ಬೀದರ್‌ | ಸಮಾಜದ ಅಸಮಾನತೆ ನಿವಾರಣೆಗೆ ಬಸವತತ್ವವೇ ಔಷಧಿ : ಸಚಿವ ಈಶ್ವರ ಖಂಡ್ರೆ

Date:

12ನೇ ಶತಮಾನದಲ್ಲಿ ಬಸವಣ್ಣನವರು ನಡೆಸಿದ ಕಲ್ಯಾಣ ಕ್ರಾಂತಿ ಇಂದಿನ ಆಧುನಿಕ ಸಮಾಜಕ್ಕೆ ಅತ್ಯಂತ ಪ್ರಸ್ತುತವಾಗಿದೆ ಎಂದು ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಹಾಗೂ ಬೀದರ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ. ಖಂಡ್ರೆ ಹೇಳಿದರು.

- Advertisement -

ಸೋಮವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಮಹಾನಗರ ಪಾಲಿಕೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಹಯೋಗದಲ್ಲಿ ನಗರದ ಪೂಜ್ಯ ಚನ್ನಬಸವ ಪಟ್ಟದೇವರ ರಂಗಮಂದಿರದಲ್ಲಿ ಆಯೋಜಿಸಿದ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ಜಯಂತ್ಯೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಪ್ರಚಾರ, ರಾಹುಲ್ ವ್ಯಕ್ತಿತ್ವ ಮತ್ತು ರೆಜಿಮ್ ಚೇಂಜ್

ಮೋದಿ ಅನುಭವಿ ನಟನಂತೆ, ಪ್ರದರ್ಶಕನಂತೆ ಕಾಣುತ್ತಾರೆ. ರಾಹುಲ್ ಗಾಂಧಿ ಪಾತ್ರದ ಒಳಹೊಕ್ಕು ನಟಿಸುವ ಕಲಾವಿದನಂತೆ ಕಾಣುತ್ತಾರೆ. ಈ ನಿಟ್ಟಿನಲ್ಲಿ ರಾಹುಲ್ ರಾಜಕೀಯ ನಡೆಗಳು ಮೋದಿಯವರ ರಾಜಕೀಯ ನಡೆಗಳೊಂದಿಗೆ ವಿಶ್ಲೇಷಣೆಗೊಳಗಾಗುತ್ತಿವೆ. ಕಳೆದ 12 ವರ್ಷಗಳ...

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

ʼಜಾತಿ, ಲಿಂಗ, ವರ್ಣ, ಲಿಂಗ ಭೇದವಿಲ್ಲದ ಸಮಸಮಾಜವನ್ನು ಕಟ್ಟಲು ಬಸವಣ್ಣನವರು ಶ್ರಮಿಸಿದ್ದರು. ಮೌಢ್ಯ, ಕಂದಾಚಾರ ಮತ್ತು ಅಸ್ಪೃಶ್ಯತೆಯ ವಿರುದ್ಧ ಅವರು ಅಂದೇ ಸಮರ ಸಾರಿದ್ದರು. ಇಂದಿಗೂ ಸಮಾಜದಲ್ಲಿ ನೆಲೆಸಿರುವ ಅಸಮಾನತೆಯನ್ನು ಹೋಗಲಾಡಿಸಲು ಬಸವ ತತ್ವವೇ ಮದ್ದಾಗಿದೆ. ಜಗತ್ತಿನಲ್ಲಿ ಮೊಟ್ಟಮೊದಲ ಬಾರಿಗೆ ಮಹಿಳೆಯರಿಗೆ ಸಮಾನ ಗೌರವ ಮತ್ತು ಹಕ್ಕನ್ನು ನೀಡಿದ ಕೀರ್ತಿ ಬಸವಣ್ಣನವರಿಗೆ ಸಲ್ಲುತ್ತದೆ. ಆದರೆ, ಇಂದಿನ ದಿನಗಳಲ್ಲಿ ಮಹಿಳೆಯರ ಮೇಲಾಗುತ್ತಿರುವ ದೌರ್ಜನ್ಯ ಮತ್ತು ಅತ್ಯಾಚಾರಗಳನ್ನು ಗಮನಿಸಿದರೆ, ನಾವು ಬಸವ ತತ್ವದಿಂದ ದೂರ ಸರಿಯುತ್ತಿದ್ದೇವೆಯೇ ಎಂಬ ಪ್ರಶ್ನೆ ಕಾಡುತ್ತಿದೆʼ ಎಂದರು.

