ಬೀದರ್‌ | ಅರ್ಹ ಮತದಾರರ ಹೆಸರು ಕೈಬಿಡದಂತೆ ಎಚ್ಚರ ವಹಿಸಿ : ಈಶ್ವರ ಖಂಡ್ರೆ

Date:

ಮತದಾರರ ಹಕ್ಕು ರಕ್ಷಣೆಗಾಗಿ ಕಾಂಗ್ರೆಸ್ ಕಾರ್ಯಕರ್ತರು ವಿಶೇಷ ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‍ಐಆರ್) ಪ್ರಕ್ರಿಯೆಯಲ್ಲಿ ಜಾಗೃತಿಯಿಂದ ಕೆಲಸ ಮಾಡಿ ಅರ್ಹ ಮತದಾರರ ಹೆಸರು ಕೈಬಿಡದಂತೆ ಎಚ್ಚರಿಕೆ ವಹಿಸುವುದು ಪ್ರತಿಯೊಬ್ಬ ಕಾರ್ಯಕರ್ತನ ಜವಾಬ್ದಾರಿಯಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‍ರಾಜ್ ಸಚಿವ ಈಶ್ವರ ಖಂಡ್ರೆ ಕಿವಿಮಾತು ಹೇಳಿದರು.

- Advertisement -

ಕಾಂಗ್ರೆಸ್ ಜಿಲ್ಲಾ ಘಟಕದ ವತಿಯಿಂದ ನಗರದ ಲಾವಣ್ಯ ಕನ್ವೆನ್ಶನ್ ಹಾಲ್‍ನಲ್ಲಿ ಗುರುವಾರ ಆಯೋಜಿಸಿದ್ದ ಬೀದರ್ ಹಾಗೂ ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರಗಳ ಎಸ್‍ಐಆರ್ ಜಾಗೃತಿ ಹಾಗೂ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿ, “ಬೂತ್ ಮಟ್ಟದಲ್ಲಿ ಮನೆ-ಮನೆಗೆ ತೆರಳಿ ಎಸ್‍ಐಆರ್ ಪ್ರಕ್ರಿಯೆ ಕುರಿತು ಜನರಿಗೆ ಅಗತ್ಯ ಮಾಹಿತಿ ನೀಡಬೇಕು” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

‘ಹಾಸ್ಟೆಲ್‌’ ಇಲ್ಲದ ಶಿಕ್ಷಣದ ಸ್ವರೂಪ ಹೇಗಿರಲಿದೆ?

ಸಾಮಾನ್ಯವಾಗಿ ʼಶಿಕ್ಷಣʼ ಎಂದರೆ ʼತರಗತಿ, ಪಠ್ಯಪುಸ್ತಕ ಮತ್ತು ಪರೀಕ್ಷೆಗಳʼ ಸುತ್ತ ಹೆಣೆದುಕೊಂಡಿರುವ ಕಲ್ಪನೆ. ಆದರೆ ಒಬ್ಬ ವಿದ್ಯಾರ್ಥಿ ದಿನದ ಬಹುಪಾಲು ಕಳೆಯುವ ಜಾಗ ʼಹಾಸ್ಟೆಲ್‌ʼ. ಹೆಚ್ಚಾಗಿ ಚರ್ಚೆಗೆ ಬಾರದ ಈ ʼಹಾಸ್ಟೆಲ್‌ʼ ಎಂಬ...

ಬರದ ಬೇಗೆಯಲ್ಲಿ ರಾಜ್ಯ ಬೆಂದರೂ ಅನುದಾನಕ್ಕ ದನಿ ಎತ್ತದ...

ಸದಾ ಕಾಲ 'ಮೋದಿ ಜಪ' ಮಾಡುತ್ತಾ, ಕೇವಲ ರಾಜಕೀಯಕ್ಕಾಗಿ ಮತ್ತು ಪಕ್ಷದ ಅಜೆಂಡಾಗಳಿಗಾಗಿ ರಾಜ್ಯಾದ್ಯಂತ ಸುತ್ತುವ ಈ ಸಂಸದರಿಗೆ, ನಾಡಿನ ಜನತೆ ಬರಗಾಲದ ತೀವ್ರ ಸಂಕಷ್ಟದಲ್ಲಿ ಬೆಂದು ಹೋಗುತ್ತಿರುವಾಗ ಅದೇ ಪ್ರಧಾನಿ ನರೇಂದ್ರ...

