಿವರಾಗಿ, ರಕ್ಷಣಾ ಸಚಿವರಾಗಿ 1971ರ ಯುದ್ಧದ ಸಮಯದಲ್ಲಿ ಮತ್ತು ಕೃಷಿ ಸಚಿವರಾಗಿ ಅವರು ನೀಡಿದ ಕೊಡುಗೆ ಅನನ್ಯ. ಸಮಾನತೆಯ ಸಿದ್ಧಾಂತದ ಪ್ರತಿಪಾದಕರಾಗಿದ್ದ ಬಾಬೂಜಿ ಅವರು ಹಾಕಿಕೊಟ್ಟ ದಾರಿಯಲ್ಲಿ ನಡೆಯುವುದು ಇಂದಿನ ಸಮಾಜಕ್ಕೆ ಅತ್ಯಗತ್ಯವಾಗಿದೆ” ಎಂದರು.

“ಬೀದರ್ ಜಿಲ್ಲೆಯಲ್ಲಿ ಬಾಬು ಜಗಜೀವನ ರಾಮ್ ಅವರ ಭವನ ನಿರ್ಮಾಣಕ್ಕೆ ಈಗಾಗಲೇ 2 ಕೋಟಿ ಅನುಧಾನ ನೀಡಲಾಗಿದೆ. ಅವಶ್ಯಕತೆ ಅನುಗುಣವಾಗಿ ಇನ್ನೂ ಹೆಚ್ಚಿನ ಅನುಧಾನ ನೀಡಲಾಗುವುದು. ವೃತ್ತ ನಿರ್ಮಾಣದ ಬಗ್ಗೆ ಜಿಲ್ಲಾಧಿಕಾರಿಗಳೊಂದಿಗೆ ಚರ್ಚಿಸಲಾಗುವುದು” ಎಂದು ಹೇಳಿದರು.

ಬಾಬು ಜಗಜೀವನ್ ರಾಮ್ ಅವರ ಜನ್ಮದಿನಾಚರಣೆ ಪ್ರಯುಕ್ತ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ. ಖಂಡ್ರೆ ಅವರು ಸಂದೇಶ ಕಳುಹಿಸಿ, ʼಬಿಹಾರದ ಸಾಮಾನ್ಯ ಕುಟುಂಬದಲ್ಲಿ ಜನಿಸಿ, ಅಸ್ಪೃಶ್ಯತೆಯ ಸವಾಲುಗಳನ್ನು ಮೆಟ್ಟಿ ನಿಂತು ದೇಶದ ಅತ್ಯುನ್ನತ ನಾಯಕರಾಗಿ ಬೆಳೆದ ಇವರು, ಕೃಷಿ ಕ್ಷೇತ್ರದಲ್ಲಿ ಭಾರತವನ್ನು ಸ್ವಾವಲಂಬಿಯಾಗಿಸಿದ ಕೀರ್ತಿವಂತರು. 1971ರ ಯುದ್ಧದ ವೇಳೆ ರಕ್ಷಣಾ ಸಚಿವರಾಗಿ ಮತ್ತು ದಶಕಗಳ ಕಾಲ ಸಂಸತ್ ಸದಸ್ಯರಾಗಿ ಶೋಷಿತರ ಹಾಗೂ ರೈತರ ಧ್ವನಿಯಾಗಿ ಶ್ರಮಿಸಿದ ಬಾಬೂಜಿಯವರ ಸಮಾನತೆಯ ಆದರ್ಶಗಳು ಇಂದಿಗೂ ನಮಗೆ ಮಾರ್ಗದರ್ಶಕವಾಗಿವೆʼ ಎಂದು ತಿಳಿಸಿ ಶುಭ ಕೋರಿದರು.

WhatsApp Image 2026 04 05 at 7.27.04 PM

ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಧ್ಯಾಪಕ ಡಾ. ಮಹಾದೇವಿ ಹೆಬ್ಬಾಳೆ ಡಾ.ಬಾಬು ಜಗಜೀವನ ರಾಮ್ ಜೀವನ ಕುರಿತು ವಿಶೇಷ ಉಪನ್ಯಾಸ ನೀಡಿದರು.

ವೇದಿಕೆ ಕಾರ್ಯಕ್ರಮಕ್ಕೂ ಮುನ್ನ ಡಾ.ಬಾಬು ಜಗಜೀವನ ರಾಮ್ ಭಾವಚಿತ್ರ ಮೆರವಣಿಗೆ ನಗರದ ಛತ್ರಪತಿ ಶಿವಾಜಿ ವೃತ್ತದಿಂದ ಚಾಲನೆಗೊಂಡು ಭಗತ್ ಸಿಂಗ್ ವೃತ್ತ, ಬಸವೇಶ್ವರ ವೃತ್ತದ ಮಾರ್ಗವಾಗಿ ಡಾ.ಬಾಬು ಜಗಜೀವನ ರಾಮ್ ಅವರ ಪ್ರತಿಮೆ ಬಳಿಗೆ ತೆರಳಿ ಅಲ್ಲಿ ಗಣ್ಯರ ಸಮ್ಮುಖದಲ್ಲಿ ಬಾಬು ಜಗಜೀವನ ರಾಮ್ ಅವರ ಪ್ರತಿಮೆಗೆ ಪೂಜೆ ಸಲ್ಲಿಸಿದರು. ಬಳಿಕ ಅಲ್ಲಿಂದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತ, ರೋಟರಿ ವೃತ್ತ ಮಾರ್ಗದ ಮುಖಾಂತರ ರಂಗಮಂದಿರಕ್ಕೆ ತಲುಪಿತು.

