ಬೀದರ್‌ | ಸಮಾನತೆಯ ಹರಿಕಾರ ಬಸವಣ್ಣ : ಪ್ರೊ.ಬಿ.ಎಸ್.ಬಿರಾದಾರ

Date:

ಸಾಂಸ್ಕೃತಿಕ ನಾಯಕ, ವಿಶ್ವಗುರು ಬಸವಣ್ಣನವರು ಸಮಾಜದಲ್ಲಿನ ಎಲ್ಲಾ ವರ್ಗದವರನ್ನು ಸಮಾನವಾಗಿ ಕಂಡಂತಹ ಮಹಾ ಮಾನವತಾವಾದಿಯಾಗಿದ್ದಾರೆ. ಹೀಗಾಗಿ ಅವರು ಸಮಾನತೆಯ ಹರಿಕಾರರು ಎಂದು ಬೀದರ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಬಿ.ಎಸ್.ಬಿರಾದಾರ ನುಡಿದರು.

- Advertisement -

ಬೀದರ ವಿಶ್ವವಿದ್ಯಾಲಯದ ಸಭಾಂಗಣದಲ್ಲಿ ಬೀದರ ವಿಶ್ವವಿದ್ಯಾಲಯ ಹಾಗೂ ಅಖಿಲ ಭಾರತ ಶರಣ ಸಮನ್ವಯ ವೇದಿಕೆ ಕರ್ನಾಟಕ ಇವರ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ವಿಶ್ವಗುರು ಬಸವಣ್ಣರವರ 893ನೇ ಜಯಂತ್ಯೋತ್ಸವ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ...

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ, ನಿರುದ್ಯೋಗ-ಬೆಲೆ ಏರಿಕೆಯ ಭಾರದಿಂದ ಜನ ಹೈರಾಣಾಗಿರುವಾಗ ಭಾರತದ ಪ್ರಧಾನಿ ಭಜನೆ ಮಾಡುತ್ತಿದ್ದಾರೆ. ರೋಂ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು...

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ...

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು ಇದೇ ಮೊದಲೇನಲ್ಲ. ಕರಾವಳಿಯ ಜನತೆ ಇಂತಹ ಪ್ರಚೋದನಾತ್ಮಕ ನಡೆಗಳನ್ನು ತಿರಸ್ಕರಿಸಿ, ಸತ್ಯ ಮತ್ತು ನ್ಯಾಯದ ಪರವಾಗಿ ನಿಲ್ಲಬೇಕಾಗಿದೆ. ಕರಾವಳಿ ಕರ್ನಾಟಕವಾಗಲಿ...

ʼಬಸವಣ್ಣನವರು ಕೇವಲ ಕರ್ನಾಟಕಕ್ಕೆ ಮಾತ್ರ ಸಾಂಸ್ಕೃತಿಕ ನಾಯಕರಾಗದೇ ಇಡೀ ಭರತ ಖಂಡದ ಸಾಂಸ್ಕೃತಿಕ ನಾಯಕರಾಗಿದ್ದಾರೆ. ಅವರ ಖ್ಯಾತಿ ಹಾಗೂ ಪ್ರಭಾವದಿಂದ ಬೇರೆ ಭಾಗಗಳಿಂದ ಶರಣರು ಕಲ್ಯಾಣದ ಅನುಭವ ಮಂಟಪಕ್ಕೆ ಬಂದರು. ಬಸವಣ್ಣನವರ ಆದರ್ಶಗಳು ಇಂದಿನ ಆಧುನಿಕ ಯುಗದಲ್ಲಿಯೂ ಕೂಡ ಅನಿವಾರ್ಯವಾಗಿವೆʼ ಎಂದರು.

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಪ್ರೊ.ಬಸವರಾಜ ಡೋಣುರ ಮಾತನಾಡಿ, ʼಸಮಾಜವನ್ನು ಸನ್ಮಾರ್ಗದ ಕಡೆಗೆ ಕೊಂಡೊಯ್ದಂತಹ ಮಹಾಪುರುಷರು. ಅವರು ಆರೋಗ್ಯಕರ ಸಮಾಜದ ರೂಪುರೇಷೆಗಳನ್ನು ಹೊಂದಿದ ಮಹಾಜ್ಞಾನಿಯಾಗಿದ್ದರು. ಅವರು ರಾಜ ಪ್ರಭುತ್ವಕ್ಕೂ ಸಹ ಹೆದರದೆ ತಮ್ಮ ನೇರ ನುಡಿಯ ವಚನಗಳ ಮೂಲಕ ಸಮಾಜದಲ್ಲಿ ಸಮಾನತೆಯನ್ನು ತರಲು ಪ್ರಯತ್ನಿಸಿದರು. ತಮ್ಮ ನಡೆ-ನುಡಿ ಸಿದ್ದಾಂತದ ಅನುಭಾವವೇ ವಚನಗಳಾದವುʼ ಎಂದರು.

