ಬೀದರ್‌ | ಬಸವಣ್ಣ, ಅಂಬೇಡ್ಕರವರ ಸಮಾನತೆ ತತ್ವ ಸಮಾಜಕ್ಕೆ ದಾರಿದೀಪ

Date:

ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್‌ ಹಾಗೂ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ಮಾನವೀಯ ಮೌಲ್ಯಗಳನ್ನು ಇಂದಿನ ಸಮಾಜಕ್ಕೆ ದಾರಿದೀಪವಾಗಿವೆ ಎಂದು ಮುಖಂಡ ಚಂದ್ರಕಾಂತ ಹಿಪ್ಪಳಗಾಂವೆ ಹೇಳಿದರು.

- Advertisement -

ಚಂದ್ರ ಸಾಂಸ್ಕೃತಿಕ, ಸಾಹಿತ್ಯಿಕ ಹಾಗೂ ಶೈಕ್ಷಣಿಕ ಚಾರಿಟೇಬಲ್ ಟ್ರಸ್ಟ್ ನಾವದಗೇರಿ ವತಿಯಿಂದ ಬೀದರ್‌ ನಗರದ ಬರೀದಿ ಶಾಹಿ ಹೋಟೆಲ್‌ ಸಭಾಂಗಣದಲ್ಲಿ ಭಾನುವಾರ ಆಯೋಜಿಸಿದ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ 893ನೇ ಜಯಂತ್ಯುತ್ಸವ ಹಾಗೂ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ 135ನೇ ಜಯಂತ್ಯುತ್ಸವ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಂಬಾರಿಯ ಮುಂದೆ ಪೊಲೀಸರು ಸೆಲ್ಫಿ ತೆಗೆದುಕೊಂಡರೆ ಭದ್ರತೆಗೆ ಹೇಗೆ...

ಚಿನ್ನದ ಅಂಬಾರಿಯನ್ನು ಜಂಬೂಸವಾರಿಯ ದಿನ ಬಳಸಿಕೊಳ್ಳಲು ಸರ್ಕಾರ ಅರಸು ಮನೆತನದವರಿಂದ ಪಡೆಯುತ್ತದೆ. ಉಚಿತವಾಗಿ ಅಲ್ಲ; ನಿಗದಿಪಡಿಸಿರುವ ಹಣವನ್ನು ಸಂದಾಯ ಮಾಡಿ. ಅಂಬಾರಿಯ ಭದ್ರತೆಯ ಹೊಣೆ ಸರ್ಕಾರದ ಮೇಲೂ ಇರುತ್ತದೆ. ಪೊಲೀಸರು ಸೆಲ್ಫಿ ತೆಗೆದುಕೊಂಡರೆ...

ಜನತಂತ್ರಕ್ಕೆ ಕುತ್ತು: ‘ಖಾಸಗಿತನ’ದ ನೆಪದಲ್ಲಿ ಪತ್ರಿಕಾ ಸ್ವಾತಂತ್ರ್ಯ ಹತ್ತಿಕ್ಕಲು...

ಮೋದಿ ಸರ್ಕಾರವು ಈ ಕಾಯ್ದೆಯನ್ನು ಏಕಾಏಕಿ ಜಾರಿಗೊಳಿಸದೆ, ಹಂತ ಹಂತವಾಗಿ ಜಾರಿಗೊಳಿಸುತ್ತಾ ಪ್ರಜಾಪ್ರಭುತ್ವದ ಕತ್ತು ಹಿಸುಕುತ್ತಿದೆ. ಆರ್‌ಟಿಐ ಕಾಯ್ದೆಯನ್ನು ದುರ್ಬಲಗೊಳಿಸುವ ತಿದ್ದುಪಡಿಯು ಈಗಾಗಲೇ ನವೆಂಬರ್ 2025ರಿಂದಲೇ ಜಾರಿಯಲ್ಲಿದ್ದರೆ, ಡೇಟಾ ಬಳಕೆಯ ಕಠಿಣ ನಿಯಮಗಳು...