ಇದನ್ನೂ ಓದಿ : ಈ ದಿನ ಸಂಪಾದಕೀಯ | ತಮ್ಮದೇ ಅವನತಿಗೆ ಅಂತಿಮ ಮೊಳೆ ಹೊಡೆದುಕೊಳ್ಳುತ್ತಿದ್ದಾರೆ ಟ್ರಂಪ್!

ಬೀದರ ದಕ್ಷಿಣ ಶಾಸಕ ಡಾ.ಶೈಲೇಂದ್ರ ಬೆಲ್ದಾಳೆ, ನಗರಸಭೆ ಅಧ್ಯಕ್ಷ ಮಹಮ್ಮದ ಗೌಸ್, ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಗಿರೀಶ್ ಬದೋಲೆ, ಅಪರ ಜಿಲ್ಲಾಧಿಕಾರಿ ಶಿವಾನಂದ ಬಿ.ಕರಾಳೆ, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಯೋಗೇಶ್ ಎಸ್. ಬಿ., ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸಿದ್ರಾಮ ಸಿಂಧೆ, ಹಿರಿಯ ಪತ್ರಕರ್ತ ಶಿವಶರಣಪ್ಪ ವಾಲಿ, ಪ್ರಮುಖರಾದ ಚಂದ್ರಕಾಂತ್ ಹಿಪ್ಪಳಗಾಂವ್, ಫಾರ್ನಾಡಿಸ್ ಹಿಪ್ಪಳಗಾಂವ್, ಮಾರುತಿ ಬೌದ್ಧೆ, ರಾಜು ಕಡ್ಯಾಳ, ವಿಜಯಕುಮಾರ್ ಸೋನಾರೆ, ರವಿರಾಜ್ ಘೋಡೆ, ಅಭಿ ಕಾಳೆ, ಶಾಮಣ್ಣ ಬಾವಗೆ, ಮಹೇಶ್ ದೊಡ್ಡಿ, ಶಾಮಣ್ಣ ಬೊಂಬಳಗಿ, ರವಿ ನಿಜಾಂಪುರ ಸೇರಿದಂತೆ ಅನೇಕ ಮುಖಂಡರು ಹಾಗೂ ಸಮಾಜದ ಬಂಧುಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪಂಚಾಯತ್ ಚುನಾವಣೆಗೆ ಕರಡು ಮೀಸಲು ಸಿದ್ಧ: ಈಶ್ವರ ಖಂಡ್ರೆ

ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲು ರಾಜ್ಯ ಸರ್ಕಾರ ಬದ್ಧವಾಗಿದ್ದು, ಎಲ್ಲ ಅಗತ್ಯ...

ಕಮಲನಗರ | ಸಿಇಒ ಗಿತ್ತೆ ಮಾಧವ್‌ ಮಿಂಚಿನ ಸಂಚಾರ, ವಿಬಿ-ಜಿ ರಾಮ್‌ ಜಿ ಕಾಮಗಾರಿ ಪರಿಶೀಲನೆ

ಬೀದರ್ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (ಸಿಇಒ) ಗಿತ್ತೆ ಮಾಧವ...

ಬೀದರ್‌ | ಹಳ್ಳಕ್ಕೆ ಉರುಳಿದ ಖಾಸಗಿ ಶಾಲಾ ಬಸ್‌ : ಹಲವು ವಿದ್ಯಾರ್ಥಿಗಳಿಗೆ ಗಾಯ

ಹುಲಸೂರ ಪಟ್ಟಣದ ಇಕ್ಬಾಲ್ ಪಟೇಲ್ ಖಾಸಗಿ ಶಾಲೆಯ ಬಸ್ ಚಾಲಕನ ನಿಯಂತ್ರಣ...

ಬೀದರ್‌ | ಕಾವ್ಯ ಸಮಾಜದ ನೋವು, ನಲಿವಿಗೆ ಸ್ಪಂದಿಸಲಿ : ಶಶಿಕಾಂತ ಶೆಂಬೆಳ್ಳಿ

ಸಾಹಿತ್ಯವು ಆತ್ಮಸಂತೋಷ ನೀಡುವುದರ ಜೊತೆಗೆ ಸಮಾಜದ ನೋವು-ನಲಿವುಗಳಿಗೆ ಸ್ಪಂದಿಸುವಂತಿರಬೇಕು. ಕಾಲದಿಂದ ಕಾಲಕ್ಕೆ...