ಅಖಿಲ ಭಾರತ ಶರಣ ಸಮನ್ವಯ ವೇದಿಕೆಯ ಸಂಚಾಲಕ ಡಾ.ಪಲ್ಲವಿ ಪಾಟೀಲ ಸೇಡಂ ಮಾತನಾಡಿ, ʼನಾವು ಬಸವಣ್ಣನವರ ವಚನಗಳೊಂದಿಗೆ ಜೀವಿಸಬೇಕು. ಆಗ ಮಾತ್ರ ಮಾನವ ಮಹಾಮಾನವನಾಗಲು ಸಾಧ್ಯವಾಗುತ್ತದೆ. ಅವರ ತತ್ವ ಆದರ್ಶಗಳು ಸದಾ ಕಾಲ ದಾರಿದೀಪವಾಗಿವೆʼ ಎಂದರು.

ಬೀದರ ವಿಶ್ವವಿದ್ಯಾಲಯದ ಬೀದರ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯ ನಾಗಭೂಷಣ ಕಮಠಾಣೆ ಮಾತನಾಡಿ, ʼವಿಶ್ವಗುರು ಬಸವಣ್ಣನವರ ಸೇವೆ ಹಾಗೂ ಆದರ್ಶಗಳನ್ನು ಮೈಗೂಡಿಸಿಕೊಂಡರೆ ಜೀವನ ಸಾರ್ಥಕವಾಗುತ್ತದೆ. ಅವರ ಪ್ರತಿಯೊಂದು ವಚನಗಳು ಮನುಷ್ಯನ ಉದ್ಧಾರಕ್ಕಾಗಿ ಪ್ರಯತ್ನಿಸಿವೆʼ ಎಂದರು.

ಬೀದರ್‌ ವಿವಿ ಸಿಂಡಿಕೇಟ್ ಸದಸ್ಯ ವಿಠಲದಾಸ್ ಪ್ಯಾಗೆ ಮಾತನಾಡಿ, ʼನಮ್ಮ ದೇಶದಲ್ಲಿ ಬುದ್ಧ, ಬಸವ ಹಾಗೂ ಅಂಬೇಡ್ಕರ್‌ ಅವರಂತಹ ಮಹಾನುಭಾವರು ಜನಿಸಿ ಜನರನ್ನು ತಮ್ಮ ಉತ್ತಮ ಸಂದೇಶಗಳ ಮೂಲಕ ಉದ್ಧರಿಸುವ ಮಹಾನ್ ಕಾರ್ಯ ಮಾಡಿದರು. ಅವರು ಸಮಾಜಕ್ಕಾಗಿ ತಮ್ಮ ಜೀವನವನ್ನೇ ಸವೆಸಿದರುʼ ಎಂದರು.

ಸಾನಿಧ್ಯ ವಹಿಸಿದ್ದ ಭಾಲ್ಕಿ ಹಿರೇಮಠದ ಪೀಠಾಧಿಪತಿ ಗುರುಬಸವ ಪಟ್ಟದ್ದೇವರು ಮಾತನಾಡಿ, ʼಸಮಾನತೆಯ ಹರಿಕಾರರಾದ ಬಸವಣ್ಣನವರು ಕಾಯಕ ಮತ್ತು ದಾಸೋಹ ಸಿದ್ಧಾಂತಕ್ಕೆ ಮಹತ್ವ ನೀಡಿದರು. ಜನರು ಅವರ ಕಾಯಕ ಸಿದ್ಧಾಂತವನ್ನು ಮೈಗೂಡಿಸಿಕೊಂಡರೆ ಸಮಾಜದಲ್ಲಿ ಯಾವುದೇ ಸಮಸ್ಯೆಗಳು ಕಂಡುಬರುವುದಿಲ್ಲ, ಬಸವಣ್ಣನವರ ವಚನಗಳ ಪಾಲನೆಯಿಂದ ಸುಂದರ ಸಮಾಜದ ನಿರ್ಮಾಣವಾಗುತ್ತದೆʼ ಎಂದರು.

