ಬೀದರ್‌ | ಕನೇರಿ ಶ್ರೀ ಪ್ರವೇಶ ನಿಷೇಧಿಸದಿದ್ದರೆ ಬಸವಕಲ್ಯಾಣ ಬಂದ್ : ಎಚ್ಚರಿಕೆ

Date:

ಜೂನ್ 28ರಂದು ಬಸವಕಲ್ಯಾಣದಲ್ಲಿ ಆಯೋಜಿಸಿರುವ ಬಸವಾದಿ ಶಿವಶರಣರ ಬೃಹತ್ ಹಿಂದೂ ಸಮಾವೇಶದಲ್ಲಿ ಪಾಲ್ಗೊಳ್ಳಲು ಆಗಮಿಸುತ್ತಿರುವ ಮಹಾರಾಷ್ಟ್ರದ ಕನೇರಿ ಮಠದ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮಿಗಳ ಕಲ್ಯಾಣ ಪ್ರವೇಶವನ್ನು ತಡೆಯಬೇಕು ಎಂದು ಬೆಂಗಳೂರಿನ ಚನ್ನಬಸವೇಶ್ವರ ಜ್ಞಾನಪೀಠದ ಪೀಠಾಧ್ಯಕ್ಷ ಚನ್ನಬಸವಾನಂದ ಸ್ವಾಮೀಜಿ ಆಗ್ರಹಿಸಿದರು.

- Advertisement -

ಬಸವಕಲ್ಯಾಣದ ಬಿಕೆಡಿಬಿ ಸಭಾಂಗಣದಲ್ಲಿ ರಾಷ್ಟ್ರೀಯ ಬಸವ ದಳ, ಲಿಂಗಾಯತ ಧರ್ಮ ಮಹಾಸಭಾ ಹಾಗೂ ಕ್ರಾಂತಿ ಗಂಗೋತ್ರಿ ಅಕ್ಕನಾಗಲಾಂಬಿಕಾ ಮಹಿಳಾ ಗಣದ ವತಿಯಿಂದ ಆಯೋಜಿಸಿದ್ದ ಸಭೆಯಲ್ಲಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಂಬಾರಿಯ ಮುಂದೆ ಪೊಲೀಸರು ಸೆಲ್ಫಿ ತೆಗೆದುಕೊಂಡರೆ ಭದ್ರತೆಗೆ ಹೇಗೆ...

ಚಿನ್ನದ ಅಂಬಾರಿಯನ್ನು ಜಂಬೂಸವಾರಿಯ ದಿನ ಬಳಸಿಕೊಳ್ಳಲು ಸರ್ಕಾರ ಅರಸು ಮನೆತನದವರಿಂದ ಪಡೆಯುತ್ತದೆ. ಉಚಿತವಾಗಿ ಅಲ್ಲ; ನಿಗದಿಪಡಿಸಿರುವ ಹಣವನ್ನು ಸಂದಾಯ ಮಾಡಿ. ಅಂಬಾರಿಯ ಭದ್ರತೆಯ ಹೊಣೆ ಸರ್ಕಾರದ ಮೇಲೂ ಇರುತ್ತದೆ. ಪೊಲೀಸರು ಸೆಲ್ಫಿ ತೆಗೆದುಕೊಂಡರೆ...

ಜನತಂತ್ರಕ್ಕೆ ಕುತ್ತು: ‘ಖಾಸಗಿತನ’ದ ನೆಪದಲ್ಲಿ ಪತ್ರಿಕಾ ಸ್ವಾತಂತ್ರ್ಯ ಹತ್ತಿಕ್ಕಲು...

ಮೋದಿ ಸರ್ಕಾರವು ಈ ಕಾಯ್ದೆಯನ್ನು ಏಕಾಏಕಿ ಜಾರಿಗೊಳಿಸದೆ, ಹಂತ ಹಂತವಾಗಿ ಜಾರಿಗೊಳಿಸುತ್ತಾ ಪ್ರಜಾಪ್ರಭುತ್ವದ ಕತ್ತು ಹಿಸುಕುತ್ತಿದೆ. ಆರ್‌ಟಿಐ ಕಾಯ್ದೆಯನ್ನು ದುರ್ಬಲಗೊಳಿಸುವ ತಿದ್ದುಪಡಿಯು ಈಗಾಗಲೇ ನವೆಂಬರ್ 2025ರಿಂದಲೇ ಜಾರಿಯಲ್ಲಿದ್ದರೆ, ಡೇಟಾ ಬಳಕೆಯ ಕಠಿಣ ನಿಯಮಗಳು...