ಬೆಂಗಳೂರು ಶಿಕ್ಷಕರ ಕ್ಷೇತ್ರದ ಸೋಲು: ಕಾಂಗ್ರೆಸ್ ಸರ್ಕಾರಕ್ಕೆ ಎಚ್ಚರಿಕೆಯ...

ಉಳಿದ ಮೂರು ವಿಧಾನ ಪರಿಷತ್‌ ಕ್ಷೇತ್ರಗಳಿಗಿಂತ ಬೆಂಗಳೂರು ಶಿಕ್ಷಕರ ಕ್ಷೇತ್ರದ ಫಲಿತಾಂಶ ರಾಜಕೀಯವಾಗಿ ಪರಿಣಾಮ ಬೀರಬಲ್ಲದು. ಡಿ.ಕೆ. ಶಿವಕುಮಾರ್‌ ಅವರ ನಾಯಕತ್ವವನ್ನು ಓರೆಗೆ ಹಚ್ಚಬಲ್ಲದು. ಒಕ್ಕಲಿಗ ಪ್ರಾಬಲ್ಯದ ಪ್ರದೇಶಗಳ ಒಲವು-ನಿಲುವುಗಳನ್ನು ತಿಳಿಸಬಲ್ಲದು. ಆದರೆ,...

ʼಬಸವಾದಿ ಶರಣರು ಕಾಯಕ-ದಾಸೋಹಕ್ಕೆ ಹೆಚ್ಚಿನ ಒತ್ತು ಕೊಟ್ಟಿದ್ದರು. ಅವರ ಸಮಾನತೆ ತತ್ವಗಳನ್ನು ಆಚರಣೆಗೆ ಬರಬೇಕಿದೆ. ಶಿಕ್ಷಣದಿಂದಲೇ ಸಮಾಜ ಬದಲಾವಣೆ ಸಾಧ್ಯವೆಂದು ಮನಗಂಡು ಶ್ರೇಷ್ಠ ಸಂವಿಧಾನದ ಮುಖಾಂತರ ದೇಶದ ಎಲ್ಲ ಜನರಿಗೂ ಸಮಾನ ಹಕ್ಕುಗಳನ್ನು ನೀಡಿದ ಬಾಬಾ ಸಾಹೇಬ್ ಅಂಬೇಡ್ಕರ್‌ ಅವರ‌ ನೈತಿಕ ಮೌಲ್ಯಗಳು ನಾವೆಲ್ಲರೂ ಪಾಲಿಸಬೇಕುʼ ಎಂದರು.

ಜಿಲ್ಲಾ ಕಾರ್ಮಿಕ ಇಲಾಖೆ ಅಧಿಕಾರಿ ಮಹೇಶ್ ಕುಳಲಿ ಮಾತನಾಡಿ, ʼಆಡು ಭಾಷೆಯಲ್ಲೇ ವಚನಗಳನ್ನು ರಚಿಸಿ ಸಾಮಾಜಿಕ ಅಸಮಾನತೆ, ಅಸ್ಪೃಶ್ಯತೆ ವಿರುದ್ಧ ಬಸವಾದಿ ಶರಣರು ಹೋರಾಡಿದರು. ಪ್ರಜಾಪ್ರಭುತ್ವದ ಪರಿಕಲ್ಪನೆ ಮೂಲಕ ಸಾಮಾಜಿಕ ಸಮಾನತೆ ತತ್ವ ಬೆಳಕಿಗೆ ತಂದಿದ್ದರು. ಅಂಬೇಡ್ಕರ್ ಅವರು ಸ್ವಾತಂತ್ರ್ಯ, ಸಮಾನತೆ ಹಾಗೂ ಬಂಧುತ್ವ ಸೇರಿದಂತೆ ಮಹಿಳಾ ಹಕ್ಕು, ಮತದಾನ, ಕಾರ್ಮಿಕ ಹಕ್ಕುಗಳನ್ನು ಸಾಂವಿಧಾನಿಕವಾಗಿ ನೀಡಿದ್ದು ಅವರ ಸಮಾನತೆ ತತ್ವದ ದೂರದೃಷ್ಟಿಯಾಗಿದೆ. ಮಹಾತ್ಮರ ಚಿಂತನೆಗಳು ನಮ್ಮೆಲ್ಲರಿಗೂ ಆದರ್ಶವಾಗಿವೆʼ ಎಂದು ಹೇಳಿದರು.