WhatsApp Image 2026 04 20 at 4.32.03 PM
ಬೆಳಿಗ್ಗೆ ಬೀದರ್‌ನ ಬಸವೇಶ್ವರ ವೃತ್ತದಲ್ಲಿ ಸಾಂಸ್ಕೃತಿಕ ನಾಯಕ ಬಸವಣ್ಣನವರ ಜಯಂತಿ ಆಚರಿಸಲಾಯಿತು.

ʼಇಂದಿನ ಯುವ ಪೀಳಿಗೆಯು ವಿದ್ಯಾಭ್ಯಾಸದಲ್ಲಿ ಮುಂಚೂಣಿಯಲ್ಲಿದ್ದರೂ, ʼಸಾಮಾಜಿಕ ಮಾಧ್ಯಮಗಳ ಪ್ರಭಾವದಿಂದ ದಾರಿ ತಪ್ಪುತ್ತಿರುವುದು ಕಳವಳಕಾರಿ ಸಂಗತಿ. ಒಂದು ಅಧ್ಯಯನದ ಪ್ರಕಾರ ಶೇ 30 ರಷ್ಟು ಯುವಕರು ದುಶ್ಚಟಗಳಿಗೆ ಬಲಿಯಾಗುತ್ತಿದ್ದಾರೆ. ಇನ್ನು ಶೇ 30ರಷ್ಟು ಯುವಜನತೆ ಇಂಟರ್ನೆಟ್, ಫೇಸ್‌ಬುಕ್ ಮತ್ತು ರೀಲ್ಸ್ ವೀಕ್ಷಣೆಯಲ್ಲಿ ತೊಡಗಿ ಮಾನಸಿಕವಾಗಿ ದುರ್ಬಲರಾಗುತ್ತಿದ್ದಾರೆ. ಇದು ಕುಟುಂಬ ವ್ಯವಸ್ಥೆಯ ಮೇಲೆ ಕೆಟ್ಟ ಪರಿಣಾಮ ಬೀರುತ್ತಿದ್ದು, ಸಮಾಜ ಈ ಬಗ್ಗೆ ಗಂಭೀರವಾಗಿ ಆಲೋಚಿಸಬೇಕಿದೆʼ ಎಂದರು.

ಇಸ್ರೇಲ್-ಇರಾನ್, ರಷ್ಯಾ-ಉಕ್ರೇನ್ ಯುದ್ಧಗಳು ಜಗತ್ತಿನಾದ್ಯಂತ ಅಶಾಂತಿಯನ್ನುಂಟು ಮಾಡುತ್ತಿವೆ. ನಮ್ಮ ದೇಶದ ಮಣಿಪುರದಲ್ಲಿ ನಡೆಯುತ್ತಿರುವ ಜನಾಂಗೀಯ ಸಂಘರ್ಷಗಳು ಮನುಕುಲಕ್ಕೆ ಕಪ್ಪುಚುಕ್ಕೆಯಾಗಿವೆ. ಇಂತಹ ಸಂದರ್ಭದಲ್ಲಿ ಬಸವಣ್ಣನವರ ʼಇವನಾರವ ಇವನಾರವ ಎನ್ನದೆ ಇವನಮ್ಮವ ಇವನಮ್ಮವʼ ಎನ್ನುವ ಸಹೋದರತ್ವದ ಸಂದೇಶ ಸಾರುವ ಅವಶ್ಯಕತೆ ಇದೆ. ಆಸ್ತಿ, ಹಣ ಮತ್ತು ಸ್ವಾರ್ಥಕ್ಕಾಗಿ ಸಂಬಂಧಗಳನ್ನು ಕೊಲೆ ಮಾಡುತ್ತಿರುವ ಈ ಕಾಲದಲ್ಲಿ, ನೈತಿಕ ಶಿಕ್ಷಣ ಮತ್ತು ಬಸವಣ್ಣನವರ ಮಾನವೀಯ ಮೌಲ್ಯಗಳನ್ನು ಅಳವಡಿಸಿಕೊಳ್ಳುವುದೊಂದೇ ಸಮಾಜದ ಸಕಲ ಸಮಸ್ಯೆಗಳಿಗೆ ಔಷಧಿಯಾಗಿದೆʼ ಎಂದರು.

