ಬೀದರ್‌ | ಬಸವ ಜಯಂತಿ ಉತ್ಸವ : ಬೃಹತ್‌ ಕಾರು ರ‍್ಯಾಲಿ; ಇಷ್ಟಲಿಂಗ ಪೂಜೆ

Date:

ಕರ್ನಾಟಕ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ಜಯಂತಿ ಉತ್ಸವ ಪ್ರಯುಕ್ತ ಬೀದರ್‌ ನಗರದಲ್ಲಿ ಶನಿವಾರ ಬಸವ ಉತ್ಸವ ಸಮಿತಿ ವತಿಯಿಂದ ಬೃಹತ್‌ ಕಾರು ರ‍್ಯಾಲಿ ಹಾಗೂ ಇಷ್ಟಲಿಂಗ ಪೂಜೆ ಕಾರ್ಯಕ್ರಮ ಜರುಗಿತು.

- Advertisement -

ನಗರದ ಗುಂಪಾ ರಸ್ತೆಯ ಸಿದ್ದಾರೂಢ ಮಠದ ಎದುರು ಬಸವ ಜಯಂತಿ ಉತ್ಸವ ಸಮಿತಿಯಿಂದ ನಡೆದ ಕಾರು ರ‍್ಯಾಲಿಗೆ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಪ್ರದೀಪ ಗುಂಟಿ ಅವರು ಚಾಲನೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ರಾಮಲೀಲೆಗಳಲ್ಲಿ ರಾಮ, ಹನುಮ, ಲಕ್ಷ್ಮಣ ಪಾತ್ರಗಳಲ್ಲಿ ದಾನಿಶ್ –...

ರಾಮನಾಗಿ ದಾನಿಶ್. ಹನುಮಂತನಾಗಿ ಯೂನುಸ್. ಲಕ್ಷ್ಮಣನಾಗಿ ಶೇರ್ ಖಾನ್. ರಾವಣನಾಗಿ ಇಕ್ಬಾಲ್ ಅಹ್ಮದ್. ಇವರೆಲ್ಲರೂ ಮುಸ್ಲಿಂ ಕಲಾವಿದರು. ಆದರೆ, ಇವರು ಅಭಿನಯಿಸಿರುವುದು ಹಿಂದುಗಳ ಮಹಾಕಾವ್ಯ ರಾಮಾಯಣದ ಪಾತ್ರಗಳಲ್ಲಿ. ಉತ್ತರ ಭಾರತದ ಹಲವು ರಾಮಲೀಲೆಗಳಲ್ಲಿ...

ಅಮೆರಿಕದ ಮಧ್ಯಂತರ ಚುನಾವಣೆ: ಬೆಲೆ ಏರಿಕೆ, ಇರಾನ್ ಯುದ್ಧದ...

ಅಮೆರಿಕದಲ್ಲಿ ಏರುತ್ತಿರುವ ಪೆಟ್ರೋಲ್ ಬೆಲೆ, ದುಬಾರಿಯಾಗುತ್ತಿರುವ ದಿನಬಳಕೆಯ ವಸ್ತುಗಳು ಹಾಗೂ ಇರಾನ್ ವಿರುದ್ಧದ ಯುದ್ಧದ ಆರ್ಥಿಕ ಪರಿಣಾಮಗಳು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಡಳಿತಕ್ಕೆ ದೊಡ್ಡ ರಾಜಕೀಯ ಸವಾಲಾಗಿವೆ. ನವೆಂಬರ್ 3ರಂದು ನಡೆಯಲಿರುವ ಮಧ್ಯಂತರ...

ಖಾಲಿದ್‌ರಂತೆ ಸಿಜೆಪಿ ನಾಯಕರನ್ನೂ ದೀರ್ಘ ಜೈಲುವಾಸದ ಸುಳಿಯಲ್ಲಿ ಸಿಲುಕಿಸುವ...