ಶಿಕ್ಷಕ ಎಂ.ಎಸ್.ಮನೋಹರ ಮಾತನಾಡಿ, ʼಸಮಾಜದಲ್ಲಿ ಅಸಮಾನತೆ, ಶೋಷಣೆ, ಕಂದಾಚಾರ, ಮೌಢ್ಯ ತೊಲಗಬೇಕಾದರೆ ಮೊದಲು ಜಾತಿ ವಿನಾಶ ಆಗಲೇಬೇಕು. ಬುದ್ಧ, ಬಸವಣ್ಣ, ಅಂಬೇಡ್ಕರ್‌, ಜ್ಯೋತಿಬಾ ಫುಲೆ ಸೇರಿದಂತೆ ಅನೇಕ ಮಹಾತ್ಮರನ್ನು ಕೇವಲ ಆರಾಧನೆಗೆ ಸೀಮಿತಗೊಳಿಸದೆ ಅವರ ಮೌಲ್ಯಯುತ ತತ್ವಾದರ್ಶಗಳನ್ನು ಅನುಷ್ಠಾನಗೊಳಿಸುವುದು ಅಗತ್ಯವಿದೆ. ಸಮಾಜದಲ್ಲಿ ಜಾತಿ, ಧರ್ಮ, ವರ್ಗ, ವರ್ಣ, ಮತ-ಪಂಥಗಳ ಭಿನ್ನತೆಗಳನ್ನು ಮರೆತು ನಾವೆಲ್ಲರೂ ಒಂದು ಎನ್ನುವ ಭಾವ ಎಲ್ಲರೊಳಗೆ ಮೂಡಿದರೆ ಮಾತ್ರ ಬಹುತ್ವ ಭಾರತ ನಿರ್ಮಾಣ ಸಾಧ್ಯʼ ಎಂದು ತಿಳಿಸಿದರು.

WhatsApp Image 2026 04 27 at 9.23.28 AM

ನಿವೃತ್ತ ಪ್ರಾಚಾರ್ಯ ದೇವಿದಾಸ ತುಮಕುಂಟೆ ವಿಶೇಷ ಉಪನ್ಯಾಸ ನೀಡಿದ ಅವರು, ʼ12ನೇ ಶತಮಾನದಲ್ಲಿ ಜಾತಿ, ವರ್ಣ, ವರ್ಗ ಹಾಗೂ ಲಿಂಗಭೇದ ಸಮಾಜ ಕಟ್ಟಬಯಸಿದ ಬಸವಾದಿ ಶರಣರ ಪರಿಕಲ್ಪನೆ ಸಾಮಾಜಿಕ ನ್ಯಾಯದ ಪ್ರತೀಕ. ಶೋಷಣೆ ಮುಕ್ತ ಸಮಾಜಕ್ಕಾಗಿ ಸ್ತ್ರೀ ಸಮಾನತೆ, ಕಾಯಕ ಸಿದ್ಧಾಂತ ಜಾರಿಗೊಳಿಸಿದರು. ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಅನೇಕ ನೋವು, ಅಪಮಾನಗಳ ಮಧ್ಯೆಯೂ ದೇಶಕ್ಕಾಗಿ ಜೀವನವೇ ತ್ಯಾಗ ಮಾಡಿದ ಮಹಾನ್‌ ಜ್ಞಾನಿಯಾಗಿದ್ದರು. ಅಂಬೇಡ್ಕರ್‌ ಅವರ ಸಾಮಾಜಿಕ ಹಾಗೂ ನೈತಿಕ ಮೌಲ್ಯಗಳನ್ನು ಇಂದಿನ ಸಮಾಜ ಅಳವಡಿಸಿಕೊಳ್ಳಬೇಕುʼ ಎಂದು ಹೇಳಿದರು.