ʼಬಸವಕಲ್ಯಾಣದ ಅನುಭವ ಪಂಟಪ ನಿರ್ಮಾಣಕ್ಕೆ ನಮ್ಮ ಸರ್ಕಾರ ಬದ್ಧವಾಗಿದ್ದು. ಈಗಾಗಲೇ 280 ಕೋಟಿ ಬಿಡುಗಡೆ ಮಾಡಿದೆ. ಇನ್ನು 250 ಕೋಟಿ ಬೇಕಾಗುವ ಸಾಧ್ಯತೆ ಇದೆ. ಅಂದುಕೊಂಡದಂತೆ ನಡೆದರೆ ಮುಂದಿನ ಬಸವ ಜಯಂತಿ ಒಳಗಾಗಿ ಲೋಕಾರ್ಪಣೆಗೊಳಿಸಲಾಗುವುದು. ನಾನು ಮುತುವರ್ಜಿ ವಹಿಸಿ ಬೆಂಗಳೂರಿನಲ್ಲಿ 153 ಎಕರೆ ನಿರ್ಮಾಣವಾಗುತ್ತಿರುವ ಸಸ್ಯ ಉದ್ಯಾನವನಕ್ಕೆ ಬಸವೇಶ್ವರರ ಹೆಸರಿಟ್ಟಿದ್ದೇನೆʼ ಎಂದರು.

ಪೌರಾಡಳಿತ ಹಾಗೂ ಹಜ್ ಖಾತೆ ಸಚಿವ ರಹೀಮ್ ಖಾನ್ ಮಾತನಾಡಿ, “ಬಸವಣ್ಣನವರ ಸಂದೇಶ ಮತ್ತು ವಚನ ಸಿದ್ಧಾಂತ ಕೇವಲ ಮಾತಿಗೆ ಸೀಮಿತವಾಗದೆ, ನಮ್ಮ ದೈನಂದಿನ ಬದುಕಿನ ಭಾಗವಾಗಬೇಕು. ಬೀದರ್ ಜಿಲ್ಲೆಯ ಜನರು ಈ ಬಸವಣ್ಣನವರ ತತ್ವಾರ್ದಶಗಳನ್ನು ನೂರಕ್ಕೆ ನೂರರಷ್ಟು ಪಾಲಿಸಿದಾಗ ಮಾತ್ರ ವಿಶ್ವಗುರು ಬಸವಣ್ಣನವರ ಆಶಯಗಳು ಜಗತ್ತಿಗೆ ತಲುಪಲು ಸಾಧ್ಯ,” ಎಂದು ಆಶಯ ವ್ಯಕ್ತಪಡಿಸಿದರು.

WhatsApp Image 2026 04 20 at 4.32.01 PM 1

ಬೀದರ ದಕ್ಷಿಣ ಕ್ಷೇತ್ರದ ಶಾಸಕ ಶೈಲೇಂದ್ರ ಬೆಲ್ದಾಳೆ ಮಾತನಾಡಿ, ʼಜಗತ್ತಿನ ವಿವಿಧ ರಾಷ್ಟ್ರಗಳ ನಡುವೆ ನಡೆಯುತ್ತಿರುವ ಯುದ್ಧಗಳು ಮತ್ತು ದೇಶದ ಒಳಗಿನ ಜನಾಂಗೀಯ ಸಂಘರ್ಷಗಳು ಮನುಕುಲವನ್ನು ಅತಂತ್ರಗೊಳಿಸಿವೆ. ಇಂತಹ ಸಂದರ್ಭದಲ್ಲಿ ಬಸವಣ್ಣನವರ ʼದಯೆಯೇ ಧರ್ಮದ ಮೂಲವಯ್ಯʼ ಎನ್ನುವ ಮೌಲ್ಯಗಳು ಜಗತ್ತಿಗೆ ಶಾಂತಿಯ ದಾರಿದೀಪವಾಗಿವೆʼ ಎಂದರು.