ಚುನಾವಣಾ ಆಯೋಗದ ಅಕ್ರಮ ಪ್ರಶ್ನಿಸಿದ ಸಿಜೆಪಿ ನಾಯಕರ ವಿರುದ್ಧ ಸರಣಿ ದೂರು ದಾಖಲಿಸಲಾಗುತ್ತಿದೆ. ಮೋದಿ ಸರ್ಕಾರದ ಅವಧಿಯಲ್ಲಿ ‘ವಿಚಾರಣೆಯೇ ಒಂದು ಶಿಕ್ಷೆ’ ಎನ್ನುವ ತಂತ್ರ ಪುನರಾವರ್ತನೆಯಾಗುತ್ತಿದೆಯೇ? ಉಮರ್‌ ಖಾಲಿದ್‌ ರೀತಿಯಲ್ಲೇ ಸೌರವ್ ದಾಸ್,...

ಬಳಿಕ ಮಾತನಾಡಿದ ಅವರು, ʼಬಸವಣ್ಣನವರ ತತ್ವಾದರ್ಶಗಳು ಸಾರ್ವಕಾಲಿಕ ಸತ್ಯವಾಗಿವೆ, ಅವರ ಸಂಸದಿಯ ಪದ್ದತಿ ಇಡೀ ಜಗತ್ತಿಗೆ ಮಾದರಿಯಾಗಿದೆ. ಜಾತಿ, ಧರ್ಮ, ವರ್ಗ, ವರ್ಣ ರಹಿತ ಸಮಾಜದ ಪರಿಕಲ್ಪನೆ ಮೂಲಕ ಸಮ ಸಮಾಜದ ಕನಸು ಕಂಡಿದ್ದರು. ಅಂತರ್ಜಾತಿ ವಿವಾಹಕ್ಕೆ ಉತ್ತೇಜನ ನೀಡುವ ಮೂಲಕ ಮೇಲು-ಕೀಳು ಎಂಬ ಭೇದ-ಭಾವ ನಿರ್ಮೂಲನೆಗೆ ಮುನ್ನುಡಿ ಬರೆದ ಮಹಾನ್ ಕ್ರಾಂತಿಕಾರಿಯಾಗಿದ್ದರುʼ ಎಂದರು.

ಬಸವ ಉತ್ಸವ ಸಮಿತಿ ಅಧ್ಯಕ್ಷ ಡಾ.ರಜನೀಶ ವಾಲಿ ಮಾತನಾಡಿ, ʼಬಸವಣ್ಣನವರು ಕೇವಲ ಲಿಂಗಾಯತರ ಸ್ವತ್ತಲ್ಲ. ಎಲ್ಲ ಸಮುದಾಯದ ಆಸ್ತಿಯಾಗಿದ್ದಾರೆ ಎಂಬ ಘನಸಂದೇಶ ರವಾನಿಸುವ ಉದ್ದೇಶದಿಂದ ಬೃಹತ್‌ ಕಾರು ರ‍್ಯಾಲಿ ಹಮ್ಮಿಕೊಳ್ಳಲಾಗಿದೆ. ಮೂರು ದಿನಗಳ ಕಾಲ ನಡೆಯಲಿರುವ ಬಸವ ಜಯಂತಿ ಉತ್ಸವದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಸಾಂಸ್ಕೃತಿಕ ನಾಯಕ ಬಸವಣ್ಣನವರಿಗೆ ಗೌರವ ಸಲ್ಲಿಸೋಣʼ ಎಂದರು.

ಕಾರು ರ‍್ಯಾಲಿಯು ಸಿದ್ದಾರೂಢ ಮಠದ ಮುಂಭಾಗದಿದ ಆರಂಭಗೊಂಡು ಕಿತ್ತೂರು ರಾಣಿ ಚೆನ್ನಮ್ಮ ವೃತ್ತ, ಬೊಮ್ಮಗೊಂಡೇಶ್ವರ ವೃತ್ತ, ಬಸವೇಶ್ವರ ವೃತ್ತ, ಮಹಾವೀರ ಚೌಕ್, ಭಗತಸಿಂಗ್ ವೃತ್ತ, ಅಂಬೇಡ್ಕರ್ ವೃತ್ತ, ಹರಳಯ್ಯ ಚೌಕ್, ಮೋಹನ್ ಮಾರ್ಕೆಟ್ ಮೂಲಕ ರೋಟರಿ ಸರ್ಕಲ್, ಮಡಿವಾಳ ಚೌಕ್, ಕೇಂದ್ರ ಬಸ್ ನಿಲ್ದಾಣದ ಮಾರ್ಗವಾಗಿ ಪಾಪನಾಶ ದೇವಸ್ಥಾನವರೆಗೆ ನಡೆಯಿತು.