ಅಧ್ಯಕ್ಷತೆ ವಹಿಸಿದ್ದ ಟ್ರಸ್ಟ್‌ ಅಧ್ಯಕ್ಷ ಪ್ರವೀಣ ಮಿರಗಂಜಕರ್ ಮಾತನಾಡಿ, ‌ʼನಮ್ಮ ಟ್ರಸ್ಟ್‌ ವತಿಯಿಂದ ಮುಂದಿನ ದಿನಗಳಲ್ಲಿ ಜಾನಪದ ಕಲೆ, ಸಾಹಿತ್ಯ, ಕ್ರೀಡೆ, ಸಂಸ್ಕೃತಿ ಸೇರಿದಂತೆ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಗೌರವಿಸುವ ಕಾರ್ಯ ಮಾಡಲಾಗುವುದು. ಸಾಂಸ್ಕೃತಿಕ ನಾಯಕ ಬಸವಣ್ಣನವರು ಹಾಗೂ ವಿಶ್ವರತ್ನ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಚಿಂತನೆಗಳನ್ನು ಜನಮಾನಸಕ್ಕೆ ಮುಟ್ಟಿಸುವ ಜೊತೆಗೆ ಸಂವಿಧಾನ ಜಾಗೃತಿ ಕಾರ್ಯ ಮಾಡಲಾಗುವುದುʼ ಎಂದು ಹೇಳಿದರು.

ಬೀದರ್‌ ಸರ್ಕಾರಿ ಐಟಿಐ ಕಾಲೇಜು ಪ್ರಾಚಾರ್ಯ ವಿಜಯಕುಮಾರ ಜಾಧವ್, ಆಮ್‌ ಆದ್ಮಿ ಪಕ್ಷದ ಜಿಲ್ಲಾಧ್ಯಕ್ಷ ಸಿದ್ದು ಫುಲಾರಿ, ಜೆಸ್ಕಾಂ ಲೆಕ್ಕಾಧಿಕಾರಿ ಸುಮಂತ ಕಟ್ಟಿಮನಿ, ಪತ್ರಕರ್ತ ಬಾಲಾಜಿ ಕುಂಬಾರ ಮಾತನಾಡಿದರು.

ಇದನ್ನೂ ಓದಿ : ಬೀದರ್‌ | ನಮ್ಗ ಅನ್ನ ಕೊಡಬೇಡ್ರಿ; ಕುಡಿಯೋಕೆ ನೀರು ಕೊಟ್ಟು ಪುಣ್ಯ ಕಟ್ಟಿಕೊಳ್ಳಿ!

ಇದೇ ಸಂದರ್ಭದಲ್ಲಿ ಎಸ್‌ಎಸ್‌ಎಲ್‌ಸಿ, ಪಿಯುಸಿಯಲ್ಲಿ ಅಗ್ರಶ್ರೇಣಿಯಲ್ಲಿ ಉತ್ತೀರ್ಣರಾದ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಸಾಧನೆಗೈದ ಸಂದೇಶ್ ಸಂಜುಕುಮಾರ, ದ್ವಿತೀಯ ಪಿಯುಸಿಯಲ್ಲಿ ಅಧಿಕ ಅಂಕ ಗಳಿಸಿದ ಲಕ್ಷ್ಮಿ ಕುಂಬಾರ, ನೇಹಾ ಮೋಹನರಾವ್, ಸಂಜನಾ ಸಂಜುಕುಮಾರ, ನಿಕಿತಾ ನಾರಂದ್ ಹಾಗೂ ವಿವಿಧ ಕ್ಷೇತ್ರಗಳ ಸಾಧಕರು, ಕಟ್ಟಡ ಕಾರ್ಮಿಕರಿಗೆ ಗೌರವಿಸಲಾಯಿತು.