ಬೆಂಗಳೂರು ಶಿಕ್ಷಕರ ಕ್ಷೇತ್ರದ ಸೋಲು: ಕಾಂಗ್ರೆಸ್ ಸರ್ಕಾರಕ್ಕೆ ಎಚ್ಚರಿಕೆಯ...

ಉಳಿದ ಮೂರು ವಿಧಾನ ಪರಿಷತ್‌ ಕ್ಷೇತ್ರಗಳಿಗಿಂತ ಬೆಂಗಳೂರು ಶಿಕ್ಷಕರ ಕ್ಷೇತ್ರದ ಫಲಿತಾಂಶ ರಾಜಕೀಯವಾಗಿ ಪರಿಣಾಮ ಬೀರಬಲ್ಲದು. ಡಿ.ಕೆ. ಶಿವಕುಮಾರ್‌ ಅವರ ನಾಯಕತ್ವವನ್ನು ಓರೆಗೆ ಹಚ್ಚಬಲ್ಲದು. ಒಕ್ಕಲಿಗ ಪ್ರಾಬಲ್ಯದ ಪ್ರದೇಶಗಳ ಒಲವು-ನಿಲುವುಗಳನ್ನು ತಿಳಿಸಬಲ್ಲದು. ಆದರೆ,...

“ಮಹಾರಾಷ್ಟ್ರದ ಕನೇರಿ ಮಠದ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮಿಗಳು ಕೆಲವು ದಿನಗಳಿಂದ ಕರ್ನಾಟಕದ ವಿವಿಧ ಕಡೆಗಳಲ್ಲಿ ಬಸವಾದಿ ಶರಣರ ಹಿಂದೂ ಸಮಾವೇಶ ಮಾಡುತ್ತ ವಿಶ್ವಗುರು ಬಸವಣ್ಣನವರು ಮತ್ತು ಶರಣರ ಕುರಿತು ತಪ್ಪುತಪ್ಪಾಗಿ ಅರ್ಥೈಸುತ್ತ ಎಲ್ಲೆಡೆ ಅಶಾಂತಿ ಹರಡಿಸುತ್ತಿದ್ದಾರೆ. ಕರ್ನಾಟಕದ ಉಚ್ಛ ನ್ಯಾಯಾಲಯ ಹಾಗೂ ಭಾರತದ ಸರ್ವೋಚ್ಛ ನ್ಯಾಯಾಲಯವು ಸ್ವಾಮಿಗಳಿಗೆ ಛೀಮಾರಿ ಹಾಕಿವೆ ಎಂದರು. ಇವರು ಮಾತನಾಡುವಾಗ ಬಸವ ತತ್ವದ ಪ್ರಚಾರ ಮಾಡುವ ಲಿಂಗಾಯತ ಮಠಾಧೀಶರನ್ನು ಬಸವ ತಾಲಿಬಾನಿಗಳು ಎಂದು ತೀವ್ರವಾಗಿ ಟೀಕಿಸುತ್ತ ಸಮಾಜದಲ್ಲಿ ಅಶಾಂತಿ ಹುಟ್ಟಿಸುತ್ತಿದ್ದಾರೆ” ಎಂದು ದೂರಿದರು.

“ಕನೇರಿ ಸ್ವಾಮೀಜಿ ಎಲ್ಲಡೆಯೂ ಕಾನೂನು ಸುವ್ಯವಸ್ಥೆಗೆ ಭಂಗ ತರುತ್ತಿದ್ದಾರೆ. ಆದಕಾರಣ ಬೀದರ ಜಿಲ್ಲೆಗೆ ಬರದಂತೆ ಕನೇರಿ ಸ್ವಾಮಿಗಳನ್ನು ನಿಷೇಧಿಸಬೇಕು. ಅವರು ಕೇವಲ ಹಿಂದೂ ಸಮಾವೇಶ ಮಾಡಿಕೊಳ್ಳಲಿ ಅಥವಾ ಕೇವಲ ಬಸವಾದಿ ಶರಣರ ಸಮಾವೇಶ ಮಾಡಲಿ ನಮಗೆ ಯಾವುದೇ ತಕರಾರಿಲ್ಲ. ಆದರೆ ಬಸವಾದಿ ಶರಣರ ಹಿಂದೂ ಸಮಾವೇಶ ಮಾಡುತ್ತಿರುವುದು ಖಂಡನೀಯ” ಎಂದು ಚನ್ನಬಸವಾನಂದ ಸ್ವಾಮೀಜಿ ಪ್ರತಿಪಾದಿಸಿದರು.