ಅತಿಥಿ ಉಪನ್ಯಾಸ ನೀಡಿ ಮಾತನಾಡಿದ ಚರಮೂರ್ತಿ ಚರಂತೇಶ್ವರ ವಿರಕ್ತಮಠ ಬಸವಬೆಳವಿಯ ಶರಣ ಬಸವ ಮಹಾಸ್ವಾಮಿ, ʼಬಸವ ಜಯಂತಿಯ ಆಚರಣೆಯು ಶರಣ ಸಂಸ್ಕೃತಿಯ ಇತಿಹಾಸದಲ್ಲಿ ಒಂದು ಮಹತ್ವದ ಮೈಲಿಗಲ್ಲು. 1913ರಲ್ಲಿ ದಾವಣಗೆರೆಯ ವಿರಕ್ತ ಮಠದಲ್ಲಿ ಪೂಜ್ಯ ಮೃತ್ಯುಂಜಯ ಸ್ವಾಮಿಗಳು ಮತ್ತು ‘ಕರ್ನಾಟಕದ ಗಾಂಧಿ’ ಹರ್ಡೇಕರ್ ಮಂಜಪ್ಪನವರ ನೇತೃತ್ವದಲ್ಲಿ ಈ ಆಚರಣೆಗೆ ಚಾಲನೆ ನೀಡಲಾಯಿತುʼ ಎಂದರು.

ʼಅಂದಿನ ಕಾಲದಲ್ಲಿ ಬಸವಣ್ಣನವರ ತತ್ವಗಳು ಮತ್ತು ವಚನ ಸಾಹಿತ್ಯವು ಕೇವಲ ಮಠಗಳ ಗದ್ದಿಗೆಗಳಿಗೆ ಹಾಗೂ ಪಂಡಿತರ ಓದಿಗೆ ಸೀಮಿತವಾಗಿದ್ದವು; ಜನಸಾಮಾನ್ಯರಿಗೆ ಅವರ ವೈಚಾರಿಕ ಕ್ರಾಂತಿಯ ಅರಿವು ಹೆಚ್ಚಾಗಿ ಇರಲಿಲ್ಲ. ಮುಂಬೈನಲ್ಲಿ ಇತರ ಮಹಾತ್ಮರ ಜಯಂತಿ ಆಚರಣೆಗಳಿಂದ ಪ್ರೇರಿತರಾದ ಹರ್ಡೇಕರ್ ಮಂಜಪ್ಪನವರು, ಬಸವಣ್ಣನವರ ವಿಚಾರಗಳನ್ನು ಜನಮಾನಸಕ್ಕೆ ತಲುಪಿಸಲು ನಿರ್ಧರಿಸಿದರುʼ ಎಂದು ತಿಳಿಸಿದರು.

ʼಐತಿಹಾಸಿಕ ದಾಖಲೆಗಳ ಆಧಾರದ ಮೇಲೆ ಅಕ್ಷಯ ತೃತೀಯ ದಿನದಂದೇ ಬಸವಣ್ಣನವರು ಜನಿಸಿದರೆಂದು ನಿಶ್ಚಯಿಸಿ, ಅಂದಿನಿಂದ ಹಳ್ಳಿ-ಹಳ್ಳಿಗಳಲ್ಲಿ ಪ್ರವಚನ ಹಾಗೂ ಸಮಾರಂಭಗಳ ಮೂಲಕ ಶರಣರ ಸಮಾನತೆಯ ಸಂದೇಶವನ್ನು ಪಸರಿಸಲಾಯಿತು. ಈ ಪ್ರಯತ್ನದ ಫಲವಾಗಿ ಇಂದು ಬಸವ ಜಯಂತಿಯು ಸಾಮಾಜಿಕ ಬದಲಾವಣೆಯ ಮತ್ತು ವೈಚಾರಿಕತೆಯ ಸಂಕೇತವಾಗಿ ಜಗತ್ತಿನಾದ್ಯಂತ ಆಚರಿಸಲ್ಪಡುತ್ತಿದೆʼ ಎಂದರು.