SIR ಅಕ್ರಮ | ಗ್ಯಾನೇಶ್‌ ಕುಮಾರ್ ‘ಅಪರಾಧಿ’ಯಾದ್ರೆ, ಮೋದಿ-ಅಮಿತ್...

ಭಾರತೀಯ ಪ್ರಜಾಪ್ರಭುತ್ವದ ಇತಿಹಾಸದಲ್ಲೇ ಅತ್ಯಂತ ಕರಾಳ ಅಧ್ಯಾಯವೊಂದು ಈಗ ಜಗಜ್ಜಾಹೀರಾಗಿದೆ. ಪ್ರತಿಯೊಬ್ಬ ನಾಗರಿಕನ ಅತಿ ದೊಡ್ಡ ರಾಜಕೀಯ ಶಕ್ತಿಯಾಗಿರುವ 'ಮತದಾನದ ಹಕ್ಕು' ಮತ್ತು ಅದನ್ನು ಕಾಯಬೇಕಾದ ಸಾಂವಿಧಾನಿಕ ಸಂಸ್ಥೆಯನ್ನೇ ಆಡಳಿತಾರೂಢ ಮೋದಿ-ಅಮಿತ್ ಶಾ...

“ಪ್ರಜಾಪ್ರಭುತ್ವದ ಶಕ್ತಿಯೇ ಮತದಾರರು. ಆದ್ದರಿಂದ ಎಸ್‍ಐಆರ್ ಪ್ರಕ್ರಿಯೆಯನ್ನು ಗಂಭೀರವಾಗಿ ಪರಿಗಣಿಸಿ, ಜನರಲ್ಲಿ ಜಾಗೃತಿ ಮೂಡಿಸಿ, ಪ್ರತಿಯೊಬ್ಬ ಅರ್ಹ ನಾಗರಿಕರ ಹೆಸರನ್ನು ಮತದಾರರ ಪಟ್ಟಿಯಲ್ಲಿ ಖಚಿತಪಡಿಸುವ ನಿಟ್ಟಿನಲ್ಲಿ ಸಂಘಟಿತವಾಗಿ ಕಾರ್ಯನಿರ್ವಹಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ.

ಸಂಸದ ಸಾಗರ್ ಖಂಡ್ರೆ ಮಾತನಾಡಿ, ಬಿಎಲ್‍ಒಗಳು ಮನೆ  ಮನೆಗೆ ಭೇಟಿ ನೀಡಿದಾಗ ಪಕ್ಷದ ಬಿಎಲ್‍ಎ-2 ಇರಬೇಕು. ಅರ್ಹರ ಹೆಸರು ಕೈಬಿಡದಂತೆ ನೋಡಿಕೊಳ್ಳಬೇಕು ಎಂದು ತಿಳಿಸಿದರು.

WhatsApp Image 2026 06 25 at 7.49.21 PM

ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ದೋಷ ರಹಿತ ಮತದಾರರ ಪಟ್ಟಿ ತಯಾರಿಸಬೇಕು. ಕೇಂದ್ರ ಸರ್ಕಾರ ಹಾಗೂ ಚುನಾವಣಾ ಆಯೋಗ ಅರ್ಹ ಮತದಾರರ ಹಕ್ಕುಗಳಿಗೆ ಧಕ್ಕೆಯಾಗದಂತೆ ನೋಡಿಕೊಳ್ಳಬೇಕು ಎಂದು ಮಾಜಿ ಸಚಿವ ರಾಜಶೇಖರ ಪಾಟೀಲ ಹೇಳಿದರು.

ಇದನ್ನೂ ಓದಿ : ಬೀದರ್‌ | ಜು.1ರಿಂದ ವಿಬಿ-ಜಿ ರಾಮ್ ಜಿ ಜಾರಿಗೆ ಸಜ್ಜಾಗಿ : ಸಚಿವ ಈಶ್ವರ ಖಂಡ್ರೆ

ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಬಸವರಾಜ ಜಾಬಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಬೀದರ್ ಶಾಸಕ ರಹೀಂಖಾನ್, ವಿಧಾನ ಪರಿಷತ್ ಸದಸ್ಯ ಭೀಮರಾವ್ ಪಾಟೀಲ, ಮಾಜಿ ಸಂಸದ ನರಸಿಂಗರಾವ್ ಸೂರ್ಯವಂಶಿ, ವಿಧಾನ ಪರಿಷತ್  ಮಾಜಿ ಸದಸ್ಯರಾದ ವಿಜಯಸಿಂಗ್, ಅರವಿಂದಕುಮಾರ ಅರಳಿ, ಕೆ. ಪುಂಡಲೀಕರಾವ್, ಪ್ರಧಾನ ಕಾರ್ಯದರ್ಶಿ ಜಾರ್ಜ್ ಫರ್ನಾಂಡೀಸ್, ಮುಖಂಡರಾದ ಭೀಮಸೇನರಾವ್ ಸಿಂದೆ, ಜಾನ್ ವೆಸ್ಲಿ, ಅಬ್ದುಲ್ ಮನ್ನಾನ್ ಸೇಠ್, ಸಂಜಯ್ ಜಾಗಿರದಾರ್, ಮಾಲಾ ಬಿ. ನಾರಾಯಣರಾವ್, ಅಮೃತರಾವ್ ಚಿಮಕೋಡೆ, ರಾಜಶ್ರೀ ಸ್ವಾಮಿ, ಮೀನಾಕ್ಷಿ ಸಂಗ್ರಾಮ, ಪಂಡಿತರಾವ್ ಚಿದ್ರಿ, ಕಾಂಗ್ರೆಸ್ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಎಂ.ಎ. ಸಮಿ ಸೇರಿದಂತೆ ಕಾಂಗ್ರೆಸ್‌ ಕಾರ್ಯಕರ್ತರು ಪಾಲ್ಗೊಂಡಿದ್ದರು. 

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ ಸಹಕಾರ ಸಕ್ಕರೆ ಕಾರ್ಖಾನೆ ಹರಾಜು ರದ್ದು, ಲೀಸ್‌ಗೆ ನೀಡಲು ಸಿಎಂ ಭರವಸೆ : ಶ್ರೀಮಂತ ಬಿರಾದರ್

ಬೀದರ್ ಜಿಲ್ಲೆಯ ರೈತರು‌, ಕಾರ್ಮಿಕರ ಜೀವನಾಡಿಯಾಗಿರುವ ಬೀದರ್‌ ಸಹಕಾರ ಸಕ್ಕರೆ ಕಾರ್ಖಾನೆ...

‘ದೇವರೇ ಈ ದೇಶವನ್ನು ಕಾಪಾಡಬೇಕು’: ರೈಲು ಪ್ರಯಾಣದ ಗದ್ದಲಕ್ಕೆ ಬೇಸತ್ತ ತೇಜಸ್ವಿ ಸೂರ್ಯ ಪತ್ನಿ

ರೈಲು ಪ್ರಯಾಣದ ವೇಳೆ ಸಹಪ್ರಯಾಣಿಕರ ಗದ್ದಲದಿಂದ ತೀವ್ರ ಕಿರಿಕಿರಿ ಅನುಭವಿಸಿರುವುದಾಗಿ ಬಿಜೆಪಿ...

ಬೀದರ್ | ಬರ ಪರಿಸ್ಥಿತಿ : ವಿಶೇಷ ಪ್ಯಾಕೇಜ್ ಘೋಷಿಸಲು ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಮಳೆಯ ಕೊರತೆಯಿಂದ ಕೃಷಿ ಚಟುವಟಿಕೆಗಳಿಗೆ ತೀವ್ರ ಹಿನ್ನಡೆಯಾಗಿದ್ದು, ಬೆಳೆ...