ರಾಷ್ಟ್ರೀಯ ಬಸವ ದಳದ ರಾಜ್ಯಾಧ್ಯಕ್ಷ ಬಸವರಾಜ ಪಾಟೀಲ ಶಿವಪುರ ಮಾತನಾಡಿ, “ಸಮಾವೇಶದ ಹೆಸರು ಬದಲಾವಣೆ ಮಾಡಬೇಕು. ಕೇವಲ ಹಿಂದೂ ಸಮಾವೇಶ ನಡೆಸಬೇಕು. ಅದನ್ನು ಬದಲಾಯಿಸದೆ ಬಸವಾದಿ ಶರಣರನ್ನು ಚಾತುರ್ವರ್ಣ ಪದ್ಧತಿಯ ಹಿಂದೂ ಧರ್ಮಕ್ಕೆ ತಳಕು ಹಾಕಿ ಸಮಾವೇಶ ನಡೆಸಿದರೆ, ಲಿಂಗಾಯತ ಮಠಾಧೀಶರಿಗೆ ಹಾಗೂ ಬಸವ ತತ್ವದ ಕುರಿತು ಅವಹೇಳನಕಾರಿ ಮಾತನಾಡುವ ಕನೇರಿ ಶ್ರೀಗಳಿಗೆ ವಿರೋಧಿಸುತ್ತೇವೆ. ಶ್ರೀಗಳಿಗೆ ಕಲ್ಯಾಣ ಪ್ರವೇಶ ನಿಷೇಧಿಸದಿದ್ದರೆ ಬಸವಕಲ್ಯಾಣ ಬಂದ್ ಮಾಡಿ ಹೋರಾಟ ಮಾಡಲಾಗುವುದು” ಎಂದು ಎಚ್ಚರಿಸಿದರು.

ರಾಷ್ಟ್ರೀಯ ಬಸವ ದಳ, ಕ್ರಾಂತಿ ಗಂಗೋತ್ರಿ ಅಕ್ಕನಾಗಲಾಂಬಿಕಾ ಮಹಿಳಾ ಗಣ, ಲಿಂಗಾಯತ ಧರ್ಮ ಮಹಾಸಭಾದ ವತಿಯಿಂದ ಬಸವಕಲ್ಯಾಣ ತಹಸೀಲ್ದಾರ್‌ ಅವರ ಮುಖಾಂತರ ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್
ಸಚಿವ ಈಶ್ವರ ಖಂಡ್ರೆ ಅವರಿಗೆ ಮನವಿ ಪತ್ರವನ್ನು ಸಲ್ಲಿಸಿದರು.

ಬೀದರ್‌ ಬಸವ ಮಂಟಪದ ಮಾತೆ ಸತ್ಯಾದೇವಿ, ಲಿಂಗಾಯತ ಧರ್ಮ ಮಹಾಸಭಾದ ರಾಷ್ಟ್ರೀಯ ಉಪಾಧ್ಯಕ್ಷ ಶಿವರಾಜ ಪಾಟೀಲ ಅತಿವಾಳ,
ಕ್ರಾಂತಿ ಗಂಗೋತ್ರಿ ಅಕ್ಕನಾಗಲಾಂಬಿಕಾ ಮಹಿಳಾ ಗಣದ ರಾಜ್ಯಾಧ್ಯಕ್ಷೆ ಜಗದೇವಿ ಚಟ್ಟಿ ಕಲಬುರಗಿ ಮಾತನಾಡಿದರು.

ಪ್ರಮುಖರು ಮಾತನಾಡಿ, ಒಂದು ವಾರದಲ್ಲಿ ಕಾರ್ಯಕ್ರಮವನ್ನು ನಿಷೇಧಿಸಿದ ಆದೇಶ ಬರದಿದ್ದರೆ, ಬಸವಕಲ್ಯಾಣ ಬಂದ್ ಮಾಡುವ ಮೂಲಕ ತಹಸೀಲ್ ಕಚೇರಿ ಎದುರುಗಡೆ ಧರಣಿ ಸತ್ಯಾಗ್ರಹ ಮಾಡಲಾಗುವುದು. ನಾವು ಹಿಂದೂ ಅಥವಾ ಹಿಂದೂ ಸಮಾವೇಶದ ವಿರೋಧಿಗಳಲ್ಲ. ಆದರೆ ಬಸವಾದಿ ಶರಣರ ಹೆಸರನ್ನು ದುರುಪಯೋಗ ಮಾಡಿಕೊಳ್ಳುವುದನ್ನು ನಾವು ವಿರೋಧಿಸುತ್ತೇವೆ. ಶಾಂತಿಗೆ ಭಂಗ ಆಗದಂತೆ ನೋಡಿಕೊಳ್ಳಬೇಕು. ಕನೇರಿ ಮಠದ ಸ್ವಾಮಿಗಳು ನಡೆಸುತ್ತಿರುವ ಈ ಹಿಂದೂ ಸಮಾವೇಶವನ್ನು ತಡೆಹಿಡಿಯಬೇಕೆಂದು ಒತ್ತಾಯಿಸಿದರು.

ಇದನ್ನೂ ಓದಿ : ಬೀದರ್‌ | ಸಮಾಜ ಸೇವೆಯೇ ಜೀವನದ ಸಾರ್ಥಕತೆ : ಗುರಮ್ಮಾ ಸಿದ್ದಾರೆಡ್ಡಿ

ಸಭೆಯಲ್ಲಿ ಪ್ರಮುಖರಾದ ಜಗದೀಶ್ವರ ಬಿರಾದಾರ, ಶಿವಶರಣಪ್ಪ ಪಾಟೀಲ ಹಾರೂರಗೇರಿ, ಮನ್ಮಥಯ್ಯ ಸ್ವಾಮಿ, ವಿಶ್ವನಾಥ ಪಾಟೀಲ, ಗುರುನಾಥ ನಿಡಗುಂದಿ, ಗಣಪತಿ ದೇಶಮುಖ, ಮಲ್ಲಿಕಾರ್ಜುನ ಬುಕ್ಕಾ, ಬಸವಶ್ರೀ ಕಟಾಳೆ ಸೇರಿದಂತೆ ಹಲವರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೆಹಲಿ SIR:​’ಹಳೆಯ’ ಮತದಾರರಿಗೆ ‘ಹೊಸ’ ಫಾರ್ಮ್ ಏಕೆ: ಚುನಾವಣಾ ಆಯೋಗಕ್ಕೆ ಸುಪ್ರೀಂ ತರಾಟೆ

ದೆಹಲಿಯಲ್ಲಿ ನಡೆಯುತ್ತಿರುವ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ, ಹಿಂದಿನ ಮತದಾರರ...

ಡಯಾಜಿಯೊ ಇಂಡಿಯಾದ ನೂತನ ಜನರಲ್ ಕೌನ್ಸೆಲ್ ಆಗಿ ಸಮೀರ್ ಚುಘ್ ನೇಮಕ

ಪ್ರಮುಖ ಮದ್ಯ ಉತ್ಪಾದನಾ ಕಂಪನಿಯಾದ ಡಯಾಜಿಯೊ ಇಂಡಿಯಾ (Diageo India) ಸಂಸ್ಥೆಯ...

ಬೀದರ್‌ | ಶೈಕ್ಷಣಿಕ ಜ್ಞಾನದೊಂದಿಗೆ ಮಾನವೀಯ ಮೌಲ್ಯ ಬೆಳೆಸಿಕೊಳ್ಳಿ : ಜ್ಯೋತಿರ್ಮಯಾನಂದ ಸ್ವಾಮೀಜಿ

ವಿದ್ಯಾರ್ಥಿಗಳು ಶಿಸ್ತು, ಸಂಯಮ, ಪರಿಶ್ರಮ ಹಾಗೂ ಉತ್ತಮ ಮೌಲ್ಯಗಳನ್ನು ನಿತ್ಯ ಜೀವನದಲ್ಲಿ...

ಈ ದಿನ ಸಂಪಾದಕೀಯ | ಎಸ್‌ಐಆರ್‌ ಮುಗೀತು; ಉತ್ತರ ಸಿಗದ ಪ್ರಶ್ನೆಗಳಿನ್ನೂ ಬಾಕಿ ಇವೆ!

ಎಸ್‌ಐಆರ್‌ ಮುಗಿದಿದೆ, ಅಂತಿಮ ಮತದಾರರ ಪಟ್ಟಿಯೂ ಪ್ರಕಟವಾಗಿದೆ. ಆದರೆ ಉತ್ತರ...