ವೇದಿಕೆ ಕಾರ್ಯಕ್ರಮಕ್ಕೂ ಮುನ್ನ ಬಸವಣ್ಣನವರ ಭಾವಚಿತ್ರ ಮೆರವಣಿಗೆಯೂ ನಗರದ ಬಸವೇಶ್ವರ ವೃತ್ತದ ಬಳಿ ಗಣ್ಯರ ಸಮ್ಮುಖದಲ್ಲಿ ಚಾಲನೆಗೊಂಡು ಭಗತ್ ಸಿಂಗ್ ವೃತ್ತ, ಅಂಬೇಡ್ಕರ್ ವೃತ್ತ, ರೋಟರಿ ವೃತ್ತ ಮಾರ್ಗದಿಂದ ಸಾಗಿ ಪೂಜ್ಯ ಡಾ. ಚನ್ನಬಸವ ಪಟ್ಟದ್ದೇವರ ರಂಗಮಂದಿರಕ್ಕೆ ತಲುಪಿತು.

ಇದನ್ನೂ ಓದಿ : ಬಸವ ಜಯಂತಿ ವಿಶೇಷ | ಕಾಯಕ ಚಳವಳಿ ರೂಪಿಸಿದ ನಾಯಕ ಬಸವಣ್ಣ

ಈ ಸಂದರ್ಭದಲ್ಲಿ ತಹಸೀಲ್ದಾರ್ ರವೀಂದ್ರ ದಾಮಾ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸಿದ್ರಾಮ್ ಸಿಂಧೆ, ತಹಸೀಲ್ದಾರ್ ಗ್ರೇಡ್ -2 ಜಿಯಾವೋದ್ದಿನ್, ಬಸವ ಜಯಂತಿ ಉತ್ಸವ ಸಮಿತಿಯ ಅಧ್ಯಕ್ಷ ರಾಜನೀಶ್ ವಾಲಿ, ಪ್ರಧಾನ ಕಾರ್ಯದರ್ಶಿ ಶಶಿಧರ ಹೊಸಳ್ಳಿ, ಮಹಿಳಾ ಘಟಕದ ಅಧ್ಯಕ್ಷ ದೇವಿಕಾ ಅಶೋಕ ನಾಗೂರೆ, ಸಮಾಜದ ಮುಖಂಡರಾದ ಶಿವಶರಣಪ್ಪ ವಾಲಿ, ಶ್ರೀಕಾಂತ ಸ್ವಾಮಿ, ಶಾಮಣ್ಣ ಬಾವಗಿ, ಸುರೇಶ ಚನ್ನಶೆಟ್ಟಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಹಲ್ಲೆಗೊಳಗಾಗಿ ರೈಲ್ವೆ ಹಳಿ ಮೇಲೆ ಬಿದ್ದಿದ್ದ ಯುವಕ ಚಿಕಿತ್ಸೆ ಫಲಿಸದೆ ಸಾವು

ಶಿವಮೊಗ್ಗ ರೈಲ್ವೆ ಹಳಿ ಬಳಿ ಗಂಭೀರ ಗಾಯಗಳೊಂದಿಗೆ ಪತ್ತೆಯಾಗಿದ್ದ 26 ವರ್ಷದ...

ನೇಣು ಬಿಗಿದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ; ತರಾತುರಿಯಲ್ಲಿ ಅಂತ್ಯಕ್ರಿಯೆ, ಕಾರಣ ನಿಗೂಢ!

ಸೊರಬ ತಾಲೂಕಿನ ಮುಟಗುಪ್ಪೆ ಗ್ರಾಮದಲ್ಲಿ 22 ವರ್ಷದ ಯುವತಿಯೊಬ್ಬರು ಮನೆಯಲ್ಲಿ ನೇಣು...

ಶಿವಮೊಗ್ಗ | ಗಾಂಜಾ ಮಾರಾಟ ಆರೋಪ: ಐವರು ಅರೆಸ್ಟ್‌, 1.23 ಕೆಜಿ ಮಾದಕ ವಸ್ತು ಜಪ್ತಿ

ಶಿವಮೊಗ್ಗ ನಗರದ ಅನುಪಿನಕಟ್ಟೆ ಸಮೀಪ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದಡಿ ತುಂಗಾನಗರ...