ಉಪನ್ಯಾಸಕ ದಯಾನಂದ ಬಂಬುಳಗೆ, ಟ್ರಸ್ಟ್ ಕಾರ್ಯದರ್ಶಿ ಪ್ರದೀಪ ಚಂದ್ರ ಸೇರಿದಂತೆ ಅಶೋಕ ಮೇತ್ರೆ, ಸುಜ್ಞಾನಿ ಹಲಗೆ, ಸುದರ್ಶನ ಹಲಗೆ, ಎಂ.ಕೃಷ್ಣವೇಣಿ ಅನೇಕರು ಉಪಸ್ಥಿತರಿದ್ದರು.

ಇದನ್ನೂ ಓದಿ : ಬೀದರ್‌ | 29ರಂದು ಮರಾಠಾ ಸಮಾಜದಿಂದ ಅದ್ದೂರಿಯಾಗಿ ಅಂಬೇಡ್ಕರ್ ಜಯಂತಿ ಆಚರಣೆ

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೆಹಲಿ SIR:​’ಹಳೆಯ’ ಮತದಾರರಿಗೆ ‘ಹೊಸ’ ಫಾರ್ಮ್ ಏಕೆ: ಚುನಾವಣಾ ಆಯೋಗಕ್ಕೆ ಸುಪ್ರೀಂ ತರಾಟೆ

ದೆಹಲಿಯಲ್ಲಿ ನಡೆಯುತ್ತಿರುವ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ, ಹಿಂದಿನ ಮತದಾರರ...

ಡಯಾಜಿಯೊ ಇಂಡಿಯಾದ ನೂತನ ಜನರಲ್ ಕೌನ್ಸೆಲ್ ಆಗಿ ಸಮೀರ್ ಚುಘ್ ನೇಮಕ

ಪ್ರಮುಖ ಮದ್ಯ ಉತ್ಪಾದನಾ ಕಂಪನಿಯಾದ ಡಯಾಜಿಯೊ ಇಂಡಿಯಾ (Diageo India) ಸಂಸ್ಥೆಯ...

ಬೀದರ್‌ | ಶೈಕ್ಷಣಿಕ ಜ್ಞಾನದೊಂದಿಗೆ ಮಾನವೀಯ ಮೌಲ್ಯ ಬೆಳೆಸಿಕೊಳ್ಳಿ : ಜ್ಯೋತಿರ್ಮಯಾನಂದ ಸ್ವಾಮೀಜಿ

ವಿದ್ಯಾರ್ಥಿಗಳು ಶಿಸ್ತು, ಸಂಯಮ, ಪರಿಶ್ರಮ ಹಾಗೂ ಉತ್ತಮ ಮೌಲ್ಯಗಳನ್ನು ನಿತ್ಯ ಜೀವನದಲ್ಲಿ...

ಈ ದಿನ ಸಂಪಾದಕೀಯ | ಎಸ್‌ಐಆರ್‌ ಮುಗೀತು; ಉತ್ತರ ಸಿಗದ ಪ್ರಶ್ನೆಗಳಿನ್ನೂ ಬಾಕಿ ಇವೆ!

ಎಸ್‌ಐಆರ್‌ ಮುಗಿದಿದೆ, ಅಂತಿಮ ಮತದಾರರ ಪಟ್ಟಿಯೂ ಪ್ರಕಟವಾಗಿದೆ. ಆದರೆ ಉತ್ತರ...