ಇದನ್ನೂ ಓದಿ : ಬೀದರ್‌ | ಪ್ರತಿಭಾ ಪುರಸ್ಕಾರ : ಸರ್ಕಾರಿ ನೌಕರರ ಮಕ್ಕಳಿಂದ ಅರ್ಜಿ ಆಹ್ವಾನ

ಬೀದರ ವಿಶ್ವವಿದ್ಯಾಲಯದ ಆಡಳಿತ ಕುಲಸಚಿವ ಪ್ರೊ.ಪರಮೇಶ್ವರ ನಾಯ್ಕ.ಟಿ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ʼವಿಶ್ವಗುರು ಬಸವಣ್ಣನವರ ವಚನಗಳ ಉದಾಹರಣೆಗಳೊಂದಿಗೆ ಬಸವಣ್ಣನವರ ಜ್ಞಾನಭಂಡಾರವನ್ನು ವಿವರಿಸುತ್ತಾ ಇಂತಹ ಮಹಾನ್ ನಾಯಕ ಓಡಾಡಿದ ಶರಣ ಭೂಮಿಯಲ್ಲಿ ನಾವು ಬದುಕಿರುವುದು ನಮ್ಮ ಪುಣ್ಯ. ಬಸವಣ್ಣನವರ ವಚನಗಳನ್ನು ಅಧ್ಯಯನಗೈದು, ಜೀವನದಲ್ಲಿ ರೂಢಿಸಿಕೊಳ್ಳಬೇಕುʼ ಎಂದರು.

ಬೀದರ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯರಾದ ಶಾಂತಲಿಂಗ ಸಾವಳಗಿ, ಅಬ್ದುಲ್ ಸತ್ತಾರ್, ಸಚೀನ್‌ ಮಲ್ಕಾಪುರೆ ಮಾತನಾಡಿದರು.

ವಿಶೇಷಾಧಿಕಾರಿಗಳಾದ ಡಾ.ರವೀಂದ್ರನಾಥ ವಿ.ಗಬಾಡಿಯವರು ವಂದಿಸಿದರು, ಗೀತಾ ಹಾಗೂ ಅಂಬಿಕಾರವರು ಪ್ರಾರ್ಥನಾ ಗೀತೆ ಹಾಡಿದರು, ಆನಂದ ಚಾಕೂರೆ ನಿರೂಪಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಗಳೂರು | ಕಾರಿಡಾರ್‌ ಗೋಡೆ ಕುಸಿದು ಐವರು ವಿದ್ಯಾರ್ಥಿಗಳಿಗೆ ಗಾಯ, ಓರ್ವ ಗಂಭೀರ

ಮಂಗಳೂರಿನ ಪಾಂಡೇಶ್ವರ ಸಮೀಪದ ಎಮ್ಮೆಕೆರೆ ಕ್ರಾಸ್ ಬಳಿಯ ರಾಮಲಕ್ಷ್ಮೀ ಹಾಲ್ ಸಭಾಭವನದಲ್ಲಿ...

ಸಿಇಸಿ ಗ್ಯಾನೇಶ್ ಕುಮಾರ್ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು: ಜನವಾದಿ ಮಹಿಳಾ ಸಂಘಟನೆ ಆಗ್ರಹ

ದೇಶದ ಚುನಾವಣಾ ಪ್ರಜಾಪ್ರಭುತ್ವದ ಮೇಲಿನ ಸಾರ್ವಜನಿಕ ವಿಶ್ವಾಸವನ್ನು ಪುನಃಸ್ಥಾಪಿಸಲು ಮುಖ್ಯ ಚುನಾವಣಾ...

ಕಲೆ ಉಳಿಯಲಿ, ಕೌಶಲ್ಯ ಬೆಳೆಯಲಿ: ಕರ್ನಾಟಕ ಪರ್ವ 2026ಕ್ಕೆ ಡಿ.ಕೆ ಶಿವಕುಮಾರ್ ಚಾಲನೆ

ಬೆಂಗಳೂರಿನ ಅರಮನೆ ಮೈದಾನದಲ್ಲಿ ಶನಿವಾರ ವೈವಿಧ್ಯತೆಯಲ್ಲಿ ಏಕತೆ, ಕೌಶಲ್ಯದಲ್ಲಿ ಸ್ವಾವಲಂಬನೆ ಎಂಬ...

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ ಅಮಾನವೀಯ ಕೊಲೆಗಡುಕರ ಬೆಂಬಲಕ್ಕೆ ನಿಂತ ಸಂಘಪರಿವಾರ

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು...