ಬೀದರ್‌ | ಬಸವ ಪಂಚಮಿ ಆಚರಣೆ: ಮಕ್ಕಳಿಗೆ ಹಾಲು, ಬಾಳೆಹಣ್ಣು ವಿತರಣೆ

Date:

ಬೀದರ್ ತಾಲೂಕಿನ ಜನವಾಡ ಗ್ರಾಮದಲ್ಲಿ ಸೋಮವಾರ ಮಾನವ ಬಂಧುತ್ವ ವೇದಿಕೆ ಕರ್ನಾಟಕ ವತಿಯಿಂದ ಅರ್ಥಪೂರ್ಣವಾಗಿ ಬಸವ ಪಂಚಮಿ ಆಚರಿಸಲಾಯಿತು. ನಾಗರ ಪಂಚಮಿಯ ಬದಲಾಗಿ ಬಸವ ಪಂಚಮಿ ಆಚರಿಸಿ, ಅಲೆಮಾರಿ ಜನಾಂಗದ ಮಕ್ಕಳಿಗೆ ಹಾಲು ಮತ್ತು ಬಾಳೆಹಣ್ಣು ವಿತರಿಸಲಾಯಿತು.

- Advertisement -

ಮಾನವ ಬಂಧುತ್ವ ವೇದಿಕೆಯ ಸಂಚಾಲಕ ಗೌತಮ ಮುತ್ತಂಗಿಕರ್ ಮಾತನಾಡಿ, “ಲೋಕೋಪಯೋಗಿ ಸಚಿವ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಅವರ ಮಾರ್ಗದರ್ಶನದಲ್ಲಿ ವೇದಿಕೆಯು ಕಳೆದ ಸುಮಾರು 13 ವರ್ಷಗಳಿಂದ ಮೌಢ್ಯ ಆಚರಣೆಗಳ ವಿರುದ್ಧ ಜನಜಾಗೃತಿ ಮೂಡಿಸುತ್ತಿದೆ. ಅದರ ಭಾಗವಾಗಿ ನಾಗರ ಪಂಚಮಿಯ ಬದಲಾಗಿ ಬಸವ ಪಂಚಮಿಯನ್ನು ಆಚರಿಸಿಕೊಂಡು ಬರಲಾಗುತ್ತಿದೆ
ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

“ನಾಗರ ಪಂಚಮಿ ಹೆಸರಿನಲ್ಲಿ ಪ್ರತಿವರ್ಷ ಹುತ್ತಕ್ಕೆ ಹಾಗೂ ಕಲ್ಲಿನ ನಾಗರ ಮೂರ್ತಿಗೆ ಹಾಲು ಮತ್ತು ನೈವೇದ್ಯ ಅರ್ಪಿಸುವ ಮೂಲಕ ಅಪಾರ ಪ್ರಮಾಣದ ಹಾಲು ವ್ಯರ್ಥವಾಗುತ್ತಿದೆ. ವೈಜ್ಞಾನಿಕವಾಗಿ ಹಾವು ಹಾಲು ಕುಡಿಯುವುದಿಲ್ಲ. ಹೀಗಾಗಿ ಹುತ್ತಕ್ಕೆ ಹಾಲು ಸುರಿದು ವ್ಯರ್ಥ ಮಾಡುವ ಬದಲು ಬಡವರು, ರೋಗಿಗಳು ಹಾಗೂ ಅಪೌಷ್ಟಿಕತೆಯಿಂದ ಬಳಲುತ್ತಿರುವ ಮಕ್ಕಳಿಗೆ ಹಾಲು ಮತ್ತು ಹಣ್ಣು ನೀಡುವುದು ಹೆಚ್ಚು ಅರ್ಥಪೂರ್ಣವಾಗಿದೆ” ಎಂದರು.

ಅಪೌಷ್ಟಿಕತೆಯನ್ನು ನಿವಾರಿಸುವ ಹಾಗೂ ಮಕ್ಕಳ ಆರೋಗ್ಯದ ಬಗ್ಗೆ ಕಾಳಜಿ ಮೂಡಿಸುವ ಉದ್ದೇಶದಿಂದ ಜನವಾಡ ಗ್ರಾಮದ ಅಲೆಮಾರಿ ಜನಾಂಗದ ಮಕ್ಕಳಿಗೆ ಹಾಲು ಮತ್ತು ಬಾಳೆಹಣ್ಣು ವಿತರಿಸಲಾಗಿದೆ. ಮೌಢ್ಯತೆ ವಿರುದ್ಧ ಸಮಾಜದಲ್ಲಿ ನಿರಂತರ ಜಾಗೃತಿ ಮೂಡಿಸುವ ಪ್ರಯತ್ನ ಎಲ್ಲರಿಂದಲೂ ನಡೆಯಬೇಕು ಎಂದು ತಿಳಿಸಿದರು.

ಇದನ್ನೂ ಓದಿ : ವಚನ ಕಲ್ಯಾಣ | ಆಸೆಯೆಂಬುದು ಅರಸಿಂಗಲ್ಲದೆ, ಶಿವಭಕ್ತರಿಗುಂಟೆ ಅಯ್ಯಾ?

ಕಾರ್ಯಕ್ರಮದಲ್ಲಿ ಸುಡಗಾಡು ಸಿದ್ದು ಸಮಾಜದ ಮುಖಂಡ ಅಶೋಕ ಕಡಮುಂಚಿ, ಎಸ್‌ಟಿ ಸಮಾಜದ ಮುಖಂಡ ರಾಜಕುಮಾರ ಹೊನ್ನೆಕೇರಿ, ರಾಮಲು ಜೆಟ್ಟೆಪ್ಪಾ, ಚನ್ನಬಸವ ಶಾಖೆ ಸೇರಿದಂತೆ ಹಲವರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯುವ ಪೀಳಿಗೆ ಸತ್ಯ, ಸರಳತೆಯ ತತ್ವಗಳನ್ನು ಅಳವಡಿಸಿಕೊಳ್ಳಬೇಕು: ಪ್ರೊ. ವಿಜಯಾ ಕೋರಿಶೆಟ್ಟಿ

ಸತ್ಯ, ಅಹಿಂಸೆ, ಸರಳತೆ, ಕರ್ತವ್ಯನಿಷ್ಠೆ ಮತ್ತು ನೈತಿಕ ಮೌಲ್ಯಗಳು ಕೇವಲ ಇತಿಹಾಸದ...

ಗಾಂಧೀಜಿ ಹೆಸರು, ವಿಚಾರಧಾರೆ ಅಳಿಸಲು ಯಾರಿಂದಲೂ ಸಾಧ್ಯವಿಲ್ಲ: ಡಿ.ಕೆ. ಶಿವಕುಮಾರ್

"ಮಹಾತ್ಮ ಗಾಂಧೀಜಿ ಭಾರತದ ಆತ್ಮವಿದ್ದಂತೆ. ಅವರ ಹೆಸರು ಹಾಗೂ ವಿಚಾರಧಾರೆಯನ್ನು ಅಳಿಸಿಹಾಕಲು...

ಸಾಗರ | ಗೂಡ್ಸ್ ಆಟೋ ಢಿಕ್ಕಿ; ಚಿಕಿತ್ಸೆ ಫಲಿಸದೆ ಬಾಲಕ ಸಾವು

ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ಗೂಡ್ಸ್ ಆಟೋ ಢಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ...

ಏಷ್ಯನ್ ಗೇಮ್ಸ್: 4 ದಶಕಗಳ ಬಳಿಕ ಮಹಿಳಾ ಹಾಕಿಯಲ್ಲಿ ಭಾರತಕ್ಕೆ ಒಲಿದ ಸುವರ್ಣ ಪದಕ

ಜಪಾನಿನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ ಭಾರತೀಯ ಮಹಿಳಾ ಹಾಕಿ...