ಬಸವ ಉತ್ಸವ ಸಮಿತಿಯ ಪ್ರಧಾನ ಕಾರ್ಯದರ್ಶಿ ಶಶಿಧರ ಹೊಸಳ್ಳಿ, ಖಜಾಂಚಿ ಸಿದ್ರಾಮಯ್ಯ ಸ್ವಾಮಿ, ಗೌರವಾಧ್ಯಕ್ಷ ಜಯರಾಜ ಖಂಡ್ರೆ, ಗೌರವ ಸಲಹೆಗಾರರಾದ ಶಿವಶರಣಪ್ಪ ವಾಲಿ, ಬಾಬು ವಾಲಿ, ವೈಜಿನಾಥ ಕಮಠಾಣೆ, ದೀಪಕ ವಾಲಿ, ಸೋಮಶೇಖರ ಪಾಟೀಲ ಗಾದಗಿ, ಬಸವರಾಜ ಪಾಟೀಲ, ಬಾಬುರಾವ ಮಲ್ಕಾಪುರೆ, ಶಕುಂತಲಾ ಬೆಲ್ದಾಳೆ ಹಾರೂರಗೇರಿ, ಅಶೋಕಕುಮಾರ ಕರಂಜಿ, ವೀರೂಪಾಕ್ಷ ಗಾದಗಿ, ಸಂತೋಷ ಪಾಟೀಲ, ಆದೀಶ ವಾಲಿ, ವಿಜಯಕುಮಾರ ಪಾಟೀಲ ಸೇರಿದಂತೆ 150ಕ್ಕೂ ಅಧಿಕ ಬಸವಾನುಯಾಯಿಗಳು ಈ ಕಾರು ರ‍್ಯಾಲಿಯಲ್ಲಿ ಪಾಲ್ಗೊಂಡರು.‌

ಸಾಮೂಹಿಕ ಇಷ್ಟಲಿಂಗ ಪೂಜೆ :

ಬಸವ ಜಯಂತಿ ಉತ್ಸವ ಸಮಿತಿ ವತಿಯಿಂದ ಶನಿವಾರ ಬೆಳಿಗ್ಗೆ ಬೀದರ್ ನಗರದ ಚನ್ನಬಸವ ಪಟ್ಟದ್ದೇವರ ರಂಗಮಂದಿರದಲ್ಲಿ ಸಾಮೂಹಿಕ ಇಷ್ಟಲಿಂಗ ಪೂಜಾ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.

ಬಸವ ಸೇವಾ ಪ್ರತಿಷ್ಠಾನದ ಡಾ.ಗಂಗಾಬಿಕಾ ಅಕ್ಕನವರ ನೇತೃತ್ವದಲ್ಲಿ ನಡೆದ ಸಾಮೂಹಿಕ ಇಷ್ಟಲಿಂಗ ಪೂಜೆಯಲ್ಲಿ ಸುಮಾರು 150ಕ್ಕೂ ಅಧಿಕ ಶರಣ-ಶರಣೆಯರು ಕಾರ್ಯಕ್ರಮದಲ್ಲಿ ಭಾಗಿಯಾದರು.

WhatsApp Image 2026 04 18 at 6.20.37 PM

ಡಾ.ಗಂಗಾಬಿಕಾ ಅಕ್ಕ ಮಾತನಾಡಿ, ’12ನೇ ಶತಮಾನದಲ್ಲಿ ಲಿಂಗಾಯತ ಧರ್ಮಗುರು ಬಸವಣ್ಣನವರು ನಮ್ಮ ಅಂತರಂಗದಲ್ಲಿರುವ ಪರಮಾತ್ಮನನ್ನು ಕಾಣಲು ನಮ್ಮ ಅಂಗೈಯಲ್ಲಿ ಇಷ್ಟಲಿಂಗ ಕೊಟ್ಟರು. ಸಾಮೂಹಿಕ ಲಿಂಗಪೂಜೆ ಹಮ್ಮಿಕೊಳ್ಳುವ ಮೂಲಕ ಜಗತ್ತಿಗೆ ಪ್ರಥಮ ಪಾರ್ಲಿಮೆಟ್ ನೀಡಿದ್ದಾರೆೆ. ಬಸವಣ್ಣನವರ ವಿಚಾರಗಳನ್ನು ಜನಮಾನಸಕ್ಕೆ ಮುಟ್ಟಿಸುವ ಕಾರ್ಯ ಮಾಡಬೇಕಿದೆʼ ಎಂದರು.

ಇದನ್ನೂ ಓದಿ : ಈ ದಿನ ಸಂಪಾದಕೀಯ | ’30 ದಿನದೊಳಗೆ ನೇರ ನೇಮಕಾತಿ’ -ಮಾತು ತಪ್ಪಿತೇ ಸರ್ಕಾರ?

ಬಸವ ಜಯಂತಿ ಉತ್ಸವ ಸಮಿತಿಯ ಮಹಿಳಾ ಘಟಕದ ಅಧ್ಯಕ್ಷೆ ಡಾ.ದೇವಕಿ ನಾಗೂರೆ, ಪ್ರಮುಖರಾದ ನೀತು ಬೆಲ್ದಾಳೆ, ರತ್ನಾ ಪಾಟೀಲ, ಉಷಾ ಮಿರ್ಚೆ, ನೀಲಮ್ಮ ರೂಗನ್, ಶಕುಂತಲಾ ಬೆಲ್ದಾಳೆ, ಗೀತಾ ಪಂಡಿತರಾವ ಚಿದ್ರಿ, ಜ್ಞಾನದೇವಿ ಬಬಚಡಿ ಅನೇಕರಿದ್ದರು. ಸುವರ್ಣಾ ಚಿಮಕೊಡೆ ಪ್ರಾಸ್ತಾವಿಕ ಮಾತನಾಡಿದರು. ವಿದ್ಯಾವತಿ ಬಲ್ಲೂರ್ ಕಾರ್ಯಕ್ರಮ ನಿರೂಪಿಸಿದರು, ಕರುಣಾ ಶಟಕಾರ ವಂದಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆರ್‌ಎಸ್‌ಎಸ್‌ ಕೇವಲ ಪುರುಷರಿರುವ ‘ಸಂವಿಧಾನ ವಿರೋಧಿ’ ಸಂಘಟನೆ: ರಾಹುಲ್ ಗಾಂಧಿ ವಾಗ್ದಾಳಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್‌) ವಿರುದ್ಧ ಮಂಗಳವಾರ ತೀವ್ರ ವಾಗ್ದಾಳಿ ನಡೆಸಿರುವ...

ಅಪ್ರಾಪ್ತ ಮಗನ ಕಾರು ಅಪಘಾತದಲ್ಲಿ ಮೂವರ ಸಾವು; ತಂದೆ ವಿರುದ್ಧದ ಪ್ರಕರಣ ರದ್ದುಗೊಳಿಸಲು ಹೈಕೋರ್ಟ್ ನಕಾರ

ಅಪ್ರಾಪ್ತ ವಯಸ್ಸಿನ ಮಗನಿಗೆ ಕಾರು ಚಲಾಯಿಸಲು ಅವಕಾಶ ನೀಡಿದ ಆರೋಪ ಎದುರಿಸುತ್ತಿರುವ...

ರಾತ್ರೋರಾತ್ರಿ ತುರ್ತು ವಿಚಾರಣೆ ಕೋರಿ ದೆಹಲಿ ಹೈಕೋರ್ಟ್ ಮೊರೆಹೋದ ಸಿಜೆಪಿ ನಾಯಕರು

ತಮ್ಮ ನ್ಯಾಯಾಂಗ ಬಂಧನ ವಿಸ್ತರಣೆಯನ್ನು ಪ್ರಶ್ನಿಸಿ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ)...

ಹೊರದೇಶಗಳ ದೊಂಬಿಯನ್ನು ಭಾರತದ ಯುವ ಹೋರಾಟಕ್ಕೆ ಸಮೀಕರಿಸುತ್ತಿರುವ ʼಮಡಿಲ ಮಾಧ್ಯಮʼಗಳು; ಇದೇನಾ ಪತ್ರಿಕೋದ್ಯಮ?

ಹೊರದೇಶಗಳ ಬೀದಿಗಳಲ್ಲಿ ನಡೆಯುವ ದೊಂಬಿ, ಲೂಟಿಗೂ, ಭಾರತದ ಯುವಕರು ಸಂವಿಧಾನದತ್ತ ಹಕ್ಕಿಗಾಗಿ...